Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಮೈಸೂರು: ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ತಮ್ಮ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ ಹಾಗೂ ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್…
ನವದೆಹಲಿ: ಕಳೆದ ನಾಲ್ಕು ದಿನಗಳಿಂದ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಧರಣಿ ಕುಳಿತಿದ್ದು, ಇಂದು ಐದನೇ ದಿನವೂ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮತ್ತು ಅದರ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಕುಸ್ತಿಪಟುಗಳು ಬುಧವಾರ ತಡರಾತ್ರಿ ಜಂತರ್ ಮಂತರ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿ ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು. ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಸೇರಿದಂತೆ ಧರಣಿಯಲ್ಲಿ ಕುಳಿತಿದ್ದ ಕುಸ್ತಿಪಟುಗಳು ಛತ್ತೀಸ್‌ಗಢದ ದಾಂತೇವಾಡದಲ್ಲಿ ಹುತಾತ್ಮರಾದ ಯೋಧರಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ, ಕುಸ್ತಿಪಟುಗಳು ತಮ್ಮ ಮಾತನ್ನು ಪ್ರಧಾನಿ ಕೂಡ ಆಲಿಸಬೇಕು ಎಂದು ಕೇಳಿಕೊಂಡರು. ಕುಸ್ತಿಪಟುಗಳು ತಮ್ಮ ಕುಂದು ಕೊರತೆಗಳನ್ನು ಪ್ರಧಾನಿ ಬಳಿ ಹೇಳಿಕೊಳ್ಳಲು ಸಮಯಾವಕಾಶ ನೀಡುವಂತೆ ಮನವಿ ಮಾಡಿದರು. ಕುಸ್ತಿ ಫೆಡರೇಶನ್ ಅಧ್ಯಕ್ಷ ಭೂಷಣ್ ಶರಣ್ ಸಿಂಗ್ ವಿರುದ್ಧ ತನಿಖೆಗೆ…
ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ಸಾರ್ವಜನಿಕ ದೊಡ್ಡ ಆಸ್ಪತ್ರೆಯ ಕನಸು, ಹೈಟೇಕ್ ಸರಕಾರಿ ಬಸ್ ಡಿಪೋ, ಗ್ರಾಮೀಣ ಭಾಗಕ್ಕೆ ಸಾರಿಗೆ ಸಂಪರ್ಕ.. ನಿರುದ್ಯೋಗ ನಿವಾರಣೆಗೆ ಫ್ಯಾಕ್ಟರಿಗಳ ನಿರ್ಮಾಣ.. ಬೈರಗೊಂಡ್ಲು ಬಫರ್ ಡ್ಯಾಂ ನಿರ್ಮಾಣದ ನೀರಾವರಿ ಯೋಜನೆ.. ಪ್ರವಾಸಿ ತಾಣಗಳ ಅಭಿವೃದ್ದಿಗೆ ಆಧ್ಯತೆ.. ಹೈಟೇಕ್ ಗ್ರಂಥಾಲಯ ಸ್ಥಾಪನೆಯ ಕನಸು ಇನ್ನೂ ಕೊರಟಗೆರೆ ಕ್ಷೇತ್ರದಲ್ಲಿ ನನಸಾಗಿಯೇ ಉಳಿದಿದೆ.. ಸುವರ್ಣಮುಖಿ, ಜಯಮಂಗಳಿ ಮತ್ತು ಗರುಡಾಚಲ ಎಂಬ 3ನದಿಗಳು ಹಾದುಹೋಗಲಿದೆ. ಸಸ್ಯಸಂಜೀವಿನಿ ಕ್ಷೇತ್ರ ಸಿದ್ದರಬೆಟ್ಟ, ಏಳುಸುತ್ತಿನ ಕೋಟೆ ಚನ್ನರಾಯನ ದುರ್ಗ ಮತ್ತು ಗೊರವನಹಳ್ಳಿ ಮಹಾಲಕ್ಷ್ಮೀ ಸನ್ನಿಧಾನ ಇರುವಂತಹ ವಿಶೇಷವಾದ ಪ್ರಕೃತಿ ಮತ್ತು ಪ್ರವಾಸಿ ತಾಣ ನಮ್ಮ ಕೊರಟಗೆರೆ ಕ್ಷೇತ್ರ. ರಾಜಕೀಯ ಕೈಮೇಲಾಟಕ್ಕೆ ಸಿಮೀತವಾದ ಕೊರಟಗೆರೆ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲತೆಯಾಗಿ ಯುವಕರು ಉದ್ಯೋಗಕ್ಕಾಗಿ ಹೊರರಾಜ್ಯಕ್ಕೆ ತೆರಳುವ ದುಸ್ಥಿತಿ ಬಂದಿದೆ. ಉದ್ಯೋಗ ಇಲ್ಲದೇ ಹೊರರಾಜ್ಯಕ್ಕೆ ವಲಸೆ: ಬಜ್ಜನಹಳ್ಳಿ ಸಮೀಪದ ಕಣ್ವಾ ಗಾರ್ಮೆಂಟ್ಸ್ ಗೆ 2020ರಲ್ಲಿ ಬೀಗಬಿದ್ದ ಪರಿಣಾಮ 4 ಸಾವಿರ ಉದ್ಯೋಗಕ್ಕೆ ಕತ್ತರಿಬಿದ್ದಿದೆ. ಕೊರಟಗೆರೆ ಕ್ಷೇತ್ರದಿಂದ…
ಬೆಳಗಾವಿ: ಚುನಾವಣೆಯಲ್ಲಿ ಎಲ್ಲ ಅಭ್ಯರ್ಥಿಗಳು ನೀತಿ ಸಂಹಿತೆ ಪಾಲನೆ ಮಾಡಿ ಪ್ರಚಾರ ಮಾಡಬೇಕು. ಆದರೆ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ ಎಂದು ಬೆಳಗಾವಿ ಆಪ್ ಜಿಲ್ಲಾಧ್ಯಕ್ಷ ಶಂಕರ ಹೆಗಡೆ ಒತ್ತಾಯಿಸಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆಯಾದ ಮೇಲೆ ಎಲ್ಲ ಪಕ್ಷದ ಅಭ್ಯರ್ಥಿಗಳು ನೀತಿ ಸಂಹಿತೆ ಪಾಲನೆ ಮಾಡಿಕೊಂಡು ಪ್ರಚಾರ ಮಾಡಬೇಕು. ಆದರೆ ಬಿಜೆಪಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಬಸವೇಶ್ವರ ಜಯಂತಿ, ಜೈನ ಬಸ್ತಿ ಸೇರಿದಂತೆ ಸುಮಾರು ಕಡೆಗಳಲ್ಲಿ ಪಕ್ಷದ ಶಾಲು ಹಾಕಿಕೊಂಡು ಪ್ರಚಾರ ನಡೆಸಿದ್ದಾರೆ. ಎಲ್ಲ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದರು. ಬೆಳಗಾವಿ ಉತ್ತರ ಮತಕ್ಷೇತ್ರದ ಆಪ್ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಮಾತನಾಡಿ, ಜಿಲ್ಲಾ ಚುನಾವಣಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯ ವೀಕ್ಷಕರು ಏನು ಮಾಡುತ್ತಿದ್ದಾರೆ. ಉಷಾತಾಯಿ ದೇವಸ್ಥಾನದಲ್ಲಿ…
ಉಗಾರ/ ಹಾರೂಗೇರಿ: ಬೆಲೆ ಏರಿಕೆ,ಭ್ರಷ್ಟಾಚಾರಗಳಿಂದ ತತ್ತರಿಸಿ ಹೋಗಿರುವ ಜನರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇ ಬೇಕೆಂದು ತೀರ್ಮಾನಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಂಗಳವಾರ ಕಾಗವಾಡ ಕ್ಷೇತ್ರದ ಉಗಾರದಲ್ಲಿ ರಾಜು ಕಾಗೆಯವರ ಪರವಾಗಿ ಹಾಗೂ ಕುಡಚಿ ಕ್ಷೇತ್ರದ ಹಾರೂಗೇರಿಯಲ್ಲಿ ಮಹೇಂದ್ರ ತಮ್ಮಣ್ಣವರ್ ಪರವಾಗಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಅದಕ್ಕೆ ಇಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಜನರೇ ಸಾಕ್ಷಿ. ನನ್ನ ಮತ ಕ್ಷೇತ್ರವಾಗಿರುವ ಬೆಳಗಾವಿ ಗ್ರಾಮೀಣದಲ್ಲೂ ಜನರು ನಾನು ಪ್ರಚಾರಕ್ಕೆ ಹೋದಲ್ಲೆಲ್ಲ ಬರಮಾಡಿಕೊಳ್ಳುವ ರೀತಿ ನೋಡಿದರೆ ಕಾಂಗ್ರೆಸ್ ಖಂಡಿತ ಅತ್ಯಧಿಕ ಬಹುಮತದಿಂದ ಈ ಬಾರಿ ಸರಕಾರ ರಚಿಸಲಿದೆ ಎನ್ನುವುದು ಗೊತ್ತಾಗುತ್ತದೆ. ಬೆಲೆ ಏರಿಕೆಯಿಂದಾಗಿ ಜೀವನ ನಡೆಸಲಾಗದೆ ತತ್ತರಿಸಿ ಹೋಗಿರುವ ಜನರು ಕಾಂಗ್ರೆಸ್ ಪಕ್ಷದ ನಾಲ್ಕು ಗ್ಯಾರಂಟಿಗಳನ್ನು ಖಾತರದಿಂದ ಕಾಯುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ…
ತಮಿಳುನಾಡಿನ ಸರ್ಕಾರಿ ಕಾಲೇಜಿನಲ್ಲಿ 9 ಹಿರಿಯ ವಿದ್ಯಾರ್ಥಿಗಳ ಅಮಾನತು. ಪ್ರಥಮ ವರ್ಷದ ವಿದ್ಯಾರ್ಥಿಗಳು ರಾಗಿಂಗ್ ಮಾಡಿದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ತಿರುವಣ್ಣಾಮಲೈ ಅರಿಜರ್ ಅಣ್ಣಾ ಸರ್ಕಾರಿ ಕಲಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ತರಗತಿಗಳಿಗೆ ಹಾಜರಾಗದಂತೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ರಾಗಿಂಗ್ ಮಾಡಿದ ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳನ್ನು ಚಾಟಿಯಿಂದ ಹೊಡೆಯುತ್ತಿರುವ ವಿಡಿಯೋಗಳು ಹೊರಬಿದ್ದಿವೆ. ಇದಾದ ಬಳಿಕ ರಾಗಿಂಗ್ ನಡೆಸಿದ ತನಿಖೆಯ ಆಧಾರದ ಮೇಲೆ ಹಿರಿಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಹಾಸ್ಟೆಲ್ ಮತ್ತು ತರಗತಿಗೆ ಪ್ರವೇಶಿಸಲು ಅವರಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…
6 ರಿಂದ 2 ವರ್ಷದ ಮೂವರು ಸಹೋದರಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅವರ ತಾಯಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಮೃತಾ (6), ಜ್ಯೋತಿ (4) ಮತ್ತು ಪ್ರೀತಿ (2) ಮೃತದೇಹಗಳು ಪತ್ತೆಯಾಗಿವೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಬಾವಿಯಲ್ಲಿ ಶವಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾವಿಯಲ್ಲಿ ತಾಯಿಯೂ ಇದ್ದ ರು ಎಂದು ಸ್ಥಳೀಯರು ಹೇಳಿದ್ದು, ಶವ ಪತ್ತೆಯಾಗಿಲ್ಲ. ಮಕ್ಕಳ ತಂದೆ ಜೀವನ್ ಬಾಮ್ನಿಯಾ (32) ಅವರು ಸಂಬಂಧಿಕರ ಮನೆಗೆ ಹೋಗಿ ಹಿಂತಿರುಗಿ ನೋಡಿದಾಗ ಅವರ ಪುತ್ರಿಯರು ಕಾಣೆಯಾಗಿದ್ದಾರೆ. ಬಳಿಕ ಸ್ಥಳೀಯರನ್ನು ಒಟ್ಟುಗೂಡಿಸಿ ಹುಡುಕಾಟ ಆರಂಭಿಸಿದ್ದಾರೆ. ಶೋಧದ ವೇಳೆ ಅವರ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…
2017 ರಲ್ಲಿ ಟೆಹ್ರಾನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇರಾನ್ ನ್ಯಾಯಾಲಯವು US ಗೆ 312 ಮಿಲಿಯನ್ ದಂಡ ವಿಧಿಸಿದೆ. 18 ಜನರ ಸಾವಿಗೆ ಕಾರಣವಾದ ದಾಳಿಯಲ್ಲಿ ಯುಎಸ್ ವಿರುದ್ಧ ಯಾವುದೇ ನೇರ ಪುರಾವೆಗಳು ಕಂಡುಬಂದಿಲ್ಲ. ಯುಎಸ್ ಸರ್ಕಾರ ಮತ್ತು ಮಾಜಿ ಅಧ್ಯಕ್ಷರಾದ ಜಾರ್ಜ್ ಡಬ್ಲ್ಯೂ. ಬುಷ್ ಮತ್ತು ಬರಾಕ್ ಒಬಾಮಾ ಇರಾನ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಟೆಹ್ರಾನ್ ನ್ಯಾಯಾಲಯದ ತೀರ್ಪು ಭಯೋತ್ಪಾದಕರ ದಾಳಿಯಲ್ಲಿ ಸಾವನ್ನಪ್ಪಿದ ಮೂವರ ಕುಟುಂಬ ಸಲ್ಲಿಸಿದ ದೂರನ್ನು ಆಧರಿಸಿದೆ. ಇರಾನ್ ಸುದ್ದಿ ಸಂಸ್ಥೆಯ ಪ್ರಕಾರ, ಭಯೋತ್ಪಾದಕ ಸಂಘಟನೆಯನ್ನು ಸಂಘಟಿಸುವಲ್ಲಿ ಮತ್ತು ಅವರಿಗೆ ಅಗತ್ಯ ಸೂಚನೆಗಳನ್ನು ನೀಡುವಲ್ಲಿ ಯುಎಸ್ ಪಾತ್ರವನ್ನು ಆಧರಿಸಿ ತೀರ್ಪು ನೀಡಲಾಗಿದೆ. ಯುಎಸ್ ಸರ್ಕಾರ, ಮಾಜಿ ಅಧ್ಯಕ್ಷರಾದ ಜಾರ್ಜ್ ಡಬ್ಲ್ಯೂ ಬುಷ್, ಬರಾಕ್ ಒಬಾಮಾ, ಸೆಂಟ್ರಲ್ ಕಮಾಂಡ್ (ಸೆಂಟ್ಕಾಮ್), ಅದರ ಮಾಜಿ ಕಮಾಂಡರ್ ಟಾಮಿ ಫ್ರಾಂಕ್ಸ್, ಕೇಂದ್ರೀಯ ಗುಪ್ತಚರ ಸಂಸ್ಥೆ, ಖಜಾನೆ ಇಲಾಖೆ, ಶಸ್ತ್ರಾಸ್ತ್ರ ತಯಾರಕರಾದ ಲಾಕ್ಹೀಡ್ ಮಾರ್ಟಿನ್ ಮತ್ತು ಅಮೇರಿಕನ್ ಏರ್ಲೈನ್ಸ್ ಗ್ರೂಪ್ ಗೆ ಶಿಕ್ಷೆ ವಿಧಿಸಲಾಗಿದೆ. …
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚುತ್ತಿದ್ದಾರೆನ್ನಲಾದ ಫೋಟೋ ವೈರಲ್ ಆಗಿದೆ. ಅಂಬೇವಾಡಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಅವರ ಸಹೋದರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ ಮನ್ನೋಳ್ಕರ್ ಹಣ ಹಂಚುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗದ ಹಿನ್ನೆಲೆಯಲ್ಲಿ ಹತಾಶರಾಗಿ ಹಣ ಹಂಚುವ ಮೂಲಕ ಕಾರ್ಯಕರ್ತರು ಹಾಗೂ ಮತದಾರರನ್ನು ಸೆಳೆಯುವ ಯತ್ನ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಈ ಕುರಿತು ಚುನಾವಣೆ ಅಧಿಕಾರಿಗಳು ವಿಚಾರಣೆ ನಡೆಸಿದರೆ ಸಂಪೂರ್ಣ ವಿವರ ಬಹಿರಂಗವಾಗಬಹುದು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವಪ್ರಸಾದ್ ಮೌರ್ಯ ಬೆಳಗಾವಿ ನಗರ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಭಾರತೀಯ ಜನತಾ ಪರವಾಗಿ ಮತ ಯಾಚಿಸಿದರು. ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿ ಅಭಯ್ ಪಾಟೀಲ್ ಅವರಿಗೆ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಉತ್ತರ ಪ್ರದೇಶದ ಉಪಮುಖ್ಯಮಂತ್ರಿಗಳಾದ ಕೇಶವಪ್ರಸಾದ್ ಮೌರ್ಯ ಅವರು ಚೆನ್ನಮ್ಮ ವೃತ್ತ ತಲುಪಿದಾಗ ವೀರ ರಾಣಿ ಕಿತ್ತೂರ ಚೆನ್ನಮ್ಮಗೆ ಗೌರವ ವಂದನೆ ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA