Author: admin

ಹಾವೇರಿ: ದುಷ್ಕರ್ಮಿಗಳು4 ಏಕರೆ ಮೆಕ್ಕೆಜೋಳ ತೆನೆ ರಾಶಿಗೆ ಬೆಂಕಿ ಇಟ್ಟಿರುವಂತಹ ಘಟನೆ ಜಿಲ್ಲೆಯ ಹಾನಗಲ್ ತಾಲೂಕು ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಎಂಬ ರೈತನಿಗೆ ಸೇರಿದ ರಾಶಿ ಎನ್ನಲಾಗಿದೆ. ಅಂದಾಜು ಮೂರು ಲಕ್ಷಕ್ಕೂ ರೂಪಾಯಿಗೂ ಅಧಿಕ ಮೌಲ್ಯದ ತೆನೆರಾಶಿ ಬೆಂಕಿಗಾಹುತಿಯಾಗಿದೆ. ರಾತ್ರಿಯ ವೇಳೆ ಜಮೀನಿನಲ್ಲಿ ಮೆಕ್ಕೆಜೋಳ ತೆನೆಯ ರಾಶಿ ಹಾಕಲಾಗಿತ್ತು. ಈ ವೇಳೆ ದ್ವೇಷದಿಂದ ಅಪರಿಚಿತರು ರಾಶಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಹರಸಾಹಸ ಪಟ್ಟರು ರಾಶಿಗಳು ಸುಟ್ಟು ಹೋಗಿವೆ. ಆಡೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ : ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ  ‘ನಮ್ಮ ಮನೆ ಸೇವಾ ಟ್ರಸ್ಟ್’ ವತಿಯಿಂದ ನೇತ್ರ ತಪಾಸಣಾ, ಕಣ್ಣಿನ ಶಸ್ತ್ರ ಚಿಕಿತ್ಸಾ ತಪಾಸಣಾ   ಹಾಗೂ  ಉಚಿತ ಕನ್ನಡ ವಿತರಣಾ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಎಲ್ಲಾ ಜನಾಂಗವನ್ನು ಒಳಪಟ್ಟು   ಶಿಬಿರದಲ್ಲಿ 260 ಮಂದಿಗೆ    ವೈದ್ಯರ ತಂಡ  ಆರೋಗ್ಯ ತಪಾಸಣೆ ನಡೆಸಿ ಔಷಧೋಪಚಾರ ನೀಡಿದರು. ಉಚಿತ ಕಣ್ಣಿನ ಪೊರೆ ತಪಾಸಣೆ ನಡೆಸಿ ಕನ್ನಡಕ ಅವಶ್ಯಕತೆ ಇರುವವರಿಗೆ ಈ ದಿನ ಒಟ್ಟಾರೆ 162 ಉಚಿತ  ಕನ್ನಡಕ ಸ್ಥಳದಲ್ಲೇ   ವಿತರಿಸಲಾಯಿತು ಮತ್ತು 42 ಜನರಿಗೆ    ಶಸ್ತ್ರ ಚಿಕಿತ್ಸೆಯ ಅಗತ್ಯವುಳ್ಳವರಿಗೆ ನಿಗದಿತ ದಿನಾಂಕಕ್ಕೆ   ಆಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ಮಾಡಿಸಲು ನಿರ್ಧರಿಸಲಾಗಿದೆ. ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಪ್ರಪಂಚ ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ…

