Author: admin

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಸಜ್ಜಾಗಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಪುಸ್ತಕ ಬಿಡುಗಡೆಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಬಿಜೆಪಿ ನಾಯಕರು ಇಂದು ಸಿದ್ದರಾಮಯ್ಯ ವಿರುದ್ಧ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು. ಪುಸ್ತಕ ಬಿಡುಗಡೆಗೆ ತಡೆ ಕೋರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಸಚಿವ ಅಶ್ವತ್ಥನಾರಾಯಣ ಸೇರಿ ಹಲವರಿಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ‍್ಧತೆ ಆರಂಭಿಸಿರುವ ಕಾಂಗ್ರೆಸ್ ಮಹಿಳೆಯರಿಗಾಗಿ ‌ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲು ತೀರ್ಮಾನಿಸಿದೆ. ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದ ಜನರಿಗೆ ಬಿಜೆಪಿಯವರು ಕೊಟ್ಟ ಭರವಸೆಯನ್ನ ಈಡೇರಿಸಿಲ್ಲ, ದಿನಬಳಕೆಯ ವಸ್ತುಗಳ ಬೆಲೆ ಶೇಕಡಾ 60ರಷ್ಟು ಹೆಚ್ಚಾಗಿದೆ. ಮಹಿಳೆಯರಿಗಾಗಿ ‌ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುವ ಮೂಲಕ ಮಹಿಳೆಯರ ಪರವಾಗಿ ನಿಲ್ಲಲು ಕಾಂಗ್ರೆಸ್ ನಿರ್ಧರಿಸಿದೆ ಎಂದರು. ಸ್ಯಾಂಟ್ರೋ ರವಿ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಸ್ಯಾಂಟ್ರೊ, ಆಡಿ, ಮರ್ಸಿಡೀಸ್ ಎಂದು ಟಿವಿಯಲ್ಲಿ ತೋರಿಸುತ್ತಿದ್ದರು. ಅವರಿಗೂ ಬಿಜೆಪಿಯವರಿಗೂ ಇರುವ ಸಂಬಂಧ ನೀವೇ ತೋರಿಸಿದ್ದೀರಿ. ಜೊತೆಗೆ ಹೆಚ್​.ಡಿ ಕುಮಾರಸ್ವಾಮಿ ಅವರು ಕೂಡ ಈ ವಿಚಾರವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯವರು ಇಂತಹವರನ್ನು ರಕ್ಷಣೆ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿಯವರು ಹಾಗೂ ಗೃಹ ಸಚಿವರು ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಆದರೆ ಆ ಕೆಲಸ ಮಾಡ್ತಾಯಿಲ್ಲ. ಅವರ ವಿರುದ್ಧ ಆರೋಪ ಬಂದಾಗ ಪಾರದರ್ಶಕವಾದ ತನಿಖೆ ಮಾಡಬೇಕು ಆಗ ಸತ್ಯ ಹೊರಗಡೆ ಬರುತ್ತದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ…

Read More

ಬೆಂಗಳೂರು: ಡ್ರೋನ್ ಮೂಲಕ ಭೂ ಸರ್ವೆ ನಡೆಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಲ್ಲಿ ಡ್ರೋನ್ ಮೂಲಕ ಸರ್ವೆ ಕಾರ್ಯ ಪೂರ್ಣಗೊಳಿಸಲಿದ್ದು, ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ಭೂ ವಿವಾದಗಳು, ನಕಲಿ ದಾಖಲೆಗಳ ಸೃಷ್ಠಿ, ಕಂದಾಯ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.ಇನ್ನು ಸರ್ವೆ ಕಾರ್ಯಕ್ಕಾಗಿ 258 ಕೋಟಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು:  ಸಿರಾ ತಾಲೂಕಿನ ಪದ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ಆತನ ಜೊತೆಗೆ ಮತ್ತೋರ್ವ ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ದೂರುದಾರರಿಗೆ  ಪರಿಹಾರವಾಗಿ ಸರ್ಕಾರ 25 ಸಾವಿರ ರೂ. ನೀಡಿದ್ದು, ಈ ಹಣವನ್ನು ಸಾಮಾಜಿಕ ಕೆಲಸಗಳಿಗೆ ವಿನಿಯೋಗಿಸಲಾಗಿದೆ. ಸಮಾಜವನ್ನು ತಿದ್ದ ಬೇಕಾಗಿದ್ದ ಶಿಕ್ಷಕ ಜಾತಿ ನಿಂದಿಸಿ, ಜನಾಂಗಗಳ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಹಂದ್ರಾಳ್ ನಾಗಭೂಷಣ್ ದೂರು ದಾಖಲಿಸಿದ್ದರು. ಈ ದೂರಿನನ್ವಯ ದೂರುದಾರರಿಗೆ ಸರ್ಕಾರ 25 ಸಾವಿರ ರೂ. ಪರಿಹಾರವನ್ನು ನೀಡಿತ್ತು. ಇದು ಸಾರ್ವಜನಿಕ ಹಣವಾಗಿರುವುದರಿಂದ ಹಂದ್ರಾಳ್ ನಾಗಭೂಷಣ್ ಅವರು ಈ ಹಣ ಸಮಾಜಕ್ಕೆ ಸೇರಬೇಕಾದದ್ದು ಅನ್ನೋ ನಿಟ್ಟಿನಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ನೂರುನ್ನಿಸ್ಸಾ ಹಾಗೂ ಡಾ.ವೀಣಾ ಅವರ ಸಮ್ಮುಖದಲ್ಲಿ ಕಷ್ಟದಲ್ಲಿರುವ 12 ಜನ ಬಡ ರೋಗಿಗಳಿಗೆ ಈ ಹಣವನ್ನು ಹಂಚಲಾಯಿತು. ಇದೇ ವೇಳೆ ಮಾತನಾಡಿದ ನಾಗಭೂಷಣ್,  ನಾನು ಹಾಗೂ ನನ್ನ ಹೋರಾಟದ ಸ್ನೇಹಿತರು, ಯಾವುದೇ ರೀತಿಯ…

