Author: admin

ತ್ರಿಶೂರ್‌: ಆರ್‌ಪಿಎಫ್ 54 ಲಕ್ಷ ಮೌಲ್ಯದ ಚಿನ್ನಾಭರಣ ಬೇಟೆಯಾಡಿದ್ದು ಕಾಂಡೋಮ್‌ಗಳಲ್ಲಿ ದ್ರವರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗಿತ್ತು. ಮಲಪ್ಪುರಂ ವೆಂಗಾಡ್ ಮೂಲದ ಮಣಿಕಂಠನ್ (35) ಬಂಧಿತ ಆರೋಪಿ. ಪರಶುರಾಮ್ ಎಕ್ಸ್ ಪ್ರೆಸ್ ನಲ್ಲಿ ಚಿನ್ನ ಕಳ್ಳಸಾಗಣೆ ಯತ್ನ ನಡೆದಿದೆ. ತ್ರಿಶೂರ್‌ಗೆ ತಂದಿದ್ದ ಚಿನ್ನವನ್ನು ರೈಲ್ವೇ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಒಂದು ಕೆಜಿಗೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆರ್‌ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ಕರಿಪುರದಲ್ಲಿ ಪೊಲೀಸರ ಚಿನ್ನದ ಬೇಟೆ ನಡೆದಿತ್ತು. ಜಿದ್ದಾದಿಂದ ಕರಿಪುರ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲು ಯತ್ನಿಸಿದ 59 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಯುವಕ ಸಿಕ್ಕಿಬಿದ್ದಿದ್ದಾನೆ. ಮಲಪ್ಪುರಂನ ವೆಂಗರಾ ಮೂಲದ ಶಂಸುದ್ದೀನ್ (29) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆತನಿಂದ 1.059 ಕೆಜಿ 24 ಕ್ಯಾರೆಟ್ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಚಿನ್ನವನ್ನು ಮಿಶ್ರ ರೂಪದಲ್ಲಿ ನಾಲ್ಕು ಕ್ಯಾಪ್ಸುಲ್‌ಗಳಲ್ಲಿ ಸಾಗಿಸಿ ದೇಹದೊಳಗೆ ಬಚ್ಚಿಡಲು ಯತ್ನಿಸಿದ್ದಾನೆ. ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಎಸ್ ಸುಜಿತ್ ದಾಸ್ ಐಪಿಎಸ್ ಅವರಿಗೆ ದೊರೆತ ರಹಸ್ಯ ಮಾಹಿತಿಯ…

Read More

ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬಿಎಂಆರ್ ಸಿಎಲ್ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ನಗರದ ನಾಗವಾರ – ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿತ್ತು. ನಾಗವಾರ ಬಳಿ (ಹೆಣ್ಣೂರು ಕ್ರಾಸ್) ಮೆಟ್ರೋ ಪಿಲ್ಲರ್ ನೆಲಕ್ಕೆ ಉರುಳಿ ತಾಯಿ ತೇಜಸ್ವಿನಿ(35) ಎರಡುವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದರು. ಇದೀಗ ಬಿಎಂಆರ್ ಸಿಎಲ್ ಎಂಡಿ ಅಂಜುಂ ಪರ್ವೇಜ್ ಅವರು ಮೃತರ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಇನ್ನು ಘಟನಾ ಸ್ಥಳಕ್ಕೆ ಬಿಎಂಆರ್ ಸಿಎಲ್ ನ ಎಂಡಿ ಅಂಜುಂ ಪರ್ವೇಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಎಂಬಲ್ಲಿ ವಾಸವಾಗಿದ್ದರು. ‘ಚಂದ್ರಗಿರಿ ತೀರದಲ್ಲಿ‌’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿತರಾಗಿದ್ದರು. ಇಂಜಿನಿಯರ್ ಆಗಿದ್ದ ಅಬೂಬಕರ್ ಅವರೊಡನೆ ವಿವಾಹವಾದ ಬಳಿಕ ಅವರ ಶಿಕ್ಷಣ ಅರ್ಧದಲ್ಲೇ ಮೊಟಕುಗೊಂಡಿತು. ಸಾರಾ ಅಬೂಬಕರ್ ಅವರ ಪ್ರಥಮ ಕಾದಂಬರಿ ‘ಚಂದ್ರಗಿರಿಯ…

Read More

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಜನಾರ್ಧನ ರೆಡ್ಡಿ ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ ಎಂದು ಆಸ್ತಿ ಜಪ್ತಿಗೆ ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಕಳೆದ ಆಗಸ್ಟ್ ತಿಂಗಳಿನಲ್ಲಿಯೇ ಕೇಳಿತ್ತು. ಜನಾರ್ಧನ ರೆಡ್ಡಿಯವರ 219 ಆಸ್ತಿಗಳನ್ನು ಹೊಸದಾಗಿ ಪತ್ತೆ ಹಚ್ಚಲಾಗಿದ್ದು, ಆಂಧ್ರ ತೆಲಂಗಾಣ ರಾಜ್ಯಗಳಲ್ಲಿಯೂ ಆಸ್ತಿ ಪತ್ತೆಯಾಗಿದೆ. ಹೀಗಾಗಿ ಆಸ್ತಿ ಜಪ್ತಿಗೆ ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಕೋರಿತ್ತು. ಆದರೆ ರಾಜ್ಯ ಸರ್ಕಾರ ಈವರೆಗೆ ಅನುಮತಿ ನೀಡಿಲ್ಲ. ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ವಿಳಂಬ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿ ಪ್ರಭಾವಿ ಎಂಬ ಕಾರಣಕ್ಕೆ ವಿಳಂಬ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ. ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿದೆ. ನಮ್ಮತುಮಕೂರು.ಕಾಂನ…

Read More

ಹೆಚ್.ಡಿ.ಕೋಟೆ: ತಾಲ್ಲೂಕಿನ ಶಂಖಹಳ್ಳಿ ಗ್ರಾಮದ ಶಂಖಮ್ಮ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಡಿಯಲ್ಲಿ ಶಂಖಮ್ಮ ದೇವಸ್ಥಾನವನ್ನು ಸ್ವಚತಾ ಕಾರ್ಯಕ್ರಮವನ್ನು ಹಮ್ಮಿಕೂಳ್ಳಲಾಯಿತು. ಮೈಸೂರು ಜಿಲ್ಲಾ ನಿರ್ದೆಶಕರಾದ ಲಕ್ಷಣ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ನಮ್ಮ ಊರಿನ ದೇವಸ್ಥಾನಗಳನ್ನೂ  ನಾವೇ ಶುಚಿಯಾಗಿ ಇಡಬೇಕು ಏನ್ನುವ ಉದ್ದೇಶದಿoದ ಡಾ.ಡಿ.ವೀರೇoದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕರ್ನಾಟಕದಾದ್ಯಂತ ಸಂಕ್ರಾತಿ ಹಬ್ಬದ ಪ್ರಯುಕ್ತ  ಎಲ್ಲ ದೇವಸ್ಥಾನಗಳ ಸ್ವಚ್ಛತೆಯನ್ನುಮಾಡಲು ಹಮ್ಮಿಕೂoಡಿರುತ್ತೇವೆ ಹಾಗೂ ತಾಲ್ಲೂಕಿನಲ್ಲಿ 70 ದೇವಸ್ಥಾನಗಳ ಸ್ವಚತೆ ಮಾಡಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕಿನ ಯೋಜನಾಧಿಕಾರಿಯವರಾದ ಶಶಿಧರ್ ಎಂ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಅಶ್ವಿನಿ ಎಚ್.ಜಿ. ಸೇವಾಪ್ರತಿನಿದಿ ಭಾಗ್ಯಮ್ಮ ಹಾಗೂ ಶಂಖಮ್ಮ ಜ್ಞಾನವಿಕಾಸ ಸದಸ್ಯರು ಭಾಗವಹಿಸಿದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಮಂಡ್ಯ: ನಾನು ರೈತನ ಮಗ ರೈತರ ಸಮಸ್ಯೆ ಅರಿವಿದೆ, ಒಂದು ಬಾರಿ ಅವಕಾಶ ನೀಡಿದರೆ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ  ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜು ರವರು ಮತದಾರರಲ್ಲಿ ಮನವಿ ಮಾಡಿದರು ತಾಲೂಕು ಅಧ್ಯಕ್ಷ ಜಾನಕಿರಾಮ್ ರವರ ನೇತೃತ್ವದಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ಎಚ್.ಟಿ.ಮಂಜುರವರು ಕಾರ್ಯಕರ್ತರ ಜೊತೆಗೂಡಿ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ನಾಯಕನಹಳ್ಳಿ,ಬಿಕ್ಕಸಂದ್ರ, ಅಪ್ಪನಹಳ್ಳಿ, ಮಾವಿನಕಟ್ಟೆ ಕೋಪಲು, ಮಾಳಗೂರು, ಆದಿಹಳ್ಳಿ, ಗೊರವಿ, ಹೆತ್ತಗೋನಹಳ್ಳಿ ಸೇರಿದಂತೆ ಹಲವಾರು  ಗ್ರಾಮಗಳ ಮತದಾರ ಮನೆಗಳಿಗೆ ತೆರಳಿ ಮತಯಾಚಿಸಿದರು. ನಾನು ಒಬ್ಬ ಬಡ ಕುಟುಂಬ ರೈತನ ಮಗ. ರೈತರ ಕಷ್ಟ ಏನು ಎಂದು ನನಗೂ ತಿಳಿದಿದೆ. 2023 ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಮತವನ್ನು ನೀಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಲ್ಲಿ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ರೈತರು ಯಾವುದೇ ಸಾಲ ಮಾಡದೇ ಕೃಷಿ ಕಾರ್ಯದಲ್ಲಿ ತೊಡಗಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಬಳಿಕ…

Read More

ತುರುವೇಕೆರೆ: ಪಟ್ಟಣದ ತಾಲೂಕು ಆಡಳಿತದಿಂದ ಜನವರಿ 26ನೇ ಗುರುವಾರ ಗಣರಾಜ್ಯೋತ್ಸವದ ಪೂರ್ವ ಸಾಧ್ಯತೆಯನ್ನು ಕೈಗೊಳ್ಳಲು ತಾಲೂಕು ಕಚೇರಿಯಲ್ಲಿ ಶಾಸಕರಾದ ಮಸಾಲ ಜಯರಾಮ್ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ತಾಲೂಕು ಆಡಳಿತದ ಎಲ್ಲಾ ಇಲಾಖೆಗಳಿಗೂ ಸಭೆಯ ಬಗ್ಗೆ ಮಾಹಿತಿ ನೀಡಿದ್ದು, ಅದರಲ್ಲಿ ಕೆಲವು ಇಲಾಖೆಗಳು ಪೂರ್ವಭಾವಿ ಸಭೆಗೆ ಹಾಜರಾಗಿರಲಿಲ್ಲ. ಇದನ್ನು  ಗಮನಿಸಿದ ಶಾಸಕ ಮಸಾಲ ಜಯರಾಮ್, ಹಾಜರಾಗದ ಇಲಾಖೆಗಳಿಗೆ ತಕ್ಷಣ ನೋಟಿಸ್ ನೀಡಿ ಎಂದು ತಾಲೂಕು ದಂಡಾಧಿಕಾರಿಗಳಾದ ವೈ.ಎಂ.ರೇಣು ಕುಮಾರ್ ರವರಿಗೆ ಸೂಚಿಸಿದರು. ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಾರದೆ ಇದ್ದರೆ,  ಅವರ ವಿರುದ್ಧ ಕಾನೂನು ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಅವರು ಹೇಳಿದರು.  ಪೂರ್ವಭಾವಿ ಸಭೆಯಲ್ಲಿ ಕೆಲವೊಂದು ಇಲಾಖೆಗಳು ಹಾಜರಿದ್ದು, ಆಯಾ ಇಲಾಖೆಯ ಜವಾಬ್ದಾರಿಗಳನ್ನು ನೀಡಿದರು. ಈ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ವೈ.ಎಂ. ರೇಣು ಕುಮಾರ್,  ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್,  ಮುಖಂಡರಾದ ಕೊಂಡಜ್ಜಿ ವಿಶ್ವನಾಥ್ , ಬುಗುಡನಹಳ್ಳಿ ಕೃಷ್ಣಮೂರ್ತಿ…

Read More

ಧಾರವಾಡ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಲಗಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಸಾಯಿಸಿದ ಘಟನೆ ಉಪ್ಪಿನ ಬೆಟಗೇರಿ ಗ್ರಾಮದ ಖಬರಸ್ತಾನ್‌ ಬಳಿ ಘಟನೆ ನಡೆದಿದೆ. ಮಲಗಿದ್ದ ಭಿಕ್ಷುಕಿಯನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿದೆ. ಪರಿಣಾಮ ಭಿಕ್ಷುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗರಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಮಸೀದಿ ಪಾಲಿಟಿಕ್ಸ್ ಸದ್ದು ಜೋರಾಗಿ ಕೇಳಿ ಬಂದಿದೆ. ಮನೆಯಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ಆರೋಪ ಕೇಳಿಬಂದಿದ್ದು, ಮಸೀದಿ ವಿವಾದ ಭುಗಿಲೆದ್ದಿದೆ. ಮಸೀದಿ ತೆರೆವುಗೊಳಿಸುವುದಕ್ಕೆ ಹೋರಾಟ ಶುರುವಾಗಿದೆ.ಆದರೆ ಆ ಮಸೀದಿ ತೆರವುಗೊಳಿಸದಂತೆ ಪಾಲಿಕೆ ಆಯುಕ್ತರಿಗೆ ಒತ್ತಡ ಹೇರಿದ ಆರೋಪ ಕೇಳಿಬಂದಿದೆ. ಶಾಸಕಿಯೊಬ್ಬರು ವಿರುದ್ಧ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಸಾರಥಿ ನಗರದಲ್ಲಿದ್ದ ಮನೆಯನ್ನೇ ಫಾತೀಮಾ ಮಸೀದಿಯಾಗಿ ನಿರ್ಮಾಣ ಮಾಡಿ ವಕ್ಫ್​ ಬೋರ್ಡ್​ಗೆ ಹಸ್ತಾಂತರ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಸತಿ ಯೋಜನೆಗೆ ಮೀಸಲಿದ್ದ ಜಾಗದಲ್ಲಿ ಮಸೀದಿ ನಿರ್ಮಾಣ ಮಾಡಿದ್ದಾರೆ. ಚಾಲಕರ ರಹವಾಸಿಗಳ ಸಂಘದಿಂದ ವಸತಿಗಾಗಿ ನಿವೇಶನ ಹಂಚಿಕೆ ಮಾಡಲಾಗುತ್ತಿತ್ತು. ಆದರೆ ಇದೀಗ ಮನೆ ನಿರ್ಮಾಣದ ಜಾಗದಲ್ಲಿ ಮಸೀದಿ ನಿರ್ಮಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಸೀದಿ ನಿರ್ಮಿಸಿದ್ದಕ್ಕೆ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಕ್ರಮವಾಗಿ ಮಸೀದಿ ನಿರ್ಮಿಸಿರುವ ತೆರವಿಗೆ ಬಿಜೆಪಿ ಆಗ್ರಹಿಸಿದೆ. ಈ ವಿವಾರವಾಗಿ ಬಿಜೆಪಿಯವರು ಇಂದು ಬೆಳಗಾವಿ ಪಾಲಿಕೆ ಆಯುಕ್ತರಿಗೆ ದೂರು ನೀಡಲಿದ್ದಾರೆ. ಒಂದು ವಾರದ ಒಳಗೆ…

Read More

ವಾಲ್ಮೀಕಿ ಭವನದ ನಿರ್ಮಾಣ ಹಂತದ ಸಂಪ್ ನಲ್ಲಿ ಬಿದ್ದು ನರ್ಸರಿಯಲ್ಲಿ ಓದುತ್ತಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೂರ್ಲಹೊಸೂರ ಕಾಲೋನಿಯಲ್ಲಿ ನಡೆದಿದೆ. ನಾಲ್ಕು ವರ್ಷದ ಶ್ಲೋಕ ಗುಡಿ ಹಾಗೂ ಚಿದಾನಂದ ಸಾಳುಂಕೆ ಮೃತ ದುರ್ದೈವಿಗಳು. ಪ್ರಾಥಮಿಕ ಶಾಲೆಯಲ್ಲಿ ನರ್ಸರಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳು ಮಧ್ಯಾಹ್ನ ಆಟವಾಡಲು ಶಾಲೆಯಿಂದ ಹೊರಬಂದಿದ್ದಾರೆ. ಈ ವೇಳೆ ನೀರಿನ ಸಂಪ್ ನಲ್ಲಿ ಬಿದ್ದು ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More