Read More

ಬೆಂಗಳೂರು : ಮುಂಬರುವಂತ ದಿನಗಳಲ್ಲಿ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರ್ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ಧ ಉಡುಪು ತಯಾರಿಕೆವರೆಗಿನ ಎಲ್ಲ ಹಂತಗಳ ಸೌಲಭ್ಯಗಳನ್ನು ಒಳಗೊಂಡ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವ ಮೂಲಕ ನೇಕಾರರಿಗೆ ಅನುಕೂಲ ಮಾಡಿಕೊಡುವಂತೆ ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : 2022-23ನೇ ಸಾಲಿಗೆ 21 ರಿಂದ 50 ವರ್ಷದೊಳಗಿನ ಅರ್ಹ ಪರಿಶಿಷ್ಟ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ, ಜಿಲ್ಲಾ ಕಚೇರಿ ವತಿಯಿಂದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಸಣ್ಣ ಆದಾಯಗಳಿಸುವ ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಘಟಕದಡಿ ವೆಚ್ಚ ಗರಿಷ್ಟ ರೂ.1 ಲಕ್ಷಗಳು ಇದರಲ್ಲಿ 50% ಅವಧಿ ಸಾಲ ಮತ್ತು 50% ಸಹಾಯಧನ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ)-1: ಇ.ವಿ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ (ಇ-ಕಾಮರ್ಸ್‍ನಡಿಯಲ್ಲಿ ಕಂಪನಿಗಳಿಂದ ಗ್ರಾಹಕರಿಗೆ ಸರಕು ತಲುಪಿಸಲು) ಗರಿಷ್ಟ ರೂ.50 ಸಾವಿರ ಸಹಾಯಧನ ಹಾಗೂ ರೂ. 20 ಸಾವಿರ ಸಾಲ ಮಂಜೂರು ಮಾಡಲಾಗುವುದು ಅದೇ ರೀತಿಯಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ಗರಿಷ್ಟ ರೂ. 3.50 ಲಕ್ಷ, ಸಹಾಯಧನ ಉಳಿದ ಮೊತ್ತ ಬ್ಯಾಂಕ್ ಸಾಲ ಮಂಜೂರು ಮಾಡಲಾಗುವುದು. ಅರ್ಜಿ ಸಲ್ಲಿಸಬೇಕಾದ ದಾಖಲಾತಿಗಳು: ಜಾತಿ ಮತ್ತು ಆದಾಯ…

Read More

ಹುಬ್ಬಳ್ಳಿ: ಫೆಬ್ರವರಿ 17 ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮೂರನೇ ವಾರ ಬಜೆಟ್ ಮಂಡಿಸುವುದಾಗಿ ತಿಳಿಸಿದ್ದಾರೆ. ಚುನಾವಣೆ ಸಮೀಪದಲ್ಲಿ ಇರುವುದರಿಂದ ಈ ಬಾರಿ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಕಳೆದ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಗಳ ಅನುಷ್ಠಾನ, ಅನುದಾನ ಕುರಿತಾಗಿ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೋಲಾರ: ಸಿದ್ದರಾಮಯ್ಯನವರು ಎಲ್ಲರನ್ನೂ ಮುಗಿಸಿದ್ದಾರೆ. ಇದೀಗ ನನ್ನನ್ನು ಮುಗಿಸಲು ಬಂದಿದ್ದಾರೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ  ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ ಅವರು, ಆನೆ ಸೊಂಡಿಲಿನಿಂದ ಮಣ್ಣು ಮೇಲೆ ಹಾಕಿಕೊಂಡಂತೆ ಸಿದ್ದರಾಮಯ್ಯ ತಾನಾಗಿ ಮಣ್ಣು ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯನವರಿಗೆ ಕೇಡುಗಾಲ ಆರಂಭವಾಗಿದೆ ಎಂದಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯ ಅಂತ, ವಿಶೇಷವಾಗಿ ಪರಿಗಣಿಸಬೇಕಿಲ್ಲ, ಚಾಮುಂಡಿ ಕ್ಷೇತ್ರದಲ್ಲಿ 40 ಮತಗಳ ಅಂತರದಲ್ಲಿ ಅವರು ಸೋತಿದ್ದಾರೆ ಎಂದ ಅವರು,  ಬಾದಾಮಿಯಲ್ಲಿ ಸೋಲುತ್ತಾರೆ ಅನ್ನೋ ಭಯಕ್ಕೆ ಎಲ್ಲರನ್ನೂ ಮುಗಿಸಿದ್ದಾರೆ. ಇದೀಗ ನನ್ನನ್ನು ಮುಗಿಸಲು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಬೆಂಗಳೂರು: ಪ್ರಿನ್ಸಿಪಾಲ್‌ ಬೈದಿದ್ದಕ್ಕೆ ಕಾನೂನು ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆ. ಜಿ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ ಅಮೀನ್ ಕಾಲೇಜು ವಿದ್ಯಾರ್ಥಿ ರಿಜ್ವಾನ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎಲ್ ಎಲ್ ಬಿ ಫೈನಲ್ ಇಯರ್ ಓದುತ್ತಿದ್ದ ರಿಜ್ವಾನ್, ನಿನ್ನೆ ಪ್ರಿನ್ಸಿಪಾಲ್ ಬೈದಿದ್ದಾರೆಂಬ ಕಾರಣಕ್ಕೆ ಮನನೊಂದಿದ್ದ ಎಂದು ತಿಳಿದುಬಂದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ಎನ್ನಲಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕೋಡಿ:ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ. ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ…

Read More

ಶಿವಮೊಗ್ಗ: ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ವಿದ್ಯಾರ್ಥಿಯಾಗಿದ್ದಾನೆ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅಷ್ಟರಲ್ಲಾಗಲೇ ಜಯಂತ್ ಮೃತಪಟ್ಟಿದ್ದ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸದಾ ಸಿದ್ಧ. ಸ್ಥಳ ಮತ್ತು ಸಮಯವನ್ನು ಬಿಜೆಪಿ ನಾಯಕರೇ ನಿಗದಿಗೊಳಿಸಿ ನನ್ನನ್ನು ಕರೆಯಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ತಮ್ಮ ವಿರುದ್ಧ ಬಿಜೆಪಿ ನಾಯಕರ ಹೇಳಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಡೆಸಲಾಗುತ್ತಿರುವ ಟ್ರೋಲ್, ಪುಸ್ತಕ ಬಿಡುಗಡೆಯ ಹೈಡ್ರಾಮಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಸುಖಾ ಸುಮ್ಮನೆ ಸುಳ್ಳು-ಪೊಳ್ಳು ಬರ್ಕೊಂಡು, ಪೋಟೋಶಾಪ್ ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ. ರಾಜಕೀಯವಾಗಿ ನನ್ನನ್ನಾಗಲಿ, ಕಾಂಗ್ರೆಸ್ ಪಕ್ಷವನ್ನಾಗಲಿ ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ. ಇದಕ್ಕಾಗಿ ನನ್ನ ವಿರುದ್ಧದ ಹೋರಾಟವನ್ನೂ ದುಡ್ಡಿಗಾಗಿ ಮಾರಿಕೊಂಡ ಬಾಡಿಗೆ ಬರಹಗಾರರಿಗೆ ಔಟ್ ಸೋರ್ಸ್ ಮಾಡಿದ್ದಾರೆ. ಶೇಮ್ ಆನ್ ಯು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರ್ಚೆ-ಸಂವಾದಗಳ ರಾಜಕೀಯದಲ್ಲಿ ನನಗೆ ನಂಬಿಕೆ ಇದೆ. ಇದಕ್ಕಾಗಿಯೇ ಇರುವುದು ವಿಧಾನಮಂಡಲ. ಅಲ್ಲಿ ಚರ್ಚೆ ನಡೆಸುವ ಧೈರ್ಯ ಇಲ್ಲದೆ ಅಧಿವೇಶನವನ್ನೇ ಮೊಟಕುಗೊಳಿಸುತ್ತೀರಿ. ಹೊರಗೆ ಬೀದಿಯಲ್ಲಿ ಬಾಡಿಗೆ ಬರಹಗಾರರನ್ನು ಕಟ್ಟಿಕೊಂಡು ನನ್ನ…

Read More