Author: admin

ವಿಜಯಪುರ: ಹಾಳು ಬಾವಿಯಲ್ಲಿ ವೃದ್ಧೆಯ ಶವ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಶೇಖವ್ವ ತಾಯಿ ನರಳು ಮೃತ ದುರ್ದೈವಿ. ದೇವರಹಿಪ್ಪರಗಿ ಪಟ್ಟಣದ ಉಪ್ಪಳೇ ಅವರ ಹಾಳು ಬಾವಿಯಲ್ಲಿ ಶವ ಪತ್ತೆಯಾಗಿದೆ. ಬೆಳಗ್ಗೆ ಗ್ರಾಮಸ್ಥರು ಬಾವಿ ಸಮೀಪ ಹೋದಾಗ ವಿಷಯ ತಿಳಿದಿದೆ. ಇವರ ಸಾವಿಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುಣಾವಣೆಗೆ ಈ ಬಾರಿ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಹೆಸರಿನಲ್ಲಿ ನೀಡಿರುವ ಭರವಸೆಗಳ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿರುವ ಬಿಜೆಪಿಯು ಇದೀಗ ಮತದಾರರನ್ನು ಓಲೈಸಲು ಭರಪೂರ ಯೋಜನೆಗಳನ್ನು ಘೋಷಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ ಬಿಪಿಎಲ್ ಕುಟುಂಬಗಳಿಗೆ ಉಚಿತ 3 ಗ್ಯಾಸ್( ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್) ಪೋಷಣೆ ಸ್ಕೀಮ್ ( ಬಿಪಿಎಲ್ ಕುಟುಂಬಗಳಿಗೆ ಪ್ರತಿ ನಿತ್ಯ ಅರ್ಧ ಲೀಟರ್ ನಂದಿನಿ ಹಾಲು ಏಕ ನಾಗರೀಕ ಸಂಹಿತೆ ಜಾರಿಗೆ ಭರವಸೆ ಕರ್ನಾಟಕ ಅಪಾರ್ಟ್‌ಮೆಂಟ್ ಓನರ್ ಶಿಪ್ ಆಕ್ಟ್ ತಿದ್ದುಪಡಿಗೆ ಭರವಸೆ ಒನಕೆ ಓಬವ್ವ ಯೋಜನೆಯಡಿ 10 ಸಾವಿರ ರೂಪಾಯಿ, 5 ವರ್ಷದ ಭವಿಷ್ಯ ನಿಧಿ ಸರ್ಕಾರಿ ಶಾಲೆಗಳ ಉನ್ನತೀಕರಣ ಭರವಸೆ

Read More

ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಭಾನುವಾರ ಸಿಡಿಲು ಬಡಿದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಇಂಡಸ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನಡೆಸಿದ ರ್ಯಾಲಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 40 ವರ್ಷದ ಸಾಬರ್ ಮಲ್ಲಿಕ್ ಮೃತರು. ರ‍್ಯಾಲಿ ಸಾಗುತ್ತಿದ್ದಂತೆ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿತು. ಇದರೊಂದಿಗೆ ಕೆಲವು ತೃಣಮೂಲ ಕಾರ್ಯಕರ್ತರು ಸಮೀಪದ ಮರದ ಕೆಳಗೆ ಆಶ್ರಯ ಪಡೆದರು. ಅಷ್ಟರಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತನ ಪ್ರಾಣ ಉಳಿಸಲಾಗಲಿಲ್ಲ. ಗಾಯಗೊಂಡ 25 ಮಂದಿಯಲ್ಲಿ ಏಳು ಮಂದಿಯನ್ನು ಬುರ್ದ್ವಾನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಪಕ್ಷ ಸಂತಾಪ ವ್ಯಕ್ತಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೆಹಲಿ ;ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಖಾಲಿ ಮನೆಗೆ ಕರೆದೊಯ್ದು ನಂತರ ಚಿತ್ರಹಿಂಸೆ ನೀಡಿದ್ದಾನೆ.. ಘಟನೆಯಲ್ಲಿ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶನಿವಾರ ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಉದ್ಯಾನವನದ ಬಳಿಯಿರುವ ನಿರ್ಜನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮನೆಗೆ ಮರಳಿದ ಬಾಲಕಿ ನಡೆದ ಘಟನೆಯನ್ನು ಪೋಷಕರಿಗೆ ಹೇಳಿದ್ದಾಳೆ. ಬಳಿಕ ಸುಸ್ತಾಗಿದ್ದ ಮಗುವನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕಿಯನ್ನು  ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಬಾಲಕಿಯು  ಕಿರುಕುಳಕ್ಕೆ ಒಳಗಾಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ಕೌನ್ಸೆಲಿಂಗ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭಾರತೀಯ ನೌಕಾಪಡೆಯಲ್ಲಿ ಅಭ್ಯರ್ಥಿಗಳಿಗೆ ಅವಕಾಶ ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ 29ರಂದು ಆರಂಭವಾಗಿದೆ. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಮೇ 14. ಅರ್ಹ ಅಭ್ಯರ್ಥಿಗಳು ಶಾರ್ಟ್ ಸರ್ವಿಸ್ ಕಮಿಷನ್ (SSC) ಕಾರ್ಯನಿರ್ವಾಹಕ ಶಾಖೆ, ಶಿಕ್ಷಣ ಶಾಖೆ ಮತ್ತು ಭಾರತೀಯ ನೌಕಾಪಡೆಯ ತಾಂತ್ರಿಕ ಶಾಖೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 242 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯನಿರ್ವಾಹಕ ಶಾಖೆಗೆ 150 ಹುದ್ದೆಗಳು, ಶಿಕ್ಷಣ ಶಾಖೆಗೆ 12 ಹುದ್ದೆಗಳು ಮತ್ತು ತಾಂತ್ರಿಕ ಶಾಖೆಗೆ 80 ಹುದ್ದೆಗಳು. ಅರ್ಹತೆಯ ಮಾನದಂಡ: ಪದವಿ ಅಥವಾ ಸ್ನಾತಕೋತ್ತರ ಪದವಿ (60 ಪ್ರತಿಶತ ಅಂಕಗಳು ಅಥವಾ ಸಮಾನ CGPA)/ ಸಮಾನವಾದ CGPA ಅಥವಾ ವಿದೇಶಿ ವಿಶ್ವವಿದ್ಯಾಲಯದಿಂದ 60% ಅಂಕಗಳೊಂದಿಗೆ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವುದು ಹೇಗೆ: ಭಾರತೀಯ ನೌಕಾಪಡೆಯ ವೆಬ್‌ಸೈಟ್ www.joinindiannavy.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ರಾಜಾರಾಮ ನಗರ ಉದ್ಯಮಬಾಗ ದಲ್ಲಿ ಇಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಭಾವತಿ ಮಾಸ್ತಮರಡಿ ಪ್ರಚಾರ ಕಾರ್ಯ ನಡೆಸಿದರು. ನೆರೆದಿದ್ದ ಸ್ಥಳೀಯರು ಗೌರವ ಸನ್ಮಾನ ನೀಡಿದರು. ತಡವಾದರೂ ಸರಿ, ನನ್ನ ಜೊತೆ ಚರ್ಚಿಸಲು ಬಹಳ ಹೊತ್ತು ಕಾಯ್ದಿದ್ದರು. ಅವರೆಲ್ಲರ ಕಷ್ಟಗಳಿಗೆ ಆಧಾರವಾಗಿ, ಅಭಿವೃದ್ಧಿ ಕೆಲಸಗಳಿಗೆ ನೆರವಾಗಿ, ಅವರ ಜೊತೆ ನಿಲ್ಲುವ ವಿಶ್ವಾಸ ನೀಡಿದರು.ಅದೇ ರೀತಿ ಸ್ಥಳೀಯರು ಕೂಡ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಯೇ ತರುತ್ತೇವೆ ಎಂದು ಅತ್ಯಂತ ಗಟ್ಟಿಯಾಗಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಭಾವತಿ ಮಾಸ್ತಮರಡಿ ಅವರು ಇಂದು ವಡಗಾವಿಯ ತೆಗ್ಗಿನ ಗಲ್ಲಿ, ಚಾವಡಿ ಗಲ್ಲಿ, ಮಲ್ಲಿಕಾರ್ಜುನ ದೇವಸ್ಥಾನ ಪ್ರದೇಶ ಮುಂತಾದ ಕಡೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮನೆಗಳು, ಅಂಗಡಿ-ಮುಗ್ಗಟ್ಟುಗಳಿಗೆ ಭೇಟಿ ನೀಡಿ, ಹಿರಿಯರು, ಯುವಕರು, ಮಹಿಳೆಯರು ಮತ್ತು ಎಲ್ಲ ವ್ಯಾಪಾರಿಗಳಿಗೆ ಕಾಂಗ್ರೆಸ್‌ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಲಾಯಿತು. ಅವರೆಲ್ಲರೂ ಕೂಡ ಈ ಚುನಾವಣೆಯಲ್ಲಿ ಜೊತೆ ನಿಂತು, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬದಲಾವಣೆ ತರಲು ಸಹಕರಿಸುವುದಾಗಿ ಭರವಸೆ ನೀಡಿದರು. ಜೈತನ ಮಾಳ ದಲ್ಲಿ ಪ್ರಚಾರ ಸಭೆ ನಡೆಸಿ, ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರಿಗೆ ಜನರು ಗೌರವಯುತವಾಗಿ ಬರಮಾಡಿಕೊಂಡು ಸನ್ಮಾನಿಸಿದರು. ಕಾಂಗ್ರೆಸ್ ಪಕ್ಷದ ಸಾಧನೆಗಳು, ಯೋಜನೆಗಳ ಬಗ್ಗೆ ಅವರಿಗೆಲ್ಲ ತಿಳಿಸಿದರು. ಜನರು ಕಾಂಗ್ರೆಸ್ ಪರವಾಗಿ ಅತ್ಯಂತ ಒಲವು ಹೊಂದಿದ್ದು, ಬರುವ ಚುನಾವಣೆಯಲ್ಲಿ ನನ್ನ ಜೊತೆ ನಿಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ವಡಗಾವಿಯ ತೆಗ್ಗಿನ ಗಲ್ಲಿ, ಚಾವಡಿ ಗಲ್ಲಿ, ಮಲ್ಲಿಕಾರ್ಜುನ ದೇವಸ್ಥಾನ ಪ್ರದೇಶ ಮುಂತಾದ ಕಡೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…

Read More

ಕೇಂದ್ರ ಸರ್ಕಾರ ದೇಶದಲ್ಲಿ 14 ಆಪ್‌ಗಳನ್ನು ಬ್ಯಾನ್ ಮಾಡಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. Crypviser, Enigma, Safeswiss, Wickrme, Mediafire, Briar, BChat, Nandbox, Conion, IMO, Element, Second line, Zangi, Threema ಸೇರಿದಂತೆ ನಿಷೇಧಿತ ಅಪ್ಲಿಕೇಶನ್‌ಗಳು. ಭಾರತದಲ್ಲಿನ ಶ್ರೇಯಾಂಕಗಳೊಂದಿಗೆ ಸಂವಹನ ನಡೆಸಲು ಭಯೋತ್ಪಾದಕ ಗುಂಪುಗಳು ಈ ಅಪ್ಲಿಕೇಶನ್‌ಗಳನ್ನು ಬಳಸುತ್ತವೆ ಎಂದು ಕೇಂದ್ರ ಏಜೆನ್ಸಿಗಳು ತಿಳಿಸಿವೆ. ಆಪ್ ಬಗ್ಗೆ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳನ್ನು ಸಂಪರ್ಕಿಸಲು ಕೇಂದ್ರ ಏಜೆನ್ಸಿಗಳು ಹಲವು ಬಾರಿ ಪ್ರಯತ್ನಿಸಿದರೂ ಅವು ವಿಫಲವಾಗಿವೆ ಎಂದು ಏಜೆನ್ಸಿಗಳು ಹೇಳಿವೆ. IT ಕಾಯಿದೆ 2000 ರ ಸೆಕ್ಷನ್ 69A ಅಡಿಯಲ್ಲಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ವಿಧಾನಸಭಾ ಚುನಾವಣಾ ಪ್ರಚಾರದ ಅಂಗವಾಗಿ ಮೈಸೂರಿನಲ್ಲಿ ನಡೆದ ರೋಡ್ ಶೋ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಾಹನದ ಮೇಲೆ ಮೊಬೈಲ್ ಎಸೆಯಲಾಗಿದೆ. ನೆರೆದಿದ್ದ ಜನರತ್ತ ಕೈಬೀಸುತ್ತಿದ್ದಾಗ ಮೊಬೈಲ್ ಫೋನ್ ಮೋದಿಯ ಮುಂದೆ ಬಿದ್ದಿತು. ಬಿಜೆಪಿಯ ಮಹಿಳಾ ಕಾರ್ಯಕರ್ತೆ ಹೂವುಗಳ ಜೊತೆಗೆ ಫೋನ್ ಎಸೆದು ಸಂಭ್ರಮದ ಭರದಲ್ಲಿ ಸಿಲುಕಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಧಾನಿಯವರ ಮೇಲೆ ಹೂಗಳನ್ನು ಎಸೆಯುತ್ತಿದ್ದಾಗ, ಗುಂಪಿನಿಂದ ಯಾರೋ ಆಕಸ್ಮಿಕವಾಗಿ ಮೊಬೈಲ್ ಫೋನ್ ಎಸೆದಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಪ್ರಧಾನಿ ಎಸ್‌ಪಿಜಿ ಭದ್ರತೆಯಲ್ಲಿದ್ದರು. ಪ್ರಧಾನಿ ವಾಹನದಲ್ಲಿ ಬಿದ್ದಿದ್ದ ಫೋನ್ ಬಿಜೆಪಿ ಕಾರ್ಯಕರ್ತನದ್ದು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.  ಸತ್ಯವನ್ನು ತಿಳಿದ ನಂತರ ಎಸ್‌ಪಿಜಿ ಅದನ್ನು ಅವರಿಗೆ ಹಿಂದಿರುಗಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೊಲ್ಲಂ: ಆಸ್ಪತ್ರೆಯ ಹಿಂಬದಿಯಲ್ಲಿ ಬಿಪಿನ್ ಹಾಗೂ ಆತನ ಪತ್ನಿ ನೀತು ಮಾತನಾಡಿಕೊಳ್ಳುತ್ತಿದ್ದ ವೇಳೆ ಏಕಾಏಕಿ ಕೋಪಗೊಂಡ ವಿಪಿನ್ ಮುಖದ ಮೇಲೆ ಆ್ಯಸಿಡ್ ಸುರಿದಿದ್ದಾನೆ ಎನ್ನಲಾಗಿದೆ. ಆಸಿಡ್ ದಾಳಿ ಬಳಿಕ ವಿಪಿನ್ ಓಡಿ ಹೋಗಿದ್ದಾನೆ. ಪತ್ನಿನೀತುವಿನ ಮುಖದಲ್ಲಿ ಶೇ.90ರಷ್ಟು ಸುಟ್ಟಗಾಯಗಳಾಗಿರುವ ಅವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ ಪುನಲೂರು ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಬಳಿ ಘಟನೆ ನಡೆದಿದೆ. ಆರೋಪಿಯು ಪುನಲೂರು ತಾಲೂಕು ಆಸ್ಪತ್ರೆ ನೌಕರನಾಗಿದ್ದಾನೆ. ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More