Subscribe to Updates
Get the latest creative news from FooBar about art, design and business.
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
- ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
- ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
Author: admin
ಬೆಳಗಾವಿ : ಶೀಘ್ರವೇ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರು-ಬೆಳಗಾವಿಗೆ ಸಂಚಾರ ಆರಂಭವಾಗಲಿದೆ ಎನ್ನಲಾಗಿದೆ. ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ರೈಲು ಧಾರವಾಡಕ್ಕೂ ವಿಸ್ತರಣೆಯಾಗುವುದು ಖಚಿತ ಆಗಿದೆ. ಹೀಗಾಗಿ ಬೆಂಗಳೂರು – ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿಯವರೆಗೂ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಮಾಹಿತಿ ನೀಡಿದ್ದಾರೆ. ಶೀಘ್ರವೇ ಬೆಂಗಳೂರು-ಹುಬ್ಬಳ್ಳಿ-ಬೆಳಗಾವಿಗೆ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಇಂದು ಸಿದ್ದು ನಿಜಕನಸುಗಳು ಪುಸ್ತಕ ಲೋಕಾರ್ಪಣೆ ಆಗುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ಸಾಮರಸ್ಯ ಕದಡುವ ಕೆಲಸವಾಗಿದೆ. ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಹೆಸರು ಬಳಸಿ ತೇಜೋವಧೆ ಮಾಡಲಾಗುತ್ತಿದೆ. ಪುಸ್ತಕದ ಮುಖಪುಟದಲ್ಲಿ ಅವರ ಭಾವಚಿತ್ರವನ್ನು ವಿರೂಪಗೊಳಿಸಲಾಗಿದೆ. ಕಲ್ಪಿತ ಪ್ರಚೋದನಕಾರಿ ಬರಹಗಳು ಈ ಪುಸ್ತಕದಲ್ಲಿವೆ. ಇದರಿಂದ ಸಾಮರಸ್ಯ ಕದಡುವ ಸಾಧ್ಯತೆಯಿದ್ದು, ಕಾರ್ಯಕ್ರಮ ರದ್ದು ಮಾಡಬೇಕು ಎಂಬ ಎಸ್ ಜೆ ಪಾರ್ಕ್ ಪೊಲೀಸರಿಗೆ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರಿನ ಪತ್ರಿಕಾ ಭವನದಲ್ಲಿ ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಜಿಲ್ಲಾ ಸಮಾವೇಶ ರವಿವಾರ ಜರುಗಿತು. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ತಿಂಗಳಿಗೆ ರೂ. 20,000 ಗೌರವಧನ ನೀಡುವಂತೆ ಹಾಗೂ ವಾರಕ್ಕೆ 10 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ನೀಡುತ್ತಿರುವುದನ್ನು ವಿರೋಧಿಸಿ ಈ ಸಮಾವೇಶ ಜರುಗಿತು. ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪದವಿ ಪೂರ್ವ ಅತಿಥಿ ಉಪನ್ಯಾಸಕರು ಈ ಸಮಾವೇಶದಲ್ಲಿ ಭಾಗಿಯಾಗಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ದೊರೆರಾಜು ,ಪ್ರಗತಿಪರ ಚಿಂತಕರು ಹಾಗೂ ನಿವೃತ್ತ ಡಿಡಿಪಿಐ ಸಮಾವೇಶವನ್ನು ಕುರಿತು ಮಾತನಾಡಿ, ಇಂದು ಎಲ್ಲಾ ಸರ್ಕಾರಗಳು ಜನವಿರೋಧಿಯಾಗಿದ್ದು, ಅತಿಥಿ ಉಪನ್ಯಾಸಕರಿಗೆ ಯಾವುದೇ ರೀತಿಯ ನೆರವು ನೀಡುತ್ತಿಲ್ಲ. ಉಪನ್ಯಾಸಕರು ಬೀದಿಗಿಳಿದೇ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು. ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಸಂಘಟನೆಯ ರಾಜ್ಯ ಸಲಹೆಗಾರರಾದ ವಿಎನ್ ರಾಜಶೇಖರ್ ಮಾತನಾಡಿ, ವಾರಕ್ಕೆ ಕೇವಲ 10 ಗಂಟೆಗಳು ಮಾತ್ರ ಕಾರ್ಯಭಾರ ನೀಡಬೇಕೆಂದು ಪದವಿ ಪೂರ್ವ ಇಲಾಖೆಯ ಸುತ್ತೋಲೆ ಇದ್ದರೂ, ಪದವಿ ಪೂರ್ವ ಅತಿಥಿ ಉಪನ್ಯಾಸಕರಿಗೆ…
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶ” ದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಾಲ್ಗೊಂಡು, ಶೋಷಿತ ಸಮುದಾಯಗಳ ಜನರ ಸಮಾನತೆಯ ಕೂಗಿಗೆ ದನಿಗೂಡಿಸಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶವನ್ನು ಒಂದೇ ವೇದಿಕೆಯಲ್ಲಿ ಆಯೋಜಿಸಿರುವುದು ಪ್ರಶಂಸನೀಯ ಮತ್ತು ಸ್ವಾಗತಾರ್ಹವಾದುದ್ದು. ಅವಕಾಶ ಮತ್ತು ಸಾಮಾಜಿಕ ನ್ಯಾಯದಿಂದ ವಂಚಿತವಾದ ಶೋಷಿತ ಜನರು ಇಂದು ಒಗ್ಗೂಡಿ ಹೋರಾಟವನ್ನು ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೋಟೆನಾಡು ಚಿತ್ರದುರ್ಗದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶ” ದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ಜನರಿಗೂ ನ್ಯಾಯವನ್ನು ಕೊಡಬೇಕು ಎಂಬ ವಿಷಯದಲ್ಲಿ ಬದ್ಧತೆ ಹೊಂದಿರುವ ಪಕ್ಷ. ಬಿಜೆಪಿಯವರು ಸಾಮಾಜಿಕ ನ್ಯಾಯ, ಮೀಸಲಾತಿಯಲ್ಲಿ ನಂಬಿಕೆ…
ಮಂಡ್ಯ: ನಾಟಕ ಪ್ರದರ್ಶನದ ವೇಳೆಯೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ದುಗ್ಗನಹಳ್ಳಿ ಗ್ರಾಮದ ನಿವಾಸಿ ನಂಜಯ್ಯ(46) ಮೃತಪಟ್ಟ ಕಲಾವಿದರಾಗಿದ್ದು, ಕುರುಕ್ಷೇತ್ರದ ಕೃಷ್ಣ ಸಂಧಾನ ಅನ್ನೋ ನಾಟಕದಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಅವರು ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಾಟಕ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಕಲಾವಿದನ ಸಾವಿನ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಾಟಕವನ್ನು ಸ್ಥಗಿತಗೊಳಿಸಿದರು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ: ಮಕ್ಕಳು, ಪೋಷಕರ ಹಾಗೂ ಶಿಕ್ಷಕ ವೃಂದದ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದರೆ, ಜಗತ್ತನ್ನೇ ಗೆಲ್ಲಬಹುದೆಂದು ರಾಮಕೃಷ್ಣ ಆಶ್ರಮದ ಜಪಾನಂದ ಸ್ವಾಮೀಜಿ ತಿಳಿಸಿದರು. ಪಾವಗಡ ಪಟ್ಟದ ಹೆಸರಾಂತ ಶಾಲೆಯಾದ ಜ್ಞಾನಭೋದಿನಿ ಆಂಗ್ಲ ಮಾಧ್ಯಮ ಪ್ರೌಢಶಾಲಯ 30ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಇರುವಂತಹ ಪ್ರತಿಭೆಗಳನ್ನು ಪೋಷರಿಗಿಂತ ಹೆಚ್ಚಾಗಿ ಶಿಕ್ಷಕರು ಕಂಡುಹಿಡಿಯಲು ಸಾಧ್ಯ. ಇತ್ತೀಚಿನ ದಿನದಲ್ಲಿ ತಂದೆ ತಾಯಿಯ ಒಡನಾಟಕ್ಕಿಂತ ಶಿಕ್ಷಕರ ಒಡನಾಟವೇ ಹೆಚ್ಚು. ಹಾಗಾಗಿ ಪಠ್ಯ ಹಾಗೂ ಜ್ಞಾನದ ಬಗ್ಗೆ ಹೆಚ್ಚು ಶಿಕ್ಷಕರು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ವಿವೇಕಾನಂದರ ವಿಚಾರಧಾರೆಗಳನ್ನು ಮಕ್ಕಳು ತಮ್ಮಜೀವನ ಶೈಲಿಯಲ್ಲಿ ಬಳಸಿಕೊಂಡು, ತಮ್ಮ ನಿತ್ಯದ ಪಠ್ಯದ ಜೊತೆಯಲ್ಲಿ ಅವರ ಆದರ್ಶಗಳನ್ನು ರೂಡಿಸಿಕೊಳ್ಳಬೇಕು. ಅದು ನಿಮ್ಮ ಜೀವನದಲ್ಲಿ ಬದಲಾವಣೆ ಬರಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಅನಿಲ್ ಕುಮಾರ್, ಈ ನಮ್ಮ ಸಂಸ್ಥೆಗೆ ಇಂದಿಗೆ 30 ವರ್ಷ ಪೂರ್ಣಗೊಂಡಿದೆ. ಈ ಬಾರಿ ಶಾಲೆಯಲ್ಲಿ ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು, ಪೋಷಕರಿಗೂ ಸಹ…
ತಿಪಟೂರು ಎರಡನೇ ಹಂತದ ಜೆಡಿಎಸ್ ನ ಪಂಚರತ್ನ ಯಾತ್ರೆ ತಿಪಟೂರು ತಾಲೂಕಿಗೆ ಆಗಮಿಸಲಿದ್ದು ಈ ಸಮಯದಲ್ಲಿ ಕಾಂಗ್ರೆಸ್ನ ಮುಖಂಡರು ಕೆಲನ ನಗರಸಭೆ ಸದಸ್ಯರು ಬಿಜೆಪಿ ಸದಸ್ಯರು ಜೆಡಿಎಸ್ ಗೆ ಸೇರಲು ಒಲವು ತೋರಿದ್ದಾರೆ ಎಂದು ತಿಪಟೂರು ತಾಲೂಕು ಜೆಡಿಎಸ್ ಅಧ್ಯಕ್ಷ ಶಿವು ಸ್ವಾಮಿ ತಿಳಿಸಿದರು. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದ್ಯಂತ ನಡೆಯುತ್ತಿರುವ ಮೊದಲ ಹಂತದ ಪಂಚರತ್ನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಈಗಾಗಲೇ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಅದೇ ರೀತಿ ತಿಪಟೂರಿನಲ್ಲಿ ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಅವರಿಗೆ ಜೆಡಿಎಸ್ ಸೇರಲು ಬಹಿರಂಗವಾಗಿ ಆಹ್ವಾನ ನೀಡುತ್ತಿರುವುದಾಗಿ ತಿಳಿಸಿದರು. ತಿಪಟೂರು ನಗರಸಭೆ ಕೆಲಸ ಸದಸ್ಯರು ಜನವರಿ ಮಧ್ಯಭಾಗದಲ್ಲಿ ಪಂಚರತ್ನ ಯಾತ್ರೆ ತಿಪಟೂರು ತಾಲೂಕಿಗೆ ಆಗಮಿಸಲಿದ್ದು , ಈ ಸಂದರ್ಭದಲ್ಲಿ ಎಲ್ಲಾ ಮುಖಂಡರುಗಳನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ತಿಳಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಜಗದೀಶ್ ತಡಸೂರು, ಗ್ರಾಮ…
ತುರುವೇಕೆರೆ: ತುರುವೇಕೆರೆ.ತಾಲ್ಲೂಕಿನ ಆನೆಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇನಹಳ್ಳಿ, ಆನೆಕೆರೆ ಮತ್ತು ಆನೆಕೆರೆ ಪಾಳ್ಯದಲ್ಲಿ ಶಾಸಕ ಮಸಾಲಾ ಜಯರಾಮ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕಾಮಗಾರಿಗಳಿಗೆ ಕ್ರಷರ್ ಗಳ ಮುಷ್ಕರದಿಂದಾಗಿ ಕಚ್ಚಾವಸ್ತುಗಳು ಲಭ್ಯವಿಲ್ಲದ ಕಾರಣ ಕಾಮಗಾರಿಗಳು ವಿಳಂಬವಾಗಿವೆ. ಆದರಿಂದ ತಡವಾಗಿ ಚಾಲನೆ ಕೊಟ್ಟಿದ್ದೇವೆ. ಇನ್ನು 40 ಕೋಟಿ ರೂ.ಗಳ ಕಾಮಗಾರಿಗಳು ಬಾಕಿಯಿವೆ. ಇನ್ನು ಒಂದು ತಿಂಗಳ ಒಳಗಾಗಿ ಬಾಕಿ ಇರುವ ಕಾಮಗಾರಿಗಳಿಗೆ ಚಾಲನೆ ಕೊಡಲಾಗುವುದು. ಇನ್ನು ಎರಡು ತಿಂಗಳ ಒಳಗಾಗಿ ಎಲ್ಲ 400 ಹಳ್ಳಿಗಳಿಗೆ ಸಿ.ಸಿ. ರಸ್ತೆ ಕಾಮಗಾರಿಯನ್ನು ಮಾಡಿ ಮುಗಿಸಲಾಗುವುದು. ಈಗಾಗಲೇ ಕಾಮಗಾರಿಗಳಿಗೆ ವೇಗವನ್ನು ಹೆಚ್ಚಿಸಿ ಎಂದು ಗುತ್ತಿಗೆದಾರರುಗಳಿಗೆ ತಾಕೀತು ಮಾಡಿದ್ದೇನೆ. ಫೆಬ್ರವರಿ ಒಳಗಾಗಿ ಕಾಮಗಾರಿಗಳನ್ನು ಮುಗಿಸಲಾಗುವುದು ಎಂದು ಹೇಳಿದರು. ಸೋಮೇನಹಳ್ಳಿ ಗೆಟ್ ನಿಂದ ಮಲ್ಲಾಘಟ್ಟ ಆನೆಕೆರೆ ನಾಯಕನಘಟ್ಟ ರಸ್ತೆ ತುಂಬಾ ಹಾಳಾಗಿರುವುದರಿಂದ ಮತ್ತು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾದ ರಸ್ತೆಯನ್ನು ಅಭಿವೃದ್ಧಿಪಡಿಸಲು 7.5 ಕೋಟಿ ರೂ.ಗಳು ಮಂಜೂರಾಗಿದ್ದು, ಅತಿಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ.…
ಸರಗೂರು: ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟನೆ ಚುರುಕುಗೊಂಡಿದ್ದು, ಬೂತ್ ಸಮಿತಿಗಳು ಕಾರ್ಯಾರಂಭ ಮಾಡುತ್ತಿರುವುದು ಬಿಜೆಪಿಯ ಕ್ರೀಯಾಶೀಲ ಪಕ್ಷ ಸಂಘಟನೆಯ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಮಾಜ ಸೇವೆಕ ಬಿಜೆಪಿ ಮುಖಂಡ ಡಾ.ಹೆಚ್.ವಿ.ಕೃಷ್ಣಸ್ವಾಮಿ ಹೇಳಿದರು. ತಾಲೂಕಿನ ಮುಳ್ಳೂರು ಮಹಾಶಕ್ತಿ ಕೇಂದ್ರ ಹಾಗೂ ಬೆಣ್ಣೆಗೆರೆ ಗ್ರಾಮದಲ್ಲಿ ಬುಧವಾರ ನಡೆದ ‘ಬೂತ್ ವಿಜಯ’ ಅಭಿಯಾನದ ಅಂಗವಾಗಿ ಮನೆ ಮನೆಗಳಿಗೆ ಬಿಜೆಪಿ ವಿಜಯಧ್ವಜ ಹಾರಿಸುವ ಮೂಲಕ ಪಕ್ಷದ ಯಶಸ್ವಿಯಾಗಿ ನೆರವೇರಿಸಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೂತ್ ಮಟ್ಟದಲ್ಲಿ ಪಕ್ಷ ಬಲಿಷ್ಠವಾಗಿದೆ, ಪಕ್ಷದ ಸಂಘಟನೆಯ ಕಾರ್ಯ ಇನ್ನೂ ಚುರುಕುಗೊಳಿಸಬೇಕಿದೆ, ಬಿಜೆಪಿ ಸರ್ಕಾರ ರೂಪಿಸಿರುವ ಜನಪರ ಯೋಜನೆ, ಸಾಧನೆಗಳ ಬಗ್ಗೆ ಜನರ ಮನೆಬಾಗಿಲಿಗೆ ಮುಟ್ಟಿಸುವ ಕೆಲಸ ನಡೆಯಬೇಕಿದೆ ಎಂದರು. ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಜಿಲ್ಲಾ ಸಹ ವಕ್ತರರಾದ ಸಿ.ಕೆ.ಗಿರೀಶ್ ಮಾತನಾಡಿ, ಕಾರ್ಯಕರ್ತರೇ ಬಿಜೆಪಿಯ ಅಮೂಲ್ಯ ಆಸ್ತಿ, ಕಾರ್ಯಕರ್ತರೇ ಬಿಜೆಪಿಯ ಬೆನ್ನೆಲುಬು, ನಿಷ್ಠೆಯಿಂದ ದುಡಿಯುವ ಕೋಟಿ ಕೋಟಿ ಕಾರ್ಯಕರ್ತರ ಶ್ರಮ ಹಾಗೂ ಆಶೀರ್ವಾದ ಬಿಜೆಪಿಗೆ ಇದೆ,…
ಸರಗೂರು: ಹಿಂದೂ ಸಂಘಟನೆಗಳ ಜಾಗೃತಿಗಾಗಿ ಪಟ್ಟಣದ ಶ್ರೀ ಹನುಮಜಯಂತಿ ಅಚರಣಾ ಸಮಿತಿ ಶನಿವಾರ ಆಯೋಜಿಸಿದ್ದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು. ದಾರಿಯುದ್ದಕ್ಕೂ ಭಗವಾನ್ ಹನುಮನ ಘೋಷಣೆ ಮೊಳಗಿದವು. ಶೋಭಾಯಾತ್ರೆ ಅಂಗವಾಗಿ ಪಲ್ಲಕ್ಕಿಯಲ್ಲಿ ಕೂರಿಸಿದ್ದ ಹನುಮಂತನ ಭಾವಚಿತ್ರಕ್ಕೆ ತಾಲೂಕಿನ ಹಂಚೀಪುರ ಮಠದ ಚನ್ನಬಸವ ಸ್ವಾಮೀಜಿ, ದಡದಹಳ್ಳಿ ಮಠದ ಷಡಕ್ಷರಿಸ್ವಾಮೀಜಿ, ಶಾಸಕ ಅನಿಲ್ ಚಿಕ್ಕಮಾದು, ಜೆಡಿಎಸ್ ಮುಖಂಡ ಜಯಪ್ರಕಾಶ್, ಬಿಜೆಪಿ ಮುಖಂಡರಾದ ಡಾ.ಎಚ್.ವಿ.ಕೃಷ್ಣಸ್ವಾಮಿ, ಎಂ.ಅಪ್ಪಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಹಂಚೀಪುರ ಗುರುಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಆಚರಣಾ ಸಮಿತಿ ಅಧ್ಯಕ್ಷ ಚನ್ನಪ್ಪ ಸೇರಿದಂತೆ ಮುಖಂಡರು ಹನುಮನ ಭಾವಚಿತ್ರವುಳ್ಳ ಶೋಭಯಾತ್ರೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪಟ್ಟಣದ ಕೆಇಬಿ ಕಚೇರಿಯಿಂದ ಹೊರಟ ಶೋಭಾಯಾತ್ರೆ ಮೆರವಣಿಗೆಯು ಹುಣಸೂರು-ಎನ್.ಬೇಗೂರು ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣ, ಮಹಾವೀರ ವೃತ್ತ, ಚಿಕ್ಕದೇವಮ್ಮನ ವೃತ್ತ, ಮೂಲಕ 2ನೇ ಮುಖ್ಯ ರಸ್ತೆಯಲ್ಲಿ ಸಾಗಿ ಸಂತೆಮಾಳದ ಮಾಸ್ತಮ್ಮನ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. ಪಟ್ಟಣದ ಪ್ರಮುಖ ಬೀದಿಗಳು ಕೆಸರಿಮಯವಾಗಿದ್ದು,…