Read More

ಚಂಡೀಗಢ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಹರಿಹಾಯ್ದಿರುವ ರಾಹುಲ್‌ ಗಾಂಧಿ, ಆರ್‌ಎಸ್‌ಎಸ್‌ನವರು 21ನೇ ಶತಮಾನದ ಕೌರವರು ಎಂದು ವಾಗ್ದಾಳಿ ನಡೆಸಿದ್ದಾರೆ. ಹರಿಯಾಣ ಮಹಾಭಾರತದ ನೆಲ, ಕೌರವರು ಯಾರು.. ನಿಮಗೆ 21ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ. ಅವರು ಖಾಕಿ ಚೆಡ್ಡಿ ಧರಿಸುತ್ತಾರೆ. ಲಾಠಿ ಹಿಡಿಯುತ್ತಾರೆ, ಶಾಖೆ ನಡೆಸುತ್ತಾರೆ ಎಂದು ಜರಿದಿದ್ದಾರೆ. ಭಾರತ್‌ ಜೋಡೊ ಯಾತ್ರೆಯು ಹರಿಯಾಣದ ಅಂಬಾಲಾ ಜಿಲ್ಲೆಯನ್ನು ಪ್ರವೇಶಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : 2022-23ನೇ ಸಾಲಿಗೆ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ IIM, IIT, IISc, IIITs, NITs, IISERs, AIIMS, NLU, ISM, IIP, ISI, JIPMER ಅಥವಾ SPA ಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಜನವರಿ 30, 2023 ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ ಸೈಟ್ ವಿಳಾಸ :https://bcwd.karnataka.gov.in ನ್ನು ನೋಡಬಹುದು ಅಥವಾ ಸಹಾಯವಾಣಿ ಸಂಖ್ಯೆ: 8050770004 ಯನ್ನು ಸಂಪರ್ಕಿಸಬಹುದು ಎಂದು (ಕಚೇರಿ ಕರ್ಯನಿರ್ವಹಿಸುವ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ…

Read More

ಅನೇಕ ಜನರು ಚಳಿಗಾಲದಲ್ಲಿ ಕಿವಿ ನೋವಿನಿಂದ ಬಳಲುತ್ತಿದ್ದಾರೆ. ಆದರೆ ಇದನ್ನು ನಮ್ಮ ಅಡುಗೆಮನೆಯಲ್ಲಿ ಲವಂಗದಿಂದ ಗುಣಪಡಿಸಬಹುದು. ಲವಂಗವು ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ. ಕಿವಿ ನೋವಿಗೆ ಲವಂಗದ ಎಣ್ಣೆಯನ್ನು ಆಯುರ್ವೇದದಲ್ಲಿ ಬಳಸಲಾಗುತ್ತದೆ. ಕಿವಿ ನೋವಿಗೆ ಒಂದು ಚಮಚ ತುಪ್ಪದಲ್ಲಿ ಒಂದು ಲವಂಗವನ್ನು ಕುದಿಸಿ. ಅದನ್ನು ಸೋಸಿಕೊಂಡು 1 ರಿಂದ 2 ಹನಿಗಳನ್ನು ಕಿವಿಗೆ ಹಾಕಿ. ತಕ್ಷಣ ಪರಿಹಾರ ಪಡೆಯಿರಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಜಮ್ಮು ಮತ್ತು ಕಾಶ್ಮೀರದ ತೋಡಾ ನಿವಾಸಿ ಮನಜಿತ್ ಸಿಂಗ್ ಅವರು ತಮ್ಮ ವ್ಯವಹಾರಕ್ಕಾಗಿ ವಿವಿಧ ಬ್ಯಾಂಕ್‌ಗಳು ಮತ್ತು ಖಾಸಗಿ ವ್ಯಕ್ತಿಗಳಿಂದ 30 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ. ಈ ಪರಿಸ್ಥಿತಿಯಲ್ಲಿ ಡಿಸೆಂಬರ್ 20 ರಂದು ಪತ್ನಿ ಮತ್ತು ಮಗಳ ಜೊತೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಆತನಿಗಾಗಿ ತೀವ್ರ ಶೋಧ ನಡೆಸಿದಾಗ ಚೆನಾಬ್ ನದಿಗೆ ಬಿದ್ದ ಕಾರಿನಲ್ಲಿ ಆತನ ಗುರುತಿನ ಚೀಟಿ ಸಿಕ್ಕಿದೆ. ಸಂಸಾರ ಸಮೇತ ಸಾವಿಗೀಡಾಗಿದ್ದಾರೆ ಎಂದು ಆ ಭಾಗದ ಜನ ಭಾವಿಸಿದ್ದಾರೆ, ಸಾಲಬಾಧೆಯಿಂದ ಪಾರಾಗಲು ನಾಟಕವಾಡಿರುವುದು ಇದೀಗ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.ಮತ್ತು ಅವರನ್ನು ಹುಡುಕಿ ಪ್ರಕರಣವನ್ನು ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾಸ್ಕೋ-ಗೋವಾ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆಯ ನಂತರ ತನಿಖೆ ಮುಂದುವರೆದಿದೆ. ಪ್ರಯಾಣಿಕರನ್ನು ವಿಮಾನದಿಂದ ಹೊರತೆಗೆಯಲಾಗುತ್ತದೆ ಮತ್ತು ವಿವರವಾದ ತಪಾಸಣೆ ನಡೆಸಲಾಗುತ್ತದೆ. ಗುಜರಾತಿನ ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ದಿಕ್ಕು ತಪ್ಪಿಸಲಾಯಿತು. ವಿಮಾನದಲ್ಲಿದ್ದ 236 ಪ್ರಯಾಣಿಕರು ಮತ್ತು ಎಂಟು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂಬುದು ಅಧಿಕಾರಿಗಳ ಆರಂಭಿಕ ತೀರ್ಮಾನ.ಪೊಲೀಸರು, ಬಾಂಬ್ ಪತ್ತೆ ದಳ ಮತ್ತು ಸ್ಥಳೀಯ ಆಡಳಿತದ ನೇತೃತ್ವದಲ್ಲಿ ಪ್ರಬಲ ತನಿಖೆ ನಡೆಸಲಾಗಿದೆ ಎಂದು ರಾಜ್ ಕೋಟ್ ಐಜಿ ಅಶೋಕ್ ಕುಮಾರ್ ಯಾದವ್ ಹೇಳಿದ್ದಾರೆ. ವಿಮಾನವು ಮಾಸ್ಕೋದಿಂದ ಹೊರಟು ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಗೋವಾ ಪೊಲೀಸರು ದಾಬೋಲಿಮ್ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಸ್ಕೋದಿಂದ ವಿಮಾನ ಹೊರಡುತ್ತಿದ್ದಂತೆ ಅಧಿಕಾರಿಗಳು ರಷ್ಯಾದ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಭಾರತೀಯ ಅಧಿಕಾರಿಗಳು ಕಠಿಣ ತಪಾಸಣೆ ನಡೆಸುತ್ತಿದ್ದಾರೆ ಎಂದು ರಷ್ಯಾದ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಉತ್ತರ ಭಾರತದ ರಾಜ್ಯಗಳಲ್ಲಿ ವಿಪರೀತ ಚಳಿ ಮುಂದುವರಿದಿದೆ. ದೆಹಲಿಯಲ್ಲಿ ದಟ್ಟ ಮಂಜು ಕವಿದಿದೆ. ಮಂಜಿನಿಂದಾಗಿ ರಸ್ತೆ, ರೈಲು ಮತ್ತು ವಿಮಾನ ಸಂಚಾರಕ್ಕೆ ತೊಂದರೆಯಾಗಿದೆ.ಮಬ್ಬಿನ ಕಾರಣ ಕಳೆದ ಎರಡು ದಿನಗಳಲ್ಲಿ 260 ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ. ನಾಳೆ ಮತ್ತು ಮರುದಿನ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲದಲ್ಲಿ ಹಿಮಪಾತವಾಗಲಿದೆ ಎಂದು ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಗಾಳಿಯ ಗುಣಮಟ್ಟ ಕಳಪೆಯಾಗಿರುವ ಕಾರಣ ಶುಕ್ರವಾರದವರೆಗೆ ದೆಹಲಿಯಲ್ಲಿ ಬಿಎಸ್ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ಕಾರುಗಳನ್ನು ನಿಷೇಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More