Author: admin

ಆಶೀರ್ವಾದ ಕೇಳಿ ಬರುವ ಮಹಿಳೆಯರಿಗೆ ಮಾದಕ ವಸ್ತು ನೀಡಿ, ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ದೇವ ಮಾನವನಿಗೆ 14 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಅಮರಪುರಿ ಅಥವಾ ಜಲೇಬಿ ಬಾಬಾ ಎಂದು ಕರೆಯಲ್ಪಡುವ ದೇವ ಮಾನವ ತನ್ನ ಬಳಿಗೆ ಆಶೀರ್ವಾದ ಪಡೆಯಲು ಬರುತ್ತಿದ್ದ ಸುಮಾರು 100ಕ್ಕೂ ಅಧಿಕ ಮಹಿಳೆಯರನ್ನು ಅತ್ಯಾಚಾರ ನಡೆಸಿ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಅತ್ಯಾಚಾರದ ಬಳಿಕ ವಿಡಿಯೋ ತೋರಿಸಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಸ್ವಾಮೀಜಿ ಮಹಿಳೆಯರನ್ನು ಬೆದರಿಸುತ್ತಿದ್ದ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೀದಿ ನಾಯಿ ಬೊಗಳಿದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದು, ಮಹಿಳೆಯೊಬ್ಬರ ಬರ್ಬರ ಹತ್ಯೆ ನಡೆದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಲಾಲ್ ಮುನಿ(50) ಎಂಬವರು ಹತ್ಯೆಗೀಡಾದವರಾಗಿದ್ದು, ಇವರು ಆರೋಪಿಗಳ ಮನೆಯ ಮುಂಭಾಗದಲ್ಲಿ ಹೋಗುತ್ತಿದ್ದ ವೇಳೆ, ನಾಯಿ ಬೊಗಳಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಆರೋಪಿತರ ಮನೆಯವರಿಗೆ ದೂರು ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಗಲಾಟೆ ಕೇಳಿ ಲಾಲ್ ಮುನಿ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಆರೋಪಿಗಳು ಸಂತ್ರಸ್ತ ಮಹಿಳೆ ಲಾಲ್ ಮುನಿ ಹಾಗೂ ಕುಟುಂಬಸ್ಥರ ಮೇಲೆ ಮರದ ಕೋಲುಗಳಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಲಾಲ್ ಮುನಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅಜಿತ್ ಅಭಿನಯದ ತುಣಿವು ಸಿನಿಮಾ ಬಿಡುಗಡೆ ಸಂಭ್ರಮಾಚರಣೆ ವೇಳೆ ಅಭಿಮಾನಿಯೋರ್ವ ಟ್ಯಾಂಕರ್ ಲಾರಿ ಮೇಲಿನಿಂದ ಬಿದ್ದು, ಸಾವನ್ನಪ್ಪಿದ ಘಟನೆ ರೋಹಿಣಿ ಥಿಯೇಟರ್ ಬಳಿ ನಡೆದಿದೆ. ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸುತ್ತಿದ್ದರು ಈ ವೇಳೆ ಟ್ಯಾಂಕರ್ ಲಾರಿ ಮೇಲೆ ಹತ್ತಿ ಡಾನ್ಸ್ ಮಾಡುತ್ತಿದ್ದ ಭರತ್ ಎಂಬ ಯುವಕ ಕಾಲು ಜಾರಿ ಬಿದ್ದಿದ್ದಾನೆ. ಲಾರಿ ಮೇಲಿನಿಂದ ಬಿದ್ದ ಭರತ್ ಬೆನ್ನುಮೂಳೆಗೆ ಗಂಭೀರವಾದ ಏಟು ಬಿದ್ದಿತ್ತು. ತಕ್ಷಣ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಚಾಲನೆ ನೀಡಿದರು. ಬಳಿಕ  ಪ್ರಜಾಧ್ವನಿ ಬಸ್ ಯಾತ್ರೆ ಬೆಳಗಾವಿಯಿಂದ ಚಿಕ್ಕೋಡಿಗೆ ಹೊರಟಿದೆ. ಇದರಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆ. ಚಿಕ್ಕೋಡಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಈಗಾಗಲೇ ಬಿಜೆಪಿ ಪಾಪದ ಪುರಾಣ ಎಂಬ ಅಭಿಯಾನ ಶುರು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ಮನೆಯಲ್ಲಿ ಹಿರಿಯರ ಮಾರ್ಗದರ್ಶನವಿಲ್ಲದೆ ಇಂದಿನ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ದುಶ್ಚಟಗಳಿಂದ ದೂರವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ನೊಣವಿನಕೆರೆ ಪಿಎಸ್ ಐ ಜಗದೀಶ್ ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೆಡಗರಹಳ್ಳಿ ಗ್ರಾಮದ ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ತಾಲ್ಲೂಕು ಯೋಜನಾಧಿಕಾರಿ ಉದಯ್ ಮಾತನಾಡಿ, ಇಂದಿನ ಪೀಳಿಗೆಯ ಮಕ್ಕಳು ಮಿತಿಮೀರಿದ ವಿಜ್ಞಾನ ಹಾಗೂ ತಂತ್ರಜ್ಞಾನಗಳಿಂದ ಅವೈಜ್ಞಾನಿಕತೆಯನ್ನು ರೂಢಿಸಿಕೊಂಡು ಸಂಸ್ಕಾರಯುಕ್ತ ಪ್ರಜೆಗಳಾಗದೆ, ಬಾಹ್ಯ ಆಕರ್ಷಣೆಗಳಾದ ಕುಡಿತ, ತಂಬಾಕು ಸೇವನೆ, ಡ್ರಗ್ಸ್ ಇನ್ನು ಮುಂತಾದ ಚಟಗಳಿಗೆ ದಾಸರಾಗಿ ತಮ್ಮ ಬದುಕನ್ನು ತಾವು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತ್ಯಜಿಸಿ ಮುಕ್ತಿ ಹೊಂದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.ಶಾಲಾ ಮುಖ್ಯಪಾಧ್ಯಾಯ ಯುವರಾಜ ನಾಯಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ…

