Author: admin

ಪಾವಗಡ:  ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ದಿಯೇ ಶಿಕ್ಷಣ  ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹಾಗೂ ಖ್ಯಾತ ವೈದ್ಯ ಡಾ.ಜಿ.ವೆಂಕಟರಾಮಯ್ಯ ತಿಳಿಸಿದರು ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜು ಅವರಣದಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಪಾವಗಡ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಪಾವಗಡ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪಾವಗಡ ಇವರ ಸಂಯುಕ್ತಾಶ್ರಯದಲ್ಲಿ 2025–26 ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ  ತಾಲ್ಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಪಾವಗಡ ತಾಲ್ಲೂಕು ಬರಪೀಡಿತ, ಹಿಂದುಳಿದ ತಾಲ್ಲೂಕು ಎಂದು ಹಣೆಪಟ್ಟಿ ಪಡೆದಿದ್ದು, ಇಂತಹ ಪ್ರದೇಶದಲ್ಲಿ ಇಲ್ಲಿನ ಮಕ್ಕಳು ಕಡಿಮೆ ಖರ್ಚಿನಲ್ಲಿ ಉತ್ತಮ ವ್ಯಾಸಂಗ ಮಾಡಲಿ ಎಂಬ ಉದ್ದೇಶವಿರಿಸಿಕೊಂಡು ನಾನು  ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿದೆ, ಕಳೆದ ಹಲವಾರು ವರ್ಷ ಗಳಿಂದ ತಾಲ್ಲೂಕಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸೇವೆ ನೀಡಿದ ತೃಪ್ತಿ ನನಗಿದೆ, ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ನೂರಾರು ಮಕ್ಕಳು ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಉನ್ನತ ಸ್ಥಾನ…

Read More

ಸರಗೂರು:  ಕೋರೆಗಾಂವ್‌ ಘಟನೆಯು ಮಹರ್‌ ಸೈನಿಕರ ಹೋರಾಟವನ್ನು ಸ್ಮರಿಸುತ್ತದೆ. ಇತಿಹಾಸದಲ್ಲಿ ಹುದುಗಿದ್ದ ಮಹರ್ ಸೈನಿಕರ ಚರಿತ್ರೆಯನ್ನು ಅಂಬೇಡ್ಕರ್‌ ಅವರು ಅಧ್ಯಯನ ನಡೆಸಿ ಮುನ್ನಲೆಗೆ ತಂದರು’ ಎಂದು ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಸ್ಮರಿಸಿದರು. ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಬುಧವಾರದಂದು ವಿಶ್ವ ಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಬುಧವಾರ ದಂದು ಭೀಮಾ ಕೋರೆಗಾಂವ್ ವಿಜಯೋತ್ಸವ ವಿಜೃಂಭಣೆಯಿಂದ ನಡೆಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಪೇಶ್ವೆ ಸೈನ್ಯದ ವಿರುದ್ಧ ದಲಿತ ಮಹರ್ ಸೈನಿಕರ ಗೆಲುವನ್ನು ಈ ವಿಜಯೋತ್ಸವವು ಸ್ಮರಿಸುತ್ತದೆ. ಈ ಹೋರಾಟವು ಇಂದಿಗೂ ದಲಿತ ಸಮುದಾಯಕ್ಕೆ ಮಾದರಿಯಾಗಿದೆ. ಆತ್ಮವಿಶ್ವಾಸವನ್ನು ತುಂಬಲಿದೆ ಎಂದು ಹೇಳಿದರು. ದೇಶದಲ್ಲಿ ಕೆಲವರು ಜ.1ರಂದು ಹೊಸ ವರ್ಷವಾಗಿ ಸಂಭ್ರಮಿಸುವರು. ನಾವು ಪೇಶ್ವೆಗಳ ವಿರುದ್ಧ ಮಹರ್ ಸೈನಿಕರು ಹೋರಾಟ ನಡೆಸಿ ವಿಜಯ ಸಾಧಿಸಿದ ದಿನವಾಗಿ ಆಚರಿಸುತ್ತೇವೆ’ ಎಂದು ಹೇಳಿದರು. ದಲಿತ ಸಮುದಾಯವನ್ನು ಅವಮಾನಿಸಿದ ಪೇಶ್ವೆಗಳ ವಿರುದ್ಧ ಆತ್ಮಗೌರವಕ್ಕಾಗಿ ಹೋರಾಡಿದ ದಿನವೇ ಕೋರೆಗಾಂವ್ ವಿಜಯೋತ್ಸವದ…

Read More

ಸರಗೂರು:   ಆದಿ ಕರ್ನಾಟಕ ಮಹಾಸಭಾ ತಾಲ್ಲೂಕು ಘಟಕದಿಂದ ಪಟ್ಟಣದಲ್ಲಿ ಗುರುವಾರ ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಮಹಾರ್ ವೀರಯೋಧರ ಭೀಮ ಕೋರೆಗಾಂವ್ 208ನೇ ವರ್ಷದ ವಿಜಯೋತ್ಸವ ಕಾರ್ಯಕ್ರಮ ನಡೆಸಲಾಯಿತು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿ ಜಮಾವಣೆಗೊಂಡ ದಲಿತ ಸಮಾಜದ ಮುಖಂಡರು ಬೈಕ್ ರ‍್ಯಾಲಿಯಲ್ಲಿ ಹೊರಟ ಮೆರವಣಿಗೆಯು ಪಟ್ಟಣ ಪಂಚಾಯಿತಿ ಮುಂದೆ ಕೊನೆಗೊಂಡಿತು. ನಂತರ ಪಟಾಟಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಆದಿ ಕರ್ನಾಟಕ ಮಹಾಸಭಾದ ತಾಲೂಕು ಅಧ್ಯಕ್ಷ ಇಟ್ನ ರಾಜಣ್ಣ ಮಾತನಾಡಿ, ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಹೋರಾಡಲು 28 ಸಾವಿರ ಪೇಶ್ವೆಗಳನ್ನು 500 ಮಹಾರ್ ಸೈನಿಕರು ಸೋಲಿಸಿ ವಿಜಯಪತಾಕೆ ಹಾರಿಸಿದ ದಿನವನ್ನು ಕೋರೆಗಾಂವ್ ವಿಜಯೋತ್ಸವವಾಗಿ ದೇಶಾದ್ಯಂತ ಆಚರಣೆ ಮಾಡಲಾಗುತ್ತಿದೆ. ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಮುಂದಾದ ಮಹಾರ್ ಸೈನಿಕರ ಧೈರ್ಯ ಸಾಹಸ ಮೆಚ್ಚುವಂತಾಗಿದೆ ಎಂದು ಹೇಳಿದರು. ಮಹಾಸಭಾದ ಮಾಜಿ ಅಧ್ಯಕ್ಷ ಶಿವಣ್ಣ ಮಾತನಾಡಿ,…

Read More

ಸರಗೂರು:  ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿರುವ ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆಯಲ್ಲಿ ಗುರುವಾರ ವಿಶೇಷ ಪೂಜೆ ನಡೆಯಿತು. ಇದಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಬೆಳಗ್ಗೆ ಧನುರ್ಮಾಸ ಪೂಜೆ ನಡೆದ ಬಳಿಕ ದೇವತೆಗೆ ವಿಶೇಷ ಅಭಿಷೇಕ ಮಾಡಲಾಯಿತು. ದೇವತೆಯನ್ನು ವಿವಿಧ ಹೂವುಗಳಿಂದ  ಮಧುವಣಗಿತ್ತಿಯಂತೆ ಅಲಂಕೃತಗೊಳಿಸಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವತೆ ದರ್ಶನ ಪಡೆದು ಪುನೀತರಾದರು. ದೇವಸ್ಥಾನದ ಪಾದದ ಬಳಿಯಲ್ಲಿ ದೇವತೆಗೆ ಮೊದಲಿಗೆ ಪೂಜೆ ಸಲ್ಲಿಸಿದ ಭಕ್ತರು ಮೆಟ್ಟಿಲುಗಳನ್ನು ಏರಿ ದೇವತೆಯ ಬಳಿ ಬಂದು, ಚಿಕ್ಕಮ್ಮ ಚಿಕ್ಕದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವತೆಯನ್ನು ಕಣ್ತುಂಬಿಕೊಂಡರು. ಹೊಸ ವರುಷ ದಿನದಂದು ದೇವಸ್ಥಾನಗಳಿಗೆ ತೆರಳಿ ಪೂಜೆ ಮಾಡಿಸಿ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ತಮ್ಮ ಇಷ್ಟಾರ್ಥ ಹರಕೆ ತೀರಿಸಿ ದೇವರ ಕೃಪೆಗೆ ಪಾತ್ರರಾದರು. ವರ್ಷದಿಂದ ವರ್ಷಕ್ಕೆ ಹೊಸ ವರುಷವಂತೂ ಜನದಟ್ಟಣೆ ಜೋರಾಗಿರುತ್ತದೆ. ಕಳೆದ ಸಾಲಿನಲ್ಲಿ ಇಷ್ಟು ಜನಸಂದಣಿ ಇರಲಿಲ್ಲ. ದೇವತೆಗೆ ಮಂಗಳವಾರ, ಶುಕ್ರವಾರ, ಭಾನುವಾರ ವಿಶೇಷ ಪೂಜೆ ಇರಲಿದೆ. ಇಂದು ಬುಧವಾರವೂ ದೇವತೆಯ ದರ್ಶನಕ್ಕಾಗಿ…

Read More

ತುಮಕೂರು: ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದ ನಾಮದ ಚಿಲುಮೆ ಬಳಿ ಸಾಕಷ್ಟು ಕೋತಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ನಾಮದ ಚಿಲುಮೆ ಸಮೀಪ ಕೋತಿಗಳು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ತಕ್ಷಣವೇ ತನಿಖೆ ಆರಂಭಿಸಿದ್ದಾರೆ. ಸಂಜೆ 5 ಗಂಟೆಯಿಂದ ತಡರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇದು ಸಾಮಾನ್ಯ ಮಂಗಗಳು ಹಾಗೂ ಎರಡು ಹನುಮಾನ್ ಲಂಗೂರ್‌ಗಳು ಸೇರಿದಂತೆ ಒಟ್ಟು ಏಳು ಕೋತಿಗಳ ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಕೋತಿಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಮುಂಜಾನೆ ಮತ್ತೆ ಶೋಧ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಕೋತಿಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ವಿಷ ಸೇವನೆ ಮಾಡಿರುವ ಸಾಧ್ಯತೆ ಅಥವಾ ಮಂಗನ ಕಾಯಿಲೆ (Monkey Disease) ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅರಣ್ಯ…

Read More

ಸರಗೂರು:  ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂಥ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಜಿ.ರವಿ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಅಮರ ಶಿಲ್ಪಿಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಜಗತ್ತಿನಲ್ಲೆ ಪ್ರಸಿದ್ಧಿ ಪಡೆದ ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವದೇ ಒಂದು ಸೌಭಾಗ್ಯ. ಮಾಡುವ ಕೆಲಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಗಳಿಸಲಿದೆ” ಎಂದು ಅವರು ಹೇಳಿದರು. “ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸಲು ಸಾಧ್ಯ. ಸಾಧರ‍್ನು ಸ್ಮರಣೆ ಮಾಡಿದರಷ್ಟೆ ಸಾಲದು. ಅವರ ಗುಣ ಮತ್ತು ಬೆಳೆದು ಬಂದ ಪ್ರರಿಶ್ರಮ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದು ನೆನೆಯುವುದರೊಂದಿಗೆ ಅವರ ಉತ್ತಮ ಜ್ಞಾನ, ಕಲಾತ್ಮಕ ಪ್ರವೃತ್ತಿ…

Read More

ಬೀದರ್: ಜಿಲ್ಲೆಯನ್ನು ನಶಾ ಮುಕ್ತಗೊಳಿಸುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಸುಮಾರು 11,11,500 ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವಿವರ: ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪ್ರದೀಪ್ ಗುಂಟಿ (IPS) ರವರ ನೇರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತೆಲಂಗಾಣ ಕಡೆಯಿಂದ ಜಂಬಗಿ ಗ್ರಾಮದ ಮೂಲಕ ಆಟೋವೊಂದರಲ್ಲಿ ಅನಧಿಕೃತವಾಗಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಜಂಬಗಿ(ಬಿ)-ಹಂಗರಗಾ ರಸ್ತೆಯ ಅರಣ್ಯ ಪ್ರದೇಶದಲ್ಲಿ ಹೊಂಚು ಹಾಕಿದ್ದರು. ಭಾಲ್ಕಿ ಉಪ-ವಿಭಾಗದ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅವರ ನೇತೃತ್ವದಲ್ಲಿ, ಔರಾದ್-ಬಿ ವೃತ್ತದ ಸಿಪಿಐ ರಘುವೀರಸಿಂಗ್ ಠಾಕೂರ್ ಮತ್ತು ಸಂತಪೂರ ಪಿಎಸ್‌ಐ ದಿನೇಶ್ ಎಮ್.ಟಿ ಹಾಗೂ ಸಿಬ್ಬಂದಿಗಳ ತಂಡ ಆಟೋ ಮೇಲೆ ದಾಳಿ ನಡೆಸಿತು. ವಶಪಡಿಸಿಕೊಂಡ ವಸ್ತುಗಳು: ಗಾಂಜಾ: 20 ಕೆಜಿ 630 ಗ್ರಾಂ…

Read More

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ ಹಾಗೂ 3ಬಿಗೆ ಸೇರಿದ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 9 ಕೊನೆಯದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ ಸೈಟ್ https://bcwd.karnataka.gov.in ನಲ್ಲಿ ಅಥವಾ ದೂ.ವಾ.ಸಂ. 8050770004ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಿಕ್ಕನಾಯಕನಹಳ್ಳಿ: ಎತ್ತಿನಹೊಳೆ ನೀರಾವರಿ ಯೋಜನೆಯ ಕಾಮಗಾರಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಈ ನಿಟ್ಟಿನಲ್ಲಿ ಜ.4ರಂದು ಚಿಕ್ಕನಾಯಕನಹಳ್ಳಿ ಸೇರಿದಂತೆ ತಿಪಟೂರು, ತುರುವೇಕೆರೆ, ತಿಪಟೂರು ನಾಲ್ಕು ತಾಲ್ಲೂಕಿನ ಮುಖಂಡರುಗಳ ಸಭೆ ನಡೆಯಲಿದೆ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು. ಪ್ರವಾಸಿ ಮಂದಿರ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  2014ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಮಳೆಗಾಲದಲ್ಲಿ ನೀರು ಸಮುದ್ರ ಪಾಲಾಗುತ್ತಿತ್ತು, ನೀರಾವರಿ ತಜ್ಞರಿಂದ ಸರ್ವೆ ನಡೆಸಿ ಆ ನೀರನ್ನು ಜನರ ಅನುಕೂಲತೆ ದೃಷ್ಟಿಯಿಂದ ನಮ್ಮ ಸರ್ಕಾರ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿತು ಎಂದರು. ಕಾಮಗಾರಿ ಕೆಲಸ 252 ಕಿ.ಮೀ ಪೈಕಿ 208 ಕಿ.ಮೀ. ಉದ್ದದಷ್ಟು ಆಗಿದೆ. 23,252 ಕೋಟಿಯಷ್ಟು ರಾಜ್ಯ ಸರ್ಕಾರದ ಅನುದಾನವಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ ಅನುದಾನ ನೀಡದಿದ್ದರೂ ಕಾಮಗಾರಿಗೆ ಅರಸೀಕೆರೆ ತಾಲ್ಲೂಕಿನ ಅರಣ್ಯ ಪ್ರದೇಶದ ಕೇವಲ 4 ಕುಂಟೆ ನೆಪ ಒಡ್ಡಿ ಕೆಲಸಕ್ಕೆ ಅಡಚಣೆ ಮಾಡಿದೆ. ಜ.4ರಂದು ಕೇಂದ್ರ ಸರ್ಕಾರದ ಗಮನ ಸೆಳೆಯಲು…

Read More

ತುಮಕೂರು: ರುಡ್‌ಸೆಟ್ ಸಂಸ್ಥೆ ವತಿಯಿಂದ ಜನವರಿ 19 ರಿಂದ 13 ದಿನಗಳ ಉಚಿತ ಹಸು, ಕುರಿ ಮತ್ತು ಕೋಳಿ ಸಾಕಾಣಿಕೆ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More