Subscribe to Updates
Get the latest creative news from FooBar about art, design and business.
- ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
- ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
- ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
- ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
- ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
- ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
Author: admin
ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಬ್ಬರ್, ಚಹಾ, ಅಡಿಕೆ&ಕಾಫಿ ಬೆಳೆಗಳನ್ನು ಹೊರತುಪಡಿಸಿ ತೋಟಗಾರಿಕೆ ಬೆಳೆಯುವ ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಯೋಜನೆ ಜಾರಿಯಲ್ಲಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ಪಡೆಯಲು ಅರ್ಹರಿದ್ದು, ಅದರ ಮೊದಲು 2 ಹೆಕ್ಟೇರ್ ಪ್ರದೇಶದವರೆಗೆ ಶೇ. 90% ಮತ್ತು 2 ಹೆಕ್ಟೇರ್ ಮೇಲ್ಪಟ್ಟು 3 ಹೆಕ್ಟೇರವರೆಗೆ ಶೇ.45% ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರನ್ನು ಹೊರತು ಪಡಿಸಿ, ಇತರೆ ರೈತರಿಗೆ 2 ಹೆಕ್ಟರ್ ಪ್ರದೇಶದವರೆಗೆ ಶೇ 75% ರಷ್ಟು ಮತ್ತು 2 ಹೆಕ್ಟೇರ್ ಮೇಲ್ಪಟ್ಟು 3 ಹೆಕ್ಟೇರವರೆಗೆ ಶೇ. 45% ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಈಗಾಗಲೇ ಸಹಾಯಧನ ಪಡೆದು ಏಳು ವರ್ಷಗಳಾಗಿದ್ದಲ್ಲಿ ಪ್ರಸಕ್ತ ಸಾಲಿನಲ್ಲಿಯೂ ಕೂಡ ನಿಯಮಾನುಸಾರ ಸಹಾಯಧನ ನೀಡಲಾಗುವುದು.…
ಪುಣೆ : ವಾಟ್ಸಾಪ್ ಗ್ರೂಪ್ನಿಂದ ತೆಗೆದು ಹಾಕಿದಕ್ಕೆ ಎಂಬ ಐವರು ಸೇರಿಕೊಂಡು ಗ್ರೂಪ್ ಅಡ್ಮೀನ್ ಗೆ ಥಳಿಸಿ, ನಾಲಿಗೆಯನ್ನೇ ಕತ್ತರಿಸಿದ್ದ ಪುಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಫರ್ಸುಂಗಿ ಪ್ರದೇಶದಲ್ಲಿ ಒಟ್ಟಿಗೆ ವಾಸಿಸುತ್ತಿರುವ ಕುಟುಂಬಗಳು ಕೂಡಿಕೊಂಡು ಓಂ ಹೈಟ್ಸ್ ಆಪರೇಷನ್ ಎಂಬ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿದ್ದರು. ಆದರೆ, ಈ ಗ್ರೂಪ್ ನಿಂದ ಯಾರೋ ಒಬ್ಬರನ್ನು ತೆಗೆದುಹಾಕಲಾಗಿತ್ತು. ಈ ಬಗ್ಗೆ ಗ್ರೂಪ್ವನ್ನು ರಚಿಸಿದ್ದ ಮತ್ತು ಅಡ್ಮಿನ್ ಆಗಿದ್ದ ವ್ಯಕ್ತಿಯನ್ನು ಗ್ರೂಪ್ ನಿಂದ ತೆಗೆದುಹಾಕಲ್ಪಟ್ಟ ವ್ಯಕ್ತಿ ಇತರ ನಾಲ್ವರೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಘಟನೆ ಬಗ್ಗೆ ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧ ಜಿಲ್ಲಾ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧ ಗೋಕಾಕ್ ತಾಲೂಕಿನ ಮರಡಿಮಠ ಗ್ರಾಮದ ವೈಷ್ಣವಿ ಸನದಿ (21), ಉಪ್ಪಾರಟ್ಟಿ ಗ್ರಾಮದ ಸುಧಾರಾಣಿ ಅರಂಭಾವಿ (24), ತುಕ್ಕಾನಟ್ಟಿ ಗ್ರಾಮದ ಐಶ್ವರ್ಯಾ ಬಾಗೇವಾಡಿ (22) ಹಾಗೂ ಬಗರನಾಳ ಗ್ರಾಮದ ಬಸವರಾಜ ಪಾವಡಿ (27) ಅವರನ್ನು ಬಂಧಿಸಲಾಗಿದೆ. 2022 ಅಕ್ಟೋಬರ್ 7 ರಂದು ನಡೆದ ಕೆಪಿಟಿಸಿಎಲ್ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 41 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ತಿಪಟೂರು: ಶ್ರೀ ಗುರು ಸಿದ್ದರಾಮೇಶ್ವರರ 850ನೇ ಜಯಂತಿ ಮಹೋತ್ಸವವನ್ನು ಜನವರಿ 14 ಮತ್ತು 15ರಂದು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು, ಈ ಮಹೋತ್ಸವಕ್ಕೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿನಾಗೇಶ್ ತಿಳಿಸಿದರು. ಸಿದ್ಧರಾಮೇಶ್ವರ ಪಾಲಿಟೆಕ್ನಿಕಲ್ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮತ್ತು ಮೈಸೂರು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ಗೋಡೆಕೆರೆ ಮೃತ್ಯುಂಜಯ ದೇಸಿ ಕೇಂದ್ರ ಸ್ವಾಮೀಜಿ ಹಾಗೂ ಕುಪೂರ್ ತಮಡಿಯಲ್ಲಿ ಅಭಿನವ ಮಲ್ಲಿಕಾರ್ಜುನ ದೇಶಿ ಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಎಸ್.ಮಧುಸುಧನ್ ಮಾತನಾಡಿ, ಕೆರಗೋಡಿ ರಂಗಾಪುರ ಗುರು ಪರದೇಶಿ ಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಎರಡು ದಿನ ಶ್ರೀ ಗುರು ಸಿದ್ದರಾಮೇಶ್ವರ 850ನೇ ಜಯಂತಿ ಅದ್ದೂರಿಯಾಗಿ ಆಚರಿಸಲಾಗುವುದು, ವೈಭವದ ಉತ್ಸವ…
ಒಮ್ರಿಕಾನ್ ನ BF.7 ವೇರಿಯಂಟ್ ಉಲ್ಬಣವಾಗುತ್ತಿರುವ ನಡುವೆಯೇ ಭಾರತದಲ್ಲಿ XBB.1.5 ಎಂಬ ಹೊಸ ರೂಪಾಂತರ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ. ಅಮೆರಿಕ, ಇಂಗ್ಲೆಂಡ್ ನಲ್ಲಿ ಕೊವೀಡ್ ವೇಗವಾಗಿ ಹರಡಲು ಕಾರಣವಾದ ಸಬ್–ವೇರಿಯಂಟ್ XBB 1.5 ಭಾರತದಲ್ಲಿ ಪತ್ತೆಯಾಗಿದ್ದು, ಇದುವರೆಗೆ 5 ಪ್ರಕರಣಗಳು ವರದಿಯಾಗಿವೆ ಎಂದು ಇನ್ಫಾಕಾಗ್ ತಿಳಿಸಿದೆ. ಗುಜರಾತ್ ನಲ್ಲಿ 3, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಈ ಸಬ್-ವೇರಿಯಂಟ್ ಹೆಚ್ಚು ಪರಿಣಾಮ ಬೀರಲೂಬಹುದು ಎಂದು ತಜ್ಞ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿದ್ದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ನಿನ್ನೆ ಅಗಲಿದ್ದರು. ಅಂತ್ಯ ಸಂಸ್ಕಾರವನ್ನು ಅವರ ಇಚ್ಛೆಯಂತೆ ಅಗ್ನಿ ಸ್ಪರ್ಷ ಮಾಡುವ ಮೂಲಕ ಜ್ಞಾನಯೋಗಾಶ್ರಮದಲ್ಲಿ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿವಿಧಾನವಿಲ್ಲದೇ ಶ್ರೀಗಳ ಅಂತ್ಯ ಸಂಸ್ಕಾರ ನೇರವೇರಿದೆ. ಈ ಮೂಲಕ ನಡೆದಾಡುವ ದೇವರು ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನರಾದರು. ನಿನ್ನೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾಗಿದ್ದರು. ಇಂದು ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀಗಳ ಪಾರ್ಥಿವ ಶರೀರವನ್ನು ಅಪಾರ ಭಕ್ತರರ ನಡುವೆ ಅಂತ್ಯ ಸಂಸ್ಕಾರದ ಸ್ಥಳಕ್ಕೆ ತೆರೆದ ವಾಹನದಲ್ಲಿ ಕರೆದು ಹೋಗಲಾಯಿತು. ಇದಲ್ಲದೇ ಅವರ ಪಾರ್ಥಿವ ಶರೀರವಿದ್ದ ವಾಹನದ ಮೇಲೆ ಹೂವಿನ ಮಳೆಯನ್ನು ಸುರಿಸಿ ಶತಮಾನದ ಸಂತನಿಗೆ ಅಶ್ರುತರ್ಪದ ಮೂಲಕ ಕಳುಹಿಸಿಕೊಟ್ಟರು. ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಲಕ್ಷ ಲಕ್ಷ ಜನರು ಆಗಮಿಸಿ, ಶ್ರೀಗಳ ಅಂತಿಮ ದರ್ಶನವನ್ನು ಪಡೆದರು. ಇದಲ್ಲದೇ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ…
ಪಾವಗಡ: ಕೊಟ್ಯಾಂತರ ರೂ.ಗಳ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ತಾಲ್ಲೂಕಿನ ರಸ್ತೆಗಳು ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕರಾದ ವೆಂಕಟರಮಣಪ್ಪ ತಿಳಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ವಿರುಪಸಮುದ್ರ ಗ್ರಾಮದ ವಡಸಲಮ್ಮ ದೇವಸ್ಥಾನದ ಅವರಣದಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ನುಡಿದಂತೆ ನಡೆಯುವವನು, ಆದರೆ ಜೆ.ಡಿ.ಎಸ್. ಜಿಲ್ಲಾಧ್ಯಕ್ಷರಾದ ಆರ್.ಸಿ. ಅಂಜಿನಪ್ಪ, ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಯಾವಾಗಲೂ ಸುಳ್ಳು ಹೇಳುತ್ತಾ ತಾಲ್ಲೂಕನ್ನು ಅಭಿವೃದ್ದಿಪಡಿಸುತ್ತೇವೆ ಎಂದು ಸುಮ್ಮನೆ ಸಾರ್ವಜನಿಕರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೆ.ಡಿ.ಎಸ್. ವಿರುದ್ದ ಕುಟುಕಿದರು. ನಾನು ಪ್ರಾಮಾಣಿಕವಾಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಜಾರಿ ಗೊಳಿಸಿದ್ದು,2352 ಕೋಟಿ ಮೂಂಜುರು ಮಾಡಿದ್ದೇನೆ ಅದರೇ ನಾವೆ ಭದ್ರಾ ಮೇಲ್ದಂಡೆ ಮಂಜೂರು ಮಾಡಿದ್ದೇವೆ ಅಂತ ಸುಳ್ಳು ಹೇಳುತ್ತಾರೆ ಅವರ ಹೇಳಿಕೆಗಳು ಬರಿ ಸುಳ್ಳು, ಅವರ ಐದು ವರ್ಷಗಳ ಅವಧಿಯಲ್ಲಿನ ಅಭಿವೃದ್ದಿ ಮತ್ತು ನನ್ನ ಅವದಿಯಲ್ಲಿನ ಅಭಿವೃದ್ದಿ ಬಗ್ಗೆ ಚರ್ಚೆ ಮಾಡೋಣ ಎಂದು ಜೆ.ಡಿ.ಎಸ್.ನ ತಿಮ್ಮರಾಯಪ್ಪ ಅವರಿಗೆ…
ಚಿತ್ರದುರ್ಗ: ಮುಂಬರುವ 2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಪಕ್ಷ ರಚನೆ ಮಾಡಿದ್ದು, ರೆಡ್ಡಿ ಪಕ್ಷಕ್ಕೆ ಒಬ್ಬೊಬ್ಬರಾಗಿ ಸೇರುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಿ ಎಂದು ಕ್ಷೇತ್ರ ಪ್ರಚಾರದಲ್ಲಿದ್ದ ಗನ್ನಾಯಕನಹಳ್ಳಿ ಎಚ್.ಮಹೇಶ್ ಅವರು ಜನಾರ್ಧನ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಮಹೇಶ್ ಅವರು ತನ್ನ ಕಾರ್ಯಕರ್ತರೊಂದಿಗೆ ಗಂಗಾವತಿಯಲ್ಲಿರುವ ಕೆಆರ್‌ಪಿ ಪಕ್ಷದ ಕಚೇರಿಗೆ ತೆರಳಿ ಜನಾರ್ಧನ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಮಾತನಾಡಿರುವ ಜನಾರ್ಧನ್ ರೆಡ್ಡಿಯವರು, ಹಿರಿಯೂರು ಕ್ಷೇತ್ರ ಎಂದರೇ ದುಡ್ಡಿನ ಕ್ಷೇತ್ರವಾಗಿದೆ. ದುಡ್ಡು ಇದ್ದವರಿಗೆ ಮಾತ್ರ ಇಲ್ಲಿ ಗೆಲುವು ಸಾಧ್ಯ ಎನ್ನುತ್ತಾರೆ. ನೀವು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ನಾನು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ ಎಂದು ಅವರು ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಸಿನಿಮಾ ಹಾಲ್ ಅಥವಾ ಮಲ್ಟಿಪ್ಲೆಕ್ಸ್‌ಗಳಿಗೆ ಪ್ರೇಕ್ಷಕರು ಹೊರಗಿನ ಆಹಾರ ಕೊಂಡೊಯ್ಯಬಹುದೇ ಎಂಬ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಹೊರಗಿನ ಆಹಾರ, ಪಾನೀಯಗಳನ್ನು ಸಿನಿಮಾ ಥಿಯೇಟರ್ ಅಥವಾ ಮಲ್ಟಿಪ್ಲೆಕ್ಸ್‌ಗಳಿಗೆ ವೀಕ್ಷಕರು ಕೊಂಡೊಯ್ಯುವುದನ್ನು ನಿಯಂತ್ರಿಸುವ ಹಕ್ಕು ಥಿಯೇಟರ್ ಮಾಲೀಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿನಿಮಾ ಹಾಲ್‌ಗಳಿಗೆ ಪ್ರೇಕ್ಷಕರು ಹೊರಗಿನ ಆಹಾರ ಕೊಂಡೊಯ್ಯಬಹುದೇ ಎಂಬ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ಈ ತೀರ್ಪು ನೀಡಿದೆ. ಸಿನಿಮಾ ಹಾಲ್ ಜಿಮ್ ಅಲ್ಲ. ಇಲ್ಲಿ ಪ್ರೇಕ್ಷಕರು ತಮ್ಮಿಚ್ಚೆಯಂತೆ ಆಹಾರ, ಪಾನೀಯಗಳನ್ನು ಕೊಂಡೊಯ್ಯುವುದನ್ನು ನಿಯಮತ್ರಿಸುವ ಹಕ್ಕನ್ನು ಥಿಯೇಟರ್ ಗಳ ಮಾಲೀಕರು ಹೊಂದಿದ್ದಾರೆ. ಮಾಲೀಕರು ನೀಡುವ ಆಹಾರ ಹಾಗೂ ಪಾನೀಯಗಳನ್ನಷ್ಟೇ ವೀಕ್ಷಕರು ಸಿನಿಮಾ ಹಾಲ್ ಒಳಗೆ ಕೊಂಡೊಯ್ಯಬಹುದು. ಹೆತ್ತವರು ಶಿಶುಗಳಿಗೆ ಬೇಕಾದ ಆಹಾರವನ್ನು ಚಿತ್ರಮಂದಿರದೊಳಗೆ ಕೊಂಡೊಯ್ದಂತಹ ಸಂದರ್ಭದಲ್ಲಿ ಅದಕ್ಕೆ ವಿರೋಧ ಮಾಡಬಾರದು ಎಂದು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಮಾಲವಿ ಜಲಾಶಯಕ್ಕೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ಥಳೀಯ ಶಾಸಕರಾದ ಭೀಮಾ ನಾಯಕ ಅವರ ಜೊತೆಗೂಡಿ ಬಾಗೀನ ಅರ್ಪಿಸಿದರು. ಇದೇ ವೇಳೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಲಾಶಯಕ್ಕೆ ನೀರು ತುಂಬಿಸಲು 160 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ್ದೆ, ನಮ್ಮ ಸರ್ಕಾರದ ಪ್ರಯತ್ನದ ಫಲವಾಗಿ 50 ವರ್ಷಗಳ ಬಳಿಕ ಜಲಾಶಯ ಭರ್ತಿಯಾಗಿದೆ ಈ ಕ್ಷಣ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದರು. ಈ ವೇಳೆ ಮಾಜಿ ಸಚಿವರಾದ ಸಂತೋಷ್ ಲಾಡ್, ತುಕಾರಾಮ್, ಪರಮೇಶ್ವರ ನಾಯಕ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಕಂಪ್ಲಿ ಗಣೇಶ್, ಬೈರತಿ ಸುರೇಶ್ ಸೇರಿದಂತೆ ಅನೇಕರು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy