Subscribe to Updates
Get the latest creative news from FooBar about art, design and business.
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
- ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
- ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
- ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
- ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
- ಎರಡೂವರೆ ವರ್ಷದಲ್ಲಿ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
- ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್.ರಾಜಾಸಾಬ್
Author: admin
ಹಳೆಯ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾವನೆಯು ಸರ್ಕಾರದ ಮುಂದಿರುವುದಿಲ್ಲ. ಹಣಕಾಸಿನ ನೆರವು ನೋಡಿಕೊಂಡು ಒಪಿಎಸ್ ಜಾರಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು. ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ಎನ್‍ಪಿಎಸ್ ನಿಂದ ಓಪಿಎಸ್‍ಗೆ ಪರಿವರ್ತನೆ ಕುರಿತು ಸರ್ಕಾರದ ನಿಲುವೇನು ಎಂದು ಸದಸ್ಯ ತಳವಾರ ಸಾಬಣ್ಣ ಅವರು ಕೇಳಿದ ಪ್ರಶ್ನೆಗೆ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ಮಾತನಾಡಿದ ಜೆ.ಸಿ.ಮಾಧುಸ್ವಾಮಿ ಅವರು, ಹಳೆಯ ಪಿಂಚಣಿ ಯೋಜನೆಯ ಜಾರಿ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇರುವುದಿಲ್ಲ. ಓಪಿಎಸ್ ಜಾರಿಗೆ ಪದೆಪದೇ ಒತ್ತಾಯಿಸುವುದು ಸರಿಯಲ್ಲ. ಒಪಿಎಸ್ ಜಾರಿ ಸಂಬಂಧ ಪರಿಶೀಲಿಸಲು ಈಗಾಗಲೇ ಮೂರು ಸಭೆಗಳು ನಡೆದಿವೆ. ಹೊಸ ಪಿಂಚಣಿ ವ್ಯಾಪ್ತಿಗೆ ಬರುವ ನೌಕರರಿಗೆ ಈಗಾಗಲೇ ಹಲವಾರು ಸೌಲಭ್ಯ ನೀಡಲಾಗಿದೆ. ಒಪಿಎಸ್ ನೀಡುವ ಅವಶ್ಯಕತೆಯಿಲ್ಲ ಎಂದು ಸಮಿತಿಯು ವರದಿ ನೀಡಿದೆ ಎಂದು ತಿಳಿಸಿದರು. ಹಳೆಯ…
ಚಾಮರಾಜನಗರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆಹರುಯಿಂದ ಹಿಡಿದು ಮನಮೋಹನ್ ಸಿಂಗ್ ನವರೆಗೆ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ಕಾಲದಲ್ಲಿ ಅತಿ ಹೆಚ್ಚು ಹಗರಣಗಳು ನಡೆದಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು . ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಇಂದಿರಾಗಾಂಧಿ ಕಾಲದಿಂದ ಭಯೋತ್ಪಾದನೆ ಶುರುವಾಯಿತು, ಆಗ ಬಾಂಬ್ ನ ಕಾರ್ಖಾನೆಗಳು ಆರಂಭವಾಗಿದ್ದು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹುಬ್ಬಳ್ಳಿ : ಕಳಸಾ ಭಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರಧಾನಿ ಮೋದಿಯವರ ಕೊಡುಗೆ ಇದಾಗಿದೆ ಎಂದರು. ಬಹಳ ವರ್ಷದ ಕನಸು ನನಸಾಗಿದೆ. ಇಡೀ ಕರ್ನಾಟಕ ಜನತೆ ಹಾಗೂ ಎಲ್ಲಾ ಸದಸ್ಯರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀರಾವರಿ ಸಚಿವ ಗೋವಿಂದ್ ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಇನ್ನು ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ , ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರಿಗೆ ಹಾಗೂ…
ಉತ್ತರಖಂಡ್ ನ ಹರಿದ್ವಾರ ಮಂಗಳೌರ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ ಗಾಯಗೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನ ಗ್ಲಾಸ್ ಒಡೆದು ರಿಷಬ್ ಪಂತ್ ಹೊರಗೆ ಬಂದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ದೆಹಲಿಯ ಏಮ್ಸ್ ನಲ್ಲಿ ರಿಷಬ್ ಪಂತ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಬೆನ್ನುಕಾಲು ತಲೆಗೆ ಗಾಯಗಳಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ. ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿದ್ದರು. ಹೀರಾಬೆನ್ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ ನಡೆದ ಎಲ್ಲಾ ನೇಮಕಾತಿ ಪರೀಕ್ಷೆಗಳು ವ್ಯಾಪಕ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಾಕ್ಷಿಯಾಗಿವೆ. ಇದರ ನೇರ ಪರಿಣಾಮ ಅನುಭವಿಸಿದ್ದು ನಮ್ಮ ನಾಡಿನ ಲಕ್ಷಾಂತರ ಉದ್ಯೋಗಕಾಂಕ್ಷಿ ಯುವಕರು. ಇದನ್ನು ತಡೆಗಟ್ಟಲು, ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಅನೇಕ ಕ್ರಮಗಳ ಅನಿವಾರ್ಯತೆಯಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನೇಮಕಾತಿ ಪರೀಕ್ಷೆಗಳಲ್ಲಿನ ಭ್ರಷ್ಟಾಚಾರವನ್ನ ತಡೆಯಲು ಸದನದಲ್ಲಿಂದು ಖಾಸಗಿ ಮಸೂದೆಯನ್ನ ಜಾರಿಗೆ ತರಲು ಸಭಾಪತಿಗಳಿಗೆ ಸಲ್ಲಿಸಿದ್ದೇನೆ. ಇದರ ಅವಶ್ಯಕತೆ ಲೂಟಿ ಹೊಡೆಯಲೇ ಬಂದಿರುವ ಸರ್ಕಾರಕ್ಕೆ ಇಲ್ಲದಿರಬಹುದು, ಆದರೆ ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿರುವ ನಮ್ಮ ಯುವಕರಿಗೆ, ಸುಗಮ ಹಾಗೂ ಸ್ಪೂರ್ತಿ ತುಂಬಿದ ಆಡಳಿತ ಬಯಸುತ್ತಿರುವ ಜನ ಸಾಮಾನ್ಯರಿಗೆ ಖಂಡಿತ ಇದೆ ಎಂದು ಅವರು ಹೇಳಿದ್ದಾರೆ. ನಮ್ಮ ನಾಡಿನ ಯುವಕರಿಗೆ ನ್ಯಾಯಯುತವಾಗಿ ಉದ್ಯೋಗ ಕಲ್ಪಿಸಲು ಸರ್ವ ಪ್ರಯತ್ನಗಳನ್ನೂ ನಾನು ನನ್ನ ಕ್ಷಮತೆ ಮೀರಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಪ್ರಿಯಾಂಕ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ‘ಕಾಂಗ್ರೆಸ್ ವಿಷನ್ 2023’ ವೆಬ್ ಸೈಟ್ ಅನ್ನು ಗುರುವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಪ್ರೋ. ರಾಧಾಕೃಷ್ಣ, ಮಧು ಬಂಗಾರಪ್ಪ, ಸಮಿತಿಯ ಸದಸ್ಯರಾದ ಹುಸೇನ್ ಹಾಗೂ ರಾಜು ಗೌಡ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ್, ‘ನಾವು ಆಡಳಿತಕ್ಕೆ ಬಂದರೆ ಜನರಿಗೆ ಏನು ಕೊಡುತ್ತೇವೆ ಎಂಬ ಭರವಸೆಗಳನ್ನು ತಿಳಿಸುವುದು ಬಹಳ ಮುಖ್ಯ. ಆ ದೃಷ್ಟಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಚುನಾವಣೆಗೆ ಹೋಗುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸುತ್ತದೆ. ನಾವು ಕೊಟ್ಟ ಭರವಸೆಗಳು ಈಡೇರಿಸುವ ಭರವಸೆಗಳು. ನಾವು ಕೊಡುವ ಭರವಸೆ ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ವಿಭಿನ್ನವಾಗಿ ನಡೆದುಕೊಳ್ಳುತ್ತದೆ. 2013ರಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುವ ಮುನ್ನ ರಾಜ್ಯದ ಜನತೆಗೆ 160 ಭರವಸೆಗಳನ್ನು ನೀಡಿದ್ದೆವು. ಆ…
ಬೆಳಗಾವಿ : ಕಳಸಾ ಬಂಡೂರಿ ಯೋಜನೆಗೆ ಅಂತಿಮವಾಗಿ ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ದೊರೆತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 1988ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರು ಅಂದಿನ ಮುಖ್ಯಮಂತ್ರಿ ರಾಣೆ ಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ನಂತರ ಗೋವಾದಲ್ಲಿ ಬಂದ ಸರ್ಕಾರಗಳು ಇದನ್ನು ಕಾರ್ಯಗತಗೊಳಿಸದೆ ವಿರೋಧಿಸಿದ್ದರು. ಒಟ್ಟಾರೆ ಮಹದಾಯಿ ಯೋಜನೆಗೆ ಮೊದಲು ಚಿಂತನೆ ಮಾಡಿದ್ದು ಬದಾಮಿ ಶಾಸಕ ಬೆಟಗೇರಿ ಹಾಗೂ ಆರ್.ಟಿ. ದೇಸಾಯಿಯವರು. ಬೆಟಗೇರಿ ಯವರು ಬದಾಮಿಯಿಂದ ಪಾದಯಾತ್ರೆ ಮಾಡಿದ್ದರು. ನಂತರ ಕರ್ನಾಟಕಕ್ಕೆ ನೀರು ಮತ್ತು ಅವರಿಗೆ ವಿದ್ಯುತ್ ನೀಡುವುದು ಎಂದಾಗಿತ್ತು. ಇದು ಮೂಲ ಕೆಪಿಸಿ ಆರಂಭಿಸಿದ ಯೋಜನೆ. ನಂತರ ನಮಗೆ ನೀರಿನ ಕೊರತೆಯಾಗುತ್ತಿತ್ತು ಎಂದರು. ಮಲಪ್ರಭಾ ನದಿ ಕಾಕಂಬಿಯಲ್ಲಿ ಹುಟ್ಟಿ, ಮಹದಾಯಿ ನದಿಗೆ ತಿರುವು ನೀಡಬೇಕೆಂದು ನಿರ್ಧಾರವಾಗಿತ್ತು. ಮುಂದೆ ವಿರೋಧ ಎದುರಾದಾಗ ನಂತರ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯಾಗಿತ್ತು. ಹೆಚ್.ಕೆ.ಪಾಟೀಲ ಅವರು ಆಗ ನೀರಾವರಿ ಸಚಿವರಾಗಿದ್ದರು. ಅದಕ್ಕೂ…
ಹಣದ ಮೌಲ್ಯವನ್ನು ತಿಳಿದುಕೊಳ್ಳಲು ಮಕ್ಕಳನ್ನು ಬೆಳೆಸುವುದು ಅತ್ಯಗತ್ಯ. ಆದರೆ ಮಕ್ಕಳಲ್ಲಿ ಉಳಿತಾಯದ ಹವ್ಯಾಸವನ್ನು ಹೇಗೆ ಬೆಳೆಸಬೇಕು. ಅನೇಕರು ಮುಖ್ಯವಾಗಿ ಪಾಕೆಟ್ ಮನಿ ಇತ್ಯಾದಿಗಳನ್ನು ಪಾವತಿಸದೆ ಮಾಡುತ್ತಾರೆ. ಆದರೆ ಇದು ಪರಿಣಾಮಕಾರಿ ಮಾರ್ಗವಲ್ಲ. ಎಲ್ಲಾ ಹೂಡಿಕೆಗಳನ್ನು ಕೇವಲ ಗಳಿಸುವವರ ಹೆಸರಿನಲ್ಲಿ ಹೂಡಿಕೆ ಮಾಡುವ ಬದಲು ಸಂಗಾತಿಯ ಮತ್ತು ಮಕ್ಕಳ ಹೆಸರಿನಲ್ಲಿ ಹೂಡಿಕೆ ಮಾಡಬಹುದು. ಇದಲ್ಲದೇ ಮಕ್ಕಳಿಗೆ ಪಾಕೆಟ್ ಮನಿ ನೀಡಬೇಕು. ಈ ಬಗ್ಗೆ ಪೆಂಟಾಡ್ ಸೆಕ್ಯುರಿಟೀಸ್ ನ ಸಿಇಒ ನಿಖಿಲ್ ಗೋಪಾಲಕೃಷ್ಣನ್ ಟ್ವೆಂಟಿಫೋರ್ ಗೆ ಮಾತನಾಡಿ, ಮಕ್ಕಳಲ್ಲಿ ಉಳಿತಾಯದ ಹವ್ಯಾಸವನ್ನು ಬೆಳೆಸಲು ಇದು ಉತ್ತಮ ಮಾರ್ಗವಾಗಿದೆ. ಮಕ್ಕಳು ತಮ್ಮ ಪಾಕೆಟ್ ಮನಿಯಲ್ಲಿ ಶೇಕಡಾ 10ರಷ್ಟು ಉಳಿಸಲು ಹೇಳಬೇಕು ಎನ್ನುತ್ತಾರೆ. ಕೆಲವು ವರ್ಷಗಳ ನಂತರ ಈ ಅಲ್ಪ ಹಣ ಲಕ್ಷಗಳಾಗಬಹುದು. ಜೀರೋ ಬ್ಯಾಲೆನ್ಸ್ ಮಾತ್ರ ನೋಡುವ ಅಭ್ಯಾಸವಿರುವ ಮಕ್ಕಳು ಆರು ಬ್ಯಾಂಕ್ ಬ್ಯಾಲೆನ್ಸ್ ಕಂಡರೆ ಎಚ್ಚೆತ್ತುಕೊಳ್ಳುತ್ತಾರೆ. ಉಳಿತಾಯ ಕಡಿಮೆಯಾಗಬಾರದು ಎಂಬುದು ಅವರ ಮನದಾಳದಲ್ಲಿರುತ್ತದೆ. ತುರ್ತು ನಿಧಿಯನ್ನು ಸಂಗ್ರಹಿಸಲು ಮಕ್ಕಳಿಗೆ ತರಬೇತಿ ನೀಡಬಹುದು. ಮಕ್ಕಳಿಗೆ ನೂರು…
ಮೊಟ್ಟೆಯ ತಿನ್ನುವುದು ಆರೋಗ್ಯಕ್ಕೆ ಉತ್ತಮ. ಹಾಗಂತ ಅತೀಯಾಗಿ ಸೇವನೆ ಮಾಡಿದ್ರೆ, ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಿವೆ. ಅದಕ್ಕೆ ಮುಖ್ಯವಾದ ಕಾರಣಗಳೇನು ಅನ್ನೋದನ್ನು ತಿಳಿಯೋಣ. ಮೊಟ್ಟೆಯಲ್ಲಿ ಬಿಳಿ ಹಾಗೂ ಹಳದಿ ಬಣ್ಣದ ಎರಡು ಅಂಶಗಳಿವೆ. ಬಿಳಿ ಭಾಗವು ಪ್ರೋಟೀನ್ ಆಗಿದ್ದರೆ, ಹಳದಿ ಬಣ್ಣವು ಕೊಲೆಸ್ಟ್ರಾಲ್ ಆಗಿದೆ. ಮೊಟ್ಟೆಯ ಬಿಳಿ ಭಾಗವನ್ನು ತಿನ್ನುವುದರಿಂದ 4 ರಿಂದ 5 ಗ್ರಾಂ ಪ್ರೋಟೀನ್ ಸಿಗುತ್ತದೆ. ಹಳದಿ ಭಾಗದಲ್ಲಿ 6 ಗ್ರಾಂನಷ್ಟು ಕೊಬ್ಬು ಮತ್ತು ಸುಮಾರು ಒಂದು ಗ್ರಾಂ ಪ್ರೋಟೀನ್ ಇರುತ್ತದೆ. ಒಂದು ಮೊಟ್ಟೆಯನ್ನು ತಿಂದರೆ 5 ರಿಂದ 6 ಗ್ರಾಂ ಪ್ರೋಟೀನ್ ಮತ್ತು 6 ಗ್ರಾಂ ಕೊಬ್ಬು ಸಿಗುತ್ತದೆ. ಒಂದು ಮೊಟ್ಟೆಯಲ್ಲಿರೋ ಹಳದಿ ಭಾಗವು 95 ಮಿಗ್ರಾಂ ಕೊಲೆಸ್ಟ್ರಾಲ್ ನ್ನು ಹೊಂದಿದೆ. ಆರೋಗ್ಯಕರ ದೇಹಕ್ಕಾಗಿ ಪ್ರತಿದಿನ ಕೊಲೆಸ್ಟ್ರಾಲ್ ಸೇವನೆ 200 ಮಿಲಿಗ್ರಾಂಗಿಂತಲೂ ಕಡಿಮೆ ಇರಬೇಕು. ಆದರೆ ಪ್ರತಿ ದಿನ 5ಕ್ಕಿಂತ ಹೆಚ್ಚು ಬಿಳಿ ಹಾಗೂ ಹಳದಿ ಭಾಗವನ್ನು ಸೇರಿಸಿ ಮೊಟ್ಟೆ ಸೇವನೆ ಮಾಡುವುದು ಅಪಾಯಕಾರಿಯಾಗಿದೆ. ಪ್ರತಿದಿನ 5…