Subscribe to Updates
Get the latest creative news from FooBar about art, design and business.
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
- ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
- ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
- ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
- ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
- ಎರಡೂವರೆ ವರ್ಷದಲ್ಲಿ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
- ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್.ರಾಜಾಸಾಬ್
Author: admin
ಎರಡು ವರ್ಷಗಳ ಬಳಿಕ ಸಂಭ್ರಮದ ಹೊಸ ವರ್ಷಾಚರಣೆಗೆ ಇಡೀ ಜಗತ್ತು ಸಿದ್ಧವಾಗಿದೆ. ಕಳೆದೆರಡು ವರ್ಷಗಳಲ್ಲಿ ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಭ್ರಮಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ಅದ್ದೂರಿ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ನಡೆದಿದೆ. 2021 ಮತ್ತು 2022ರಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೊವಿಡ್ ಮಾರ್ಗ ಸೂಚಿಗಳು ಸಂಪೂರ್ಣವಾಗಿ ಬ್ರೇಕ್ ಹಾಕಿದ್ದವು. ಈ ಬಾರಿ ಕೂಡ ಹೊಸ ವರ್ಷಾಚರಣೆಯ ಸಂದರ್ಭದಲ್ಲಿಯೇ ಕೊವಿಡ್ ನ ಹೆಸರು ಕೇಳಿ ಬಂದಿತ್ತು. ಆದರೆ ಸರ್ಕಾರವು ಮುಂಜಾಗೃತಾ ಕ್ರಮದೊಂದಿಗೆ ಹೊಸ ವರ್ಷಾಚರಣೆಗೆ ಅವಕಾಶ ನೀಡಿರುವುದು ಸಾರ್ವಜನಿಕರಿಗೆ ಅನುಕೂಲಕರವಾಗಿದೆ. 2022ರ ಡಿಸೆಂಬರ್ 31ರ ದಿನವಾದ ಇಂದು ಮಧ್ಯರಾತ್ರಿ 12 ಗಂಟೆಗೆ ಸಾರ್ವಜನಿಕರು ತಮ್ಮ ಅಭಿರುಚಿಗೆ ತಕ್ಕಂತೆ ಹೊಸ ವರ್ಷವನ್ನು ಸಂಭ್ರಮಿಸಲಿದ್ದಾರೆ. ಈಗಾಗಲೇ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಜನರು ಸಂಭ್ರಮಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನೀವು ಮದ್ಯದ ಚಟಕ್ಕೆ ಬಿದ್ದರೆ, ನೀವು ಬೇಗನೆ ವಯಸ್ಸಾಗುತ್ತೀರಿ ಎಂದು ಅಧ್ಯಯನಗಳು ತೋರಿಸುತ್ತವೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಚೆನ್ನಾಗಿ ಊಟ ಮಾಡಿದರೆ ಸಾಲದು, ಮದ್ಯಪಾನವನ್ನೂ ತ್ಯಜಿಸಬೇಕು ಎನ್ನುತ್ತಾರೆ ಸಂಶೋಧಕರು ಶಿಫಾರಸು ಮಾಡಿ. ಆಲ್ಕೋಹಾಲ್ ಚರ್ಮದ ಅಕಾಲಿಕ ವಯಸ್ಸನ್ನು ಉಂಟುಮಾಡುತ್ತದೆ ಎಂದು ಹೇಳಲಾಗುತ್ತದೆ. ಆಲ್ಕೋಹಾಲ್ ದೇಹದಲ್ಲಿ ನಿರ್ಜಲೀಕರಣ ಮತ್ತು ಆಲಸ್ಯವನ್ನು ಉಂಟುಮಾಡುತ್ತದೆ. ಮುಖಭಾವವೂ ಕಡಿಮೆಯಾಗುತ್ತದೆ. ಯಕೃತ್ತು ಮತ್ತು ಮೂತ್ರಪಿಂಡದ ಕಾರ್ಯವನ್ನು ಹಾನಿಗೊಳಿಸುತ್ತದೆ. ಹೆಚ್ಚು ಆಲ್ಕೋಹಾಲ್ ಕುಡಿಯುವುದರಿಂದ ಮೆದುಳಿನ ಜೀವಕೋಶಗಳು ಕುಗ್ಗಲು ಕಾರಣವಾಗಬಹುದು. ಪರಿಣಾಮವಾಗಿ, ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥತೆ, ಕೆಲಸದಲ್ಲಿ ಅಸ್ತವ್ಯಸ್ತತೆ, ಕೇಂದ್ರೀಕರಿಸಲು ಅಸಮರ್ಥತೆ, ಭಾವನೆಗಳನ್ನು ನಿಯಂತ್ರಿಸುವುದು ಮತ್ತು ಕೋಪದಂತಹ ಲಕ್ಷಣಗಳು ಕಂಡುಬರುತ್ತವೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಆಲ್ಕೋಹಾಲ್ ಮೊದಲಿಗೆ ನಿಮ್ಮನ್ನು ಅಮಲುಗೊಳಿಸಿದರೂ, ಅದರ ಪರಿಣಾಮಗಳು ಕಡಿಮೆ ನಿದ್ರೆಯಿಂದ ಎಚ್ಚರಗೊಳ್ಳಲು ಮತ್ತು ಮರುಕಳಿಸುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ ಮುಖ್ಯವಾದ ಅಂಗವಾಗಿದೆ. ಮೂತ್ರಪಿಂಡಗಳು ನಿಯತಕಾಲಿಕವಾಗಿ ದೇಹದಿಂದ ತ್ಯಾಜ್ಯವನ್ನು ಹೊರಹಾಕುತ್ತವೆ. ಮೂತ್ರಪಿಂಡಕ್ಕೆ ಯಾವುದೇ ಹಾನಿಯನ್ನು ನಿರ್ಲಕ್ಷಿಸುವುದು ಅಪಾಯಕಾರಿ. ನಾವು ತೆಗೆದುಕೊಳ್ಳುವ ಆಹಾರ ಮತ್ತು ನೀರಿನಿಂದ ಕಿಡ್ನಿಯನ್ನು ರಕ್ಷಿಸಬಹುದು ಎನ್ನುತ್ತಾರೆ ವೈದ್ಯರು. ಇದರಲ್ಲಿರುವ ಕೆಂಪು ಮೆಣಸಿನಕಾಯಿ ಕಿಡ್ನಿಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅವುಗಳಲ್ಲಿ ಪೊಟ್ಯಾಸಿಯಮ್ ಕಡಿಮೆ ಎಂದು ಅಧ್ಯಯನಗಳು ತೋರಿಸಿವೆ. ಇದರಲ್ಲಿ ವಿಟಮಿನ್ ಎ, ಸಿ, ಬಿ6, ಫೋಲಿಕ್ ಆಮ್ಲ ಮತ್ತು ಫೈಬರ್ ಸಮೃದ್ಧವಾಗಿದೆ. ಈ ಪೋಷಕಾಂಶಗಳು ಮೂತ್ರಪಿಂಡದ ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಲೈಕೋಪೀನ್ ಸಮೃದ್ಧವಾಗಿದೆ. ಇದು ಕ್ಯಾನ್ಸರ್ ನಿಂದ ರಕ್ಷಿಸುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು : ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವನ್ನು ತಿಪಟೂರು ಗಡಿಭಾಗದ ಬಳುವನೇರಲಿನಲ್ಲಿ ಡಿಸೆಂಬರ್ 31ರಂದು ಹಮ್ಮಿಕೊಳ್ಳಲಾಗಿದೆ ಎಂದು ಕ.ಸಾ.ಪ ಹೊನ್ನವಳ್ಳಿ ಹೋಬಳಿ ಘಟಕದ ಅಧ್ಯಕ್ಷ ಚನ್ನಬಸಪ್ಪ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಹೊನ್ನವಳ್ಳಿ ತಾಲ್ಲೂಕು ಕೇಂದ್ರವಾಗಿದ್ದ ಇತಿಹಾಸಗಳನ್ನು ಒಳಗೊಂಡಿದೆ. ಇದಕ್ಕಿಂತ ಹಿಂದೆ ಪಾಳೇಗಾರರು ಹೊನ್ನವಳ್ಳಿಯನ್ನು ಆಳುತ್ತಿದ್ದು, ಆಗಿನ ಕೋಟೆ-ಕೊತ್ತಲನ್ನು ಈಗಲೂ ನೋಡಬಹುದು. ಮುಖ್ಯವಾಗಿ ಇಲ್ಲಿನ ವಿಶಿಷ್ಟವಾದ ಗಂಗಾಪಾಣಿ ಎಳನೀರು ಮೈಸೂರು ದಸರಾಕ್ಕೆ ಕಳುಹಿಸುತ್ತಿದ್ದ ಇತಿಹಾಸವನ್ನು ಹೊಂದಿದೆ ಹಾಗೂ ಇಲ್ಲಿನ ಜನರು ಶಾಂತಿಪ್ರಿಯರು ಸಾಹಿತ್ಯಾಭಿರುಚಿಯನ್ನು ಉಳ್ಳವರು ಅದಕ್ಕಾಗಿಯೇ ಇಲ್ಲಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದ ಇದೇ ಡಿಸೆಂಬರ್ 31ರ ಶನಿವಾರ ಬಳುವನೇರಲಿನಲ್ಲಿ ಹೋನ್ನವಳ್ಳಿ ಹೋಬಳಿ ಮಟ್ಟದ 2ನೇ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬಳುವನೇರಲು ರಂಗಾಪುರದ ಆರ್.ಕೆ.ಶಿವಶಂರಪ್ಪ ಸಮ್ಮೇಳನಾಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು. ಸಮ್ಮೇಳನವು ದೊಡ್ಡಮೇಟಿಕುರ್ಕೆಯ ಬೂದಾಳು ಮಠದ ಶ್ರೀಶ್ರೀ ಶಶಿಶೇಖರಸಿದ್ದಬಸವ ಮಹಾಸ್ವಾಮೀಜಿಗಳ ನೇತೃತ್ವದದಲ್ಲಿ ಜರುಗಲಿದ್ದು, ಸ್ಥಳೀಯ ಗ್ರಾಮೀಣ ಪ್ರತಿಭೆಗಳ ಕಲೆಗಳು ಸಮ್ಮೇಳನದಲ್ಲಿ…
ಪ್ರವಾಹಗಳು ಫಿಲಿಪೈನ್ಸ್ ಅನ್ನು ನಾಶಮಾಡುತ್ತಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಯ ಪ್ರಕಾರ, ನಿನ್ನೆ ಪ್ರವಾಹದಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಪ್ರವಾಹದಲ್ಲಿ ಒಟ್ಟು 3,93,069 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. 292 ಪುನರ್ವಸತಿ ಕೇಂದ್ರಗಳಲ್ಲಿ 81,443 ಜನರು ಆಶ್ರಯ ಪಡೆದಿದ್ದಾರೆ. ಕ್ರಿಸ್ಮಸ್ ದಿನದ ಸಂಜೆ ಆರಂಭವಾದ ಪ್ರವಾಹವು ಫಿಲಿಪ್ಪೀನ್ಸ್‌ನ 9 ಪುರಸಭೆಗಳನ್ನು ಮುಳುಗಿಸಿತು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರವಾಹದ ಪರಿಣಾಮ ಕೃಷಿಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಅಧಿಕಾರಿಗಳು ಭವಿಷ್ಯ ನುಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಂಚಮಸಾಲಿ ಸಮುದಾಯಕ್ಕೆ ಸರ್ಕಾರದ ಮೀಸಲಾತಿ ವಿಚಾರ ಸ್ಪಷ್ಟವಾಗಿಲ್ಲ, ಹೀಗಾಗಿ ಯಾರೂ ವಿಜಯೋತ್ಸವ ಅಥವಾ ತಿರಸ್ಕಾರ ವ್ಯಕ್ತಪಡಿಸಬೇಡಿ ಎಂದು ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮೀಸಲಾತಿ ನೀಡಿದೆ ಎಂದು ಸಚಿವರು ಹೇಳುತ್ತಿದ್ದಾರೆ. ಆದರೆ ಸಚಿವ ಮಾಧುಸ್ವಾಮಿ ಹೇಳಿಕೆ ಸ್ಪಷ್ಟವಾಗಿಲ್ಲ ಎಂದರು. ಈ ಬಗ್ಗೆ ಪಂಚಮಸಾಲಿ ಸಮಾಜದ ಮುಖಂಡರಾದ ಈರಣ್ಣ ಕಡಾಡಿ, ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಮಾತನಾಡಿದ್ದೇನೆ. ಅವರು ಮುಂಜಾನೆ ಬರುತ್ತೇನೆ ಎಂದು ಹೇಳಿದ್ದಾರೆ. ಅವರು ಬಂದ ಮೇಲೆ ಚರ್ಚಿಸಿದ ನಂತರವೇ ನಿರ್ಧಾರ ತಿಳಿಸುತ್ತೇನೆ. ಕ್ಯಾಬಿನೆಟ್ ಚರ್ಚೆ ಪ್ರತಿ ನಮಗೆ ಇನ್ನೂ ಸಿಕ್ಕಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಟನ್ ಕಬ್ಬಿಗೆ 50 ರೂ. ಎಫ್ ಆರ್ ಪಿ ಹೆಚ್ಚಳ ಮಾಡಿದ್ದರೂ, ಕಬ್ಬು ಬೆಳೆಗಾರರು ಹೋರಾಟ ಮುಂದುವರೆಸಿದ್ದರಿಂದ ರಾಜ್ಯ ಸರ್ಕಾರ ಮೊಲಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶದಲ್ಲಿ ಪ್ರತಿ ಟನಗೆ 100 ರೂಪಾಯಿ ಹೆಚ್ಚುವರಿಯಾಗಿ ಪಾವತಿಸುವಂತೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 3050 ರೂಪಾಯಿ ಎಫ್ ಆರ್ ಪಿ ನಿಗದಿಗೊಳಿಸಿತ್ತು. ಹೀಗಾಗಿ ಕಬ್ಬಿನ ದರ ಹೆಚ್ಚಳ ಮಾಡುವಂತೆ ಬೆಳೆಗಾರರು ಬೆಳಗಾವಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಸರ್ಕಾರ ಎಥೆನಾಲ್ ಉತ್ಪಾದಿಸುವ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 50 ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದಕ್ಕೆ ಒಪ್ಪದ ಕಬ್ಬು ಬೆಳೆಗಾರರು ಹೋರಾಟ ಮುಂದುವರೆಸಿದ್ದರು. ಗುರುವಾರ ಹೊಸ ಆದೇಶ ಹೊರಡಿಸಲಾಗಿದ್ದು, ಮೊಲಾಸಿಸ್ ಮಾರಾಟದಿಂದ ಸಕ್ಕರೆ ಕಾರ್ಖಾನೆಗಳಿಗೆ ಬರುವ ಲಾಭಾಂಶ ಮತ್ತು ಸಾಗಾಣಿಕೆ ವೆಚ್ಚ…
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ನಡೆದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಮಾಹಿತಿ ನೀಡಿದ್ದು, ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಇನ್ನು ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆಗೆ 126.27ಎಕರೆ ಸರ್ಕಾರಿ ಜಮೀನು ಮೀಸಲಿರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು. ವಿಧಾನಸಭೆಯಲ್ಲಿ ಗುರುವಾರ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆಗೆ ಉತ್ತರಿಸಿದ ಅವರು, ವಿ.ವಿಗೆ ಹಿರೇಬಾಗೇವಾಡಿ- ಹಾಲಗಿಮರ್ಡಿ ಗ್ರಾಮದಲ್ಲಿ ಮುಂಜೂರಾದ ಜಾಗದಲ್ಲಿ ಕಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಮೊದಲನೇ ಹಂತದ ಕಟ್ಟಡ ಕಾಮಗಾರಿಗೆ ಸ್ಥಳೀಯ ರೈತರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿ.9ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರು ಹಾಗು ವಿವಿಯ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರೈತರಿಗೆ ಕಬ್ಬು ಹಾಗೂ ಇನ್ನಿತರೆ ಕೃಷಿ ಸಂಬಂಧಿತ ವಸ್ತುಗಳನ್ನು ಸಾಗಿಸಲು ಅನುಕೂಲವಾಗುವಂತೆ ರಸ್ತೆ ಬಿಟ್ಟುಕೊಡಲು ವಿಶ್ವವಿದ್ಯಾಲಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಕಂಪೌಂಡ್ ಗೋಡೆಯನ್ನು ತೆರವುಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಕಳೆದ ಐದು ವರ್ಷಗಳಲ್ಲಿ 36117 ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದ್ದು,18618 ಕಟ್ಟಡಗಳನ್ನು ದುರಸ್ಥಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.ವಿಧಾನಸಭೆಯಲ್ಲಿ ಗುರುವಾರ ಶಾಸಕ ಪ್ರಿಯಾಂಕ್ ಖರ್ಗೆಯವರ ಪ್ರಶ್ನೆಗೆ ಅವರು ಉತ್ತರಿಸಿದರು. ಹಿಂದಿನ ಸರ್ಕಾರ ಕಾಲ ಕಾಲಕ್ಕೆ ತಕ್ಕಂತೆ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ಥಿಕಾರ್ಯ ಮಾಡದ ಹಿನ್ನೆಲೆ ನಮ್ಮ ಸರ್ಕಾರ ಇಷ್ಟೊಂದು ಪ್ರಮಾಣದ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ಥಿಗೆ ದೊಡ್ಡ ಮೊತ್ತದ ಅನುದಾನ ಬಳಸಬೇಕಾಗಿದೆ ಎಂದುಅವರು ತಿಳಿಸಿದರು. 2013ರಿಂದ 18ರವರೆಗೆ ಶಾಲಾಕಟ್ಟಡಗಳ ದುರಸ್ಥಿ ಆಗಿರುವುದಿಲ್ಲ ಹಾಗಾಗಿ ನಮ್ಮ ಸರ್ಕಾರ ಅವಧಿಯಲ್ಲಿ ದುರಸ್ಥಿ ಕಾರ್ಯ ಹೆಚ್ಚಾಗಿದೆ, ಪ್ರತಿವರ್ಷ 3 ಸಾವಿರ ಕೊಠಡಿಗಳ ದುರಸ್ಥಿ ಆಗುತ್ತಿದೆ ಮತ್ತು ಪಠ್ಯಪುಸ್ತಕಗಳ ಸುಳ್ಳು ಇತಿಹಾಸ ತೆಗೆದು ಸತ್ಯವನ್ನಷ್ಟೇ ಹೇಳಲಾಗುತ್ತ್ತಿದೆ ಎಂದರು. 2022-23 ನೇ ಸಾಲಿನ ಯುಸೈಡ್/ ಸ್ಯಾಟ್ಸ್ ಅಂಕಿ ಅಂಶಗಳ ಪ್ರಕಾರ 75,675 ಸರ್ಕಾರಿ ಶಾಲಾ ಕೊಠಡಿಗಳಿಗೆ ದುರಸ್ಥಿ ಅವಶ್ಯಕತೆ ಇರುತ್ತದೆ.ಈ ಪೈಕಿ 36,724 ಕೊಠಡಿಗಳಿಗೆ ಸಣ್ಣ ಪ್ರಮಾಣದ ಅವಶ್ಯಕತೆ ಇರುತ್ತದೆ. ಪ್ರತಿ ಕೊಠಡಿಗಳಿಗೆ ರೂ.2…