Author: admin

ತುಮಕೂರು:  ಸಾರ್ವಜನಿಕರು ಸರ್ಕಾರ ರೂಪಿಸುವ ವಿವಿಧ ಜನಪರ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಶ್ರೀ ಡಿ.ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಬುಧವಾರ ಸರ್ಕಾರದ 2 ವರ್ಷದ ಸಾಧನೆ ಹಾಗೂ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಜೂನ್ 10ರವರೆಗೆ ಆಯೋಜಿಸಲಾಗಿರುವ ಈ ವಸ್ತುಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ.ಗಳನ್ನು ಜಮೆ ಮಾಡಲಾಗುತ್ತಿದ್ದು, ಈವರೆಗೆ ಅರ್ಹ ಫಲಾನುಭವಿಗಳಿಗೆ 2300 ಕೋಟಿ ರೂ.ಗಳನ್ನು ತಲುಪಿಸಲಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಜಮೆಯಾಗುತ್ತಿರುವ ಈ ಹಣದಿಂದ ಮಹಿಳೆಯರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಕುಟುಂಬ ನಿರ್ವಹಣೆ,…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಎಲ್ & ಟಿ ಫೈನ್ಯಾನ್ಸ್, ಟಿ–ಮೇಕ್ ಹಾಗೂ ಹೆಚ್‌ ಆರ್‌ ಹೆಚ್ ನೆಕ್ಸ್ಟ್ ಸರ್ವೀಸಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗಾಗಿ ಜೂನ್ 9ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಸಂದರ್ಶನವು ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಪಿ.ಯು.ಸಿ, ಐ.ಟಿ.ಐ. ಡಿಪ್ಲೊಮಾ( ಎಲೆಕ್ಟ್ರಾನಿಕ್ , ಎಲೆಕ್ಟ್ರಿಕಲ್, ವೆಲ್ಡರ್, ಪೈಂಟರ್ ಹಾಗೂ ಲೇತ್ ಆಪರೇಟರ್) ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ.9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಒಕ್ಕಲಿಗ ಮತ್ತು ಇದರ ಉಪಜಾತಿಗೆ ಸೇರಿದ ಜನಾಂಗದವರಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವಯಂ ಉದ್ಯೋಗ ನೇರಸಾಲ, ಗಂಗಾಕಲ್ಯಾಣ, ಸ್ವಾವಲಂಭಿ ಸಾರಥಿ, ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು–ಶೈಕ್ಷಣಿಕ ಸಾಲ(ಹೊಸತು/ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ(ಹೊಸ ವಿದ್ಯಾರ್ಥಿಗಳಿಗೆ), ಸ್ವಾತಂತ್ರ‍್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com  ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in  ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ https://kvldcl.karnataka.gov.in  ಅಥವಾ ನಿಗಮದ ದೂ.ವಾ.ಸಂಖ್ಯೆ 080–29904350/ 29904268 ಅಥವಾ ಜಿಲ್ಲಾ…

Read More

ತುಮಕೂರು: ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಅಕೌಂಟ್‌ ಗೆ ಆಧಾರ್ ನಂಬರ್ ಲಿಂಕ್ ಮಾಡಿಸಿ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ http://swdservices.karnataka.gov.in/PrizeMoneyClientApp/ ಮೂಲಕ ಡಿಸೆಂಬರ್ 31ರೊಳಗಾಗಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ 15 ದಿನದೊಳಗಾಗಿ ಅರ್ಜಿಯ ಹಾರ್ಡ್ ಪ್ರತಿ ಹಾಗೂ ಇತರೆ ದಾಖಲಾತಿಗಳನ್ನು ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಅರ್ಜಿಯ ಹಾರ್ಡ್ ಪ್ರತಿಯನ್ನು ಕಚೇರಿಗೆ ಸಲ್ಲಿಸದೇ ಇದ್ದಲ್ಲಿ ಅರ್ಜಿಗಳು ಲಾಗಿನ್‌ ನಿಂದ ತಿರಸ್ಕೃತವಾಗುತ್ತದೆ ಎಂದು ಮಧುಗಿರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು:  ಜಿಲ್ಲೆಯಾದ್ಯಂತ 13 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 9 ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ–3 ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಜೂನ್ 9 ರಿಂದ 20ರವರೆಗೆ ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆಪ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ…

Read More

ತುಮಕೂರು:  ಹವಾಮಾನ ವೈಪರೀತ್ಯಗಳಿಂದಾದ ಬೆಳೆ ಹಾನಿಯಿಂದ ರೈತರಿಗಾಗುವ ಆರ್ಥಿಕ ನಷ್ಟವನ್ನು ನಿವಾರಿಸಲು ಅನುಷ್ಠಾನ ಮಾಡಲಾಗಿರುವ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಜೂನ್ 30ರವರೆಗೂ ಅವಕಾಶ ಕಲ್ಪಿಸಲಾಗಿದೆ. ವಿಮಾ ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ಓರಿಯಂಟಲ್ ಇನ್ಸೂರೆನ್ಸ್ ಸಂಸ್ಥೆಯನ್ನು ನಿಗಧಿಪಡಿಸಲಾಗಿದೆ. ಈ ವಿಮಾ ಯೋಜನೆಗೆ ಪೂರ್ವ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಎಳ್ಳು ಮತ್ತು ಹತ್ತಿ ಬೆಳೆಗಳನ್ನು ಜೂನ್ 30ರೊಳಗಾಗಿ ನೋಂದಾಯಿಸಬೇಕೆಂದು ರೈತರಲ್ಲಿ ಮನವಿ ಮಾಡಲಾಗಿದೆ. ಬೆಳೆಗಳನ್ನು ವಿಮಾ ಯೋಜನೆಗೊಳಪಡಿಸಲು ಪ್ರತಿ ಎಕರೆಗೆ ಹೆಸರು ಬೆಳೆಗೆ 269.13 ರೂ., ಉದ್ದು–265.08 ರೂ., ಎಳ್ಳು–232.70 ರೂ., ಹತ್ತಿ(ಮಳೆಯಾಶ್ರಿತ)–1006.69 ರೂ. ಹಾಗೂ ಹತ್ತಿ(ನೀರಾವರಿ)–1492.33 ರೂ.ಗಳ ವಿಮಾ ಕಂತನ್ನು ಹತ್ತಿರದ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಾವತಿಸುವ ಮೂಲಕ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ವಿಮಾ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸರಗೂರು: ತಾಲೂಕಿನ ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಶುಕ್ರವಾರ ದಂದು ಆಚರಿಸಲಾಯಿತು. ಪರಿಸರ  ಸಂರಕ್ಷಣೆಯನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತುಂಬ ಸೊಗೆ ಗ್ರಾಮಕ್ಕೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಜಾಥಾ ಮೂಲಕ ಪೋಷಕರಲ್ಲಿ ಜಾಗೃತಿಯನ್ನು ಮಾಡಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರಹೊಳೆ ವನ್ಯಜೀವಿ ಅರಣ್ಯ ಅಧಿಕಾರಿ ರಶ್ಮಿರವರು  ಮಾತನಾಡಿ ಪರಿಸರ ಮತ್ತು ಜೀವವೈವಿಧ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ವಿವರಿಸಿದರು. ಪರಿಸರದ ಮಾಲಿನ್ಯದಿಂದ ಜೀವವೈವಿಧ್ಯ ನಶಿಸುತ್ತಿದೆ. ಹಾಗೆ ಪರಿಸರದ ನಾಶ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ತಾಪಮಾನ ಹೆಚ್ಚಾಗುತ್ತಿರುವುದು ಪರಿಸರವನ್ನು ಹಾಳು ಮಾಡುತ್ತಿರುವುದು ಕಾರಣ  ಇದರಿಂದ ಮನುಷ್ಯ ಕಾಯಿಲೆಗಳಿಗೆ ಗೊತ್ತಾಗುತ್ತೆನೆ ಹಾಗೂ ಪ್ಲಾಸ್ಟಿಕ್ ನ ಅತಿಯಾದ ಬಳಕೆ ಅದರ ಉತ್ಪಾದನೆ ಉಪಯೋಗ ಎಲ್ಲವೂ ಮನುಷ್ಯನಿಂದಲೇ ಆಗಿದೆ. ಅದನ್ನು ಮರುಬಳಕೆ ಮಾಡದೆ ಪರಿಸರದಲ್ಲೇ ಉಳಿಯುತ್ತಿರುವುದು ಅದು ಭೂಮಿಯಲ್ಲಿ ಕೊಳೆಯದೆ ಹಾಗೂ ಕರಗದ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಪ್ಲಾಸ್ಟಿಕ್…

Read More

ಬೆಂಗಳೂರು: ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ  ಆದೇಶಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಹಲವಾರು ಜನರು ಗಾಯಗೊಂಡ ಘಟನೆಯ ಬಳಿಕ ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರದ ಹೊಸ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಜನಸಂದಣಿಯನ್ನು ನಿರ್ವಹಿಸುವಲ್ಲಿ ತೀವ್ರ ನಿರ್ಲಕ್ಷ್ಯ ಮತ್ತು ವೈಫಲ್ಯವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಗಮಿತ ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಚೆನ್ನೈ:  ನಟ, ರಾಜಕಾರಣಿ ಕಮಲ್ ಹಾಸನ್ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಮುಂದಿನ ಸೋಮವಾರದವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಕಮಲ್ ಹಾಸನ್ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್ ಎಂ) ಪಕ್ಷಕ್ಕೆ ನೀಡಲು ನಿರ್ಧರಿಸಿದೆ. ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದರು. ಕಮಲ್‌ ಹಾಸನ್ 2018 ರಲ್ಲಿ ರಾಜಕೀಯ ಪ್ರವೇಶಿಸಿದರು, ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ಹಾಸನ್ ಅವರ ಪಕ್ಷಕ್ಕೆ ಒಂದು ಸ್ಥಾನವನ್ನು ನೀಡಲು ನಿರ್ಧರಿಸಿದೆ ಎಂದು ಹೇಳಿದ್ದರು. 2024ರ ಲೋಕಸಭಾ ಚುನಾವಣೆಗೆ ಮೊದಲು ಎರಡೂ ಪಕ್ಷಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರೇಂದ್ರ ಕುಮಾರ್ (51) ಬೆಂಗಳೂರಿನ ಕೆಐಎಡಿಬಿಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ‘ಸ್ಕೆಚ್ ಸಿದ್ಧಪಡಿಸಲು’ ಮತ್ತು ಅದಕ್ಕೆ ಅನುಮೋದನೆ ನೀಡಲು ಆರೋಪಿ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರುದಾರ ರವಿ ಆರೋಪಿಸಿದ ನಂತರ ಲೋಕಾಯುಕ್ತ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಆರೋಪಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More