Read More

ಪಾವಗಡ: ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಪಾವಗಡ ತಾಲೂಕಿನಲ್ಲಿ ದಲಿತ ಸಂಘಟನೆಗಳು ಒಕ್ಕೂಟ, ದಲಿತ ಮುಖಂಡರು ಪ್ರತಿಭಟನೆ ನಡೆಸಿದರು. ತಾಲೂಕಿನನಿರೀಕ್ಷಣ ಮಂದಿರದಿಂದ ಜಾಥಾ ಆರಂಭಿಸಿದ ಪ್ರತಿಭಟನಾಕಾರರು ಶನೇಶ್ವರ ಸ್ವಾಮಿ ವೃತ್ತದ ಬಳಿ ತೆರಳಿ ಮಾನವ ಸರಪಳಿ ರಚಿಸಿದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಕಚೇರಿ ಆವರಣಕ್ಕೆ ತೆರಳಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೊಟ್ರ ಶಂಕರ್, ಈ ದೇಶದಲ್ಲಿ ನಮ್ಮ ಪರವಾಗಿ ಯಾವುದೇ ಸ್ವಾಮೀಜಿ ಅಥವಾ ರಾಜಕಾರಣಿಯೂ ಇಲ್ಲ. ಆದರೆ, ಬಾಬಾ ಸಾಹೇಬ್ ಅಂಬೇಡ್ಕರ್ ರವರು ಕೊಟ್ಟ ಸಂವಿಧಾನ ನಮ್ಮ ಜೊತೆಗಿದೆ. ಸರ್ಕಾರ ಮೀಸಲಾತಿ ವಿಚಾರದಲ್ಲಿ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿ ಕೊಡದಿದ್ದರೆ. ಸರ್ಕಾರದ ಹಣೆಬರಹವನ್ನು ನಾವು ಕಿತ್ತು ಹಾಕುತ್ತೇವೆ ಎಂದು ಅವರು ಹೇಳಿದರು. ಹನುಮಂತರಾಯಪ್ಪ ಕಡಪಲಕೆರೆ ಹೆಚ್.ಆರ್.ಎಫ್. ಡಿ.ಎಲ್. ಮಾತನಾಡಿ, ಎ ಬಿ ಸಿ ಡಿ ವರ್ಗೀಕರಣ ಇವತ್ತು ನಿನ್ನೆಯದ್ದಲ್ಲ . ಕಳೆದ 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ತಕ್ಷಣವೇ…

Read More

ರಾಜಸ್ಥಾನದ ಜೈಪುರದಲ್ಲಿ ಹರೀಶ್ ಕುಮಾವತ್ ಎಂಬ ಯುವಕ 5 ವರ್ಷದ ಬಾಲಕಿಗೆ ಮಿಠಾಯಿ ನೀಡುವುದಾಗಿ ಹೇಳಿ   ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಆರೋಪಿಯು ಸೋಮವಾರ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಹಾರದ ಕಕಾಡಿಯಾ ಜಿಲ್ಲೆಯ ಪಾಕಿಯಾ ಗ್ರಾಮದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್‌ಗೆ ಸೇರಿದ ಗುವಾಹಟಿ-ಬರೌನಿ ಪೈಪ್‌ಲೈನ್ ಒಡೆದು ಪೆಟ್ರೋಲ್ ಕಳವು ಮಾಡಲಾಗಿದೆ. ಈ ವಿಷಯ ತಿಳಿದ ಪ್ರದೇಶದ ಜನರು ಪೆಟ್ರೋಲ್ ಹಾಕಿಸಲು ಜಮಾಯಿಸಿದರು. ಈ ಘಟನೆಯ ನಂತರ, ಸಾವಿರಾರು ಲೀಟರ್ ತೈಲವು ಹೊಲದಲ್ಲಿ ವ್ಯರ್ಥವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಐಒಸಿ ಅಧಿಕಾರಿಗಳು ಎಂಜಿನಿಯರ್ ಗಳ ನೆರವಿನಿಂದ ಪೈಪ್ ಒಡೆದು ಹೋಗಿರುವುದನ್ನು ಸರಿಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ಆಸ್ಕರ್​ ರೇಸ್​​ಗೆ ಎಂಟ್ರಿ ಕೊಟ್ಟಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿಅರ್ಹತಾ ಸುತ್ತನ್ನು ಪ್ರವೇಶಿಸಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಮಾಡಿದೆ. ‘ಕಾಂತಾರ ಸಿನಿಮಾ 2 ಆಸ್ಕರ್ ಅರ್ಹತೆ ಪಡೆದಿರುವ ವಿಚಾರ ತಿಳಿಸಲು ಸಂತಸವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ’ ಎಂದು ಟ್ವಿಟ್ಟರ್ ನಲ್ಲಿ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ. ಅಂದಹಾಗೆ ಇತ್ತೀಚೆಗಷ್ಟೇ ‘ಕಾಂತಾರ’ ಸಿನಿಮಾ 100 ದಿನ ಪೂರೈಸಿತ್ತು. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿತ್ತು. ಅದೇ ರೀತಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಆಸ್ಕರ್ ಅರ್ಹತೆ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಜನವರಿ 12ರಂದು ಮತ್ತೆ ಹೋರಾಟ ನಡೆಸುತ್ತೇವೆ. ಸಿಎಂ ಬೊಮ್ಮಾಯಿ ಮನೆ ಮುಂದೆಯೇ ಸಂಕ್ರಾಂತಿ ಆಚರಿಸಿ ಪ್ರತಿಭಟಿಸುತ್ತೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,2D ಮತ್ತು 2Cಗೆ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳಿತು. ನಾವು ಕಾನೂನು ತಜ್ಞರನ್ನು ಕರೆದು ಚರ್ಚಿಸಿದೆವು. 110ಕ್ಕೂ ಹೆಚ್ಚು ವಕೀಲರನ್ನು ಸೇರಿಸಿ ಚರ್ಚಿಸಿದೆವು. ನಮ್ಮ ಕಾನೂನು ತಜ್ಞರು ಇದನ್ನು ತಿರಸ್ಕರಿಸಲು ಹೇಳಿದ್ದಾರೆ. ಆದರೆ ನಾವು ಜನವರಿ 13 ರಂದು ಸಿಎಂ ಮನೆಯ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಹೇಳಿದ್ದಾರೆ. ಒಂದು ವಾರ ಕಾಯೋಣ ಎಂದು ಕಾದೆವು. ಕೊನೆಗೂ ಏನು ಸ್ಪಂದಿಸದೆ ಹೋರಾಟಕ್ಕೆ ಬಂದ ಜನರ ಮನಸ್ಸಿಗೆ ಭಾರವಾದರೂ ನಮ್ಮ ಮನವಿಗೆ ವಾಪಸ್ ಮನೆಗಳಿಗೆ ತೆರಳಿದ್ದರು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More