Subscribe to Updates
Get the latest creative news from FooBar about art, design and business.
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
- ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
- ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
Author: admin
ಕೊಯಮತ್ತೂರು ಜಿಲ್ಲೆಯ ಆನ್ಯುರ್ ಜಿಲ್ಲೆಯಲ್ಲಿ 6,000 ಕ್ಕೂ ಹೆಚ್ಚು ಡೈರಿ ಹಸುಗಳಿವೆ. ಪ್ರಸ್ತುತ, ಹಸುಗಳ ದೇಹದಲ್ಲಿ ಗುಳ್ಳೆಗಳು ಮತ್ತು ಗಡ್ಡೆಗಳು ಉಂಟಾಗುತ್ತವೆ, ಹಾಲು ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೆಲವು ಹಸುಗಳು ಕುಸಿಯುತ್ತವೆ. ಇದರಿಂದ ಆದಾಯ ಹಾಗೂ ಹಸುಗಳಿಗೆ ನಷ್ಟವಾಗುವ ಅಪಾಯವಿರುವುದರಿಂದ ವಿಶೇಷ ಜಾನುವಾರು ಶಿಬಿರ ನಡೆಸಿ, ದಡಾರ ಲಸಿಕೆ ಹಾಕಿ, ಸತ್ತ ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರ ಪ್ರದೇಶದ ನವಕವಾನಾ ಪ್ರದೇಶದಲ್ಲಿ ಹಿಮಾಂಶು ಎಂಬ ಯುವಕ ಫೋನ್‌ನಲ್ಲಿ ಮಾತನಾಡುತ್ತಿದ್ದ. ಆಗ ಅವರ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಈ ಫೋನನ್ನು 4 ತಿಂಗಳ ಹಿಂದೆ ರೂ.16,000 ನೀಡಿ ಖರೀದಿಸಿರುವುದಾಗಿ ತಿಳಿಸಿದರು. ಅದೃಷ್ಟವಶಾತ್ ಅವರು ಸ್ಫೋಟಗೊಳ್ಳುವ ಸಮಯಕ್ಕೆ ಫೋನ್ ಅನ್ನು ಕೈಯಿಂದ ಹೊರಹಾಕಿದ್ದರಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ದೂರು ದಾಖಲಾಗಿದೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಜನವರಿ 20, 2023 ರವರೆಗೆ ಇದ್ದು, ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಯ ಪೋಷಕರ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಮೀರಿರಬಾರದು. ಇಲಾಖೆಯ ವೆಬ್ ಸೈಟ್ https://shp.karnataka.gov.in ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಇಲಾಖೆಯ ವೆಬ್ ಸೈಟ್ https://shp.karnataka.gov.in ನಲ್ಲಿ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ…
ಧಾರವಾಡ : ತಾಯಿ-ಮಗಳ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಾಯಿ ಮಕ್ತುಮ್ಬಿ (50) ಮಗಳು ಶಹನಾಜ್ (22) ಅವರ ಶವ ಎನ್ನುವುದು ಪತ್ತೆಯಾಗಿದೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಶವಗಳು ತೇಲುತ್ತಿರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಶವಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಜನವರಿ 15 ರಂದು ಬೃಹತ್ ಯೋಗಥಾನ್-2023 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಯೋಗಥಾನ್-2023 ಪೂರ್ವಸಿದ್ಧತೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜ.6) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಮುಂಚೆ 80 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿತ್ತು. ಇದೀಗ ಈ ಸಂಖ್ಯೆಯನ್ನು 20 ಸಾವಿರಕ್ಕೆ ಮಿತಿಗೊಳಿಸಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.ಜ.15 ರಂದು ಬೆಳಿಗ್ಗೆ 6 ಗಂಟೆಯಿಂದ ಯೋಗಪಟುಗಳ ನೋಂದಣಿ ಯೊಂದಿಗೆ ಕಾರ್ಯಕ್ರಮ ಅರಂಭಗೊಳ್ಳಲಿದೆ. ಯೋಗಥಾನ್ ಏರ್ಪಡಿಸಲು ಸುವರ್ಣ ವಿಧಾನಸೌಧದ ಆವರಣದಲ್ಲಿ ವೇದಿಕೆ, ಮ್ಯಾಟಿಂಗ್, ಧ್ವನಿ ವ್ಯವಸ್ಥೆ ಮತ್ತಿತರ ಅಗತ್ಯ ವ್ಯವಸ್ಥೆ ಕುರಿತು ಚರ್ಚೆ ನಡೆಸಿದ ಅವರು, ಲಭ್ಯವಿರುವ ಅನುದಾನದಲ್ಲಿ ಅತ್ಯುತ್ತಮ ರೀತಿಯಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದರು. ಯೋಗಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸುವ 20 ಸಾವಿರ ಯೋಗಪಟುಗಳಿಗೆ ಪ್ರತಿ 50 ಜನಕ್ಕೆ ಒಬ್ಬರಂತೆ ಒಟ್ಟು 400 ಸ್ಟಿವರ್ಡ್ ಗಳನ್ನು, ಎನ್.ಎಸ್.ಎಸ್., ಎನ್.ಸಿ.ಸಿ. ಸ್ಕೌಟ್ಸ್-ಗೈಡ್ಸ್,…
ಬೆಳಗಾವಿ,: ಅಂತರಾಷ್ಟ್ರೀಯ ಮಹಿಳಾ ದಿನಚರಣೆಯಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ ಹಾಗೂ ಇತರೆ ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಶಿಕ್ಷಣ, ಕ್ರೀಡೆ, ಸಾಹಿತ್ಯ ಹಾಗೂ ಕಲಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ ಮಹಿಳೆಯರಿಗಾಗಿ ಕಿತ್ತೂರುರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಸದರಿ ಪ್ರಶಸ್ತಿಗಾಗಿ ಅರ್ಹ ಸ್ವಯಂ ಸೇವಾ ಸಂಸ್ಥೆ ಹಾಗೂ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಲಾಗಿದೆ. ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಾಜಿ ನಗರ ಬೆಳಗಾವಿ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10, 2023ರರೊಳಗೆ ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ಗ್ರಾಮೀಣ ಇಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0831- 2476209 ಗೆ ಸಂಪರ್ಕಿಸಬಹುದು. ನಿಗದಿತ ಅವಧಿಯ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ…
ಬೆಂಗಳೂರು : ರಾಜ್ಯದಲ್ಲಿ ನಕಲಿ ನೋಟು ಹಾವಳಿ ಆರಂಭವಾಗಿದೆ. ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪೊಲೀಸರು 1.30 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದಲ್ಲದೇ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳು ನಕಲಿ ನೋಟುಗಳನ್ನು ಕೊಟ್ಟು ಅಸಲಿ ನೋಟುಗಳನ್ನು ಪಡೆಯೋದಕ್ಕೆ ಪ್ರಮುಖ ಆರೋಪಿ ಕಣ್ಣಿ ಎಂಬಾತನ ಸೂಚನೆ ಮೇರೆಗೆ ಪಿಚ್ಚು ಮುತ್ತು ಮತ್ತು ತಂಡ ಬೆಂಗಳೂರಿಗೆ ಬಂದಿದ್ದರು. ಖಚಿತ ಮಾಹಿತಿ ಮೆರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ನಡುರಸ್ತೆಯಲ್ಲಿ ಯುವಕನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಪಡತರವಾಡಿ ಗ್ರಾಮ ಹೊರವಲಯದಲ್ಲಿ ನಡೆದಿದೆ. ಕೋಹಳ್ಳಿ ಗ್ರಾಮದ ಕುಮಾರ ಮರಗಾಲೆ (48) ಕೊಲೆಯಾದ ದುರ್ದೈವಿ. ಪಡತರವಾಡಿ – ಕನಾಳ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಸುಬ್ರಹ್ಮಣ್ಯ: ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಫೀದ್, ಥಳಿತಕ್ಕೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅಫೀದ್ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಅಫೀದ್ ರನ್ನು ತಂಡವೊಂದು ಬಲವಂತವಾಗಿ ಕರೆದೊಯ್ದು, ಅರೆಬೆತ್ತಲೆಗೊಳಿಸಿ ತೀವ್ರವಾಗಿ ಥಳಿಸಿದೆ. ಹಫೀದ್ ನೀಡಿರುವ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ ಮತ್ತು ಹುಟ್ಟುವುದೂ ಇಲ್ಲ ಎಂದರು. ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೂ ಸಹ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ. ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕಂದರೇ ಇದುವರೆಗೆ ನಡೆದ ಬಂದ ದಾರಿಯ ಸಿಂಹಾವಲೋಕನ ಮಾಡಬೇಕಾಗುತ್ತದೆ. ಆಗ ಅದು ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದು ಅವರು ಹೇಳಿದರು. https://twitter.com/BSBommai/status/1611318093338542085?s=20&t=r-rYC7i2VuqsyYkgU8oKYA ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…