Author: admin

ಜನವರಿ ವೇಳೆಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ವರದಿಯಾಗಿದೆ. ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ, ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಈ ಹಿಂದೆ, ಏಷ್ಯಾದಲ್ಲಿ ವ್ಯಾಪಕವಾಗಿ ಹರಡಿದ ಕೋವಿಡ್ 30-35 ದಿನಗಳ ನಂತರ ಭಾರತದಲ್ಲಿ ಕೋವಿಡ್ ಅಲೆ ಸಂಭವಿಸಿದೆ. ಹತ್ತು ದಿನಗಳ ಹಿಂದೆ ಚೀನಾದಲ್ಲಿ ಹೊಸ ಕೋವಿಡ್ ಅಲೆ ತನ್ನ ಎಲ್ಲಾ ಉಗ್ರತೆಯಿಂದ ಹರಡಿತು. ಹೀಗಾಗಿ ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ. ಚೀನಾದಲ್ಲಿ ಕೋವಿಡ್ ಎರಡು ಕಾರಣಗಳಿಂದ ಹರಡಿತು. ಒಂದು, ನೈಸರ್ಗಿಕ ಸೋಂಕಿಗೆ ಜನರು ಒಡ್ಡಿಕೊಳ್ಳುವುದು ತುಂಬಾ ಕಡಿಮೆ. ಇನ್ನೊಂದು ಕಡಿಮೆ ವ್ಯಾಕ್ಸಿನೇಷನ್ ದರಗಳು.ಆದರೆ ಬಿಎಫ್ 7 ನಿಂದ ಭಾರತಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವೈರಾಲಜಿಸ್ಟ್ ಗಂಗಾದೀಪ್ ಕಾಂಗ್ ಹೇಳುತ್ತಾರೆ. ಭಾರತದಲ್ಲಿ ಈಗಾಗಲೇ ಅನೇಕ ಓಮಿಕ್ರಾನ್ ರೂಪಾಂತರಗಳಿವೆ. ಇವೆಲ್ಲವುಗಳಿಂದ ಭಾರತೀಯ ಜನರು ನಿರೋಧಕರಾಗಿದ್ದಾರೆ. ಮತ್ತು ಭಾರತದಲ್ಲಿ 90 ಪ್ರತಿಶತ ಜನರು ಎರಡು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಕೋವಿಡ್‌ನ ಹೊಸ…

Read More

ಬೆಳಗಾವಿ : ನಗರ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿರುವ ಅವೈಜ್ಞಾನಿಕ ರಸ್ತೆ ಹಂಪ್ಸ್ ಗಳನ್ನು ಎಲ್ಲರ ಸಹಕಾರದೊಂದಿಗೆ ತೆಗೆಸಲು ಕ್ರಮ ವಹಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು. ವಿಧಾನ ಮಂಡಳದಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಹಂಪ್ಸ್ ಗಳನ್ನು   ಹಾಕಲಾಗಿದ್ದು ಅವುಗಳಿಗೆ ಬಣ್ಣ ಬಳಿಯುವುದಾಗಲಿ, ಸೂಚನಾ ಫಲಕವಾಗಲಿ ಇಲ್ಲದಿರುವದರಿಂದ ಅಪಘಾತಗಳಿಗೆ ಕಾರಣವಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಅನೇಕ ಗ್ರಾಮಗಳಲ್ಲಿ ಗ್ರಾಮಸ್ಥರ ಒತ್ತಾಯದಿಂದ ರಸ್ತೆಗಳನ್ನು ಹಂಪ್ಸ್ ಗಳನ್ನು ಹಾಕಲಾಗಿರುತ್ತದೆ. ಎಷ್ಟೋ ಕಡೆ ಶಾಸಕರ ಒತ್ತಾಯದಿಂದಲೂ ರಸ್ತೆ ಹಂಪ್ಸ್ ಗಳನ್ನು ಹಾಕಲಾಗುತ್ತಿದೆ. ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡಿ ಅವುಗಳನ್ನು ತೆಗೆಯಿಸಲು ಪ್ರಯತ್ನಿಸಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ವೀರ್‌ ಸಾವರ್ಕರ್‌ ಫೋಟೋ ಬಳಕೆ ವಿಚಾರ ಗಲಾಟೆ, ಹೋರಾಟಕ್ಕೆ ಕಾರಣವಾಗಿತ್ತು. ಅಲ್ಲದೆ ಇತ್ತೀಚೆಗೆ ಬಿಜೆಪಿ ಸರ್ಕಾರ ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ಅನಾವರಣ ಮಾಡಿತ್ತು.ಈ ಬಗ್ಗೆ ಪರೋಕ್ಷವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಸದ್ಯ ಈಗ ಹಿಂಡಲಗಾ ಜೈಲಿನಲ್ಲಿಯೂ ಕೂಡ ಸಾವರ್ಕರ್‌ ಭಾವಚಿತ್ರವನ್ನು ಅಳವಡಿಕೆ ಮಾಡಲಾಗಿದೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದಾರೆ. ಇನ್ನು ವೀರ್ ಸಾವರ್ಕರ್ ಬೆಳಗಾವಿ ಹಿಂಡಲಗಾ ಜೈಲಲ್ಲಿ 100 ದಿನ ವಿಚಾರಣಾಧೀನ ಕೈದಿಯಾಗಿ ಸೆರೆವಾಸದಲ್ಲಿದ್ದರು. 1950ರ ಜುಲೈ 13ರಂದು ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆ ಆಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ.ಇನ್ನು, ರಾಜ್ಯ ಸಾರ್ವತ್ರಿಕ ಚುನಾವಣೆ ಎದುರಿಗೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್​ ಮಂಡಿಸಿದ್ದಾರೆ. ಡಿಸಾಸ್ಟರ್ ರೆಸ್ಪಾನ್ಸ್ ಫಂಡ್​​ಗೆ 1,396 ಕೋಟಿ ರೂ. ಮೀಸಲು, ನರೇಗಾ ಯೋಜನೆಗೆ 750 ಕೋಟಿ ರೂಪಾಯಿ ಮೀಸಲು, ಈಕ್ವಿಟಿ ಖರೀದಿಗೆ 500 ಕೋಟಿ ರೂ, ಜನರಲ್​ ಅಸೆಂಬ್ಲಿ ಚುನಾವಣೆಗೆ 300 ಕೋಟಿ ರೂಪಾಯಿ, ರಾಜೀವ್ ಗಾಂಧಿ ಹೌಸಿಂಗ್ ಸೊಸೈಟಿ ಸ್ಕೀಂಗೆ 256 ಕೋಟಿ ರೂ, ರೈಲ್ವೆ ಯೋಜನೆಗೆ 250 ಕೋಟಿ, ನೀರಾವರಿ ಯೋಜನೆಗೆ 200 ಕೋಟಿ, ಐದು ಮೆಗಾ ಹಾಸ್ಟೆಲ್​​ಗಳ ನಿರ್ಮಾಣಕ್ಕೆ 200 ಕೋಟಿ ರೂ. ಹಾಗೂ ಬಿಬಿಎಂಪಿಗೆ ಎರಡು ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಒಂದು ಕೋಳಿ ಸಾಮಾನ್ಯವಾಗಿ ದಿನಕ್ಕೆ ಒಂದು ಅಥವಾ ಎರಡು ಮೊಟ್ಟೆಗಳನ್ನು ಇಡುತ್ತದೆ. ಆದರೆ ಉತ್ತರಾಖಂಡ ರಾಜ್ಯದ ಕೋಳಿಯೊಂದು 12 ಗಂಟೆಗಳಲ್ಲಿ ಏಕಕಾಲಕ್ಕೆ 31 ಮೊಟ್ಟೆಗಳನ್ನು ಇಟ್ಟಿದೆ. ಅಲ್ಮೋರಾ ಜಿಲ್ಲೆಯ ಬಸೋತ್ ಗ್ರಾಮದ ಗಿರೀಶ್ ಚಂದ್ರ ಬುಧಾನಿ ಕೋಳಿ ಸಾಕಿದ್ದಾರೆ. ಈ ಕೋಳಿ ಸಾಮಾನ್ಯವಾಗಿ ದಿನಕ್ಕೆ ಎರಡು ಮೊಟ್ಟೆಗಳನ್ನು ಇಡುತ್ತದೆ. ಆದರೆ ಇದೇ ತಿಂಗಳ 25ರಂದು ಬೆಳಗ್ಗೆ 10ರಿಂದ ರಾತ್ರಿ 10 ಗಂಟೆಯೊಳಗೆ 31 ಮೊಟ್ಟೆ ಇಟ್ಟಿವೆ ಎಂದು ಗಿರೀಶ್ ತಿಳಿಸಿದರು. ಗಿರೀಶ್ ಅವರ ಮನೆಗೆ ಬಂದ ಪಶುಸಂಗೋಪನೆ ಅಧಿಕಾರಿಗಳು ವಿವರ ತಿಳಿದು ಅಚ್ಚರಿ ವ್ಯಕ್ತಪಡಿಸಿದರು. ಇದರಿಂದ ನೋಡಲು ಗಿರೀಶ್ ಮನೆಗೆ ಹಲವರು ಬರುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಿಕ್ಷಕ  ಮದ್ಯ ಸೇವಿಸಿ ಶಾಲೆಗೆ ಬಂದು ತರಗತಿಯಲ್ಲಿ ನೆಲದ ಮೇಲೆ ಮಲಗಿರುವ ಘಟನೆ ನಡೆದಿದೆ. ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪುರಸಭೆ ವ್ಯಾಪ್ತಿಯ ಅಲಂಗಾರು ಸರ್ಕಾರಿ ಶಾಲೆಯಲ್ಲಿ ಕೃಷ್ಣಮೂರ್ತಿ ಎಂಬ ವ್ಯಕ್ತಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವೇಳೆ ಬುಧವಾರ ಕುಡಿದು ಶಾಲೆಗೆ ಬಂದಿದ್ದರು. ಕುಡಿದ ಮತ್ತಿನಲ್ಲಿ ತರಗತಿಯ ನೆಲದ ಮೇಲೆಯೇ ನಿದ್ದೆಗೆ ಜಾರಿದರು. ಇದನ್ನು ಗಮನಿಸಿದ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶಿಕ್ಷಕರನ್ನು ಎಬ್ಬಿಸಲು ಯತ್ನಿಸಿದ್ದಾರೆ. ಆದರೆ ಶಿಕ್ಷಕರು ಎಚ್ಚೆತ್ತುಕೊಳ್ಳಲಿಲ್ಲ. ಅವರನ್ನು ಅಮಾನತುಗೊಳಿಸಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ : ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ ಆರೋಗ್ಯ ಹಿತರಕ್ಷಣೆಗೆ ನೀಡಲಾಯಿತು. ಪೌರಕಾರ್ಮಿಕರ ಹಿತರಕ್ಷಣೆಗಾಗಿ ಕಾನೂನನ್ನು ಬದಲಾಯಿಸಿ, ಈ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಪೌರಕಾರ್ಮಿಕರಿಗೆ ನ್ಯಾಯ ಒದಗಿಸಲಾಗಿದೆ. ಅವರ ಗೌರವಯುತ ಜೀವನ ನಡೆಸುವ ಸಲುವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ 309 ಕ್ಲೀನರ್ ಗಳನ್ನು, 1437 ಲೋಡರ್ಸ್ ಗಳನ್ನು ಖಾಯಂಗೊಳಿಸಲಾಗಿದೆ. ಇದೇ ರೀತಿ ಉಳಿದವರನ್ನು ನೇಮಕಾತಿ ಪ್ರಕ್ರಿಯೆ ಕೈಕೊಳ್ಳಲಾಗುವುದು. ಅಲ್ಲಿಯವರೆಗೆ ಅವರ ಸೇವಾದರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ತೀರ್ಮಾನ ಸರ್ಕಾರ ಮಾಡಿದೆ ಎಂದರು. ಪೌರ…

Read More

ಕಾರ್ಮಿಕರ ಮಕ್ಕಳಿಗೆ ನೀಡುವ ಬಸ್‍ಪಾಸ್ ಈ ಹಿಂದೆ ಬಿ.ಎಂ.ಟಿ.ಸಿ.ಯಲ್ಲಿ ಮಾತ್ರ ಲಭ್ಯವಿದ್ದು ಅದನ್ನು ನಮ್ಮ ಸರ್ಕಾರ ಎಲ್ಲ ನಿಗಮಗಳಿಗೂ ವಿಸ್ತರಿಸಿದೆ.ಈಗಿರುವ 40 ಕೀ.ಮಿ. ವ್ಯಾಪ್ತಿಯನ್ನು ಹೆಚ್ಚಳ ಮಾಡಲಾಗುವುದು. ಹಾಗೂ ಕಾರ್ಮಿಕರ ಸಂಖ್ಯೆ ಅತ್ಯಧಿಕವಾಗಿದ್ದು ಎಲ್ಲರಿಗೂ ಏಕಕಾಲದಲ್ಲಿ ಸೌಲಭ್ಯ ನೀಡಲು ಆಗುವುದಿಲ್ಲ. ಹಾಗಾಗಿ ಹಂತ ಹಂತವಾಗಿ ಸೌಲಭ್ಯ ವಿಸ್ತರಿಸಲಾಗುವುದು ಎಂದರು. ವಿಧಾನ ಮಂಡಲದಲ್ಲಿ ಬುಧವಾರ ಹುಣಸೂರು ಶಾಸಕ ಎಚ್.ಪಿ.ಮಂಜುನಾಥ ಅವರು ಕಾರ್ಮಿಕ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಹಾಗೂ ಮಂಡಳಿ ಹಾಗೂ ಅವುಗಳ ಯೋಜನೆಗಳ ಕುರಿತು ಮತ್ತು ಕಾರ್ಮಿಕರ ಮಕ್ಕಳಿಗೆ ಬಸ್‍ಪಾಸ್ ಸಂಚಾರ ಮಿತಿಯನ್ನು ಹೆಚ್ಚಿಸಲು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು 28 ಲಕ್ಷ ಕಟ್ಟಡ ಕಾರ್ಮಿಕರಿದ್ದು ಅವರಿಗೆ ಉಚಿತವಾಗಿ ಗುರುತಿನ ಚೀಟಿಯನ್ನು ಸ್ಥಳದಲ್ಲಿಯೇ ವಿತರಿಸಲಾಗುತ್ತಿದೆ. ಅವರ ಒಂದು ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಯೋಜನೆ ಪಡೆಯಬಹುದ್ದಾಗಿದ್ದು ಅಪಘಾತದಿಂದ ಮರಣ ಹೊಂದಿದ್ದಲ್ಲಿ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ 2 ಲಕ್ಷ ರೂ. ಪರಿಹಾರ ಪಡೆಯಬಹುದಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ…

Read More

ದೂರುಗಳು ಬಾರದಂತೆ, ಸರಳೀಕರಣಗೊಳಿಸುವ ಭಾಗವಾಗಿ ಸರ್ವೆ ಪ್ರಕ್ರಿಯೆಯನ್ನು ಇನ್ನಷ್ಟು ಆಧುನೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವರಾದ ಆರ್.ಅಶೋಕ ಅವರು ಹೇಳಿದರು. ಪರಿಷತ್ತಿನಲ್ಲಿ ಇಂದು ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಈಗಾಗಲೇ ಸ್ವಾವಲಂಬಿ ಆಪ್ ಮಾಡಿದ್ದೇವೆ. ಭೂ-ಪರಿವರ್ತನೆ ಬಯಸುವವರು ಸ್ಕೆಚ್ ಮಾಡಿಕೊಂಡು ಆಧಾರ್ ನಂಬರ್ ಸಹಿತ ಈ ಸ್ವಾವಲಂಬಿ ಆಪ್‍ಗೆ ಹಾಕಿದಲ್ಲಿ ಅದನ್ನು ಸಬ್ ರಿಜಿಸ್ಟರ್ ಕಚೇರಿಗೆ ಕಳುಹಿಸುತ್ತೇವೆ. ಇಲ್ಲಿ ತಿದ್ದುಪಡಿಗೆ ಅವಕಾಶವಿಲ್ಲ. ಈ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಲು ತಿಳಿಸಿದ್ದೇವೆ. ಬಳಿಕ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು. ಪಿ ಸರ್ವೆ ತೊಂದರೆ ಇತ್ಯರ್ಥಕ್ಕೆ ಕ್ರಮ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಪಿ ಸರ್ವೆ ನಂಬರ್ ತೊಂದರೆಯನ್ನು ಸಹ ಬೇಗ ಸರಿಪಡಿಸಲಾಗುವುದು ಎಂದು ಸಚಿವ ಆರ್.ಅಶೋಕ ಅವರು ಸದಸ್ಯರಾದ ಎಂ.ಎಲ್.ಅನೀಲ್ ಕುಮಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾನೂನು ತೊಡಕು ಸರಿಪಡಿಸ್ತೇವೆ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅನಾದಿಕಾಲದಿಂದ ಅನುಭವಿಸಿಕೊಂಡು ಬರುತ್ತಿರುವ ಕಾನೆ, ಬಾನೆ, ಕುಮ್ಕಿ…

Read More

ಗ್ರಾಮೀಣ ವಿಧಾನಸಭಾ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಟ್ಟು 6.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು. 1 ಕೋಟಿ ರೂ. ವೆಚ್ಚದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆ, 1.50 ಕೋಟಿ ರೂ ವೆಚ್ಚದಲ್ಲಿ ಗ್ರಾಮದೊಳಗಿನ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಜೊತೆಗೆ ಪೇವರ್ಸ್ ಅಳವಡಿಸುವ ಕಾಮಗಾರಿ ಹಾಗೂ 4 ಕೋಟಿ ರೂ. ವೆಚ್ಚದಲ್ಲಿ ಮಾಸ್ತಮರ್ಡಿ ಕ್ರಾಸ್ ನಿಂದ ತಾರಿಹಾಳ ಗ್ರಾಮದವರೆಗೆ ರಸ್ತೆಯ ಅಭಿವೃದ್ಧಿ ಜೊತೆಗೆ ರಸ್ತೆಯ ಅಗಲಿಕರಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನಡೆಸಲಾಯಿತು. ಬಡೆಕೊಳ್ಳ ಮಠದ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳು ಹಾಗೂ ಅಡವಿಸಿದ್ದೇಶ್ವರ ಮಠದ ಶ್ರೀ ಅಡವೇಶ್ವರ ದೇವರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಟ್ಟು 6.50 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ…

Read More