Subscribe to Updates
Get the latest creative news from FooBar about art, design and business.
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
- ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
- ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
- ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
- ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
- ಎರಡೂವರೆ ವರ್ಷದಲ್ಲಿ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
- ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್.ರಾಜಾಸಾಬ್
Author: admin
ಜಮ್ಮು: ಭಾರತೀಯ ಸೇನಾಪಡೆ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಿದ ಘಟನೆ ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಬುಧವಾರ ನಡೆದಿದೆ. ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತಿತು. ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು ಎಂದು ಎಜಿಡಿಪಿ ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲ್ಯಾಣ ಕರ್ನಾಟಕ ಭಾಗದಲ್ಲಿ, ತೊಗರಿ ಬೆಳೆ ನೆಟೆರೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರವನ್ನು ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸರ್ಕಾರ ನೆಟೆರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಇಡೀ ಏಷ್ಯಾ ಖಂಡದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಜಿಲ್ಲೆಗೆ ತೊಗರಿಯ ಕಣಜ ಎಂದೇ ಕರೆಯಲಾಗುತ್ತಿದೆ. ಈ ಭಾಗದ ರೈತರ ಪ್ರಮುಖ ಬೆಳೆಯಾದ ತೊಗರಿ ಇಲ್ಲಿನ ಜಮೀನಿಗಳಲ್ಲಿ ಹೆಚ್ಚಾಗಿ ಬಿತ್ತನೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ತೊಗರಿ ದೇಶದ ನಾನಾ ಭಾಗಗಳಿಗೆ ರವಾನೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ಎರಡು ವರ್ಷಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬೀಳುತ್ತಿರುವುದರಿಂದಾಗಿ ನಿರೀಕ್ಷಿತ…
ತುಮಕೂರು : ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಬಂಧಿಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ. ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮೂವರನ್ನೂ ಬಂಧಿಸಿ, ಹಾವನ್ನು ವಶಕ್ಕೆ ಪಡೆದಿದ್ದಾರೆ. ನಾಗರಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಕಾಂತರಾಜು ಹಾಗೂ ಸಹಚರರಾದ ಶೇಕ್ ಹುಸೇನ್, ಮೊಹ್ಮದ್ ಆರೀಫ್ ಎಂಬುವವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕ ವಿಧಾನಮಂಡಲಗಳ 148ನೇ ಅಧಿವೇಶನವನ್ನು ಉತ್ತರ ಕರ್ನಾಟಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕಾರಣಕ್ಕೆ ಸಹ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತದೆ.ಅಂತೆಯೇ ಉತ್ತರ ಕರ್ನಾಟಕ ಭಾಗದ ಹತ್ತಾರು ಸಮಸ್ಯೆ ಸವಾಲುಗಳ ಬಗ್ಗೆ ವಿಶೇಷ ಚರ್ಚೆಗೆ ಅವಕಾಶ ಮಾಡಿಕೊಡಲು ಎರಡು ದಿನ ಮೀಸಲಿಡಬೇಕು ಎಂದು ಇದೆ ವೇಳೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ಅವರು ಸಭಾಪತಿಗಳಿಗೆ ಕೋರಿದರು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅವಕಾಶ ಮಾಡಿಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಪರಿಷತ್ ಸಭಾ ನಾಯಕ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.ಗಡಿ ಪ್ರದೇಶದಲ್ಲಿನ ಸಾರ್ವಜನಿಕ ಹಿತರಕ್ಷಣೆ ಉದ್ದೇಶದಿಂದಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಇಂದು ಅನುಮೋದನೆ ದೊರೆಯಿತು. ರಾಜ್ಯ ಸರ್ಕಾರವು ನೆಲ ಜಲ ಸಂರಕ್ಷಣೆ ವಿಷಯದಲ್ಲಿ, ಕನ್ನಡಿಗರು ಮತ್ತು ಕನ್ನಡಿಗರ ಬದುಕಿನ ರಕ್ಷಣಗೆ ಸರ್ಕಾರ ಬದ್ಧವಾಗಿದೆ. ಅವಶ್ಯಕತೆ ಇದೆ ಎಂಬುದು ಕಂಡುಬಂದಲ್ಲಿ ತಾಲೂಕಿನ ಹೆಸರನ್ನು ಸೇರಿಸುವ ರಚನೆಗೆ ಅವಕಾಶವಿದೆ. ಅಂಗೀಕಾರ ರೂಪದಲ್ಲಿರುವ ಕಾಯಿದೆಯನ್ನುಪರ್ಯಾಲೋಚಿಸಬೇಕು…
ಭೂ ಪರಿವರ್ತನೆಗೆ ಮತ್ತಷ್ಟು ಸರಳೀಕರಣ ಮಾಡುವ ಉದ್ದೇಶದ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಅನುಮೋದನೆ ಸಿಕ್ಕಿತು. ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್‍ನಲ್ಲಿ ಪರ್ಯಾಲೋಚಿಸಿ ಕೋರಿ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿದರು. 2021-2022ರ ವರ್ಷದ ಆಯವ್ಯಯ ಭಾಷಣದಲ್ಲಿ ಮಾಡಿದ ಪ್ರಸ್ತಾವನೆಗಳನ್ನು ಜಾರಿ ತಂದು ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆಯನ್ನು ಸರಳಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 (1964ರ ಕರ್ನಾಟಕ ಅಧಿನಿಯಮ 12)ರ 95ನೇ ಮತ್ತು 96ನೇ ಪ್ರಕರಣವನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ಜಾರಿ ಮಾಡಲಾಗುತ್ತದೆ. ಭೂಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದಾಗ ಅಧಿಕಾರಿಗಳು ಜನರನ್ನು ಕಚೇರಿಗೆ ಅಲೆಸುತ್ತಾರೆ. ಇದನ್ನು ತಪ್ಪಿಸಲು 7 ದಿನಗಳೊಳಗಡೆ ಭೂಪರಿವರ್ತನೆ ಮಾಡಲು ಅನುಕೂಲವಾಗುವ ಹಾಗೆ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದೆ ಎಂದರು. ಈ ವೇಳೆ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಭೂ ತಿದ್ದುಪಡಿ ಕಾಯ್ದೆ ಬಡಜನರ ಪರವಾಗಿಲ್ಲ. ಇದು ಭೂ ಮಾಫಿಯಾ ಪರವಾಗಿದೆ. ಜನಹಿತ ದೃಷ್ಟಿಯಿಂದ ಈ ಕಾಯಿದೆಗೆ…
ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲು ಪ್ರಮಾಣವನ್ನು ಶೇ. 15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸುವ 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಶೈಕ್ಷಣ ಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಮತ್ತು ಹುದ್ದೆಗಳಲ್ಲಿ ಮೀಸಲಾತಿ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಇಂದು ಸರ್ವಾನುಮತದ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಮಂಡಿಸಿದ ವಿಧೇಯಕಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳ ಎಲ್ಲಾ ಸದಸ್ಯರ ಒಕ್ಕೋರಲಿನ ಸಹಮತ ವ್ಯಕ್ತಪಡಿಸಿ ಸರ್ವಾನುಮತದ ಬೆಂಬಲ ಸೂಚಿಸಿದರು.ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡು ಅನುಮೋದನೆ ಪಡೆದಿದೆ ಎಂದು ಪ್ರಕಟಿಸಿದರು. ಇದಕ್ಕೂ ಮುನ್ನ ನಿಯಮ 69 ರಡಿ ನಡೆದ ಚರ್ಚೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಸದಸ್ಯರಾದ ಹೆಚ್.ಕೆ. ಪಾಟೀಲ, ಬಂಡೆಪ್ಪ ಕಾಶೆಂಪುರ, ಡಾ. ಕೆ. ಅನ್ನದಾನಿ, ಕೆ.ಎಂ. ಶಿವಲಿಂಗೇಗೌಡ,…
ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಸಚಿವ ಮಾಧುಸ್ವಾಮಿ ಉತ್ತರಿಸಿದರು. ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೇವೆ ಎಂದು ಮಾಧುಸ್ವಾಮಿ ಉತ್ತರಿಸಿದರು. ನಾವು ಯಾರಿಗೂ ಫ್ರೀ ಹ್ಯಾಂಡ್ ಕೊಟ್ಟಿಲ್ಲ, ನೀವು ಹೋಗಿ ಮಾಡ್ಕೊಂಡು ಬರಬಹುದು ಅಂತ. ಪೊಲೀಸ್ ಯಾವಾಗಲೂ ಪೊಲೀಸ್, ಮೋರಲ್ ಪೊಲೀಸ್ ಅಂತ ಒಂದು ಇರಕ್ಕಾಗಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಬಂಜಾರ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು ಆದರೆ ಇಂದಿನ ಬಿಜೆಪಿ ಸರ್ಕಾರ ಬಂಜಾರ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ನಮ್ಮ ಕರ್ನಾಟಕ ರಾಜ್ಯದ ಬಂಜಾರ ಸಮುದಾಯದ ತಾಂಡಗಳಲ್ಲಿರುವ ಅರ್ಚಕರಿಗೆ ಮಾಸಿಕ ರೂ. 10,000/- ಗಳಂತೆ ಗೌರವಧನ ನೀಡಬೇಕು ಎಂದು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ, ತೆಲಂಗಾಣ ರಾಜ್ಯ ಸರ್ಕಾರವು ಅಲ್ಲಿನ ಬಂಜಾರ ಸಮುದಾಯದವರ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡು ತಾಂಡಗಳಲ್ಲಿನ ವಿವಿಧ ದೇವಾಲಯಗಳ ಆರ್ಚಕರಿಗೆ “ಧೂಪ, ದೀಪ, ನೈವೇದ್ಯಮ್” ಯೋಜನೆ ರೂಪಿಸಿ ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಕರ್ನಾಟಕ ರಾಜ್ಯದಲ್ಲಿರುವ ಸಾವಿರಾರು ಬಂಜಾರ ತಾಂಡಾಗಳ ಆರಾಧ್ಯ ದೇವರುಗಳ ದೇವಸ್ಥಾನಗಳಲ್ಲಿ ಪೂಜೆ, ಅರ್ಚನೆ, ಭಜನೆ ಮುಂತಾದ ಧಾರ್ಮಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಆದರೆ ಇಲ್ಲಿನ ತಾಂಡಾಗಳ ಅರ್ಚಕರುಗಳು ಸೌಲಭ್ಯ ವಂಚಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಕರ್ನಾಟಕ ಸರ್ಕಾರವು…
ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಶೃಂಗೇರಿಗೆ ಅನುದಾನ ನೀಡುವಾಗ ಜೀವರಾಜ್ ಅವರ ಹೆಸರು ಉಲ್ಲೇಖಿಸಿರುವುದು ಸರಿಯಲ್ಲ. ಜೀವರಾಜ್ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಸೋತ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಒಂದು ಕೆಟ್ಟ ಸಂಪ್ರದಾಯ. ಅದು ಯಾವುದೇ ಪಕ್ಷದ ಅಭ್ಯರ್ಥಿಯಾಗಿರಲಿ. ಬಜೆಟ್ ಗೆ ಅನುಮೋದನೆ ನೀಡುವವರು ಯಾರು? ಚುನಾವಣೆಯಲ್ಲಿ ಸೋತವರು ಬಂದು ಚರ್ಚಿಸಿ ಬಜೆಟ್ ಪಾಸ್ ಮಾಡಿ ಕೊಡುತ್ತಾರ? ಸೋತವರ ಹೆಸರಿಗೆ ಅನುದಾನ ನೀಡಿ, ಅವರಿಗೆ ಜನರ ಜೊತೆ ಹೋಗಿ ಕೆಲಸ ಮಾಡಿ ಎನ್ನುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಇದನ್ನು ಪ್ರತಿಷ್ಠೆ ಮಾಡಿಕೊಳ್ಳಬಾರದು, ಇದು ಮುಂದುವರೆಲೂಬಾರದು. ಸೋತವರು ಮತ್ತೆ ಗೆದ್ದು ಬಂದು ಜನರ ಜೊತೆ ನಿಂತು ಕೆಲಸ ಮಾಡಲಿ ಎಂದು ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ…
ವಿಶ್ವಕ್ಕೆ ಭಯವನ್ನು ತೋರಿಸಲು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ರಷ್ಯಾ ಘೋಷಿಸಿದೆ. ಇದಾದ ನಂತರ ವಿಶ್ವ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರವಾಗಿ ಏರಿಕೆಯಾಗಿದೆ. ತರುವಾಯ, ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 2.94 ಡಾಲರ್ಗಳಷ್ಟು ಹೆಚ್ಚಾಗಿದೆ ಮತ್ತು $ 83.72 ಕ್ಕೆ ಮಾರಾಟವಾಗುತ್ತಿದೆ. ಕಳೆದ ತಿಂಗಳು $80 ರ ಸಮೀಪದಲ್ಲಿದ್ದ ಪೆಟ್ರೋಲ್ ಬೆಲೆಗಳು ರಷ್ಯಾದ ಘೋಷಣೆಯಿಂದಾಗಿ ಮತ್ತೆ ಏರಲು ಪ್ರಾರಂಭಿಸಿವೆ. ತಜ್ಞರ ಪ್ರಕಾರ, ಈ ಘೋಷಣೆಯಿಂದ ಭಾರತದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy