Subscribe to Updates
Get the latest creative news from FooBar about art, design and business.
- ಮಧುಗಿರಿ: ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
- ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
- ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
- ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
- ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
Author: admin
ಮಂಗಳೂರು: ನಾನು ಅವರಿಗೆ ನಾಯಿ ಮರಿ ಅಂಥ ಹೇಳಿಲ್ಲ. ಧೈರ್ಯ ಇರಬೇಕು ಅಂದೆ. ನಮಗೆ ರಾಜ್ಯದ ಹಿತ ಮುಖ್ಯ. ಕೇಂದ್ರದ ಜೊತೆ ಧೈರ್ಯವಾಗಿ ಮಾತನಾಡಿ ಅಂದೆ. ಧೈರ್ಯವಾಗಿ ಇರಬೇಕು, ನಾಯಿ ಮರಿ ಥರ ಇರಬಾರದು ಅಂದೆ. ಇದರಲ್ಲಿ ತಪ್ಪು ಏನು ಇದೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಅವರ ಕುರಿತು ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಸಂಬಂಧ ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ನನಗೆ ಟಗರು, ಹುಲಿಯಾ ಅಂತೆಲ್ಲಾ ಕರೀತಾರೆ, ಅದು ಅನ್ ಪಾರ್ಲಿಮೆಂಟರಿ ಅಲ್ಲ ಅಂದರು. ಯಡಿಯೂರಪ್ಪನನ್ನ ರಾಜಾ ಹುಲಿ ಅಂತಾರೆ, ಅದು ಅನ್ ಪಾರ್ಲಿಮೆಂಟರಿಯಾ? ಯಡಿಯೂರಪ್ಪ ಹುಲೀನಾ? ನಾಯಿ ಅನ್ನೋದು ನಂಬಿಕೆ ಇರೋ ಪ್ರಾಣಿ, ಧೈರ್ಯ ಇರಬೇಕು ಅಂದೆ. ನಮ್ಮ ಪಾಲನ್ನ ಕೇಂದ್ರದ ಜೊತೆ ಧೈರ್ಯವಾಗಿ ಕೇಳಿ ಅಂದರು. ಉಳ್ಳಾಲ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಸುದ್ದಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಲೆಮಾರಿ ರಾಜಕಾರಣಿ ಅಲ್ಲ. ಕೋಲಾರ, ಬಾದಾಮಿಯವರು ಕರೀತಾ…
ಪಾವಗಡ : ಕ್ಷೇತ್ರಾದ್ಯಂತ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಜೆಡಿಎಸ್ ಪಕ್ಷದ ಶಾಸಕರ ಕಾಲದಲ್ಲಿ ಆಗಿರುವ ಅಭಿವೃದ್ಧಿ ಮತ್ತು ನಾನು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಕ್ಷೇತ್ರದ ಮತದಾರರು ತುಲನೆ ಮಾಡಿದ ನಂತರ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು. ತಾಲ್ಲೂಕಿನ ನಿಡಗಲ್ ಹೋಬಳಿಯ ಗುಜ್ಜನಡು, ಮಂಗಳವಾಡ ಹಾಗೂ ಅರಸೀಕೆರೆ ಗ್ರಾಮ ಪಂಚಾಯತಿ ಭಾಗದಲ್ಲಿ ಗುರುವಾರ ಜಲಜೀವನ್ ಯೋಜನೆ ಮತ್ತು ಶಾಸಕರ ಪ್ರಾದೇಶಿಕ ಅಭಿವೃದ್ಧಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಅನುದಾನದ ಅಡಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು. ಗುಜ್ಜನಡು ಗ್ರಾಮದಿಂದ ಚಿನ್ನಮ್ಮನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿಗೆ 1.50 ಕೋಟಿ, ಮದ್ದೆ ಗ್ರಾಮದಿಂದ ಸ್ವಾರಮ್ಮನ ದೇವಸ್ಥಾನ ಮಾರ್ಗದ ರಸ್ತೆ ಅಭಿವೃದ್ಧಿಗೆ 50 ಲಕ್ಷ, ಪಾವಗಡ ಮತ್ತು ಅರಸೀಕೆರೆಯ ಮುಖ್ಯ ರಸ್ತೆಯಿಂದ ಪೆಮ್ಮನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿಗೆ 25 ಲಕ್ಷ, ಮರೂರು ಮತ್ತು ಹೊಸಹಳ್ಳಿ ರಸ್ತೆ ಅಭಿವೃದ್ಧಿಗೆ 25 ಲಕ್ಷ, ಮಂಗಳವಾಡ ಗ್ರಾಮದಲ್ಲಿ…
ಭೋಪಾಲ್: ಯುವ ವೈದ್ಯೆಯೊಬ್ಬರು ಕಾಲೇಜಿನ ಹಾಸ್ಟೆಲ್ ನಲ್ಲಿ ರಾಸಾಯನಿಕ ಔಷಧಿ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ. ಆಕಾಂಶಾ ಮಹೇಶ್ವರಿ ಮೃತ ವೈದ್ಯೆಯಾಗಿದ್ದು, ತಲಾ 2.5 ಮಿಲಿಯ ನಾಲ್ಕು ಡೋಸ್ ಅರಿವಳಿಕೆಯನ್ನು ಚುಚ್ಚಿಕೊಂಡು ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿ ತಿಳಿಸಿದೆ. ತನಗೆ ಮಾನಸಿಕವಾಗಿ ಬಲವಿಲ್ಲ ಮತ್ತು ಕೆಲಸದೊತ್ತಡ ತಾಳಲಾಗುತ್ತಿಲ್ಲ ಎಂದು ಸಾವಿಗೂ ಮೊದಲು ವೈದ್ಯೆ ಬರೆದಿದ್ದಾರೆನ್ನಲಾಗಿರುವ ಡೆತ್ ನೋಟ್ ಆಕೆಯ ಕೊಠಡಿಯಲ್ಲಿ ಸಿಕ್ಕಿದ್ದು, ಈ ಪತ್ರದಲ್ಲಿ ಆಕೆ ಪೋಷಕರ ಕ್ಷಮೆ ಕೇಳಿದ್ದಾಳೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಂಚೋಳಿ: ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ದಿ.ಆರ್.ಎಂ.ನಾಟೀಕಾರ್ ಅವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕೋಲಿ ಕಬ್ಬಲಿಗ ಸಮಾಜದ ಪರ್ಯಾಯ ಬೇರೆ ಬೇರೆ ಜಾತಿಯವರು ಕೂಡಾ ಅಂಬಿಗರ ಚೌಡಯ್ಯನವರ ಹೆಸರಲ್ಲಿ ಒಗ್ಗೂಡುತ್ತಿದ್ದೀರಿ. ನೀವೆಲ್ಲಾ ಮುಗ್ಧ ಹಾಗೂ ಹಿಂದುಳಿದವರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಂಬಿಗರ ಚೌಡಯ್ಯ ನಿಗಮ ಸ್ಥಾಪನೆ ಮಾಡಲಾಯಿತು. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಕಬ್ಬಲಿಗ ಕೋಲಿ ಸಮಾಜವನ್ನು ST ಸೇರಿಸಲಾಗುತ್ತದೆ ಎಂದು ಹೇಳಿದ ನಂತರ ಅವರಿಗೆ ಬೆಂಬಲಿಸಿದಿರಿ ಆದರೆ ಇನ್ನೂ ಆಗಿಲ್ಲ. ನಾನು ಸಚಿವನಾಗಿದ್ದಾಗ ಕೋಲಿಯನ್ನು ST ಸೇರಿಸಲು ಅಗತ್ಯ ಕ್ರಮ ಕೈಗೊಂಡಿದ್ದೆ. ಇತ್ತೀಚಿಗೆ ನಾನೇ ದಿಲ್ಲಿಗೆ ಹೋಗಿ ವಾಸ್ತವ ಸ್ಥಿತಿ ಅರಿತುಕೊಂಡಾಗ ST ಗೆ ಸೇರಿಸುವ ಪ್ರಸ್ತಾವನೆ ಹಾಗೆ ಇದೆ ಎಂದು ತಿಳಿಸಿದರು. ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಚೌಡದಾನಪುರದ ಅಭಿವೃದ್ದಿಗೆ ರೂ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದೆ. ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆಗೆ ರೂ…
ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಯನ್ನು ಸಂಪೂರ್ಣ ತಿರಸ್ಕರಿಸುವ ನಿರ್ಣಯ ಕೈಗೊಂಡಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಗಾಂಧಿ ಭವನದಲ್ಲಿ ಪಂಚಮಸಾಲಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಿಸಿರುವ 2 ಡಿ ಮೀಸಲಾತಿಯನ್ನು ಪಂಚಮಸಾಲಿ ಸಮಾಜ ತಿರಸ್ಕರಿಸುತ್ತಿದೆ. ಮುಖ್ಯಮಂತ್ರಿಗಳು 24 ಗಂಟೆಯಲ್ಲಿ ಮೀಸಲಾತಿ ಕೊಡುತ್ತಾರೋ ಇಲ್ಲವೋ ಎನ್ನುವುದನ್ನು ಸ್ಪಷ್ಟ ಪಡಿಸಬೇಕು ಎಂದು ಆಗ್ರಹಿಸಿದರು. ಇದೇ ತಿಂಗಳು 12ನೇ ತಾರೀಖಿನ ಒಳಗಾಗಿ ಮೀಸಲಾತಿ ಹೊರಡಿಸಿ ಗೆಜೆಟ್ನಲ್ಲಿ ಘೋಷಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಜನವರಿ 13 ರಂದು ಹಾವೇರಿಯಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಒಂದು ದಿನದ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉಗ್ರಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನ ಎನ್ ಐಎ ಬಂಧಿಸಿದೆ. ಉಡುಪಿ ಮೂಲದ ವಿದ್ಯಾರ್ಥಿ ರಿಹಾನ್ ಶೇಖ್ ಬಂಧಿತ ವಿದ್ಯಾರ್ಥಿ. ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್ ಉಗ್ರ ಚಟುವಟಿಕೆಯಲ್ಲಿ ಬಾಕಿಯಾಗಿರುವ ಆರೋಪ ಕೇಳಿ ಬಂದಿದೆ. ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನ ಎನ್ ಐಎ ಚುರುಕುಗೊಳಿಸಿದೆ. ಇಂದು ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ ಐ ದಾಳಿ ಮಾಡಿದ್ದು, ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿ ರಿಹಾನ್ ಶೇಖ್ ಬಂಧಿಸಿದೆ ಎನ್ನಲಾಗುತ್ತಿದೆ. ಇದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಮಾಜ್ ಮುನೀರ್ ಎಂಬಾತನನ್ನ ಶಿವಮೊಗ್ಗ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿಯಾಗಿ ಜೆಪಿ ನಡ್ಡಾ ಅವರು ಆಶೀರ್ವಾದ ಪಡೆದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಜೆ.ಸಿ ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಳೆದ 5 ವರ್ಷದ ಹಿಂದೆ ಬಿಜೆಪಿ ಸೇರಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಾನಸಭಾ ಚುನಾವಣೆ ಹತ್ತಿರವಿರುವಾಗ ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ್ದಾರೆ. ಅಲ್ಲದೆ ವರಿಷ್ಠರಿಗೆ ತಿಳಿಸಿ ನಿವೃತ್ತಿ ಘೋಷಿಸುವ ಅವಶ್ಯಕತೆ ಇಲ್ಲ, ಅವರೇನೂ ಪಿಂಚಣಿ ಕೊಡಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಾಗಿದ್ದ ಕೃಷ್ಣ, ಬಿಜೆಪಿ ಸೇರಿದ್ದ ಬೆನ್ನಲ್ಲೇ ಅವರನ್ನು ರಾಷ್ಟ್ರಪತಿ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದರೆ ಅವರು ಬಿಜೆಪಿಯಲ್ಲಿ ಯಾವುದೇ ಹುದ್ದೆ ಅಲಂಕರಿಸಲಿಲ್ಲ. ಬೆಂಗಳೂರಿನ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೀಗ 90 ವರ್ಷ, ವಯಸ್ಸಿನ ಬಗ್ಗೆ ನಮಗೆ ಅರಿವು ಇರಬೇಕು. 90ರಲ್ಲಿ 50 ವರ್ಷದ ರೀತಿ ನಟನೆ ಮಾಡಲು ಆಗುವುದಿಲ್ಲ. ಅದಕ್ಕಾಗಿ ಕ್ರಮೇಣವಾಗಿ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಎಸ್ಎಂ ಕೃಷ್ಣ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದಲ್ಲಿ ಲಾಟರಿ ಮಾರಾಟವನ್ನು ಮರು ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘವು ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ಸಿ.ರಾಮಕೃಷ್ಣ, ಈಶಾನ್ಯ ರಾಜ್ಯಗಳು ಹಾಗೂ ಕೇರಳದ ಲಾಟರಿ ಟಿಕೆಟ್ ಗಳು ರಾಜ್ಯದಲ್ಲಿ ಅಕ್ರಮವಾಗಿ ಹಾಗೂ ಆನ್ ಲೈನ್ ಮುಖೇನ ನಡೆಯುತ್ತಿವೆ. ಇದನ್ನು ತಡೆಯಲು ಸರ್ಕಾರ 30 ದಿನಗಳಲ್ಲಿ ಕ್ರಮ ವಹಿಸಿ ಸಮಿತಿ ರಚಿಸಬೇಕು. ಇಲ್ಲವಾದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆಂದು ಎಚ್ಚರಿಸಿದ್ದಾರೆ. ಕೇರಳ ಲಾಟರಿ ಟಿಕೆಟ್.. ಆನ್‌ಲೈನ್ ಹಾಗೂ ಹೊರ ರಾಜ್ಯದವರು ಖರೀದಿಸಬಹುದೇ, ಗೆದ್ದ ಹಣ ಪಡೆಯುವುದು ಹೇಗೆ? ಕೇರಳದ ಬಂಪರ್ ಲಾಟರಿಯಲ್ಲಿ ಆಟೋ ರಿಕ್ಷಾ ಚಾಲಕ 25 ಕೋಟಿ ರೂಪಾಯಿ ಹಣ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ಕೇರಳ ಲಾಟರಿ ಟಿಕೆಟ್‌ಗಳನ್ನು ಹೊರ ರಾಜ್ಯದವರು ಖರೀದಿಸಬಹುದೇ ಹಾಗೂ ಆನ್ಲೈನ್ನಲ್ಲಿ ಲಾಟರಿ ಟಿಕೆಟ್ ಲಭ್ಯ ಇವೆಯೇ ಎಂಬ ಪ್ರಶ್ನೆಗಳು ಹಲವರನ್ನು ಕಾಡುತ್ತಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತುರುವೇಕೆರೆ: ಕೊಬ್ಬರಿ ತುಂಬಿದ್ದ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸುಮಾರು 25 ಸಾವಿರಕ್ಕೂ ಅಧಿಕ ಕೊಬ್ಬರಿಗಳು ಬೆಂಕಿಗಾಹುತಿಯಾದ ಘಟನೆ ತುರುವೇಕೆರೆ ತಾಲೂಕು ತಾವರೆಕೆರೆಯ ಬಾನಿ ನಿಂಗಯ್ಯ ಎಂಬವರ ತೋಟದ ಮನೆಯಲ್ಲಿ ನಡೆದಿದೆ. ತಾವರೆಕೆರೆ ಗ್ರಾಮದ ತೋಟದ ಹತ್ತಿರ ನಿರ್ಮಿಸಿರುವ ಕೊಬ್ಬರಿ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಸುಮಾರು 25 ಸಾವಿರಕ್ಕೂ ಅಧಿಕ ಕೊಬ್ಬರಿಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಘಟನೆಯಿಂದ ಸುಮಾರು 30 ಲಕ್ಷ ಬೆಲೆ ಬಾಳುವ ಕೊಬ್ಬರಿ ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ದಂಡಾಧಿಕಾರಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy