Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ ಕೊರಟಗೆರೆ : 30 ವರ್ಷದ ಮಾದಿಗ ಸಮಾಜದ ಒಳಮೀಸಲಾತಿ ಕನಸನ್ನು ಬಿಜೆಪಿ ಸರಕಾರ ನನಸು ಮಾಡಲು ಹೊರಟಿದೆ.. ಆದರೇ ಕಾಂಗ್ರೇಸ್ ಪಕ್ಷ ಒಳಮೀಸಲಾತಿ ಆದೇಶವನ್ನು ಮತ್ತೇ ತೆಗೆಯುವ ಶಪಥ ಮಾಡಿದೆ.. ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯು ನಮ್ಮ ಮಾದಿಗ ಸಮಾಜವು ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಎಲ್.ಮುರುಗನ್ ತಿಳಿಸಿದರು. ಕೊರಟಗೆರೆ ಪಟ್ಟಣದ ಪಂಚಾಜನ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಮಾದಿಗ ದಂಡೋರ ಸಂಘದಿಂದ ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಮಾದಿಗ ಸಮಾಜಕ್ಕೆ ಬಿಜೆಪಿ ಪಕ್ಷವು 12ಸೀಟು ನೀಡಿದೆ.. ಆದರೇ ಕಾಂಗ್ರೆಸ್ ಪಕ್ಷ ಕೇವಲ 6ಸೀಟು ನೀಡಿ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡಿದೆ. ಮಾದಿಗ ಸಮಾಜವನ್ನು ಕಾಂಗ್ರೆಸ್ ಪಕ್ಷ ಕೇವಲ ಪ್ರಚಾರ ಮತ್ತು ಮತಕ್ಕಾಗಿ ಮಾತ್ರ 70 ವರ್ಷದಿಂದ ಬಳಕೆ ಮಾಡಿಕೊಂಡಿದೆ. 2023ರ ಚುನಾವಣೆಗೆ ಮೀಸಲು ಕ್ಷೇತ್ರಗಳಲ್ಲಿ ರಾಜ್ಯದ ಮಾದಿಗ ಸಮಾಜ ಬಿಜೆಪಿ ಪಕ್ಷಕ್ಕೆ ಬೆಂಬಲ…
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪನವರ ಸೋಲಿಗೆ ನಾವೇ ಕಾರಣಕರ್ತರಾದೆವು. ಈ ಬಾರಿ ತುರುವೇಕೆರೆಯಲ್ಲಿ ಎಂ.ಟಿ.ಕೃಷ್ಣಪ್ಪನ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರು ಶ್ರಮಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕರೆ ನೀಡಿದರು. ಗುಬ್ಬಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪನವರ ಪರ ದೇವೇಗೌಡರು ಮತಯಾಚಿಸಿದರು. ಮಾಜಿ ಶಾಸಕ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪ ಮಾತನಾಡಿ, ಭಾರತದ ಇತಿಹಾಸದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಪಕ್ಷ ಅದು ಜೆಡಿಎಸ್ ಎಂದರು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಕಾಂಗ್ರೆಸ್ ಪಕ್ಷವನ್ನು ಸ್ವಾತಂತ್ರ್ಯ ನಂತರ ನೆಹರು ಕುಟುಂಬ ಗಾಂಧೀಜಿಯವರ ಹೆಸರಿನಲ್ಲಿ ರಾಜಕೀಯ ಪಕ್ಷವಾಗಿ ಮಾಡಿಕೊಂಡಿದ್ದು ವಿಪರ್ಯಾಸ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಸಂಜಯ್ ಬಾಟ್ಯಾ ಹೇಳಿದರು. ಬುಧವಾರ ಗುಬ್ಬಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ದಲಿತ ಮುಖಂಡರು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಗಾಂಧೀಜಿ ಕಂಡಿದ್ದ ದೇಶದ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಾ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಹೇಳಿದರು. ಡಿಎಸ್ ಎಸ್ ಮುಖಂಡ ನಿಟ್ಟೂರು ಗಂಗಾರಾಮ್ ಮಾತನಾಡಿ, ಬಿಜೆಪಿ ಪಕ್ಷವು ದಲಿತರನ್ನು ಗುರುತಿಸಿ ಉನ್ನತ ಸ್ಥಾನಮಾನಗಳನ್ನು ನೀಡಿದೆ. ತಾಲ್ಲೂಕಿನಲ್ಲಿ ಪರಿಶಿಷ್ಟರು ಪಕ್ಷದ ಪರವಾಗಿ ಇದ್ದು, ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ರವರನ್ನು ಗೆಲ್ಲಿಸಿಕೊಳ್ಳುತ್ತೇವೆ. ಡಿಎಸ್ ಎಸ್ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು ದಲಿತ ಹೋರಾಟಗಾರರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ ಅವರಿಗೆ ಅನುಕೂಲವಾಗುವ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕರೆ…
ತಮಿಳು ಹಾಸ್ಯ ನಟ ಮನೋಬಾಲಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಇಂದು ಕೊನೆಯುಸಿರೆಳೆದಿದ್ದಾರೆ .ಹಾಸ್ಯಕ್ಕೆ ಹೆಸರಾದ ನಿರ್ದೇಶಕ, ನಿರ್ಮಾಪಕ ಮತ್ತು ನಟ ಮನೋಬಾಲಾ ಅವರಿಗೆ 69 ವರ್ಷ ವಯಸ್ಸಾಗಿತ್ತು. ಇವರು ಹೃದಯ ಸಂಬಂಧಿ ಕಾಯಿಲೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೋಬಾಲ ಅವರ ಲಿವರ್ ಗೆ ಹಾನಿಯಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ನಂತರ ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿ ತಿಳಿದ ತಮಿಳು ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರು, ಚಿತ್ರರಂಗದವರು, ಅಭಿಮಾನಿಗಳು ಇವರಿಗೆ ಸಂತಾಪ ಸೂಚಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕ ರಾಜಕೀಯವು ಲಂಚ ಮತ್ತು ಕುದುರೆ ವ್ಯಾಪಾರಕ್ಕೆ ಕುಖ್ಯಾತವಾಗಿದೆ. ಪಕ್ಷ ಭೇದವಿಲ್ಲದೆ ಬಹುತೇಕ ನಾಯಕರು ಲಕ್ಷಾಧಿಪತಿಗಳು ಅಥವಾ ಕೋಟ್ಯಾಧಿಪತಿಗಳು. ಬಡ ಅಭ್ಯರ್ಥಿ ಕೂಡ 3 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಜನಸಾಮಾನ್ಯರ ಸೇವೆ ಮಾಡಲು ಬಯಸುವ ಶ್ರೀಮಂತರಿಂದ ಕನ್ನಡ ರಾಜಕಾರಣ ಶ್ರೀಮಂತವಾಗಿದೆ. ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ವೃತ್ತಿಯನ್ನು ಕೃಷಿ ಎಂದು ನಮೂದಿಸಿದವರೂ ಸಹ ಕೋಟಿಗಟ್ಟಲೆ ಆಸ್ತಿ ಹೊಂದಿದ್ದಾರೆ. ಅವರಲ್ಲಿ ಕೆಲವರನ್ನು ಭೇಟಿಯಾಗೋಣ. ಬಿಜೆಪಿಯ ಎಂ.ಟಿ.ಬಿ.ನಾಗರಾಜ್ ಅನಾರೋಗ್ಯದಿಂದ ಬಳಲುತ್ತಿರುವ ಕೋಟ್ಯಾಧಿಪತಿಗಳ ಪೈಕಿ ಅಗ್ರಗಣ್ಯರು. ಅವರ ಪತ್ನಿ ಹಾಗೂ ನಾಗರಾಜ್ ಅವರ ಆಸ್ತಿ ಕೇವಲ 2607 ಕೋಟಿ 84 ಲಕ್ಷ. ಕಾಂಗ್ರೆಸ್ ಕೂಡ ಹೇಗೆ ಕೈಬಿಡುತ್ತದೆ. ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರನ್ನೇ ಕೈಬಿಟ್ಟು ಸೇಡು ತೀರಿಸಿಕೊಂಡಿದೆ. 1214 ಕೋಟಿಗಳು ಇದು 2018 ಕ್ಕಿಂತ 68 ಪ್ರತಿಶತ ಹೆಚ್ಚು. ಪ್ರಿಯಾ ಕೃಷ್ಣನ್ ಕಾಂಗ್ರೆಸ್ 1,156.83 ಕೋಟಿ, ಎನ್ ಎ ಹ್ಯಾರಿಸ್ ಕಾಂಗ್ರೆಸ್ 397.29, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ 292.83 ಸಂಪತ್ತಿನಲ್ಲಿ ಪ್ರಮುಖರು. ಅವರ ಪತ್ನಿ ಹಾಗೂ ನಾಗರಾಜ್…
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಸೋಲಿಗೆ ನಾವೇ ಕಾರಣಕರ್ತರಾದೆವು. ಈ ಬಾರಿ ತುರುವೇಕೆರೆಯಲ್ಲಿ ಎಂ.ಟಿ. ಕೃಷ್ಣಪ್ಪನ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರು ಶ್ರಮಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕರೆ ನೀಡಿದರು. ಗುಬ್ಬಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ ಟಿ ಕೃಷ್ಣಪ್ಪನವರ ಪರ ಮತಯಾಚನೆ ಕಾರ್ಯಕ್ರಮಕ್ಕೆ ಆಗಮಿಸಿ ಬಹಿರಂಗ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಹಾಗೆಯೇ ಹೆಚ್.ಡಿ. ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಯಾಗುವುದು ಶತಸಿದ್ಧ ಚುನಾವಣೆ ಮುಗಿಯುವವರೆಗೂ ಎಲ್ಲಾ ಕಾರ್ಯಕರ್ತರು ಸಹ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು. ಮಾಜಿ ಶಾಸಕ ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ ಮಾತನಾಡಿ ಭಾರತದ ಇತಿಹಾಸದಲ್ಲಿ ಎರಡು ಭಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಪಕ್ಷ ಅದು ಜೆಡಿಎಸ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ರೈತರ ಸಂಕಷ್ಟಗಳಿಗೆ ಧಾವಿಸುವ ಮೂಲಕ ರೈತಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.…
ತುರುವೇಕೆರೆ: ಜೆಡಿಎಸ್ ಪಕ್ಷದವರು ನಾನು ಪಕ್ಷದ ಪ್ರಚಾರದಲ್ಲಿ ತೊಡಗಿಕೊಂಡಾಗ ಪ್ರಚಾರ ಭಾಷಣದಲ್ಲಿ ಮಾತನಾಡಿದ ತುಣುಕುಗಳನ್ನ ಕಟ್ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾವುದೇ ಪಕ್ಷಕ್ಕೆ ಅಂಟಿಕೊಂಡಿಲ್ಲ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದೇನೆ, ನಾನು ಯಾವ ಪಕ್ಷದೊಂದಿಗೂ ಶಾಮಿಲಾಗಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತರಾಜು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಬಿಎಂಎಲ್ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕಾಗಿ ಎರಡನೇ ಬಾರಿ ಆಗಮಿಸಿದ ನಮ್ಮ ರಾಷ್ಟ್ರೀಯ ನಾಯಕರ ರಾಹುಲ್ ಗಾಂಧಿಯವರಿಗೆ ವಿಶೇಷವಾದ ಕೃತಜ್ಞತೆಗಳು. ನಮ್ಮ ರಾಷ್ಟ್ರೀಯ ನಾಯಕರು ತುರುವೇಕೆರೆಗೆ ಬಂದಾಗ, ನೂಕು ನುಗ್ಗಲಲ್ಲಿ ರಾಹುಲ್ ಗಾಂಧಿಯವರ ನೋಡಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಈ ಬಾರಿಯ ಚುನಾವಣಾ ಪ್ರಚಾರಕ್ಕಾಗಿ ಬರಲೇಬೇಕು ಎಂದು ನಮ್ಮ ರಾಜ್ಯದ ನಾಯಕರುಗಳ ಜೊತೆ ಸಭೆಯಲ್ಲಿ ಚರ್ಚಿಸಿದ್ದೆವು. ಹಾಗೆಯೇ ಕ್ಷೇತ್ರಕ್ಕೆ ಬಂದು ಪ್ರಚಾರ ಕಾರ್ಯವನ್ನು ಮುಗಿಸಿ ಹೋಗಿದ್ದಾರೆ ಮತ್ತೊಮ್ಮೆ ಅವರಿಗೆ ಧನ್ಯವಾದಗಳು ಎಂದರು. ದಯಮಾಡಿ ನನ್ನ ಕ್ರಮ ಸಂಖ್ಯೆ 1 ಬಿ.ಎಂ.ಎಲ್.ಕಾಂತರಾಜು ನನ್ನ ಗುರುತು ಹಸ್ತ,…
ಕೊರಟಗೆರೆ: ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವು ಚುನಾವಣೆ ತಯಾರಿ ನಡೆಸುತಿದ್ದಾರೆ. ಅಲ್ಲದೆ ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಆಯಾ ತಾಲೂಕು ಅಧಿಕಾರಿಗಳಿಗೆ ಆದೇಶಿಸಲಾಗಿತ್ತು. ಆದರೆ ಇದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ತುಮಕೂರು ಜಿಲ್ಲೆಯ ಚುನಾವಣಾಧಿಕಾರಿಗಳು ನಡೆದುಕೊಳ್ಳುವ ಸನ್ನಿವೇಶ ಬಯಲಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದ ಕೋಳಾಲ ಹೋಬಳಿಯ ಮಲುಗೋನಹಳ್ಳಿ ಮತಗಟ್ಟೆ ಅವ್ಯವಸ್ಥೆಯ ಗೂಡಾಗಿದೆ. ಈ ಗ್ರಾಮದ ಮತಗಟ್ಟೆ ಕೇಂದ್ರವಾದ ಶಾಲೆಯ ಮೇಲ್ಛಾವಣಿಯ ಮರದ ತೀರುಗಳು ಮುರಿದಿವೆ. ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಅದನ್ನು ಗಮನಿಸಿದರು ಅದನ್ನು ಸರಿ ಮಾಡಿಸುವ ಗೋಜಿಗೆ ಹೋಗಿಲ್ಲ. ಇನ್ನೂ ಮಳೆ ಬಂದರೆ ಮಳೆನೀರು ಒಳಗೆ ತುಂಬಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟು ದಿನ ಗಮನಿಸಿದ ಅಧಿಕಾರಿಗಳು ಈಗ ಪ್ಲಾಸ್ಟಿಕ್ ಟಾರ್ಪಲ್ ತಂದು ಮೇಲೆ ಹೊಂದಿಸಲು ಪ್ರಯತ್ನ ಪಡುತ್ತಿದ್ದಾರೆ. ಆ ಅರ್ಧಂಬರ್ಧ ಮುರಿದಿರುವ ಮೇಲ್ಛಾವಣಿಯ ತೀರು (ಮರದ ಅಡ್ಡೆ) ಮತದಾನ ದೇ ಸಮಯದಲ್ಲಿ ಯಾರ ಮೇಲಾದರೂ ಬಿದ್ದರೆ ಯಾರು ಜವಾಬ್ದಾರರು .…
ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ತಾಲೂಕಿನ ಮಾವಿನಕಟ್ಟಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಮಂದಿರದ ಕಳಸಾರೋಹಣ ಹಾಗೂ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೇವಿಯ ದರ್ಶನದ ಪಡೆದ ನಂತರದಲ್ಲಿ ಅವರು ಎಲ್ಲ ಭಕ್ತರೊಂದಿಗೆ ಪ್ರಸಾದ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ದೇವಸ್ಥಾನ ಕಮಿಟಿ ವತಿಯಿಂದ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು. ಗ್ರಾಮದ ಹಿರಿಯರು, ದೇವಸ್ಥಾನದ ಟ್ರಸ್ಟ್ ಕಮಿಟಿಯವರು, ನಾಗೇಶ ದೇಸಾಯಿ, ಶಂಕರಗೌಡ ಪಾಟೀಲ, ಮಹೇಶ ಸುಗೆಣ್ಣವರ ಹಾಗೂ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯನಗರ: ಈ ಹಿಂದೆ ಶ್ರೀರಾಮಚಂದ್ರನನ್ನು ಕಾಂಗ್ರೆಸ್ ಬಂಧಿಸಿಟ್ಟಿತ್ತು. ಇದೀಗ ಹನುಮಾನ್ ಜನ್ಮಸ್ಥಳದಲ್ಲೇ ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿಜಯನಗರದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಹನುಮಂತನ ಜನ್ಮಸ್ಥಾನಕ್ಕೆ ನಾನು ಬಂದಿದ್ದೇನೆ. ನಾನು ಹನುಮಂತನಿಗೆ ಶತ ಪ್ರಣಾಮ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗಬಲಿ ಅಂದರೆ ಹನುಮಂತನನ್ನು ಬೀಗ ಹಾಕಿ ಬಂಧಿಸಲು ಹೊರಟಿದ್ದಾರೆ. ಕಾಂಗ್ರೆಸ್‌ನವರಿಗೆ ಹಿಂದೆ ಶ್ರೀರಾಮನನ್ನು ಕಂಡರೂ ಆಗುತ್ತಿರಲಿಲ್ಲ. ಈಗ ಹನುಮಂತನ ಕಂಡರೂ ಆಗುತ್ತಿಲ್ಲ. ನಮಗೆ ಶ್ರೀರಾಮಚಂದ್ರ ಹಾಗೂ ಹನುಮಂತ ಪೂಜ್ಯರು. ಕಾಂಗ್ರೆಸ್ ಸದಾ ಶ್ರೀ ರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ. ಇಡೀ ದೇಶದಲ್ಲಿ ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಈ ಸಂಕಲ್ಪಕ್ಕೆ ಹನುಮಂತನ ಆಶೀರ್ವಾದ ಕೇಳಲು…