Subscribe to Updates
Get the latest creative news from FooBar about art, design and business.
- ಹೆಚ್ಚು ಮೊಬೈಲ್ ಬಳಕೆ ಕಿವುಡುತನ ಮತ್ತುಅಂಧತ್ವಕ್ಕೆ ದಾರಿ: ವೀರೇಶ್ ವೈ.ಎಸ್.
- ಪತ್ರಕರ್ತರ ಸಮ್ಮೇಳನದಲ್ಲಿ ವಾರ್ಷಿಕ ಪ್ರಶಸ್ತಿ ವಿತರಣೆ ಶ್ಲಾಘನೀಯ: ತುಮಕೂರು ಜಿಲ್ಲಾ ಸಂಘ ಅಭಿನಂದನೆ
- ಜ.18, 19ರಂದು ವಿದ್ಯುತ್ ವ್ಯತ್ಯಯ
- ಅಲೆಮಾರಿ/ಅರೆ ಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
- ಜ.20ರಂದು ಶ್ವಾನ ಪ್ರದರ್ಶನ: ನೋಂದಣಿ ಮಾಡಿಸಿಕೊಳ್ಳುವುದು ಹೇಗೆ?
- ಫಲಪುಷ್ಪ ಪ್ರದರ್ಶನದಲ್ಲಿ ಗಿಡಗಳ ಪ್ರದರ್ಶನಕ್ಕೆ ಅವಕಾಶ
- ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆ ಸಾಧ್ಯತೆ: ಗೃಹ ಸಚಿವ ಪರಮೇಶ್ವರ್
- ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡಲು ಬೇಡಿಕೆಯಿಟ್ಟ ಸತೀಶ್ ಜಾರಕಿಹೊಳಿ
Author: admin
ತುಮಕೂರು: ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹಮದ್ ಅವರ ಹುಟ್ಟು ಹಬ್ಬದ ಪ್ರಯುಕ್ತ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಹುಟ್ಟು ಹಬ್ಬದ ಶುಭಾಶಯ ತಿಳಿಸಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳಾದ ವಿ.ಎಸ್. ಸೈಯದ್ ದಾದಾಪೀರ್ ಅವರು ಈ ವೇಳೆ ಮಾತನಾಡಿ, ಡಾ. ರಫೀಕ್ ಅಹಮದ್ ರವರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಶಾಸಕರಾದ ಡಾ.ರಫೀಕ್ ಅಹಮದ್ ರವರು ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ತುಂಬಾ ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲೂ ಸಹ ಕಾರ್ಮಿಕ ವಿಭಾಗದ ಪದಾಧಿಕಾರಿಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿ ತುಮಕೂರು ವಿಧಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ತಮ್ಮ ಪ್ರೋತ್ಸಾಹ ಸದಾ ಕಾಲ ಪ್ರೋತ್ಸಾಹ ನೀಡಲಿ ಎಂದು ಅವರು ಹಾರೈಸಿದರು. ಈ ವೇಳೆ, ಕಾಂಗ್ರೆಸ್ ಕಾರ್ಮಿಕ…
ಅಕ್ಷಯ ತೃತೀಯ ನಂತರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಸತತ ಐದನೇ ದಿನವೂ ಚಿನ್ನದ ದರದಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದ್ದು, ಪ್ರತಿ 10 ಗ್ರಾಂಗೆ 51, 280 ಆಗಿದೆ. ಇನ್ನು ಬೆಳ್ಳಿಯ ಬೆಲೆಯಲ್ಲಿ ಶೇ.0.26ರಷ್ಟು ಕುಸಿತ ಕಂಡಿದ್ದು, ಪ್ರತಿ ಕೆಜಿಗೆ 62,882 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ : IBJA ಯ ವೆಬ್‌ಸೈಟ್ ಪ್ರಕಾರ, 24-ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 230 ರೂ ಕುಸಿತ ಕಂಡಿದ್ದು, 10 ಗ್ರಾಂಗೆ 51, 280 ರೂ. ಆಗಿದೆ ಇದಲ್ಲದೇ 22ಕ್ಯಾರೆಟ್ ಚಿನ್ನದ ಬೆಲೆ 47,000 ರೂ. ಆಗಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೀಗಿದೆ : ನಗರ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ ಚೆನ್ನೈ …
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ರೆಪೊ ದರವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. RBI ರೆಪೋ ದರವನ್ನು 0.40% ಹೆಚ್ಚಿಸಿದೆ. ಇದರೊಂದಿಗೆ ರೆಪೋ ದರ ಶೇ.4ರಿಂದ ಶೇ.4.40ಕ್ಕೆ ಏರಿಕೆಯಾಗಿದೆ. ಈ ಹಿಂದೆ, RBI ಕೊನೆಯ ಬಾರಿಗೆ ರೆಪೊ ದರವನ್ನು 22 ಮೇ 2020 ರಂದು ಬದಲಾಯಿಸಿತು. ಸಾಲದ EMI ಹೆಚ್ಚಾಗುತ್ತದೆ ರೆಪೊ ದರದಲ್ಲಿ ಆರ್‌ಬಿಐ ಬದಲಾವಣೆ ಮಾಡಿರುವುದು ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ದಾರಿ ಮಾಡಿಕೊಟ್ಟಿದೆ. ರೆಪೋ ದರ ಹೆಚ್ಚಳದಿಂದ ಮುಂದಿನ ದಿನಗಳಲ್ಲಿ ನಿಮ್ಮ ಗೃಹ ಸಾಲ, ಕಾರು ಸಾಲದ ಇಎಂಐ ಹೆಚ್ಚಾಗಲಿದೆ. ಈ ಹಿಂದೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ವಿತ್ತೀಯ ಪರಿಶೀಲನಾ ಸಭೆಯಲ್ಲಿ (ಎಂಪಿಸಿ) ಆರ್‌ಬಿಐ ಸತತ 11 ನೇ ಬಾರಿಗೆ ರೆಪೊ ದರವನ್ನು ಬದಲಾಯಿಸಲಿಲ್ಲ. ಷೇರು ಮಾರುಕಟ್ಟೆಯಲ್ಲೂ ಮಾರಾಟದ ಹಂತ: ಆರ್‌ಬಿಐ ಗವರ್ನರ್ ತಮ್ಮ ಭಾಷಣದಲ್ಲಿ, ಜಾಗತಿಕ ಆರ್ಥಿಕತೆಯ ಪರಿಸ್ಥಿತಿ ಹದಗೆಡುತ್ತಿದೆ. ಆರ್ಥಿಕತೆಯ ಮೇಲೆ ಹಣದುಬ್ಬರದ ಒತ್ತಡ ಮುಂದುವರಿದಿದೆ. ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರ…
ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್‌ವುಡ್ ‘ಭೀಮ’ನಿಂದ ಅನಾವರಣಗೊಳಿಸಿದೆ ಚಿತ್ರತಂಡ. ಬೈರಾಗಿ ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು, ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಬ್ಯಾಂಡು ಬಜಾಯಿಸಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿದ್ದಾರೆ. ‘ನಕ್ಕರನಖ ನಕ್ಕರನಖ ನುಗ್ಗಿಬಂತೋ ನಾಡಹುಲಿ..’ ‘ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ…’ ಎಂಬ ಹಾಡನ್ನು ಅಕ್ಷಯ ತೃತೀಯ ವಿಶೇಷ ದಿನದಂದು ವಿಜಯ್ ಕುಮಾರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ’ ಅನ್ನೋದು ವಿಜಿ ಮಾತು. ‘ನೂರಾರು ಡಾನ್ಸರ್ಸ್, ಬೃಹತ್ ಸೆಟ್,…
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ 2022ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್‌ಗಳಿಂದ ಜಯ ಸಾಧಿಸಿದೆ. ಈ ಋತುವಿನಲ್ಲಿ ಧೋನಿ ನಾಯಕತ್ವ ವಹಿಸಿಕೊಂಡ ನಂತರ ಚೆನ್ನೈಗೆ ಮೊದಲ ಸೋಲು ಇದಾಗಿದೆ. ಗುರಿ ಬೆನ್ನತ್ತಿದ ಚೆನ್ನೈ ಪರ ಡೆವೊನ್ ಕಾನ್ವೆ ಅರ್ಧಶತಕ ಗಳಿಸಿದರು. ರುತುರಾಜ್ ಗಾಯಕ್ವಾಡ್ (28 ರನ್) ಮತ್ತು ಮೊಯಿನ್ ಅಲಿ (34 ರನ್) ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಚೆನ್ನೈ ಗುರಿ ಮುಟ್ಟುವಲ್ಲಿ ಹಿಂದೆ ಬಿದ್ದಿತು. ಬೆಂಗಳೂರು ಪರ ಹರ್ಷಲ್ ಪಟೇಲ್ 3 ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿದರು. ಬೆಂಗಳೂರು ತಂಡಕ್ಕೆ 174 ರನ್ ಟಾರ್ಗೆಟ್ ಇದಕ್ಕೂ ಮೊದಲು ಮಹಿಪಾಲ್ ಲೊಮ್ರೊರ್ (42) ಮತ್ತು ನಾಯಕ ಫಾಫ್ ಡು ಪ್ಲೆಸಿಸ್ (38) ಅವರ ಅದ್ಭುತ ಬ್ಯಾಟಿಂಗ್‌ನಿಂದಾಗಿ ಆರ್‌ಸಿಬಿ ಚೆನ್ನೈಗೆ 174 ರನ್‌ಗಳ ಗುರಿಯನ್ನು ನೀಡಿತ್ತು. ಬೆಂಗಳೂರು 20 ಓವರ್‌ಗಳಲ್ಲಿ ಎಂಟು…
ಈಗ ಎಲ್ಲೆಲ್ಲೂ IPL ಫೀವರ್ ಶುರುವಾಗಿದೆ. ಈ ಐಪಿಎಲ್ ಹಂಗಾಮದ ನಡುವೆ YPL ಟೂರ್ನಿ ಶುರುವಾಗ್ತಿದೆ. ನಾವು ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್) ಸಿಸಿಎಲ್ ಸೆಲೆಬ್ರಿಟಿ ಪ್ರೀಮಿಯರ್ ಲೀಗ್) ಕೇಳಿದ್ದೇವೆ ಇದು ಯಾವುದು YPL ಅನ್ನೋ ಪ್ರಶ್ನೆಗೆ ಉತ್ತರ ಯಜಮಾನ ಪ್ರೀಮಿಯರ್ ಲೀಗ್. ವಿಷ್ಣುಸೇನಾ ಸಮಿತಿಯಿಂದ ಆಯೋಜಿಸಲಾಗಿರುವ ಈ ಟೂರ್ನಿಯ ಸಂಪೂರ್ಣ ಜವಾಬ್ದಾರಿಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ. ಇದೇ 7 ಮತ್ತು 8ರಂದು ನಡೆಯಲಿರುವ YPL ಟೂರ್ನಿಮೆಂಟ್ ಗಾಗಿ ವಿಷ್ಣುಸೇನಾ ಸಮಿತಿ ಇವತ್ತು ಥೀಮ್ ಸಾಂಗ್ ಬಿಡುಗಡೆಯಾಗಿದೆ. ಥೀಮ್ ಸಾಂಗ್ ಸಾಂಗ್ ಪ್ರಮೋದ್ ಮರವಂತೆ ಸಾಹಿತ್ಯ ನೀಡಿದ್ದು, ಹೇಮಂತ್ ಜೋಯಿಸ್ ಮ್ಯೂಸಿಕ್ , ಚೇತನ್ ನಾಯ್ಕ್ ಕಂಠ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಈ ಪ್ರೀಮಿಯರ್ ಲೀಗ್ ಜವಾಬ್ದಾರಿಯನ್ನು ಬೆಂಗಳೂರು ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ಯದುನಂದನ್ ಗೌಡ , ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಆನಂದ್ ವಹಿಸಿಕೊಂಡಿದ್ದಾರೆ. ಕ್ರಿಕೆಟ್ ಅನ್ನೋದನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡಿಸಿದ್ದು…
ಸಿರಾ: ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸಿರಾ ನಗರದ ಜ್ಯೋತಿ ನಗರದಲ್ಲಿ ನಡೆದ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಬೇಕೆಂದು ಜನತಾ ಜಲಧಾರೆ ಯಾತ್ರೆ ಹಮ್ಮಿಕೊಂಡಿಲ್ಲ. ಬಹುಮತ ಬರದಿದ್ದರೂ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾನು ಮುಖ್ಯಮಂತ್ರಿ ಆಗಲು ಪಕ್ಷಕ್ಕೆ ಮತ ಕೇಳಲು ಬಂದಿಲ್ಲ. ರಾಜ್ಯದಲ್ಲಿ ಶಾಶ್ವತವಾದ ನೀರಾವರಿ ಯೋಜನೆ ಜಾರಿ ಮಾಡುವ ಉದ್ದೇಶವೇ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ಉದ್ದೇಶ ಎಂದು ಅವರು ಹೇಳಿದರು. ರಾಜ್ಯದಲ್ಲಿ 2023ಕ್ಕೆ ಜೆಡಿಎಸ್ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತಂದರೆ ಪ್ರತಿ ಗ್ರಾಮ ಪಂಚಾಯಿತಿಯ ಕೇಂದ್ರದಲ್ಲಿ ಎಲ್ ಕೆಜಿಯಿಂದ 12ನೇ ತರಗತಿಯವರೆಗೆ ಇಂಗ್ಲಿಷ್ ಮತ್ತು ಕನ್ನಡ ಎರಡೂ ಮಾಧ್ಯಮದಲ್ಲಿ ಹೈಟೆಕ್ ಶಾಲೆಗಳನ್ನು ತೆರೆದು ಉಚಿತವಾಗಿ ಶಿಕ್ಷಣ ಕೊಡುವ ಯೋಜನೆ ಹಾಕಿಕೊಂಡಿದ್ದೇನೆ. ರಾಜ್ಯದ ಜನತೆ…
ತುಮಕೂರು : ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಗೃಹ ಸಚಿವ ಅರಗ ಜ್ಞಾನೆಂದ್ರ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳೊಂದಗೆ ಮಾತನಾಡಿದ ಅವರು, ನಾನು ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಪ್ರಗತಿ ಬಗ್ಗೆ ಕೆಲವು ಅಧಿಕಾರಿಗಳನ್ನು ಕರೆದು ಅವರ ಜೊತೆ ಚರ್ಚೆ ಮಾಡಿದ್ದೇನೆ. ವಿಶೇಷವಾಗಿ ಕುಡಿಯುವ ನೀರು, ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಪ್ರಗತಿ ಚೆನ್ನಾಗಿದೆ. ಅಧಿಕಾರಿಗಳು ವಿಶೇಷವಾದ ಪ್ರಯತ್ನ ಮಾಡುತ್ತಿದ್ದಾರೆ ಹಾಗೂ ಕೋವಿಡ್ ಗೆ ಯಾವ ರೀತಿ ಪ್ರಿಪೇರ್ ಆಗಿದೆ, ನಾಲ್ಕನೇ ಅಲೆ ಬಂದರೆ ನಮ್ಮ ತಯಾರಿ ಏನು ಎಂಬುದರ ಬಗ್ಗೆ ಎಲ್ಲವನ್ನೂ ಮಾತನಾಡಿದ್ದೇವೆ ಎಂದರು. ಪಿಎಸ್ ಐ ಅಕ್ರಮ ಪರೀಕ್ಷೆ ಬಗ್ಗೆ ಸ್ಪಷ್ಟನೆಕೊಟ್ಟ ಗೃಹ ಸಚಿವರು, ಎಲ್ಲಾ ಕಾಲದಲ್ಲಿಯೂ ಇದು ಆಗಿದೆ ಎಂಬುದು ಹೊರಗೆ ಬರುತ್ತಿದೆ. ನನಗೆ ಮಾಹಿತಿ ಲಭ್ಯ ಆದ ತಕ್ಷಣ ಒಂದು ಸಣ್ಣ ಸುಳಿವು ಸಿಕ್ಕಿತು. ಕೇವಲ ಎರಡು ಗಂಟೆಗಳಲ್ಲಿ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಸಿ ಓ ಡಿ…
ಗುಬ್ಬಿ:ಬಸವರಾಜು ಹೊರಟ್ಟಿಯವರು ಪ್ರಬುದ್ದ ರಾಜಕಾರಣಿ. ಬುದ್ದಿವಂತರು, ವಿಚಾರವಂತರು ಅವರ ತೀರ್ಮಾನ ಸರಿಯಾಗಿ ಇರುತ್ತದೆ ಜೆಡಿಎಸ್ ನಲ್ಲಿ ಇರುವವರಿಗೆ ಬೆಲೆ ಇಲ್ಲ ಎಂದು ಶಾಸಕ ಎಸ್ .ಆರ್. ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಜೋಗಿಹಳ್ಳಿ ,ಮಠ ಗ್ರಾಮದಲ್ಲಿ ಸುಮಾರು 60 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು , ನಾನು ಕೂಡ ಜೆಡಿಎಸ್ ನಿಂದ ನಾಲ್ಕು ಬಾರಿ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಬಂದಿದ್ದಾನೆ. ನನ್ನನ್ನೇ ಮೂಲೆಗುಂಪು ಮಾಡಿದ್ದಾರೆ. ಇವತ್ತು ಜೆಡಿಎಸ್ ಪಕ್ಷದಲ್ಲಿ ಇದ್ರೂ ಕೂಡ ಆಟಕುಂಟು ಲೆಕ್ಕಕಿಲ್ಲ ಎಂಬ ಪರಿಸ್ಥಿತಿಯಲ್ಲಿ ನಾನು ಇದ್ದೇನೆ. ನಾನು ಜೆಡಿಎಸ್ ಪಕ್ಷದಲ್ಲಿ ಇದ್ದೇನೆ ಪಕ್ಷ ಬಿಟ್ಟಿಲ್ಲ ಆದರೆ ನನ್ನನ್ನು ಅವರೇ ದೂರ ಮಾಡಿಕೊಳುತ್ತಿದ್ದಾರೆ ಎಂದು ಅವರು ಅಸಮಾಧಾನ ತೋಡಿಕೊಂಡರು. ಚುನಾವಣೆ ಪಕ್ಷದ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ. ಕಾರ್ಯಕರ್ತರನ್ನ ಕೇಳಿ ಹೇಳುತ್ತೇನೆ. ನನ್ನ ಕಾರ್ಯಕರ್ತರೇ ನನ್ನ ಬೆನ್ನೆಲುಬು. ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಾಗಲೂ ನನ್ನ ಕಾರ್ಯಕರ್ತರನ್ನು ನಂಬಿದ್ದೇನೆ.…
ಕೊರಟಗೆರೆ: ಪಟ್ಟಣದ ಕರ್ನಾಟಕ ಬ್ಯಾಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಖಾಸಗಿ ಬಸ್ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ. ಈ ವೇಳೆ ಸ್ಥಳೀಯರು ಗಾಯಗೊಂಡ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆ ಸೇರಿಸಿದ್ದಾರೆ. ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಗಾಯಾಳುವನ್ನು ಕಳುಹಿಸಿಕೊಡಲಾಗಿದೆ . ಅಪಘಾತ ನಡೆದ ತಕ್ಷಣ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರ ತಮ್ಮ ಊರುಗಳಿಗೆ ತಲುಪಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು . ಬಸ್ ಚಾಲಕನ ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ .. ಗಾಯಗೊಂಡಿರುವ ವ್ಯಕ್ತಿಯು ತುಮಕೂರಿನ ಸ್ವಾಧೇನಹಳ್ಳಿ ಗ್ರಾಮದ 55 ವರ್ಷದ ಓಬಳದಾಸಯ್ಯ ಎಂದು ತಿಳಿದುಬಂದಿದೆ . ಇನ್ನು ಘಟನೆ ನಡೆದ ಸ್ಥಳಕ್ಕೆ ಕೊರಟಗೆರೆಯ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…