Author: admin

ತುಮಕೂರು: ‘ಮಕ್ಕಳ ದಿನಾಚರಣೆ’ ಅಂಗವಾಗಿ ನಗರದ ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಇಂದು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷ  ಶ್ರೀನಿವಾಸಮೂರ್ತಿ ಟಿ. ವಿದ್ಯಾರ್ಥಿಗಳು ಕಲಿಯುವ ಕಾಲೇಜು ಆವರಣವನ್ನು  ಹಳೆಯ ವಿದ್ಯಾರ್ಥಿಗಳು ತಮ್ಮ ರಜಾ ದಿನವನ್ನು ಉಪಯೋಗಿಸಿಕೊಂಡು  ಶ್ರಮದಾನ ಮಾಡಿರುವುದು ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಇನ್ನೂ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಅವರು ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಕಾಲೇಜಿನ ಬಗೆಗಿನ ಕಾಳಜಿ, ಅಭಿಮಾನ ಮತ್ತು ಗೌರವದಿಂದ ಇಂದು ಶ್ರಮದಾನ ಮಾಡುವ ಮೂಲಕ ಒಂದು ಪುಣ್ಯದ ಕಾರ್ಯವನ್ನು ಮಾಡಿದ್ದೀರಿ. ಈ ಸಂಸ್ಥೆಯ ಬೆಳವಣಿಗೆಗೆ ನಿಮ್ಮ ಪ್ರೀತಿ, ವಿಶ್ವಾಸ ಹೀಗೆಯೇ ಮುಂದುವರಿಯಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಮಟ್ಟದ ಶಿಕ್ಷಕರತ್ನ ಪ್ರಶಸ್ತಿ ಪುರಸ್ಕೃತ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಅವರು ಮಾತನಾಡಿ, ಹಳೆಯ ಸಂಘದ ವತಿಯಿಂದ ಕಾಲೇಜಿನ ನಿವೇಶನ ಪಡೆಯಲು ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ.ನಮ್ಮ ಕರೆಯನ್ನು ಬೆಂಬಲಿಸಿ ಈ ಕಾಲೇಜಿನ ಅಭಿವೃದ್ಧಿಗೆ ತಮ್ಮೆಲ್ಲರ…

Read More

ತುಮಕೂರು: ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನ. 16ರಂದು ನಡೆಯುವ ಸಮಾವೇಶದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಅಬ್ದುಲ್ ಜಬ್ಬಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಮುದಾಫೀರ್ ಅಹಮದ್ ಖಾನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ  ಈ ವಿಚಾರ ತಿಳಿಸಿದ ಅವರು,  ಅರಮನೆ ಮೈದಾನದ ನಲಪಾಡ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪಗಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ, ಡಾ.ಜಿ. ಪರಮೇಶ್ವರ ಸೇರಿದಂತೆ ಎಲ್ಲಾ ಮುಖಂಡರು, ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ, ಅವಕಾಶಗಳು, ಅಧಿಕಾರ ದೊರೆತಿದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಇದಕ್ಕೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಜನರು ನೀಡಿದ ಮತಗಳೇ ಸಾಕ್ಷಿ ಎಂದರು. ಸಿ.ಎಂ. ಇಬ್ರಾಹಿಂ ಯಾವ ಉದ್ದೇಶಕ್ಕೆ ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಎಲ್ಲಾ ಸಂದರ್ಭಗಳಲ್ಲೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತರೆ,…

Read More

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಜಡೆಯ ಗ್ರಾಮದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಇತ್ತೀಚೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗ್ರಾಮದ ಮುಂಭಾಗ ಪುನೀತ್‌ ಅವರ ಬೃಹತ್ ಭಾವಚಿತ್ರವಿರುವ ಫ್ಲೆಕ್ಸ್‌ಗೆ ಹೂವಿನ ಹಾರ, ಬಾಳೆಕಂದು ಕಟ್ಟಿ ಹಣ್ಣು, ಸಿಹಿ ತಿನಿಸುಗಳನ್ನಿಟ್ಟು ಗ್ರಾಮಸ್ಥರು ಪೂಜಿಸಿದರು. ಅಂಗವಿಕಲ ಮಕ್ಕಳಿಗೆ ಸಹಾಯಧನ ವಿತರಿಸಿ ಮಾತನಾಡಿದ ಮುಖಂಡ ಶಂಕರಲಿಂಗಪ್ಪ, ‘ಚಿಕ್ಕವಯಸ್ಸಿನಲ್ಲೇ ಅತ್ಯುತ್ತಮ ಬಾಲ ನಟನಾಗಿ ಹೆಸರು ಮಾಡಿದ್ದ ಪುನೀತ್‌ ಅವರು ಅತ್ಯಂತ ಜನಪ್ರಿಯ ನಟ. ನಮ್ಮೆಲ್ಲರ ಹೆಮ್ಮೆ ಪುತ್ರನಾಗಿದ್ದರು. ಆದರೆ, ಚಿಕ್ಕ ವಯಸ್ಸಿನಲ್ಲಿ ಅವರನ್ನು ಕಳೆದುಕೊಂಡ ಅಭಿಮಾನಿಗಳು ದುಃಖತಪ್ತರಾಗಿದ್ದಾರೆ’ ಎಂದರು. ನೂರಾರು ಅಭಿಮಾನಿಗಳಿಗೆ ಅನ್ನ ಅಂತರ್ಪಣೆ ಜರುಗಿತು. ಮುಖಂಡರಾದ ಶಿವರಾಮಯ್ಯ, ರಂಗರಾಜು, ಶಿಕ್ಷಕ ಕೃಷ್ಣಮೂರ್ತಿ, ನಂದೀಶ, ಮಹೇಶ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಅಭಿಮಾನಿಗಳು ಪಾಲ್ಗೊಂಡಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಸರ್ಕಾರ ಅಂಥವರನ್ನು ಬಲಿ ಹಾಕೇ ಹಾಕುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಯಾರೇ ಭಾಗಿಯಾಗಿದ್ದರೂ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆ ಎಂದು ಎಚ್ಚರಿಸಿದರು. ಕಾಂಗ್ರೆಸ್ ನಾಯಕರ ಬಳಿ ದಾಖಲೆಗಳಿದ್ದರೆ ಇಡಿ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಗೆ ನೀಡಲು ಹಿಂದೇಟು ಹಾಕುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.ಈ ಪ್ರಕರಣದಲ್ಲಿ ಯಾರೇ ಇದ್ದರೂ ಅವರನ್ನು ಬಿಡುವುದಿಲ್ಲ. ಇಬ್ಬರು ಇದ್ದಾರೆ, ಮೂವರು ಇದ್ದಾರೆ ಎಂದು ಹೇಳುವುದು ಬೇಡ. ಪ್ರಕರಣದಲ್ಲಿ ಭಾಗಿಯಾದವರ ಹೆಸರು ಗೊತ್ತಿದ್ದರೆ ಬಹಿರಂಗಪಡಿಸಿ ಎಂದು ಸವಾಲು ಹಾಕಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ವರದಿ: ಮಂಜು ಗುರುಗದಹಳ್ಳಿ ತಿಪಟೂರು: ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹಾಲುಕುರಿಕೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ 30 ವರ್ಷ ವಯಸ್ಸಿನ  ಭಾರತಿ ಎಂಬವರು ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಇವರ ಸಂಬಂಧಿ ಎನ್ನಲಾಗಿರುವ ದಿವಾಕರ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ 11 ಗಂಟೆಯ ಸುಮಾರಿಗೆ ಭಾರತಿ ಅವರು ಮಕ್ಕಳಿಗೆ  ಸಿಹಿ ಹಂಚುತ್ತಿದ್ದ ವೇಳೆ ಅಂಗನವಾಡಿ ಕೇಂದ್ರಕ್ಕೆ ಬಂದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಭಾರತಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅಕ್ಕಪಕ್ಕದವರು ತಡೆಯಲು ಮುಂದಾದಾಗ ಚಾಕು ತೋರಿಸಿ ಬೆದರಿಸಿದ್ದಾನೆ. ಇದೇ ವೇಳೆ ಅಂಗನವಾಡಿಯ ಹಿಂಭಾಗಕ್ಕೆ ಭಾರತಿ ಅವರನ್ನು ಎಳೆದೊಯ್ದು ಚಾಕುವಿನಿಂದ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಘಟನೆಯನ್ನು ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕಣ್ಣೆದುರೇ ಇಂತಹದ್ದೊಂದು ಘಟನೆ ನಡೆದಿದ್ದು, ಸ್ಥಳೀಯರನ್ನು ಕ್ಯಾರೇ ಮಾಡದೇ…

Read More

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಎಂಬವರನ್ನು ಅದೇ ಗ್ರಾಮದ ಮೃತಳ  ಪತಿಯ ಅಕ್ಕನ ಮಗನಾದ ದಿವಾಕರ್ (25) ಎಂಬುವನು ಅಂಗನವಾಡಿ ಕಟ್ಟಡದ ಹಿಂಭಾಗ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಡೆದ ಅಂಗನವಾಡಿ ಕಟ್ಟಡದ ಹಿಂಭಾಗದಲ್ಲಿ ವಾಸವಿರುವ ಮನೆಯ ಓರ್ವ ಮಹಿಳೆ ಘಟನೆಯನ್ನು ನೋಡಿದ್ದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತು ಕೆಲ ಸಾರ್ವಜನಿಕರು ಈ ಘಟನೆಯನ್ನು ನೋಡಿದ್ದು, ಕಾಪಾಡಲೆಂದು ಹೋಗುವಾಗ ನಿಮ್ಮನ್ನು ಕೊಲೆ ಮಾಡುತ್ತಾನೆ ಎಂದು ಬೆದರಿಕೆ ಹಾಕಿ, ಓಡಿ ಹೋಗಿರುತ್ತಾನೆ ಎಂದು ಆರೋಪಿಸಲಾಗಿದೆ. ಈ ಘಟನೆ ನಡೆದ ಸ್ಥಳಕ್ಕೆ ಹೊನ್ನವಳ್ಳಿ  ಪೊಲೀಸರು ಆಗಮಿಸಿದ್ದು,  ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿದ್ದು, ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಹೊನ್ನಾಳಿ: ಮದುವೆ ಊಟ ಮಾಡಿದ ನೂರಾರು ಮಂದಿ ವಾಂತಿಭೇದಿ ಸಮಸ್ಯೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಹಳೇದೇವರಹೊನ್ನಾಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದಲ್ಲಿ ಶುಕ್ರವಾರ ಜರಗಿದ್ದ ಮದುವೆಯಲ್ಲಿ ಮಧ್ಯಾಹ್ನ ಊಟ ಮಾಡಿದ್ದ 500ಕ್ಕೂ ಅಧಿಕ ಜನರಲ್ಲಿ 140ಕ್ಕೂ ಹೆಚ್ಚು ಮಂದಿಗೆ ಮಧ್ಯರಾತ್ರಿ ಯಿಂದ ಆರೋಗ್ಯ ಸಮಸ್ಯೆ ಶುರುವಾಗಿದೆ. ಅಸ್ವಸ್ಥರನ್ನು ಶನಿವಾರ ಬೆಳಗ್ಗೆ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ತೀವ್ರ ಅಸ್ವಸ್ಥಗೊಂಡ ಹತ್ತು ಮಂದಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಚಂದ್ರಪ್ಪ ತಿಳಿಸಿದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಪೂರಿತ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಏರು ಪೇರಾಗಿರಬಹುದು ಎಂದು ಚಿಕಿತ್ಸೆ ನೀಡುತ್ತಿರುವ ಡಾ.ಕೆ. ವಿದ್ಯಾ ತಿಳಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರು ದಲಿತ ಸಿಎಂ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಹುಲ್ ಗಾಂಧಿ ನನಗೆ, ಏನಾಗಬೇಕು? ಎಂದು ಕೇಳಿದ್ದರು. ತಕ್ಷಣ ನಾನು ಸಿಎಂ ಆಗಬೇಕು ಎಂದು ಹೇಳಿದ್ದೆ. ಮಂತ್ರಿ ಆಗುವ ಆಸೆ ಇಲ್ಲ. ಸಿಎಂ ಆಗಬೇಕು ಎಂದು ಹೇಳಿದ್ದೆ. ನಾನು ಸಿಎಂ ಆಗಬಹುದು. ಆಗದೇ ಇರಬಹುದು. ಈ ಮಾತಿನಿಂದ ದಲಿತ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ಅದೃಷ್ಟ ಯಾರಿಗೆ ಬರುತ್ತೆ ನೋಡೋಣ, ದಲಿತರು ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು, ದಲಿತ ಸಿಎಂ ಹೋರಾಟಕ್ಕೆ ಜಿ.ಪರಮೇಶ್ವರ್ ಪರೋಕ್ಷ ಕರೆ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಗುಬ್ಬಿ: ಚುನಾವಣಾ ಆಯೋಗದ ನಿರ್ದೇಶನದಂತೆ ತಾಲ್ಲೂಕು ಕಚೇರಿ ಹಾಗೂ ತಾಲ್ಲೂಕಿನ ಎಲ್ಲಾ 212 ಮತಗಟ್ಟೆಗಳಲ್ಲಿಯೂ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ಬಿ. ಆರತಿ ತಿಳಿಸಿದರು. ತಾಲ್ಲೂಕು ಕಚೇರಿಯ ಕಂದಾಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ಹೊಸ ಸೇರ್ಪಡೆ, ಯಾವುದೇ ದೋಷ, ಬದಲಾವಣೆಗಳಿದ್ದರೂ ಮತದಾರರು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು. 2022ರ ಜ.13ಕ್ಕೆ ಅರ್ಹ ದಿನಾಂಕವನ್ನು ಇಟ್ಟುಕೊಂಡಿದ್ದು 18 ವರ್ಷ ಪೂರೈಸುವ ಹೊಸ ಮತದಾರರ ಸೇರ್ಪಡೆಗೆ ನಮೂನೆ 6, ಪಟ್ಟಿಯಿಂದ ಕೈಬಿಡಲು ನಮೂನೆ 7, ತಿದ್ದುಪಡಿಗೆ ನಮೂನೆ 8, ವರ್ಗಾವಣೆಗೆ ನಮೂನೆ 8ಎರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಅರ್ಹ ಮತದಾರರು ಚುನಾವಣಾ ಆಯೋಗದ ವೋಟರ್ ಹೆಲ್ಪ್‌ಲೈನ್ ಆಯಪ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಮುಂದಿನ ನಾಲ್ಕು ಭಾನುವಾರಗಳಂದು ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣಾ ವಿಶೇಷ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬೂತ್‌…

Read More

ತುರುವೇಕೆರೆ: ತಾಲ್ಲೂಕಿನ ಚೌದ್ರಿ ಸೇವಾ ಟ್ರಸ್ಟ್, ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಮತ್ತು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಆಶ್ರಯದಲ್ಲಿ ನ. 15ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಚೌದ್ರಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಚೌದ್ರಿ ನಾಗೇಶ್ ತಿಳಿಸಿದರು. ಪಟ್ಟಣದ ಚೌದ್ರಿ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜನರಲ್ಲಿ ತಮ್ಮ ಆರೋಗ್ಯದ ಕಾಳಜಿ ಹೆಚ್ಚಿಸುವ ಸಲುವಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಹೃದ್ರೋಗ, ನರರೋಗ, ಮೂತ್ರಪಿಂಡ, ಮಧುಮೇಹ, ಚರ್ಮರೋಗ, ಶ್ವಾಸಕೋಶ, ದಂತ ರೋಗ, ಸ್ತ್ರೀಯರ ರೋಗಗಳು, ಕಿವಿ, ಮೂಗು, ಮಕ್ಕಳ, ನೇತ್ರ, ಕೀಲು ಮತ್ತು ಮೂಳೆ, ಮಾನಸಿಕ ರೋಗ ಹಾಗೂ ಕ್ಷಯ ರೋಗಕ್ಕೆ ಸಂಬಂಧಿಸಿದ ವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ತಿಳಿಸಿದರು. ಪಟ್ಟಣದ ಉಡುಸಲಮ್ಮ ದೇವಾಲಯದ ಹಿಂಭಾಗದ ಚೌದ್ರಿ ಕನ್ವೆಂಷನ್ ಹಾಲ್‌ನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಆರೋಗ್ಯ ತಪಾಸಣಾ ಶಿಬಿರ…

Read More