Author: admin

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ.ಇನಾಮದಾರ್ ನಿಧನ ಹಿನ್ನೆಲೆ ಇಂದು ಬೆಳಗಾವಿ ಜಿಲ್ಲೆ ಕಿತ್ತೂರು ಕ್ಷೇತ್ರದಲ್ಲಿ ನಿಗದಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ರೋಡ್​ಶೋ ರದ್ದು ಮಾಡಲಾಗಿದೆ. ಕಿತ್ತೂರು ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರಗಳಲ್ಲಿ ನಿಗದಿಯಂತೆ ಸಿಎಂ ಪ್ರಚಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಹಿರೇಬಾಗೇವಾಡಿ, ಬೆಳಗಾವಿ ನಗರ, ಬೈಲಹೊಂಗಲದಲ್ಲಿ ನಿಗದಿಯಂತೆ ಸಿಎಂ ರೋಡ್ ಶೋ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬಾಗಲಕೋಟೆ: ಜಿಲ್ಲೆ ತೇರದಾಳ ಕ್ಷೇತ್ರ ವ್ಯಾಪ್ತಿಯ ರಬಕವಿಬನಹಟ್ಟಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್, ಸವದಿ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲಿಂಗಾಯತರಿಗೆ ಅವಮಾನ ಮಾಡಿರುವ ಪಕ್ಷಕ್ಕೆ ಹೋಗಿದ್ದಾರೆ. ಕಾಂಗ್ರೆಸ್​ಗೆ ಆ ಇಬ್ಬರು ನಾಯಕರಿಂದ ಯಾವುದೇ ಲಾಭವಿಲ್ಲ. ಲಿಂಗಾಯತ ಸಿಎಂಗಳನ್ನು ಅವಮಾನಿಸಿದ್ದು ಕಾಂಗ್ರೆಸ್ ಪಕ್ಷ. ಆದರೆ ಬಿಜೆಪಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದೆ. ಮಾಜಿ ಸಿಎಂ ಬಿಎಸ್​ವೈಗೆ ಮೋಸ ಮಾಡಿದ್ದು ಜೆಡಿಎಸ್​ನವರು. ಜೆಡಿಎಸ್​ ಎಷ್ಟೇ ಸೀಟ್ ಗೆದ್ದರೂ ಕಾಂಗ್ರೆಸ್​ ಜತೆ ಹೋಗ್ತಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಸ್ಪಷ್ಟ ಬಹುಮತ ನೀಡಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಗೈದಿದ್ದು ಪಿಎಫ್​ಐನವರು. ಪಿಎಫ್​ಐ ಸಂಘಟನೆಯನ್ನು ಮೋದಿ ಸರ್ಕಾರ ನಿಷೇಧಿಸಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನು ಸಂವಿಧಾನದ 200ನೇ ವಿಧಿಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ತೆಲಂಗಾಣ ವಿಧಾನಸಭೆ ಅಂಗೀಕರಿಸಿರುವ ಹತ್ತು ವಿಧೇಯಕಗಳ ಕುರಿತು ತಕ್ಷಣ ನಿರ್ಧಾರ ಕೈಗೊಳ್ಳುವಂತೆ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರಿಗೆ ಸೂಚಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಪೀಠವೂ ಗಮನಿಸಿದೆ. ರಾಜ್ಯಪಾಲರು ಎಲ್ಲ ವಿಧೇಯಕಗಳನ್ನು ಅಂಗೀಕರಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ನಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ‘ಸಾಧ್ಯವಾದಷ್ಟು ಬೇಗ ನಿರ್ಧಾರ ಕೈಗೊಳ್ಳಿ’ ಎಂಬ ಸಾಂವಿಧಾನಿಕ ನಿರ್ದೇಶನ ಮಹತ್ವದ್ದಾಗಿದ್ದು, ಸಂಬಂಧಪಟ್ಟವರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ದೊಡ್ಡಬಳ್ಳಾಪುರದಲ್ಲಿ ಹಾಲಿ ಬಿಜೆಪಿ ಸದಸ್ಯರು ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ. ನಾಲ್ವರು ಬಿಜೆಪಿ ಸದಸ್ಯರು ಇಬ್ಬರು ಪಕ್ಷೇತರರು ಸೇರಿದಂತೆ ಆರು ಜನ ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಯುವ ಅಭ್ಯರ್ಥಿ ದೀರಜ್ ಗೆ ಟಿಕೇಟ್ ನೀಡಿದಕ್ಕೆ ಮುನಿಸಿಕೊಂಡಿದ್ದ ಬಿಜೆಪಿ ನಗರಸಭೆ ಸದಸ್ಯರು ಬಂಡಾಯ ಶಮನವಾಗದ ಹಿನ್ನೆಲೆ ಕಾಂಗ್ರೆಸ್ ಸೇರಿದ್ದಾರೆ. ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಹಾಲಿ ಶಾಸಕ ವೆಂಕಟರಮಣಯ್ಯ ನೇತೃತ್ವದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಹಾಲಿ ಸದಸ್ಯರು ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ ಉತ್ತರ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ.ರವಿ  ಪಾಟೀಲ್   ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸದಾಶಿವನಗರ, ಅಂಬೇಡ್ಕರ್ ನಗರ, ಶಾಹೂನಗರ, ಬಿ.ಕೆ.ಕಂಗ್ರಾಳಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಹಿಳೆಯರು ರವಿ ಪಾಟೀಲರಿಗೆ ಆರತಿ ಬೆಳಗಿ  ಸ್ವಾಗತಿಸಿ, ಜಯವಾಗಲಿ ಎಂದು ಹಾರೈಸಿದರು. ಪ್ರತಿ ಮನೆಯನ್ನು ಸಂಪರ್ಕಿಸುವ ಮೂಲಕ ಬೆಳಗಾವಿಯ ಅಭಿವೃದ್ಧಿಗೆ ನಮ್ಮನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು. ವಿಶೇಷವೆಂದರೆ ಈ ಸಂದರ್ಭದಲ್ಲಿ ಮಹಿಳೆಯರು ರವಿ ಪಾಟೀಲರಿಗೆ ಆರತಿ ಬೆಳಗಿ, ಸ್ವಾಗತಿಸಿ ಜಯವಾಗಲಿ ಎಂದು ಹಾರೈಸಿದರು. ಅವರ ಪತ್ನಿ ಸುನೀತಾ  ಪಾಟೀಲ್   ಅವರಿಗೂ ಮಹಿಳೆಯರು ಅರಿಶಿನ ಮತ್ತು ಕುಂಕುಮ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ರವಿ  ಪಾಟೀಲ್    ಪರ ಘೋಷಣೆಗಳನ್ನು ಕೂಗಿದರು. ಅಲ್ಲದೇ ಬೀದಿ ಬದಿ ವ್ಯಾಪಾರಿಗಳ ಬಳಿಗೆ ತೆರಳಿದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್  ಸರ್ಕಾರದ ಯೋಜನೆಗಳನ್ನು ತಿಳಿಸಿ ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಗೋಕಾಕ್‌ : ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ, ಇಂತಹ ಭ್ರಷ್ಟ ಬಿಜೆಪಿ ಸರ್ಕಾರ‌ವನ್ನು ಕಿತ್ತೆಸೆದು , ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿ, ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಜನತೆಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಬಡವರ ಪರ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಬಿಜೆಪಿಯಿಂದ 10% ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಅದರ ಬದಲಿಗೆ ಯದ್ವಾತದ್ವಾ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ ಎಂದ ಅವರು, ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಗುತ್ತಿಗೆದಾರರು ‌ಪಿಎಂಗೆ ಪತ್ರ ಬರೆದಿದ್ದಾರೆ‌. ಮೋದಿ ಹೇಳ್ತಾರೆ ‘ನಾ ಖಾವೂಂಗಾ, ನಾ ಖಾನೆದೂಂಗಾ’ ಎಂದು. ನಾನು ಪಿಎಂ ಮೋದಿಗೆ ಕೇಳ್ತೀನಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ಭ್ರಷ್ಟಾಚಾರ ಮಾಡಲು ಯಾಕೇ ಅವಕಾಶ ಕೊಟ್ಟಿದ್ದಿರಾ? ಎಂದು ಬಿಜೆಪಿ ಸರ್ಕಾರ ವಿರುದ್ದ ಚಾಟಿ ಬೀಸಿದರು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ…

Read More

ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿದೆ. 7.3 ತೀವ್ರತೆಯ ಭೂಕಂಪದ ನಂತರ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 4 ರ ತೀವ್ರತೆಯ ನಂತರದ ಕಂಪನಗಳೂ ವರದಿಯಾಗಿವೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಭೂಕಂಪನ ಸಂಭವಿಸಿದೆ ಎಂದು ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಸುಮಾತ್ರದ ಪಶ್ಚಿಮ ಕರಾವಳಿಯ ಪ್ರದೇಶವಾಗಿದೆ. ಸುಮಾತ್ರಾ ರಾಜಧಾನಿ ಪಡಂಗ್‌ನಲ್ಲಿ ಪ್ರಬಲ ಕಂಪನದ ಅನುಭವವಾಗಿದೆ. ಜನರು ಈಗಾಗಲೇ ಸೈಬರ್‌ರೂಟ್ ದ್ವೀಪದಿಂದ ಸ್ಥಳಾಂತರಗೊಂಡಿದ್ದಾರೆ. ಸುಮಾತ್ರಾ ಅತ್ಯಂತ ಭೂಕಂಪನ ಪೀಡಿತ ಪ್ರದೇಶವಾಗಿದೆ. ಸುಮಾತ್ರಾ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿದೆ, ಇದು ಭೂಮಿಯ ಫಲಕಗಳು ಘರ್ಷಣೆಯಾಗುವ ಪ್ರದೇಶವಾಗಿದೆ. ಇದು ಭೂಕಂಪಗಳ ಅಪಾಯವನ್ನು ಹೆಚ್ಚಿಸುತ್ತದೆ. ಸುನಾಮಿ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಇ-ಪಾಸ್‌ಬುಕ್ ಸೇವೆ ಮುಷ್ಕರಕ್ಕೆ ಇಳಿದಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಂದಿ ದೂರು ಸಲ್ಲಿಸಿದ್ದಾರೆ. ಈ ವರ್ಷ ಎರಡನೇ ಬಾರಿಗೆ ಇ-ಪಾಸ್ ಬುಕ್ ಸೇವೆ ಮುಷ್ಕರ ನಡೆಸುತ್ತಿದೆ. ಇಪಿಎಫ್‌ಒ ವೆಬ್‌ಸೈಟ್ ಅಥವಾ ಉಮಾಂಗ್ ಆ್ಯಪ್‌ನಿಂದ ಇ-ಪಾಸ್‌ಬುಕ್ ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ. ಹಲವರು ಟ್ವಿಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಇಪಿಎಫ್‌ಒ – ‘ಆತ್ಮೀಯ ಸದಸ್ಯರೇ, ಅನಾನುಕೂಲತೆಗಾಗಿ ಕ್ಷಮಿಸಿ. ಸಂಬಂಧಪಟ್ಟ ತಂಡ ಸಮಸ್ಯೆ ಬಗೆಹರಿಸಲು ಶ್ರಮಿಸುತ್ತಿದೆ. ಒಂದು ಕ್ಷಣ ನನ್ನನ್ನು ಕ್ಷಮಿಸಿ. ಸೇವೆಯು ಶೀಘ್ರದಲ್ಲೇ ಲಭ್ಯವಾಗಲಿದೆ, ”ಎಂದು ಇಪಿಎಫ್‌ಒ ಹೇಳಿದೆ. ಈ ವರ್ಷದ ಜನವರಿಯಲ್ಲಿ ಇ-ಪಾಸ್‌ಬುಕ್ ಸೇವೆಯೂ ಮುಷ್ಕರ ನಡೆಸಿತ್ತು. ಉದ್ಯೋಗಿ ಮತ್ತು ಉದ್ಯೋಗದಾತರು ಮಾಡಿದ ಠೇವಣಿಗಳನ್ನು  ಮತ್ತು ಪಿಎಫ್‌ನಲ್ಲಿರುವ ಒಟ್ಟು ಮೊತ್ತವನ್ನು  ಇ-ಪಾಸ್‌ಬುಕ್ ಮೂಲಕ ನಿಖರವಾಗಿ ತಿಳಿಯಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ಕೊರಟಗೆರೆ:15ವರ್ಷಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಅವಕಾಶ ನೀಡಿದ್ದೀರಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಈ ಬಾರಿ ಬಿಜೆಪಿ ಬೆಂಬಲಿಸಿ ಕ್ಷೇತ್ರದಲ್ಲಿನ ಕುಂದುಕೊರತೆಗಳನ್ನು ಸರಿಪಡಿಸಲು ಸಹಕರಿಸಿ ಎಂದು ಬಿಜೆಪಿ ಅಭ್ಯರ್ಥಿ ಬಿ.ಎಚ್.ಅನಿಲ್ ಕುಮಾರ್ ಮನವಿ ಮಾಡಿದರು. ಕೋರ ಹೋಬಳಿಯ ಗೊಲ್ಲಹಳ್ಳಿ ಸುಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಮತಯಾಚನೆ ಪ್ರಾರಂಭಿಸಿದ ಬಿ.ಹೆಚ್ ಅನಿಲ್ ಕುಮಾರ್ ಮತದಾರರನ್ನು ಉದ್ದೇಶಿ ಮಾತನಾಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಮನೆ ಮನೆಗೆ ತೆರಳಿ ಬಿಜೆಪಿ ಯೋಜನೆಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡಿದರು, ಕ್ಷೇತ್ರದಲ್ಲಿ ಅಭ್ಯರ್ಥಿ ಅನಿಲ್ ಕುಮಾರ್ ರವರಿಗೆ ಆರತಿ ಬೆಳಗುವುದರ ಮೂಲಕ ಪ್ರತಿ ಗ್ರಾಮದಲ್ಲಿ ಅದ್ಧೂರಿ ಸ್ವಾಗತ ಕೋರಿ ಮತ ನೀಡುವ ಆಶ್ವಾಸನೆ ನೀಡುತ್ತಿರುವುದೇ ಬಿಜೆಪಿ ಗೆದ್ದು ಇತಿಹಾಸ ಬರೆಯಲಿದೆ. ಕೋರಾ ಹೋಬಳಿ ಸುಮಾರು 80 ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಕಮಲ ಗುರುತಿಗೆ ಮತನೀಡಿ ಎಂದು ಮನವಿ ಮಾಡಿದರು. ಎಲ್ಲಾ ಗ್ರಾಮಗಳಲ್ಲಿಯೂ…

Read More

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್(74) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಲಂಗ್ಸ್ ಹಾಗೂ ಲಿವರ್ ಸಮಸ್ಯೆಯಿಂದ ಡಿ.ಬಿ.ಇನಾಂದಾರ್ ಬಳಲುತ್ತಿದ್ದರು.  ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಇನಾಮದಾರ್, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More