Author: admin

ದ್ವೇಷದ ಭಾಷಣ ಮಾಡುವವರ ವಿರುದ್ಧ ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ಕಠಿಣಗೊಳಿಸಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ದ್ವೇಷ ಭಾಷಣದ ಪ್ರಕರಣಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಪೊಲೀಸರಿಗೆ ನಿರ್ದೇಶನ ನೀಡಿದ ಅಕ್ಟೋಬರ್ 2022 ರ ಆದೇಶವು ಪ್ರಸ್ತುತ ಎಲ್ಲಾ ರಾಜ್ಯಗಳಿಗೆ ಅನ್ವಯಿಸುತ್ತದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ದ್ವೇಷದ ಮಾತುಗಳು ಸಂವಿಧಾನದ ಸಾರ ಮತ್ತು ಚೌಕಟ್ಟಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಪೀಠವು ಗಮನಿಸಿದೆ. ಇನ್ನಾದರೂ ಪೊಲೀಸರು ಎರಡು ಗುಂಪುಗಳ ನಡುವೆ ದ್ವೇಷ ಹರಡುವ, ದೇಶದ ಏಕತೆ ಒಡೆಯುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಪ್ರಕರಣಗಳಲ್ಲಿ ದೂರುಗಳಿಗೆ ಕಾಯದೆ ಪ್ರಕರಣ ದಾಖಲಿಸಬೇಕು. ಕೇವಲ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ವಿಚಾರಣೆ ನಡೆಸುವ ಪದ್ಧತಿ…

Read More

ಮಣಿಪುರದಲ್ಲಿ ಮತ್ತೆ ಸಂಘರ್ಷ. ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿ ಸಂಘಟನೆ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರು ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯಾವಳಿಗಳು ಹೊರಬಿದ್ದಿವೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಕ್ರಮ ನಿರ್ಮಾಣದ ಕಾರಣ ಕ್ರಿಶ್ಚಿಯನ್ ಚರ್ಚ್‌ಗಳನ್ನು ಕೆಡವಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ತಡರಾತ್ರಿಯಾದರೂ ಪರಿಸ್ಥಿತಿ ಗಂಭೀರವಾಗಿದೆ. ಕಳೆದ ದಿನ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗಾಗಿ ಸಿದ್ಧಪಡಿಸಿದ್ದ ವೇದಿಕೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಿದ್ದ ಆಸನಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದ್ದು, ಐದು ದಿನಗಳ ಕಾಲ ಅಂತರ್ಜಾಲ ಸೇವೆಯನ್ನು ನಿಷೇಧಿಸಲಾಗಿದೆ. ಸ್ಥಳದಲ್ಲಿ ಕಮಾಂಡೋಗಳನ್ನೂ ನಿಯೋಜಿಸಲಾಗಿತ್ತು. ನಿಷೇಧಾಜ್ಞೆ ವಿರೋಧಿಸಿ ಪ್ರತಿಭಟನೆ ನಡೆಸಿದ ಪೊಲೀಸರೊಂದಿಗೆ ಮತ್ತೆ ಘರ್ಷಣೆ  ಪ್ರಾರಂಭವಾಯಿತು. ಜಿಲ್ಲೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಹಾಗೂ ಸಂರಕ್ಷಿತ ಅರಣ್ಯ ಮತ್ತು ಜಲಮೂಲಗಳ ಸಮೀಕ್ಷೆಗಾಗಿ ಜಿಲ್ಲೆಯಲ್ಲಿ ಮೂರು ಕ್ರಿಶ್ಚಿಯನ್ ಚರ್ಚ್‌ಗಳನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಬುಡಕಟ್ಟು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

2023ರ ಸಾರ್ವತ್ರಿಕ ಚುನಾವಣೆ ಹಲವು ವಿಶೇಷತೆಗಳಿಂದ ಕೂಡಿದ್ದು ರಾಜಕೀಯ ರಂಗ ಆಟದ ಹಾಗೂ ವೈಯಕ್ತಿಕ  ಪ್ರತಿಷ್ಠೆ   ಅಕಾಡ ಆಗಿ ಪರಿವರ್ತನೆಯಾಗಿದೆ. ಬೆಳಗಾವಿ 18 ಕ್ಷೇತ್ರಗಳಲ್ಲಿ ಅತಿ ಹೆಚ್ಚು ಚರ್ಚೆ ಹಾಗೂ ರಾಜಕೀಯ ಬೆಳವಣಿಗೆ ನಡೆಯುತ್ತಿರುವ ಕ್ಷೇತ್ರವೆಂದರೆ ಬೆಳಗಾವಿ ಗ್ರಾಮೀಣ ಕ್ಷೇತ್ರ.ಇಲ್ಲಿ ತ್ರಿಕೋನ ಸ್ಪರ್ಧೆ ನಿರ್ಮಾಣವಾಗಿದೆ. ಗ್ರಾಮೀಣ ಶಾಸಕ ಮಹಿಳಾ ಶಕ್ತಿಯನ್ನು ತಮ್ಮದಾಗಿಸಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರದಲ್ಲಿ ತೊಡಗಿದ್ದಾರೆ.ಯಾವುದೇ ಕಾಂಟ್ರವರ್ಸಿಗೆ ಕೇರ್ ಅನ್ನದೆ ಚುನಾವಣೆಯಲ್ಲಿ ಗೆಲ್ಲುವುದೇ ಒಂದೇ ಗುರಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನಿಶ್ಚಯಿಸಿದಂತೆ ಕಾಣುತ್ತಿದೆ. ಯಾರೇ ಏನೇ ಗಿಮಿಕ್ ಮಾಡಿದರು 50,000ಗಳ ಅಂತರದಿಂದ ಗೆಲವು ನನ್ನದೇ ಎಂಬುದು ಆತ್ಮವಿಶ್ವಾಸ ಅವರಿಗಾಗಿದೆ. ಈ ಕಡೆ ಕುಟುಂಬದ ಸದಸ್ಯರುಗಳಾದ ವಿಧಾನಪರಿಷತ್ ಸದಸ್ಯರು ಚನ್ನರಾಜ ಹಟ್ಟಿಹಳಿ ರುನಾಲ್ ಹೆಬ್ಬಾಳ್ಕರ್ ಅಪಾರ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ಸಿನ ಕಾರ್ಯಕರ್ತರು ಗ್ರಾಮೀಣ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ಮಯ ಮಾಡಲು ಪಣತೊಟ್ಟಂತೆ   ಕಾಣುತ್ತಿದೆ. ಏನೇ ಆದರೂ ಮೇ 13 ರಂದು ಯಾರತ್ತ ಜಯ ಸಿಗಲಿದೆ ಅನ್ನೋದು ಕಾದು ನೋಡಬೇಕಾಗಿದೆ. ನಮ್ಮತುಮಕೂರು.ಕಾಂನ…

Read More

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ಹಂತಗಳಲ್ಲಿ ಆರು ದಿನಗಳ ಅಭಿಯಾನ ಆರಂಭವಾಗಿದೆ. ರೋಡ್ ಶೋ ಸೇರಿದಂತೆ 22 ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೀದರ್‌ನ ಹುಮನಾಬಾದ್, 12 ಗಂಟೆಗೆ ವಿಜಯಪುರ ಮತ್ತು ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯಲ್ಲಿ ಕುಡಚಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಮಾಗಡಿ ರಸ್ತೆಯ ನೈಸ್ ರಸ್ತೆಯಿಂದ ಸುಮನಹಳ್ಳಿವರೆಗೆ ನಾಲ್ಕೂವರೆ ಕಿಲೋಮೀಟರ್ ರೋಡ್ ಶೋ ನಡೆಸಲಾಗುವುದು. ಭಾನುವಾರ ಬೆಳಗ್ಗೆ 9.30ಕ್ಕೆ ಕೋಲಾರ ಹಾಗೂ ಸಂಜೆ 4 ಗಂಟೆಗೆ ಹಾಸನದ ಬೇಲೂರಿನಲ್ಲಿ ಪ್ರಚಾರ ಸಭೆ. ಮೈಸೂರಿನಲ್ಲಿ ಸಂಜೆ ರೋಡ್ ಶೋ ನಡೆಯಲಿದೆ.ಇದೇ ವೇಳೆ ಪ್ರಿಯಾಂಕಾ ಗಾಂಧಿ ಇಂದು ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಬೂತ್ ಮಟ್ಟದಲ್ಲಿ ಪ್ರಚಾರವನ್ನು ತೀವ್ರಗೊಳಿಸಲು ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಹತ್ತಾರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ರೆವಿಡಿ ಸಂಸ್ಕೃತಿ’ (ಉಚಿತ ಕೊಡುಗೆಗಳನ್ನು…

Read More

ಏಪ್ರಿಲ್ 30ರಂದು ಖಾನಾಪುರ ಪಟ್ಟಣದ ಮಲಪ್ರಭಾ ಕ್ರೀಡಾಂಗಣದಲ್ಲಿ ಪ್ರಿಯಾಂಕ ಗಾಂಧಿ ಅವರು ಖಾನಾಪುರ ಜನತೆಯನ್ನು ಉದ್ದೇಶಿಸಿ ಮಾತನಾಡಲು ಹಾಗೂ ಖಾನಾಪುರ ಮತಕ್ಷೇತ್ರದಲ್ಲಿ ಮತ್ತೊಂದು ಸಾರಿ ಕಾಂಗ್ರೆಸ್ ಬಾವುಟ ಹಾರಿಸಲು ಪಣತೊಟ್ಟು ರಾಷ್ಟ್ರೀಯ ನಾಯಕರು ಬರುತ್ತಿರುವುದು  ಖಾನಾಪುರ   ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅತಿ ಸಂತಸ ತಂದಿದೆ. ಕಾರ್ಯಕ್ರಮದ ನಿಮಿತ್ತವಾಗಿ ಭವ್ಯ ಸ್ಟೇಜ್ ಕಾರ್ಯವನ್ನು ವೀಕ್ಷಿಸಲು ಖಾನಾಪುರ   ಕಾಂಗ್ರೆಸ್ ವೀಕ್ಷಕರಾದ ಖಾಜಿ ನಿಜಾಮುದ್ದೀನ್ ಹಾಗೂ ಮಾನ್ಯ ಶಾಸಕಿ ಡಾಕ್ಟರ್ ಅಂಜಲಿ ಹೇಮಂತ್ ನಿಂಬಾಳ್ಕರ್  ಹಾಗೂ ಪ್ರಿಯಾಂಕಾ ಗಾಂಧಿ ಕಛೇರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಮತ್ತು ಕಾರ್ಯಕರ್ತರು ಅಭಿಮಾನಿಗಳು  ಅವರ ಜೊತೆಗೂಡಿ ವೀಕ್ಷಣೆ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೊರಟಗೆರೆ : ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಅಭಿಮಾನಿಗಳು, ಕಾರ್ಯಕರ್ತರು ಜೆಸಿಬಿ ಯಂತ್ರದ ಮೂಲಕ ಹೂವಿನ ಸುರಿಮಳೆಗೈದಾಗ ಅದರಲ್ಲಿದ್ದ ಕಲ್ಲು ಪರಮೇಶ್ವರ್‌ ರವರ ತಲೆಗೆ ಬಿದ್ದು ರಕ್ತಸ್ರಾವವಾಗಿ ಪೆಟ್ಟಾಗಿರುವ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಭೈರೇನಹಳ್ಳಿಯಲ್ಲಿ ಪರಮೇಶ್ವರ್ ಅವರು ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಆ ವೇಳೆ ಜೆಸಿಬಿ ಯಂತ್ರದ ಮೂಲಕ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪುಷ್ಪವೃಷ್ಠಿ ಮಾಡುವಾಗ ಅವರ ತಲೆಗೆ ಕಲ್ಲು ಬಿದ್ದು ಪೆಟ್ಟಾಗಿ ರಕ್ತಸ್ರಾವವಾಗಿದೆ. ತಕ್ಷಣ ಅವರು ಅಕ್ಕಿರಾಂಪುರದ ಪ್ರಾಥಮಿಕ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದು ತುಮಕೂರಿಗೆ ತೆರಳಿದರು. ಯಾರೋ ಕಿಡಿಗೇಡಿಗಳು ಹೂವಿನ ರಾಶಿಯಲ್ಲಿ ಕಲ್ಲು ಬೆರೆಸಿರಬಹುದು ಎಂದು ಪರಮೇಶ್ವರ್ ಅಭಿಮಾನಿಗಳು ಶಂಕಿಸಿದ್ದು, 2ನೇ ಬಾರಿಗೆ ಕಲ್ಲಿನಿಂದ ಪೆಟ್ಟು ನೀಡಲು ಸಂಚು ರೂಪಿಸಿರುವುದು ಈ ಘಟನೆಯಿಂದ ಬೆಳಕಿಗೆ ಬಂದಿದೆ ಎನ್ನಲಾಗಿದೆ.ನಾಮಪತ್ರ ಸಲ್ಲಿಸುವ ದಿನದಂದು ಸಹ ಕಿಡಿಗೇಡಿಗಳು ಕಲ್ಲು ಎಸೆದಿದ್ದರಿಂದ ಆ…

Read More

ಕೊರಟಗೆರೆ: ಮತಯಾಚನೆ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ಕಲ್ಲೇಟು ಬಿದ್ದಿದ್ದು, ತಲೆಗೆ ತೀವ್ರವಾದ ಏಟು ಬಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೈರೇನಹಳ್ಳಿ ಕ್ರಾಸ್ ಬಳಿ ಪ್ರಚಾರದ ವೇಳೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಅವರ ತಲೆಗೆ ತೀವ್ರವಾದ ಏಟು ತಗಲಿದೆ. ಪರಮೇಶ್ವರ್ ಅವರನ್ನು ತಕ್ಷಣವೇ ಅಕ್ಕಿರಾಂಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಕಡೆಗೆ ಕರೆದೊಯ್ಯಲಾಗಿದೆ. ಈ ಹಿಂದೆ ನಾಮಪತ್ರ ಸಲ್ಲಿಕೆ ವೇಳೆಯಲ್ಲೂ ಪರಮೇಶ್ವರ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಆ ವೇಳೆ ಮಹಿಳಾ ಪೊಲೀಸ್ ಪೇದೆಗೆ ಆ ಕಲ್ಲು ತಗಲಿತ್ತು. ಇದೀಗ ಮತ್ತೊಮ್ಮೆ ಇಂತಹದ್ದೇ ಘಟನೆ ನಡೆದಿದ್ದು, ಪರಮೇಶ್ವರ್ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕರಾವಳಿ ಜಿಲ್ಲೆಗೆ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಂದು ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣಾ ಕಣ ರಂಗೇರಿದೆ. ಬಿರುಸಿನಿಂದ ಚುನಾವಣಾ ತಯಾರಿಗಳು ತುಂಬಾ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆಗೆ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೇ.3ರಂದು ಮುಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಬ ರುತ್ತಿದ್ದಾರೆ. ಬಹುತೇಕ ಜನರು ಅವರ ಆಗಮನಕ್ಕೆ ಕಾಯುತ್ತಿದ್ದಾರೆ ಮತ್ತು ಮೇ.6ರಂದು ದ.ಕ ಜಿಲ್ಲೆಗೆ ಯೋಗಿ ಆದಿತ್ಯನಾಥ್ ಬರುತ್ತಾರೆ ಆದರೆ ಯೋಗಿಯವರ ಕಾರ್ಯಕ್ರಮದ ಜಾಗ ನಿಗದಿಯಾಗಿಲ್ಲ. ಉಡುಪಿ ಮತ್ತು‌ ದ.ಕ ಜಿಲ್ಲೆ ಯನ್ನು ಕೇಂದ್ರೀಕರಿಸಿ ಸಮಾವೇಶಗಳು ನಡೆಯಲಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಲಕ್ನೋ : ಕಳೆದ ವಾರ ಆಚರಿಸಲಾದ ಈದ್‌ ನಲ್ಲಿ ಅನುಮತಿಯಿಲ್ಲದೆ ಕಾನ್ಪುರದ ಈದ್ಗಾದ ಹೊರಗೆ ರಸ್ತೆಯಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು 2,000 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮಾಜ್ ಮಾಡುತ್ತಿರುವವ ವಿಡಿಯೋವನ್ನು ಪೊಲೀಸರು ಚಿತ್ರೀಕರಿಸಿದ್ದುಮ ಅದರ ಮಾಹಿತಿ ಆಧಾರದಲ್ಲಿ ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಏಪ್ರಿಲ್ 26 ರ ಬುಧವಾರ ಬಜಾರಿಯಾ, ಬಾಬು ಪೂರ್ವಾ ಮತ್ತು ಜಜ್ಮೌ ಎಂಬ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕವಾಗಿ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮೊಹಮ್ಮದ್ ಸುಲೇಮಾನ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಧರ್ಮದ ಆಧಾರದ ಮೇಲೆ ವ್ಯಕ್ತಿಗಳನ್ನು ಗುರಿಯಾಗಿಸಲಾಗುತ್ತಿದೆ. ಅನೇಕರು ಈದ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಆವರಣದಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಕೆಲವರು ಮಾತ್ರ ಹೊರಗಡೆಯೇ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಲಂಡನ್: ಕೃಷಿಯಲ್ಲಿ ರೋಗ ನಿರೋಧಕ ಔಷಧ ಬಳಕೆ ಹೆಚ್ಚಾದಂತೆ ಅದು ಮಾನವನ ಆರೋಗ್ಯಕ್ಕೆ ತುಂಬಾ ಅಪಾಯವನ್ನುಂಟು ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಕೃಷಿ ಬೆಳೆಗೆ ತಗಲುವ ರೋಗ ತಡೆಗಟ್ಟಲು ಹಾಗೂ ಬೆಳೆಯ ಸಮೃದ್ಧಿಗಾಗಿ ರೋಗ ನಿರೋಧಕ ಔಷಧ ಬಳಕೆ ಹೆಚ್ಚಾದಂತೆ, ಮನುಷ್ಯರ ಆರೋಗ್ಯ ಕಾಪಾಡುವಲ್ಲಿ ರೋಗ ನಿರೋಧಕ ಪ್ರತಿರಕ್ಷಣಾ ವ್ಯವಸ್ಥೆಗೆ ನಿರೋಧಕ ಬ್ಯಾಕ್ಟೀರಿಯಾಗಳನ್ನು ಹುಟ್ಟು ಹಾಕಬಹುದು ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಜೀವಶಾಸ್ತ್ರ ವಿಭಾಗದ ಪ್ರಮುಖ ಸಂಶೋಧಕ ಪ್ರೊಫೆಸರ್ ಕ್ರೇಗ್ ಮ್ಯಾಕ್ಲೀನ್ ಹೇಳಿದರು. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ತಂಡವು ಬ್ಯಾಕ್ಟೀರಿಯಂ ದಿಂದ ಉತ್ಪತ್ತಿಯಾಗುವ ಆಂಟಿಮೈಕ್ರೊಬಿಯಲ್ ಪೆಪ್ಟೈಡ್ (AMP) ಕೋಲಿಸ್ಟಿನ್ ಅನ್ನು ಬಳಸಿತ್ತು. ಎಎಂಪಿಗಳು ಪ್ರಾಣಿಗಳನ್ನು ಒಳಗೊಂಡಂತೆ ಹೆಚ್ಚಿನ ಜೀವಿಗಳಿಂದ ನೈಸರ್ಗಿಕವಾಗಿ ಉತ್ಪತ್ತಿಯಾಗುವ ಸಂಯುಕ್ತಗಳಾಗಿವೆ ಮತ್ತು ಬ್ಯಾಕ್ಟೀರಿಯಾದ ಸೋಂಕಿನ ವಿರುದ್ಧ ರಕ್ಷಣೆಯ ನಮ್ಮ ಮೊದಲ ಸಾಲಿನ ಸಹಜ ಪ್ರತಿರಕ್ಷೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿವೆ. ಪ್ರತಿಜೀವಕ ನಿರೋಧಕತೆಯು ಕಳೆದ ದಶಕದಿಂದ ನಿರಂತರವಾಗಿ ಹೆಚ್ಚುತ್ತಿರುವ ಮತ್ತು ವೇಗವಾಗಿ ಹರಡುತ್ತಿರುವ ಒಂದು ದೊಡ್ಡ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಪ್ರಮುಖವಾದ ಆಧಾರವಾಗಿರುವ…

Read More