Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
- ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
Author: admin
ತಿಪಟೂರು: ಪ್ರಾಚೀನ ಕಾಲದಿಂದಲೂ ಭರತನಾಟ್ಯ ಮತ್ತು ನೃತ್ಯಕ್ಕೆ ತನ್ನದೇ ಪರಂಪರೆ ಇದ್ದು, ಇಂದಿಗೂ ಉಳಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಹಿಂದೆ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಕೊರತೆ ಇದ್ದು, ನಾವುಗಳು ತುಂಬಾ ವಿದ್ಯಾಭ್ಯಾಸಕ್ಕೆ ಕಷ್ಟ ಪಡುತ್ತಿದ್ದ ಕಾಲ ಇಂದು ದೂರವಾಗಿ, ಉತ್ತಮ ಶಿಕ್ಷಣ ಕೊಡುವಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಕೆ.ಷಡಕ್ಷರಿ ಅಭಿಪ್ರಾಯಪಟ್ಟರು. ನಗರದ ಕೆ.ಎಚ್.ಬಿ.ಕಾಲೋನಿಯ ಒಕ್ಕಲಿಗರ ಸಮುದಾಯ ಭವನದ ಆವರಣದಲ್ಲಿ ಸಭಾಂಗಣದಲ್ಲಿ, ಠಾಗೂರ್ ವಿದ್ಯಾ ಸಂಸ್ಥೆ ವತಿಯಿಂದ ಠಾಗೂರ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಹಾಗೂ ಠಾಗೂರ್ ವಿಕಿರಣo–2025 ಎಂಬ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಠಾಗೂರ್ ವಿದ್ಯಾ ಸಂಸ್ಥೆ ಬಹಳ ವರ್ಷಗಳಿಂದ ತಿಪಟೂರಿನ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದು, ಉತ್ತಮ ಬೋಧನೆ ಮತ್ತು ಫಲಿತಾಂಶ ನೀಡುವುದರಲ್ಲಿ ಯಶಸ್ವಿಯಾಗಿದೆ. ಖಾಸಗಿಯವರು ಶಿಕ್ಷಣ ಕ್ಷೇತ್ರಕ್ಕೆ ಬಂದಿರುವುದರಿಂದ, ಶಿಕ್ಷಣ ಕ್ಷೇತ್ರ ಬದಲಾಗಿ ಉತ್ತಮ ವಿದ್ಯಾಭ್ಯಾಸ ನೀಡುವಲ್ಲಿ ಪರಿಶ್ರಮ ಪಡುತ್ತಿದ್ದಾರೆ. ಶಿಕ್ಷಕರುಗಳು ಗುಣಮಟ್ಟ ಶಿಕ್ಷಣ ನೀಡಿದಲ್ಲಿ,ವಿದ್ಯಾರ್ಥಿಗಳು ಯಶಸ್ವಿನ ಮೆಟ್ಟಿಲು ಏರುತ್ತಾರೆ ಎಂದು ತಿಳಿಸಿದರು.…
ತುಮಕೂರು: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಒತ್ತಾಯಿಸಿ ದಿನಾಂಕ 01.01.2026 ರಂದು ವಿಜಯಪುರ ಉಸ್ತುವಾರಿ ಸಚಿವರ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎಐಕೆಕೆಎಂಎಸ್ ರಾಜ್ಯ ಕಾರ್ಯದರ್ಶಿ ಕಾಮ್ರೆಡ್ ಭಗವಾನ್ ರೆಡ್ಡಿ ಸೇರಿದಂತೆ ಹಲವಾರು ನಾಯಕರುಗಳನ್ನು ಬಂಧಿಸಿ, ಕೊಲೆ ಯತ್ನ ಮುಂತಾದ ಕರಾಳ ಸುಳ್ಳು ಮೊಕದ್ದಮೆಗಳನ್ನು ಹೂಡಿ, ನ್ಯಾಯಾಂಗ ಬಂಧನದಲ್ಲಿಟ್ಟಿರುವುದನ್ನು ವಿರೋಧಿಸಿ ತಿಪಟೂರು ತಾಲೂಕು ತಹಶೀಲ್ದಾರ ಕಚೇರಿಯ ಮುಂದೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಗೃಹ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಐಕೆಕೆಎಂಎಸ್ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ನಾಯಕರಲ್ಲೊಬ್ಬರಾದ ಕಾಮ್ರೇಡ್ ಎಸ್. ಎನ್. ಸ್ವಾಮಿ ಮಾತನಾಡಿ, ನ್ಯಾಯಕ್ಕಾಗಿ, ಜನರ ಹಿತಾಸಕ್ತಿಗಾಗಿ ಹೋರಾಟವನ್ನು ನಡೆಸುವ ಹೋರಾಟಗಾರರ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಳ್ಳು ಮೊಕದ್ದಮೆಗಳನ್ನು ಹೂಡಿ ಚಳುವಳಿಗಳನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಫ್ಯಾಸಿಸ್ಟ್ ನಡೆಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿವೆ. ಕಳೆದ ನೂರಕ್ಕೂ ಹೆಚ್ಚು ದಿನಗಳಿಂದ ವಿಜಯಪುರದಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಖಾಸಗಿಯವರ…
ಚಿಕ್ಕನಾಯಕನಹಳ್ಳಿ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದವರು ಮಹಿಳೆಯರನ್ನು ಸೆಳೆಯಲು ಸೀರೆ ಹಂಚುವುದು, ಹಣ ನೀಡುವ ಕೆಲಸ ಮಾಡುತ್ತಾರೆ. ಆದರೆ ಕೆ.ಆರ್.ಎಸ್ ಪಕ್ಷದವರು ಮಹಿಳೆಯರನ್ನು ಸೆಳೆಯಲು ಈ ರೀತಿಯ ತಂತ್ರಗಳನ್ನು ರೂಪಿಸುವ ಬದಲು ಕಲೆ, ಕ್ರೀಡೆ, ರಂಗೋಲಿ ಸ್ಪರ್ಧೆ, ಹಳ್ಳಿಯ ಜಾನಪದ ಚಟುವಟಿಕೆಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನಸಿಂಧು ಸ್ವಾಮಿ ಹೇಳಿದರು. ಪಟ್ಟಣದ ಹೊರವಲಯದ ಜೆವಿಆರ್ ಕಲ್ಯಾಣ ಮಂಟಪದಲ್ಲಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರ ಸ್ನೇಹಕೂಟ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಮಹಿಳೆಯರನ್ನು ಪಕ್ಷದತ್ತ ಸೆಳೆಯಲು ಮಾತೃವಂದನೆ, ದುರ್ಗಾಪೂಜೆ, ಧರ್ಮಸ್ಥಳಕ್ಕೆ ಕಳುಹಿಸುವ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಈ ಎಲ್ಲಾ ತಂತ್ರಗಳು ಮಹಿಳಾ ಕಾರ್ಯಕರ್ತರನ್ನು ಹೆಚ್ಚಿಸುವುದಾಗಿದೆ ಎಂದರಲ್ಲದೆ, ಪಕ್ಷದ ಕಾರ್ಯಕರ್ತರು ನಿಮ್ಮ ಗ್ರಾಮ ಪಂಚಾಯಿತಿಗಳ ಬಗ್ಗೆ ತಿಳಿದುಕೊಳ್ಳಿ, ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಹಾಗೂ ಇತ್ತೀಚಿನ ಹಾಗೂ ಹಿಂದಿನ ರಾಜಕೀಯ ಸ್ಥಿತಿಗತಿಗಳನ್ನು ತಿಳಿದುಕೊಳ್ಳಿ ಎಂದರು. ಜ್ಞಾನಸಿಂಧು ಸ್ವಾಮಿ ಮಾತನಾಡಿ, ಕಾರ್ಯಕರ್ತರು ಗ್ರಾ.ಪಂ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ…
ಮಿಡಿಗೇಶಿ: ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಕೆಪಿಟಿಸಿಎಲ್ ಕಚೇರಿ ಹಿಂಬದಿಯ ಜಮೀನಿನಲ್ಲಿ ಇದ್ದ ಹುಲ್ಲಿನ ಬಣವೆಗೆ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮವಾಗಿ ಹುಲ್ಲಿನ ಬಣವೆ ಸಂಪೂರ್ಣ ಭಸ್ಮವಾಗಿದೆ. ಮಾರುತಿನಗರದ ಸಂಜಕ್ಕ ಎಂಬುವರು ತನ್ನ ಸಂಸಾರ ನಿರ್ವಹಣೆ ಸಲುವಾಗಿ ಎರಡು ಸೀಮೆ ಹಸುಗಳನ್ನು ಸಾಲ ಮಾಡಿ ಸಾಕಿಕೊಂಡಿದ್ದರು. ಈ ಹಸುಗಳಿಗಾಗಿ ಹುಲ್ಲಿನ ಬಣವೆ ದಾಸ್ತಾನು ಮಾಡಿದ್ದರು. ಆದರೆ ಆಕಸ್ಮಿಕ ಬೆಂಕಿ ಬಿದ್ದು ಬವಣೆ ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ಧರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುರುವೇಕೆರೆ: ಪಟ್ಟಣದ ಬಸವೇಶ್ವರ ನಗರದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಯವರ ಮಂಡಲ ಪೂಜೆ ಮತ್ತು ಜ್ಯೋತಿ ಮಹೋತ್ಸವದ ಪ್ರಯುಕ್ತ ಶ್ರೀ ಅಯ್ಯಪ್ಪಸ್ವಾಮಿ ಭಕ್ತವೃಂದದವರಿಂದ ಶ್ರೀ ಅಯ್ಯಪ್ಪಸ್ವಾಮಿಯ ಉತ್ಸವದ ಅಂಗವಾಗಿ ಜ್ಯೋತಿ ಮೆರವಣಿಗೆಯನ್ನು ಶನಿವಾರ ಸಂಜೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪುಟಾಣಿ ಮಕ್ಕಳು ಜ್ಯೋತಿ ಹಿಡಿದು ಭಕ್ತಿಭಾವದಿಂದ ಹೆಜ್ಜೆ ಹಾಕಿದರೆ, ಸಮಿತಿಯ ಪದಾಧಿಕಾರಿಗಳು ಹಾಗೂ ಮಾಲಾಧಾರಿಗಳು ಶ್ರೀ ಅಯ್ಯಪ್ಪ ಸ್ವಾಮಿಯ ನಾಮಸ್ಮರಣೆಯೊಂದಿಗೆ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಜ.7ರಂದು ಬುಧವಾರ ಮಧ್ಯಾಹ್ನ ಸಾರ್ವಜನಿಕರಿಂದ ಸಾರ್ವಜನಿಕರಿಗೆ ಅನ್ನದಾನ ಏರ್ಪಡಿಸಲಾಗಿದೆ. ಅಂದು ಸಂಜೆ 7 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪದ ಅಭಿಷೇಕ, ಜ.8 ರಂದು ರಾತ್ರಿ 8:30ಕ್ಕೆ ಮಾಲಾಧಾರಿಗಳ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಲಿದೆ. ಜ.9ರಂದು ಬೆಳಿಗ್ಗೆ 9-30ಕ್ಕೆ ಮಾಲಾಧಾರಿಗಳಿಗೆ ಗುರುಸ್ವಾಮಿಗಳಿಂದ ಇರುಮುಡಿ ಸೇವೆ ಇದೆ. ಜ.10ರಂದು ಬೆಳಿಗ್ಗೆ 9:30ಕ್ಕೆ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಿಂದ ಮಾಲಾಧಾರಿಗಳ ಶುಭಯಾತ್ರೆ ಪ್ರಾರಂಭವಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ಸಂಬಂಧಿತ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಕೃಷಿಕ ಸಮಾಜದ ಸಹಯೋಗದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ಜನವರಿ 7 ಮತ್ತು 8ರಂದು ನಗರದ ಗಾಜಿನ ಮನೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ, ವಾಣಿಜ್ಯ ಮೇಳ ಹಾಗೂ ಬೆಳೆ ಉತ್ಪಾದನೆಯಾಚೆಗಿನ ಕೃಷಿ–ರೈತರ ಸಬಲೀಕರಣ ಎಂಬ ನೂತನ ಪರಿಕಲ್ಪನೆಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜನವರಿ 7ರಂದು ಬೆಳಗ್ಗೆ 10.30 ಗಂಟೆಗೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಘಾಟಿಸುವರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಸ್ತುಪ್ರದರ್ಶನ ಉದ್ಘಾಟಿಸುವರು. ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಸಿರಿಧಾನ್ಯಗಳ ರಾಶಿ ಪೂಜೆ ನೆರವೇರಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಗುಬ್ಬಿ ಶಾಸಕ…
ಸರಗೂರು: ಹಿಂದೂ ಸಂಘಟನೆಗಳ ಜಾಗೃತಿಗಾಗಿ ಪಟ್ಟಣದ ಶ್ರೀ ಹನುಮಜಯಂತಿ ಆಚರಣಾ ಸಮಿತಿ ಭಾನುವಾರ ಆಯೋಜಿಸಿದ್ದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು. ದಾರಿಯುದ್ದಕ್ಕೂ ಭಗವಾನ್ ಹನುಮನ ಘೋಷಣೆ ಮೊಳಗಿದವು. ಶೋಭಾಯಾತ್ರೆ ಅಂಗವಾಗಿ ಪಲ್ಲಕ್ಕಿಯಲ್ಲಿ ಕೂರಿಸಿದ್ದ ಹನುಮಂತನ ಭಾವಚಿತ್ರಕ್ಕೆ ದಡದಹಳ್ಳಿ ಮಠದ ಷಡಕ್ಷರಿಸ್ವಾಮೀಜಿ, ಪಡುವಲು ವಿರಕ್ತಮಠದ ಮಹಾದೇವಸ್ವಾಮೀಜಿ, ಭರತೇಶ್ ಗುರೂಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸರಗೂರು ತಾಲೂಕು ಅಧ್ಯಕ್ಷ ಕೆ.ಎಂ.ವೀರಭದ್ರಪ್ಪ, ಬಸವ ಬಳಗದ ಅಧ್ಯಕ್ಷ ಹಂಚೀಪುರ ಗಣಪತಿ, ಮುಖಂಡರಾದ ಜಯಪ್ರಕಾಶ್, ಆಚರಣಾ ಸಮಿತಿ ಅಧ್ಯಕ್ಷ ನವೀನ್‌ಕುಮಾರ್ ಸೇರಿದಂತೆ ಮುಖಂಡರು ಹನುಮನ ಭಾವಚಿತ್ರವುಳ್ಳ ಶೋಭಯಾತ್ರೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪಟ್ಟಣದ ಕೆಇಬಿ ಕಚೇರಿಯಿಂದ ಹೊರಟ ಶೋಭಾಯಾತ್ರೆ ಮೆರವಣಿಗೆಯು ಹುಣಸೂರು–ಎಸ್.ಬೇಗೂರು ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣ, ಮಹಾವೀರ ವೃತ್ತ, ಚಿಕ್ಕದೇವಮ್ಮನ ವೃತ್ತ, ಮೂಲಕ ೨ನೇ ಮುಖ್ಯ ರಸ್ತೆಯಲ್ಲಿ ಸಾಗಿ ಸಂತೆಮಾಳದ ಮಾಸ್ತಮ್ಮನ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. ಪಟ್ಟಣದ ಪ್ರಮುಖ ಬೀದಿಗಳು ಕೆಸರಿಮಯವಾಗಿದ್ದು, ಹನುಮನ ಭಕ್ತರ ಕೈಯಲ್ಲಿ ಕೆಸರಿ…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಬೇಕೆಂದು ತುಮಕೂರು ನಗರ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ರವರು ತುಮಕೂರು ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ದೇಶದ ಸುಸಜ್ಜಿತವಾದ ಮಹಾನಗರಪಾಲಿಕೆಗಳಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗಿ ಸಾವು–ನೋವು ಉಂಟಾಗುತ್ತಿರುವುದು ನಮಗೆಲ್ಲಾ ಎಚ್ಚರಿಕೆಯ ಗಂಟೆಯಾಗಿದೆ. ಈ ಕಾರಣದಿಂದ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಮನೆ ಮನೆಗೂ ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಈ ಕರ್ತವ್ಯದಲ್ಲಿ ಯಾವುದೇ ಲೋಪದೋಷಗಳನ್ನು ನಾವು ಸಹಿಸುವುದಿಲ್ಲ. ಈ ಕಾರಣದಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಪ್ರತಿನಿತ್ಯ ಕಾಲೋನಿಗಳಲ್ಲಿ, ಹಾಸ್ಟೆಲ್‌ಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ, ಹೋಟೆಲ್‌ಗಳಲ್ಲಿ, ಬಸ್ ನಿಲ್ದಾಣದಲ್ಲಿ ಹಾಗೂ ನಗರದ ಬಡಾವಣೆಗಳಲ್ಲಿ ಮಹಾನಗರಪಾಲಿಕೆಯಿಂದ ಪೂರೈಕೆಯಾಗುವ ನೀರನ್ನು ಪ್ರತಿನಿತ್ಯ ತುಮಕೂರು ಮಹಾನಗರಪಾಲಿಕೆಯ ಪಿ.