Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲುವು ಸಾಧಿಸಿ ಸರ್ಕಾರ ರಚಿಸಲು ಶತಾಯ ಗತಾಯವಾಗಿ ಪ್ರಯತ್ನಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಶಕ್ತಿ ತುಂಬಲು ಹೈಕಮಾಂಡ್ ನಾಯಕರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ ಪ್ರವಾಸಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಹೌದು, ಏಪ್ರಿಲ್ 25ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಟಿ.ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಮಧ್ಯಾಹ್ನ 12ರಿಂದ 1 ಗಂಟೆವರೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ನಂತರ ಪ್ರಿಯಾಂಕಾ ಗಾಂಧಿ, ಮಧ್ಯಾಹ್ನ 2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಲಿದ್ದಾರೆ. ಅಲ್ಲಿ ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರಿಂದ ಸಂಜೆ 4 ಗಂಟೆವರೆಗೆ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ. ಸಂವಾದ ಕಾರ್ಯಕ್ರಮದ ಬಳಿಕ ಪ್ರಿಯಾಂಕಾ ಗಾಂಧಿ ಅವರು 4.15ಕ್ಕೆ ಕೆ.ಆರ್.ನಗರಕ್ಕೆ ತೆರಳಲಿದ್ದಾರೆ. ಸಂಜೆ 5.30ರಿಂದ 6.30ರವರೆಗೆ ಅಲ್ಲಿ ನಡೆಯುವ ರೋಡ್‌ಶೋನಲ್ಲಿ ಭಾಗಿಯಾಗಲಿದ್ದಾರೆ. ತೋಪಮ್ಮನ ದೇವಸ್ಥಾನದಿಂದ…
ಮಂಗಳೂರು: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ಗ್ರಾಮದಲ್ಲಿ ನಡೆದಿದೆ. ಕೌಶಲ್ಯ(27) ಮೃತ ಮಹಿಳೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿದ್ದು, ಕಳೆದ 15 ವರ್ಷಗಳಿಂದ ಸುಕೇಶ್ ಎಂಬುವರನ್ನು ಪ್ರೀತಿಸುತ್ತಿದ್ದರು. 5 ತಿಂಗಳ ಹಿಂದೆ ಪ್ರೇಮಿಗಳು ಮದುವೆಯಾಗಿದ್ದರು. ಮದುವೆ ನಂತರ ಪತಿ ಸುಕೇಶ್ ಅವರಿಗೆ ಅಕ್ರಮ ಸಂಬಂಧ ಇರುವ ವಿಚಾರ ಕೌಶಲ್ಯ ಅವರಿಗೆ ತಿಳಿದಿತ್ತು. ಇದನ್ನು ಸಾಕ್ಷಿ ಸಮೇತೆ ಕೌಶಲ್ಯ ಪತ್ತೆಹಚ್ಚಿದ್ದರು. ಪತಿಯ ಈ ಅಕ್ರಮ ಸಂಬಂಧದಿಂದ ಬೇಸತ್ತ ಕೌಶಲ್ಯ 3 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಖಾಸಗಿ ಆಸ್ಪೆತ್ರಗೆ ದಾಖಲಿಸಲಾಗಿತ್ತು. ಆದರೆ ಇಂದು (ಏ.24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್…
ದೆಹಲಿ: ಅಪಾರ್ಟ್ಮೆಂಟ್ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ . ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ. ಮೊದಲ ಮಹಡಿಯ ಅಪಾರ್ಟ್‌ಮೆಂಟ್‌ನ ಬಾಗಿಲಿಗೆ ಎರಡು ಬಾರಿ ಗುಂಡು ಹಾರಿಸಿದ ಆರೋಪಿಗಳು ನೆಲ ಅಂತಸ್ತಿನ ಕಡೆಗೆ ಪರಾರಿಯಾಗಿದ್ದರು. ಮುಸುಕುಧಾರಿಗಳು ಪರಾರಿಯಾಗುವ ಮೊದಲು ನೆಲ ಮಹಡಿಯಲ್ಲಿರುವ ಮತ್ತೊಂದು ಅಪಾರ್ಟ್‌ಮೆಂಟ್‌ನ ಕಿಟಕಿಯ ಮೇಲೆ ಮೂರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದೇಶದಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ಹತ್ತು ಸಾವಿರ ದಾಟುತ್ತಲೇ ಇವೆ. ಕಳೆದ ದಿನ 10,112 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 948 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ ಧನಾತ್ಮಕ ದರವು 25.69% ಆಗಿದೆ. ಮಹಾರಾಷ್ಟ್ರದಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 545 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕರ್ನಾಟಕ ಚುನಾವಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರ ಪ್ರಚಾರ ಇಂದು ಮುಂದುವರಿಯಲಿದೆ. ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ರಾಮದುರ್ಗದಲ್ಲಿ ಕಬ್ಬು ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. 3:30 ರಿಂದ 4:30 ರವರೆಗೆ ಯುವಕರೊಂದಿಗೆ ಮಾತನಾಡುತ್ತಾರೆ.ಸಂಜೆ 5 ಗಂಟೆಗೆ ಹಂಗಲ್‌ನಲ್ಲಿ ನಡೆಯುವ ರಾಲಿ ಮತ್ತು ಸಾರ್ವಜನಿಕ ಸಭೆಯಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ. ನಿನ್ನೆ ಲಿಂಗಾಯತ ಕ್ಷೇತ್ರವಾದ ಹುಬ್ಬಳ್ಳಿ ವಿಜಯಪುರದಲ್ಲಿ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ವಿರುದ್ಧ ರಾಹುಲ್ ಕಟು ಟೀಕೆ ಮಾಡಿದ್ದರು. ಪ್ರಚಾರದ ಭಾಗವಾಗಿ ರಾಹುಲ್ ಗಾಂಧಿ ಕರ್ನಾಟಕದಲ್ಲಿ 10 ದಿನಗಳ ಕಾಲ ಇರಲಿದ್ದು, 13 ರ ರಾಲಿಗಳಲ್ಲಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಲಿರುವ ಯೋಗಿ ಆದಿತ್ಯನಾಥ್, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಜೊತೆ ಡಿಸಿಎಂಗಳಾದ ಕೇಶವ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್ ಮತ್ತು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಚೌಧರಿ ಭೂಪೇಂದ್ರ ಸಿಂಗ್ ಕೂಡ ಆಗಮಿಸಲಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಯೋಗಿ ಟೀಂ ಮತಬೇಟೆ ನಡೆಸಲಿದೆ. ಸಾರ್ವಜನಿಕ ಸಭೆ ಮತ್ತು ಕಾರ್ನರ್ ಮೀಟಿಂಗ್‌ಗಳನ್ನು ನಡೆಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಇಂದು ಮತಬೇಟೆಗೆ ಇಳಿಯಲಿದ್ದಾರೆ.ಕಲ್ಪತರುನಾಡು ತುಮಕೂರಿಗೆ ಇಂದು (ಏ.24) ಭೇಟಿ ನೀಡಿದ್ದಾರೆ. ಒಂದೇ ದಿನ ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ಮೊದಲಿಗೆ ಜೆಡಿಎಸ್ ಭದ್ರಕೋಟೆಯಾಗಿರುವ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿರುವ ಹೆಚ್ಡಿ ದೇವೇಗೌಡರು ಶ್ರೀ ನಂಜಾವಧೂತ ಸ್ವಾಮೀಜಿಗಳನ್ನ ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದೆಹಲಿ ಪೊಲೀಸರ ವಿರುದ್ಧ ಕುಸ್ತಿ ಆಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಪ್ರತಿಭಟನಾಕಾರರಿಗೆ ಆಹಾರ ಮತ್ತು ನೀರು ತರಲು ಅವರಿಗೆ ಅವಕಾಶವಿಲ್ಲ ಹೊರಗೆ ಹೋಗಿದ್ದ ಆಟಗಾರರನ್ನು ಒಳಗೆ ಬಿಡಲಿಲ್ಲ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ದೆಹಲಿ ಪೊಲೀಸರು ಏನೇ ಮಾಡಿದರೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಕುಸ್ತಿ ಆಟಗಾರರು ಹೇಳಿದ್ದಾರೆ. ಮಹಿಳಾ ಆಟಗಾರರು ನೀಡಿದ ದೂರಿನ ಬಗ್ಗೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಟಗಾರರು ಕೇಳಿದರು. ಊಟ, ನೀರು ಸಿಗದಿದ್ದರೂ ಧರಣಿ ಮುಂದುವರಿಯಲಿದೆ. ನ್ಯಾಯಕ್ಕಾಗಿ ಸಾಯಲು ಸಿದ್ಧ. ಪೊಲೀಸರು ಕಸ್ಟಡಿಗೆ ತೆಗೆದುಕೊಂಡರೂ ಧರಣಿ ಮುಂದುವರಿಯಲಿದೆ ಎಂದು ಕುಸ್ತಿಪಟುಗಳು ತಿಳಿಸಿದ್ದಾರೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಜಂತರ್ ಮಂದರ್ ನಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಏಳು ಮಹಿಳಾ ಆಟಗಾರರು ದೂರು ನೀಡಿದರೂ ಪ್ರಕರಣ ದಾಖಲಿಸಿಕೊಳ್ಳದ ದೆಹಲಿ ಪೊಲೀಸರ ವಿರುದ್ಧ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಆಟಗಾರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.…
ಕೇರಳಕ್ಕೆ ಆಗಮಿಸುತ್ತಿರುವ ಪ್ರಧಾನಿಗೆ 100 ಪ್ರಶ್ನೆಗಳನ್ನು ಹಾಕುವ ಮೂಲಕ ಡಿವೈಎಫ್‌ಐ ಯಂಗ್ ಇಂಡಿಯಾ ಅಭಿಯಾನ ತಿರುವನಂತಪುರದಲ್ಲಿ ಆರಂಭವಾಯಿತು. ಎಲ್‌ಡಿಎಫ್ ಸಂಚಾಲಕ ಇ.ಪಿ.ಜಯರಾಜನ್ ಅಭಿಯಾನವನ್ನು ಉದ್ಘಾಟಿಸಿದರು. ಪ್ರಧಾನಿಯವರು ಕೇರಳದ ಬಗ್ಗೆ ಇನ್ನೂ ಸಾಕಷ್ಟು ತಿಳಿದುಕೊಳ್ಳಬೇಕಾಗಿದ್ದು, ಒಮ್ಮೆಯಾದರೂ ಕೇರಳಕ್ಕೆ ಭೇಟಿ ನೀಡಬೇಕು ಎಂದು ಇ.ಪಿ.ಜಯರಾಜನ್ ಹೇಳಿದರು. ವಂದೇ ಭಾರತ್ ಕೇರಳದಲ್ಲಿ ಹೆಚ್ಚಿನ ಪ್ರಯೋಜನಗಳನ್ನು ತರುವುದಿಲ್ಲ ಮತ್ತು ಸಾಮಾನ್ಯ ರೈಲಿನ ಗುಣಮಟ್ಟವನ್ನು ತಲುಪುವುದಿಲ್ಲ ಎಂದು ಜಯರಾಜನ್ ಟೀಕಿಸಿದರು. ಕ್ರಿಶ್ಚಿಯನ್ ಸಮುದಾಯವನ್ನು ಒಗ್ಗೂಡಿಸುವ ಬಿಜೆಪಿಯ ನೀತಿ ಈಗ ನಡೆಯುತ್ತಿದೆ ಎಂದು ಜಯರಾಜನ್ ಹೇಳಿದರು. ಡಿವೈಎಫ್‌ಐ ಪ್ರಶ್ನೆಗಳು ನಿರುದ್ಯೋಗ, ರೈತ ಕಾನೂನುಗಳು, ಬೆಲೆ ಏರಿಕೆ, ದೇಶದಲ್ಲಿನ ಹಸಿವು, ಖಾಸಗೀಕರಣ, ನೋಟು ಅಮಾನ್ಯೀಕರಣ ಮುಂತಾದ ಸಮಸ್ಯೆಗಳನ್ನು ಆಧರಿಸಿವೆ. ಇಂದು ಮತ್ತು ನಾಳೆ ಸಂಸ್ಥೆಯ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್…
ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗೆ ತಾಗಿ ಯುವಕ ಸಾವನ್ನಪ್ಪಿದ್ದಾನೆ. ಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಕೇದಾರನಾಥ ದೇಗುಲದಲ್ಲಿ ಹೆಲಿಕಾಪ್ಟರ್ ನಡೆಸುತ್ತಿದ್ದ ಕಂಪನಿಯೊಂದರ ಕಾರ್ಮಿಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಗಡ್ವಾಲ್ ಮಂಡಲ್ ವಿಕಾಸ್ ನಿಗಮ್ ಲಿಮಿಟೆಡ್ ಹೆಲಿಪ್ಯಾಡ್‌ನಲ್ಲಿ ಮಧ್ಯಾಹ್ನ 2.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA