Author: admin

ಬೆಂಗಳೂರು: 2022-23ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಮಾಹಿತಿಗಾಗಿ ಕಾಲೇಜು ಶಿಕ್ಷಣ ಇಲಾಖೆಯ https://dce.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 16 ರಿಂದ 25ರ ಒಳಗೆ ಮೆರಿಟ್ ಪಟ್ಟಿ, ಸ್ಥಳ, ಆಯ್ಕೆ ಕೌನ್ಸಿಲಿಂಗ್ ನಡೆಸಬೇಕು. ಫೆಬ್ರವರಿ 1 ರೊಳಗೆ ಆಯ್ಕೆಯಾದ ಅತಿಥಿ ಉಪನ್ಯಾಸಕರು ಕಾಲೇಜುಗಳಿಗೆ ಪ್ರವೇಶ ಪಡೆಯಬೇಕೆಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಕಲಬುರಗಿ: ತೀವ್ರ ಸಂಚಲನ ಮೂಡಿಸಿದ್ದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಮುಖ ಆರೋಪಿ ಕಿಂಗ್​ಪಿನ್ ದಿವ್ಯಾ ಹಾಗರಗಿ, ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್​ ಜಡ್ಜ್​ ಜಾಮೀನು ನೀಡಿದ್ದಾರೆ. ಪಿಎಸ್​ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. ಎಂಟು ಅಭ್ಯರ್ಥಿಗಳು,ಮೂವರು ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ಮಂಜೂರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ಲೋಕಾಯುಕ್ತ ಅಧಿಕಾರಿಯಾದ ಡಿಎಸ್‍ಪಿ ಜೆ ರಘು ಜನವರಿ 07, 2023 ರಂದು ಜಿಲ್ಲೆಯ ರಾಮದುರ್ಗ ತಾಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಸದರಿ ಸರ್ಕಾರಿ ಕೆಲಸ ನಿರ್ವಹಿಸಲು ಹಣ/ವಸ್ತು/ಲಂಚ ಬೇಡಿಕೆ ಇಟ್ಟಲ್ಲಿ ಸಾರ್ವಜನಿಕರು ತಮ್ಮ ದೂರು, ಅಹವಾಲಗಳನ್ನು 11 ಗಂಟೆಯಿಂದ 2 ಗಂಟೆಯವರೆಗೆ ಪ್ರವಾಸಿ ಮಂದಿರದಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೃಷ್ಣರಾಜಪೇಟೆ: ಕೆಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಕೃಷ್ಣರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೆಎ-09 F-5282 ನಂಬರ್‌ ನ ಕೆ ಎಸ್ ಆರ್ ಟಿ ಸಿ ಬಸ್ ಗದಗದಿಂದ-ಮೈಸೂರಿನ ಕಡೆಗೆ ಬರುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಘಟನೆಯ ವೇಳೆ  ಬಸ್ಸಿನಲ್ಲಿ ಸುಮಾರು 32 ಪ್ರಯಾಣಿಕರಿದ್ದರು ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಕೃಷ್ಣರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ  ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಶ್ರೀನಿವಾಸ್, ಮಂಡ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಭರ್ಜರಿ ತಯಾರಿ ನಡೆಸಿದೆ. ಸದ್ಯ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಟ್ವಿಟ್ ಮಾಡಿ ಮಾಹಿತಿ  ತಿಳಿಸಿರುವ ರಾಜ್ಯ ಚುನಾವಣಾ ಆಯೋಗವು, 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು http://nvsp.in ಜಾಲತಾಣಕ್ಕೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳಲು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡುಕೋಣ ದಾಳಿಗೆ ಮತ್ತೋರ್ವ ಯುವಕ ಗಾಯಗೊಂಡಿದ್ದು, ಚಿಕ್ಕಮಗಳೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ಕಾಡುಕೋಣ ದಾಳಿ ನಡೆದಿದೆ. ಮನೋಜ್ ಕಾಡುಕೋಣ ದಾಳಿಯಿಂದ ಗಾಯಗೊಂಡ ಯುವಕನಾಗಿದ್ದು, ಇವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೋಟದಲ್ಲಿದ್ದಾಗ ಏಕಾಏಕಿ ಮನೋಜ್ ಮೇಲೆ ದಾಳಿ ಮಾಡಿದ ಕಾಡುಕೋಣ ಗಂಭೀರವಾಗಿ ಗಾಯಗೊಳಿಸಿದೆ.  ಕಳೆದ 15 ದಿನದಲ್ಲಿ ಜಿಲ್ಲೆಯಲ್ಲಿ ಇದು ಮೂರನೇ  ಬಾರಿಗೆ ಕಾಡುಕೋಣ ದಾಳಿ ನಡೆಸುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಕಾಡುಕೋಣ ದಾಳಿಗೆ  ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಂಗಳೂರು: ಕರಾವಳಿಯ ಜನ ರಾಜಕೀಯವಾಗಿ ಪ್ರಬುದ್ಧರು. ಇಲ್ಲಿನ ಜನ ನೆಮ್ಮದಿಯಾಗಿ ಇರಬೇಕು ಎನ್ನುವುದಾರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ತೀರ್ಮಾನವನ್ನು ಮಾಡಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಮಂಗಳೂರಿನ ಹರೇಕಳದಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 8 ಸ್ಥಾನದಲ್ಲಿ 7 ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಿರಿ, ಉಡುಪಿಯಲ್ಲಿ 5 ರಲ್ಲಿ 3 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಿರಿ. ಇದು ಮತ್ತೆ ಮರುಕಳಿಸಬೇಕು. ಇಂದು ಎಲ್ಲಾ ಜಾತಿ, ಧರ್ಮಗಳ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿಯಿರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಎಲ್ಲ ಜನರಿಗೂ ನ್ಯಾಯವನ್ನು, ರಕ್ಷಣೆಯನ್ನು ನೀಡುವುದು ಕಾಂಗ್ರೆಸ್ ಮಾತ್ರ. ಬಿಜೆಪಿಯವರು ಚುನಾವಣಾ ಸಂದರ್ಭದಲ್ಲಿ ಅನೇಕ ಭರವಸೆಗಳನ್ನು ನೀಡಿ, ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಭರವಸೆಗಳನ್ನು ಮರೆತು ಸಮಾಜ ಒಡೆಯುವ ಕೆಲಸ ಮಾಡುತ್ತಾರೆ ಎಂದ ಹೇಳಿದರು. ನಮ್ಮದು ಬಹುತ್ವದ ದೇಶ. ಇಲ್ಲಿ ಅನೇಕ ಜಾತಿ, ಧರ್ಮ, ಭಾಷೆ, ಸಂಸ್ಕೃತಿಯ ಜನರಿದ್ದಾರೆ.…

Read More

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿ ವತಿಯಿಂದ 2022-23ನೇ ಸಾಲಿಗೆ RKVY ಯೋಜನೆಯಡಿಯಲ್ಲಿ ಪಶುಭಾಗ್ಯ ಆಧಾರಿತ ಕಾರ್ಯಕ್ರಮವಾದ “ಮುಖ್ಯ ಮಂತ್ರಿಗಳ ಅಮೃತ ಯೋಜನೆ” ಅನುಷ್ಠಾನ ಗೊಳಿಸಲು ಆದ್ಯತೆಯ ಮೇರೆಗೆ ಫಲಾನುಭವಿಗಳನ್ನಾಗಿ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ 01 ಮಿಶ್ರ ತಳಿ ಹಾಲು ಕರೆಯುವ ಹಸು/01 ಸುದಾರಿತ ಎಮ್ಮೆ ವಿತರಿಸಲಾಗುವುದು. ಘಟಕದ ಮೊತ್ತ ರೂ. 62,000/- ಆಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33% ಅಂದರೆ ರೂ. 20,665/- ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25% ಅಂದರೆ ರೂ. 15,500/- ಸಹಾಯಧನ ಒದಗಿಸಲಾಗುವುದು. ಸಹಾಯಧನವನ್ನು ಹೊರತು ಪಡಿಸಿದಂತೆ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಗೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯುವುದು. ಸದರಿ ಕಾರ್ಯಕ್ರಮದಲ್ಲಿ ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ (ಶೇ.33.3), ಅಲ್ಪಸಂಖ್ಯಾತರಿಗೆ (ಶೇ.15), ವಿಕಲ ಚೇತನರಿಗೆ(ಶೇ.3)ರಷ್ಟು ಆಧ್ಯತೆ ನೀಡಲಾಗುವುದು. ಅರ್ಹ ಫಲಾನುಭವಿಗಳು ಭರ್ತಿಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ…

Read More

ಹಾವೇರಿ: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡಿಗರು ಮತ್ತು ಸಾಹಿತ್ಯಾಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ, ಭಾಷೆ, ನಾಡು-ನುಡಿಯ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ ವೇಳೆ ಮಾತನಾಡಿದ ಅವರು, ನಾನು ನುಡಿಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ಹಾವೇರಿಗೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಜಿಲ್ಲಾಡಳಿತ ವತಿಯಿಂದ ಅದ್ದೂರಿ ಸ್ವಾಗತ ನೀಡಲಾಗಿದೆ. ಸಮ್ಮೇಳನ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆಯಲಿ ಎಂದು ನಿಗದಿತ ಸಮಯಕ್ಕೆ ಧ್ವಜಾರೋಹಣ ಮಾಡಿದ್ದೇವೆ ಎಂದರು. ಕನ್ನಡ ನಾಡು ನುಡಿ ಭಾಷೆ ಬಗ್ಗೆ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಉತ್ತಮ ಚರ್ಚೆ ನಡೆಯಲಿದೆ. ಸಮ್ಮೇಳನದಲ್ಲಿ ಯಾವುದೇ ಅಭಾಸ, ಕುಂದುಕೊರತೆಯಾಗದಂತೆ ಸರ್ಕಾರ ಮತ್ತು ಜಿಲ್ಲಾಡಳಿತ ಎಚ್ಚರಿಕೆಯಿಂದ ಕೆಲಸ ಮಾಡಿದೆ. ಕನ್ನಡವೇ ಸತ್ಯ-ಕನ್ನಡವೇ ನಿತ್ಯ ಎಂಬ ಘೋಷಣೆಯನ್ನು ಜಾರಿಗೆ ತರಲು…

Read More

ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಬೆಳಗ್ಗೆ ಆರಂಭಗೊಂಡಿದೆ. ಇದರ ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು. ಇಂದಿನಿಂದ ಜನವರಿ 8 ವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣ ಜಾಗದಲ್ಲಿ ಕನಕ–ಶರೀಫ–ಸರ್ವಜ್ಞ ವೇದಿಕೆ ಮುಂಭಾಗ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ನೆರವೇರಿತು. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ ಹೀರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ವಿವಿಧ ಕಲಾತಂಡಗಳು ಸಾಹಿತ್ಯ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರುಗು ನೀಡಿದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More