ಎನ್.ಆರ್. ಪಾರ್ಲ್‌ನಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಕುಡಿಯುವ ನೀರನ್ನು ಒದಗಿಸಬೇಕೆಂದು ಶಾಸಕರು ಸೂಚಿಸಿದರು. ಯು.ಜಿ.ಡಿ ನೀರು ಯಾವುದೇ ಕಾರಣಕ್ಕೂ ಕುಡಿಯುವ ನೀರು ಸರಬರಾಜು ಪೈಪ್‌ಲೈನ್‌ಗಳಿಗೆ ಮಿಶ್ರಣವಾಗದಂತೆ…
ಪಾವಗಡ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪಾವಗಡ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಾವಗಡ, ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಪಾವಗಡ. ಇವರ ಸಹಯೋಗದೊಂದಿಗೆ ನಡೆದ ತಾಲ್ಲೂಕು ಮಟ್ಟದ ಹತ್ತನೇ ತರಗತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಚಂದು ಆರ್.ಎಸ್., ಬಿಂದು ಶ್ರೀ ಎನ್., ಗಗನ ಆರ್, ಪ್ರಮೋದ್ ಕುಮಾರ್ ಸಿ., ಸುಪ್ರೀತ್ ರೆಡ್ಡಿ ಆರ್., ಸಂತೋಷ್ ರೆಡ್ಡಿ ಆರ್. ಎಂಬ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದಿರುತ್ತದೆ. ವಿಜೇತ ತಂಡವನ್ನು 5,000 ನಗದು ಬಹುಮಾನ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರದೊಂದಿಗೆ ಅಭಿನಂದಿಸಲಾಯಿತು. ಚಿತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟಾ ನರಸಿಂಹಮೂರ್ತಿ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಯತಿಕುಮಾರ್, ಸಹನಾ ಶಾಲೆಯ ಆಡಳಿತಾಧಿಕಾರಿಗಳಾದ ಎನ್. ಶ್ರೀನಿವಾಸ್ ಕ್ವಿಜ್ ಮಾಸ್ಟರ್ ಗಳಾದ ಇ. ಜಯರಾಮ್, ವೆಂಕಟೇಶ್ ಹಾಗೂ ಮಮತಾ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ…
ಮಧುಗಿರಿ: ದ್ವಿಚಕ್ರವಾಹನದಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಲೂಕಿನ ಕೊಡಿಗೆನಹಳ್ಳಿ ಹೋಬಳಿಯ ಹಿಂದೂಪುರ ರಸ್ತೆಯಲ್ಲಿರುವ ಜಿ.ಹೊಸಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು, ಪೋಲೇನಹಳ್ಳಿ ಗ್ರಾಮದ ಲಕ್ಷ್ಮೀ ನಾರಾಯಣಪ್ಪ ಬಿನ್ ಚಿಕ್ಕ ನರಸಯ್ಯ (53) ಎಂಬವರು ಮೃತಪಟ್ಟಿದ್ದಾರೆ. ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಕಾಣಿಕೆ ನೀಡಿ ಹಿಂತಿರುಗುವಾಗ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಸ್ಥ ಳಕ್ಕೆ ಸಿಪಿಐ ಹನುಮಂತರಾಯಪ್ಪ ಹಾಗೂ ಪಿಎಸ್ ಐ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC