Author: admin

ಕನ್ನಡದ ಬಹು ನಿರೀಕ್ಷಿತ ಚಿತ್ರ ‘ಪಾಲಾರ್’ ಚಿತ್ರದ ವಿತರಣಾ ಹಕ್ಕನ್ನು ಕರ್ನಾಟಕದ ಪ್ರಮುಖ ಸಿನಿಮಾ ವಿತರಣಾ ಸಂಸ್ಥೆಯಾದ “ಸತ್ಯ ಸಿನಿ ಡಿಸ್ಟ್ರಿಬ್ಯೂಟರ್ಸ್” ಪಡೆದುಕೊಂಡಿದೆ. “ಪಾಲಾರ್” ಸಿನಿಮಾದ ವಿಶಾಲ ಕರ್ನಾಟಕ ವಿತರಣಾ ಹಕ್ಕನ್ನು ಪಡೆದುಕೊಂಡಿದೆ. ಶೀಘ್ರದಲ್ಲೆ ಸಿನೆಮಾ ಬಿಡುಗಡೆ ಆಗಲಿದೆ. ಅದಕ್ಕಿಂತ ಮುಂಚೆ ಪ್ರತೀ ಜಿಲ್ಲೆಯಲ್ಲೂ ಪ್ರೀಮಿಯರ್ ಶೋ ಆಯೋಜನೆಯಾಗಲಿದೆ ಎಂದು ನಿರ್ದೇಶಕ ಜೀವಾ ನವೀನ್ ತಿಳಿಸಿದ್ದಾರೆ. ಶೋಷಣೆಗಳ ವಿರುದ್ಧ ಜನ ಸಾಮಾನ್ಯರ ಸಂಘರ್ಷದ ಕಥೆಯನ್ನು ಹೊಂದಿರುವ ಪಾಲಾರ್ ಚಿತ್ರ, ಬಿಡುಗಡೆಗೂ ಮೊದಲೇ ಸಾಕಷ್ಟು ಜನಪ್ರಿಯತೆ ಹೊಂದಿದೆ. ಸಾಕಷ್ಟು ಹಳ್ಳಿಗಳಲ್ಲಿ ಚಿತ್ರದ ಬ್ಯಾನರ್ ಗಳನ್ನು ಹಾಕಿ ಸಾರ್ವಜನಿಕರೇ ಪ್ರಚಾರ ನೀಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿರುವನಂತಪುರಂ: ಆನ್ ಲೈನ್ ನಿಂದ ಆರ್ಡರ್ ಮಾಡಿ ಖರೀದಿಸಿದ್ದ ಬಿರಿಯಾನಿ ಸೇವಿಸಿದ ವಿದ್ಯಾರ್ಥಿನಿಯೋರ್ವಳು ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಕೇರಳದಲ್ಲಿ ನಡೆದಿದೆ. ಕಾಸರಗೋಡು ಸಮೀಪದ ಪೆರುಂಬಳದ ಅಂಜು ಶ್ರೀಪಾರ್ವತಿ ಎಂಬವರು ಮೃತಪಟ್ಟವರಾಗಿದ್ದರು, ಇವರು ‘ಕುಜಿಮಂತಿ’ ಎಂಬ ಕೇರಳ ಬಿರಿಯಾನಿಯನ್ನು ಹೊಟೇಲ್ ವೊಂದರಿಂದ ಆನ್ ಲೈನ್ ನಲ್ಲಿ ಖರೀದಿಸಿ ಸೇವಿಸಿದ್ದರು. ಬಿರಿಯಾನಿ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಯುವತಿಯನ್ನು  ಪೋಷಕರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಬಳಿಕ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಮಂಗಳೂರಿನ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ್ದಾಳೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಸುರೇಶ್ ಬಾಬು ಎಂ. ತುರುವೇಕೆರೆ ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವಡವನಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದೇವನಹಳ್ಳಿ ಗ್ರಾಮದ ರೈತ ರಾಜಶೇಖರ್ ಬಿನ್ ರಂಗಪ್ಪ ಅವರ ತೋಟದಲ್ಲಿ ಪ್ರಕೃತಿಯ ವಿಸ್ಮಯ ನಡೆದಿದೆ. ರಾಜಶೇಖರಯ್ಯ ಅವರಿಗೆ ಸೇರಿದ 80 ಗಿಡ ತೆಂಗಿನ ತೋಟದಲ್ಲಿ ಒಂದು ವಿಸ್ಮಯಕಾರಿ ತೆಂಗಿನ ಮರವಿದೆ. ಈ ತೆಂಗಿನ ಮರ ಸುಮಾರು 20 ವರ್ಷಗಳ ಪ್ರಾಯವಾಗಿದ್ದು, 20 ಅಡಿ ಎತ್ತರಕ್ಕೆ ಬೆಳೆದಿದೆ. ಈ ಮರದ 18 ಅಡಿಯ ಎತ್ತರದಲ್ಲಿ  20 ತೆಂಗಿನ ಸಸಿಗಳು ಬೆಳೆದಿವೆ ಕನಿಷ್ಠ ವೆಂದರೆ ಒಂದು ತೆಂಗಿನ ಮರ ಐದು ವರ್ಷಗಳಿಗೆ ಪಸಲಿಗೆ ಬರುತ್ತದೆ. ಅದೇ ರೀತಿ ಈ ಮೇಲೆ ಬೆಳೆದಿರುವ 20 ತೆಂಗಿನ ಸಸಿಗಳು ಹೊಂಬಾಳೆ ಹೊಡೆದು ತೆಂಗಿನಕಾಯಿ ಬಿಟ್ಟು ಅಚ್ಚರಿ ಮೂಡಿಸಿದೆ. ಈ ಕುತೂಹಲ ಹಾಗೂ ಆಶ್ಚರ್ಯ ತೆಂಗಿನ ಮರವು 8 ವರ್ಷಗಳ ನಂತರ ಬೆಳಕಿಗೆ ಬಂದಿದೆ ಅಂದಿನಿಂದ ಇಲ್ಲಿವರೆಗೂ ಆ ರೈತ ಕುಟುಂಬ ಆ ತೆಂಗಿನ ಮರಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ.…

Read More

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ದೊಡ್ಡಹಳ್ಳಿ ಗ್ರಾಮದಲ್ಲಿ  ಶ್ರೀ ವರದಾಂಜನೇಯಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಹಿನ್ನೆಲೆ ದೇವಾಲಯದಲ್ಲಿ ಗಣಪತಿ ಪೂಜೆ, ಪಂಚಾಮೃತ ಅಭಿಷೇಕ, ನವಗ್ರಹ ಪೂಜೆ, ಹೋಮ, ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಗಾರುಡಿ ಗೊಂಬೆ ಕುಣಿತ ಮತ್ತು ಮಹಿಳೆಯರು ಪೂರ್ಣ ಕುಂಭ ಕಳಶ ಒತ್ತು ಮೆರವಣಿಗೆಯಲ್ಲಿ ಸಾಗಿದರು. ಭಾರೀ ಸಂಖ್ಯೆಯಲ್ಲಿ ಭಕ್ತರು  ಆಗಮಿಸಿ ರಥೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಇದೇ ವೇಳೆ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ವ್ಯಕ್ತಿಗಳಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ಭಾನುವಾರ ಜಾರುಮರ ಜಾತ್ರೆ ನಡೆಯಲಿದೆ ಈ ಸಂದರ್ಭದಲ್ಲಿನಿವೃತ್ತ ಜಿಲ್ಲಾಧಿಕಾರಿ ಹೆಚ್.ರಾಮಾಂಜನೇಯ, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಶೇಖರ್, ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ರಘುನಂದನ್, ಶ್ರೀ ವರದಾಂಜನೇಯಸ್ವಾಮಿ ಸೇವಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇಂದೋರ್ ನಲ್ಲಿ ನಡೆದ ಘಟನೆಯೊಂದು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದೋರ್ ನಲ್ಲಿ ನಡೆದಿದ್ದು, ವ್ಯಾಯಾಮ ಮಾಡುತ್ತಿದ್ದ ವೇಳೆಯೇ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕರಾದ ಪ್ರದೀಪ್ ರಘುವಂಶಿ ಎಂಬವರು ಮೃತಪಟ್ಟವರಾಗಿದ್ದು, ಅವರು ಕುಸಿದು ಬಿದ್ದ ವೇಳೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಪ್ರದೀಪ್ ರಘುವಂಶಿ ನಮ್ಮ ಹಳೆಯ ಕ್ಲೈಂಟ್ ಆಗಿದ್ದಾರೆ. ಅವರು ಪ್ರತಿದಿನ ಜಿಮ್ ​ಗೆ ಬರುತ್ತಿದ್ದರು ಎಂದು ತರಬೇತುದಾರರು ಹೇಳಿದ್ದು, ಘಟನೆಯ ಬಗ್ಗೆ ವಿವರಿಸಿದ ಅವರು, ಪ್ರದೀಪ್ ಇದ್ದಕ್ಕಿಂದ್ದಂತೆ ಹೃದಯಾಘಾತಕ್ಕೆ ಒಳಗಾದರು. ಮೂರು ನಿಮಿಷಗಳಲ್ಲಿ ಎಲ್ಲವೂ ಮುಗಿದುಹೋಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. https://twitter.com/Lucknowkibaat32/status/1610939077918089216?s=20&t=qCV8DDqKC14Ks7eAXHvExQ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಪಾಟ್ನಾ: ಬಿಹಾರದಲ್ಲಿ ಶನಿವಾರದಿಂದ ಜಾತಿ ಆಧಾರಿತ ಜನಗಣತಿ ಆರಂಭವಾಗಿದೆ. ಈ ಮೂಲಕ ಎಲ್ಲಾ ಜಾತಿಗಳು, ಉಪ ಜಾತಿಗಳು, ಧರ್ಮಗಳ ಮಾಹಿತಿ ಕಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಇದೊಂದು ಐತಿಹಾಸಿಕ ಹೆಜ್ಜೆಯಾಗಿದ್ದು, ಸಮಾಜದಲ್ಲಿನ ದುರ್ಬಲ ವರ್ಗಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ತಲುಪಿಸಲು ಜನಗಣತಿಯಿಂದ ವೈಜ್ಞಾನಿಕವಾಗಿ ಮಾಹಿತಿ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರದಿಂದ ಐತಿಹಾಸಿಕ ಹೆಜ್ಜೆಯನ್ನಿಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ, ಜನರಿಗೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ವೈಜ್ಞಾನಿಕವಾಗಿ ಮಾಹಿತಿ ದೊರೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಈ ವಿಚಾರ ತಿಳಿಸಿದ ಸಚಿವರು, ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ–ಪಂಗಡಕ್ಕೆ ನಿಗದಿಪಡಿಸಿರುವ ಮೀಸಲು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ. ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ ನಡೆಯಲಿದೆ ಎಂದರು. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಇನ್ನೂ ಜಾರಿಯಾಗಿಲ್ಲ. ರಾಜ್ಯದ 300ರಿಂದ 400 ಆಯ್ದ ಶಾಲೆಗಳಲ್ಲಿ ಜನವರಿ 26ರಿಂದ ಜಾರಿಗೊಳಿಸಲು ಯೋಜಿಸಿದ್ದೇವೆ. ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ಕೂಡ ರೂಪುಗೊಂಡಿದೆ. ಎನ್‌ಇಪಿ ಪಠ್ಯ ಆಧಾರಿತ ಅಲ್ಲ. ಚಟುವಟಿಕೆ ಆಧಾರಿತ ಶಿಕ್ಷಣ. ಅಲ್ಲಿ ಬಹಳ ಪುಸ್ತಕಗಳು ಇರುತ್ತವೆ ಎಂದೇನೂ ನನಗೆ ಅನ್ನಿಸಿಲ್ಲ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಜ್ಜುಗೊಳಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರ ಹೈಕೋರ್ಟ್‌ನಲ್ಲಿದೆ. ಜನವರಿ 18ಕ್ಕೆ ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ…

Read More

ಹಾವೇರಿ: ನಾವು ಬೇರೆ ಯಾವುದೇ ರಾಜ್ಯಕ್ಕೆ ಕರ್ನಾಟಕದ ಒಂದು ಇಂಚು ಬಿಟ್ಟುಕೊಡಲು ಸಾಧ್ಯವೇ ಇಲ್ಲ ಎಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಹೇಳಿದರು. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಕುರಿತು ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಹಾಜನ್ ಆಯೋಗದ ವರದಿಯು ಈಗಾಗಲೇ ಗಡಿ ರೇಖೆಯನ್ನು ಇತ್ಯರ್ಥಪಡಿಸಿದೆ. ಅಕ್ಕಪಕ್ಕದ ರಾಜ್ಯದವರು ಹಿಂಸಾಚಾರದಲ್ಲಿ ತೊಡಗಿ ಸಾಮಾಜಿಕ ಕಳಕಳಿ ಮೂಡಿಸುವುದು ಸರಿಯಲ್ಲ. ಸಮಸ್ಯೆಯನ್ನು ಮಾತುಕತೆಯ ಮೂಲಕ ಮತ್ತು ಕಾನೂನಿನ ಚೌಕಟ್ಟಿನೊಳಗೆ ಇತ್ಯರ್ಥಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.ಕನ್ನಡವು ಇಂಗ್ಲಿಷ್ನ ದಾಳಿಯನ್ನು ಎದುರಿಸುತ್ತಿದೆ. ಕನ್ನಡ ಮತ್ತು ಕರ್ನಾಟಕ ಪರಸ್ಪರ ಅವಲಂಬಿತವಾಗಿದ್ದು, ಅವುಗಳ ನಡುವೆ ಯಾವುದೇ ಪ್ರತ್ಯೇಕತೆಯು ಭಾಷೆಗೆ ಹಾನಿಯಾಗಬಹುದು ಎಂದು ಇದೇ ವೇಳೆ ಅವರು ಅಭಿಪ್ರಾಯಪಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, B.C. ಟ್ರಸ್ಟ್ ಪಾವಗಡ ಯೋಜನಾ ಕಚೇರಿ ವ್ಯಾಪ್ತಿಯ ಸಿ.ಕೆ.ಪುರ ಕಾರ್ಯಕ್ಷೇತ್ರದಲ್ಲಿ ಇಂದು ಗ್ರಾಮ ದೇವತೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಗುರುವಾರ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. C.K.ಪುರ ವಲಯದ ಮೇಲ್ವಿಚಾರಕರಾದ ಮನು B.R. ಅವರ ನೇತೃತ್ವದಲ್ಲಿ ಹಾಗೂ ಸ್ವ– ಸಹಾಯ ಸಂಘಗಳು ಹಾಗೂ ಪ್ರಗತಿ ಬಂಧು ಸಂಘಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 2018ರಿಂದ ಸತತವಾಗಿ ಕರ್ನಾಟಕದದ್ಯಂತ ಎಲ್ಲಾ ಕಾರ್ಯಕ್ಷೇತ್ರಗಳಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತಿದೆ. ಅದರ ಅಂಗವಾಗಿ ಸಿ.ಕೆ.ಪುರದಲ್ಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ವಸಹಾಯ ಸಂಘದ ಸದಸ್ಯರಾದ ಉಮಾದೇವಿ, ಜ್ಯೋತಿ ನಾಗಮ್ಮ, ಗಿರಿಜಮ್ಮ, ಸುವರ್ಣಮ್ಮ, ಲಕ್ಷ್ಮೀದೇವಿ, ಶಿವಮ್ಮ, ಓಬಳಮ್ಮ ಮತ್ತಿತರರು ಭಾಗವಹಿಸಿದ್ದರು. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಹುಬ್ಬಳ್ಳಿ: ನಾನು ಒಬ್ಬ ಹಿಂದೂ, ಆದರೆ ನಾನು ಹಿಂದುತ್ವಕ್ಕೆ ವಿರುದ್ಧವಾಗಿದ್ದೇನೆ. ಧರ್ಮ ಇಟ್ಟುಕೊಂಡು ರಾಜಕೀಯ ಮಾಡಲು ವಿರೋಧವಿದೆ. ಸಂವಿಧಾನದಲ್ಲಿ ಎಲ್ಲ ಧರ್ಮಗಳು ಸಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲ ಧರ್ಮಗಳು ಕೂಡ ಸಮಾನವಾಗಿವೆ. ಯಾವುದೇ ಧರ್ಮ ಹೆಚ್ಚು ಅಲ್ಲ, ಕಡಿಮೆಯೂ ಅಲ್ಲ. ಧರ್ಮ ಮತ್ತು ಜಾತಿ ಆಧಾರದ ಮೇಲೆ ರಾಜಕಾರಣ ಮಾಡಬಾರದು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಆರ್​​ಎಸ್​ಎಸ್​ ಸ್ಥಾಪನೆ ಆಗಿದೆ. ಆದರೆ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ ಎಂದು ಪ್ರಶ್ನಿಸಿದರು. 1925-47ರವರೆಗೆ ಯಾರಾದ್ರು ಭಾಗವಹಿಸಿದ್ರೆ ಹೇಳಿ ನೋಡೋಣ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More