Author: admin

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಾಂಬ್ ದಾಳಿ ನಡೆಸಲಾಯಿತು. ಪ್ರಧಾನಿ ಮಾತನಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಪೈಪ್‌ನಂತಹ ವಸ್ತುವನ್ನು ಎಸೆದಿದ್ದಾರೆ ಎಂದು ವರದಿಯಾಗಿದೆ. ಕೂಡಲೇ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.ಶನಿವಾರ ವಕಯಾಮಾದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸ್ಫೋಟದ ರೀತಿಯ ಸದ್ದು ಕೇಳಿಬಂದಿದೆ. ವರದಿಯ ಪ್ರಕಾರ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಉಪಚುನಾವಣೆಯ ಅಧಿಕೃತ ಪ್ರಚಾರದ ಭಾಗವಾಗಿ ಪ್ರಧಾನಿಯವರ ಭಾಷಣವಾಗಿತ್ತು. ದಾಳಿಯ ಹಿನ್ನೆಲೆಯಲ್ಲಿ ಕಿಶಿದಾ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಹೊರಬಿದ್ದಿರುವ ವೀಡಿಯೋಗಳಲ್ಲಿ ಪೊಲೀಸರು ಗುಂಪಿನಲ್ಲಿದ್ದವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಹಾರಾಷ್ಟ್ರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, ಹಲವರಿಗೆ ಗಾಯ. ಸುಮಾರು 40 ಜನರಿದ್ದ ಬಸ್ ಅಪಘಾತಕ್ಕೀಡಾಗಿದೆ. ಕೋಕಾ ಕಡೆಗೆ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಹಳೆ ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕರ್ನಾಟಕ ಚುನಾವಣೆಯ ಅಂತಿಮ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಸಸ್ಪೆನ್ಸ್ ಮುಂದುವರೆದಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನಗಳು ಬಾಕಿಯಿದ್ದರೂ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಬಿಜೆಪಿಯಲ್ಲಿನ ವಿವಾದಗಳು ಮತ್ತು ರಾಜೀನಾಮೆಗಳು ಕಳೆದ 12 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಬಿಕ್ಕಟ್ಟು ಮಾಡುತ್ತಿವೆ. ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರಂತಹ ಹಿರಿಯ ನಾಯಕರನ್ನು ಪರಿಗಣಿಸಿ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಇಲ್ಲವಾದಲ್ಲಿ ರಾಜೀನಾಮೆ ಮತ್ತು ಪ್ರತಿಭಟನೆ ವ್ಯಾಪಕವಾಗಿ ಮುಂದುವರಿಯಲಿದೆ. ಬಿಜೆಪಿಯ ಅತೃಪ್ತಿಯನ್ನು ಶಮನಗೊಳಿಸುವ ಉದ್ದೇಶದಿಂದ ಕಾಂಗ್ರೆಸ್ ಕಳೆದ 58 ಸ್ಥಾನಗಳನ್ನು ತೆರವು ಮಾಡಿತು. ಬಿಜೆಪಿ ತೊರೆದಿರುವ ಲಕ್ಷ್ಮಣ ಸವದಿ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಎರಡನೇ ಹಂತದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಸೇರಿಸಿ ಅಭ್ಯರ್ಥಿಗಳನ್ನು ನಿರ್ಧರಿಸಿದೆ. ಜೆಡಿಎಸ್‌ನ ಅಂತಿಮ ಅಭ್ಯರ್ಥಿ ಆಯ್ಕೆ ವಿಳಂಬವಾಗುತ್ತಿರುವುದಕ್ಕೆ ಕಾರಣ ಇನ್ನಷ್ಟು ಮಂದಿ ಪಕ್ಷಕ್ಕೆ ಸೇರುತ್ತಾರೆ ಎಂಬ ನಿರೀಕ್ಷೆ. ಎರಡನೇ ಹಂತದಲ್ಲಿ 49 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ.…

Read More

ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಸಿಬಿಐ ತಿರುಗೇಟು ನೀಡಿದೆ. ಆಂಟಿಗುವಾದಿಂದ ಮೆಹುಲ್ ಚೋಕ್ಸಿಯನ್ನು ಹಸ್ತಾಂತರಿಸುವುದನ್ನು ಕೋರ್ಟ್ ನಿರ್ಬಂಧಿಸಿದೆ. ಮೆಹುಲ್ ಚೋಕ್ಸಿ ಆಂಟಿಗುವಾ ಹೈಕೋರ್ಟ್‌ನಿಂದ ತೀರ್ಪು ಪಡೆದರು. ಮೇ 2021 ರಲ್ಲಿ ಆಂಟಿಗುವಾದಲ್ಲಿದ್ದ ಚೋಕ್ಸಿಯನ್ನು ಡೊಮಿನಿಕಾಗೆ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಅನುಕೂಲಕರ ತೀರ್ಪು ಬಂದಿದೆ. ನ್ಯಾಯಾಲಯದ ಅನುಮತಿ ಇಲ್ಲದೆ ಮೆಹುಲ್ ಚೋಕ್ಸಿಯನ್ನು ಆ್ಯಂಟಿಗುವಾದಿಂದ ತೆಗೆದುಹಾಕಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಚೋಕ್ಸಿ ವಿರುದ್ಧ ಸಿಬಿಐ ಆರು ಸಾಲ ವಂಚನೆ ಪ್ರಕರಣಗಳನ್ನು ದಾಖಲಿಸಿದೆ.ಇದೇ ವೇಳೆ ಅಪರಾಧಿಗಳನ್ನು ನ್ಯಾಯಾಂಗಕ್ಕೆ ತರಲು ಬದ್ಧವಾಗಿರುವುದಾಗಿ ಸಿಬಿಐ ಹೇಳಿದೆ. ವಿದೇಶಿ ಏಜೆನ್ಸಿಗಳ ಸಹಯೋಗದೊಂದಿಗೆ ಕಾನೂನುಬದ್ಧವಾಗಿ ಚೋಕ್ಸಿಯನ್ನು ವಾಪಸ್ ಕರೆತರುವುದಾಗಿ ಸಿಬಿಐ ಹೇಳಿದೆ. ಕಳೆದ 15 ತಿಂಗಳಲ್ಲಿ 30 ಆರೋಪಿಗಳನ್ನು ವಿದೇಶದಿಂದ ಕರೆತರಲಾಗಿದೆ ಎಂದು ಸಿಬಿಐ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಚಿಕ್ಕೋಡಿ : ಲಕ್ಷ್ಮಣ ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ ಎಂದು ಸವದಿ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ಕಿಡಿಕಾರಿದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತಾನಾಡಿದ ಅವರು, ಸೋತವರನ್ನು ಪಕ್ಷ ಡಿಸಿಎಂ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಿಸಿಲ್ಲ. ಬದಲಾಗಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ, ನಮಗೆ ಒಳ್ಳೆದಾಗಿದೆ. ರಮೇಶ್‌ ಜಾರಕಿಹೊಳಿ ಮತ್ತೆ ಕಾಂಗ್ರೆಸ್‌ ಹೋಗುತ್ತಾನೆ ಎಂಬ ಯೋಚನೆ ಸವದಿ ತಲೆಯಲ್ಲಿ ಇತ್ತು. ಆದರೆ ನನಗೆ ಮಂತ್ರಿ ಸ್ಥಾನವಿಲ್ಲದಿದ್ದರೂ ನಾನು ಪಕ್ಷದಲ್ಲೇ ಇದ್ದೇನೆ, ಉದ್ದ ಅಂಗಿ ಹಾಕಿರುವವನು ಪಕ್ಷದಿಂದ ಹೊರಗೆ ಹೋಗಿರುವುದು ನನಗೆ ಸಂತೋಷ ತಂದಿದೆ ಎಂದರು. ಒಂದೂವರೆ ವರ್ಷ ಸವದಿ ಮಂತ್ರಿ ಇದ್ದರೂ ಅಥಣಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಲಿಲ್ಲ. ಸವದಿಯನ್ನು ವಿಶೇಷ ವಿಮಾನದಲ್ಲಿ ಡಿಕೆಶಿ ಕರೆದುಕೊಂಡು ಹೋಗಿದ್ದಾನೆ. ಡಿಕೆಶಿ ಕುತಂತ್ರಿ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ದೇವನಹಳ್ಳಿ: ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ, ಅವರಿಗೆ 53-ವರ್ಷ ವಯಸ್ಸಾಗಿತ್ತು. ಕುಟುಂಬ ಮೂಲಗಳ ಪ್ರಕಾರ ಅವರು ಕಳೆದ ಕೆಲ ವಾರಗಳಿಂದ ಪದೇಪದೆ ಎದೆನೋವಿನಿಂದ ಬಳಲುತ್ತಿದ್ದರು ಮತ್ತು ಎರಡು ಬಾರಿ ಚಿಕಿತ್ಸೆಯೂ ಕೊಡಿಸಲಾಗಿತ್ತು. ಕಳೆದ ರಾತ್ರಿ ಅವರು ತೀವ್ರ ಎದೆನೋವಿಗೊಳಗಾಗಿದ್ದರಿಂದ ಕೂಡಲೇ ಅವರನ್ನು ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿದೆ. ದುರದೃಷ್ಟಶಾತ್ ಅವರನ್ನು ಉಳಿಸುವುದು ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ವೆಂಕಟಸ್ವಾಮಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಬಯಸಿದ್ದರು. ಆದರೆ ಟಿಕೆಟ್ ಸಿಗದ ಕಾರಣ ತೀವ್ರವಾಗಿ ನೊಂದುಕೊಂಡಿದ್ದರು. ಹೃದಯಾಘಾತಕ್ಕೆ ಅದು ಕೂಡ ಕಾರಣವಾಯಿತು ಅಂತ ಅವರ ಬೆಂಬಲಿಗರು ವಿಷಾದದಿಂದ ಹೇಳುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬಾಗಲಕೋಟೆ: ಶಾಸನಗಳ ಗತವೈಭವ ತಿಳಿಯಲು ಮತ್ತು ನಾಡಿನ ಪರಂಪರೆಯನ್ನು ಅರಿಯಲು ಸಾಹಿತಿಗಳ ಸಂಶೋಧನೆ ಮತ್ತು ಗ್ರಂಥಗಳು ಅವಶ್ಯಕ. ಅವರ ಸಾಲಿನಲ್ಲಿ ಡಾ. ವಿಜಯಕುಮಾರ ಕಟಗಿಹಳ್ಳಿಮಠ ಒಬ್ಬರಾಗಿದ್ದು  ಅನೇಕ ಗ್ರಂಥಗಳ ಸಂಪಾದನೇ ಮತ್ತು ವಿಮರ್ಶೆಯ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಪೂಜ್ಯ ಶ್ರೀ ಪ್ರಭುಸ್ವಾಮಿ ಚರಂತಿಮಠ ಹೇಳಿದರು. ನಗರದ ಬಿ.ವಿ.ವಿ  ಸಂಘದ ನೂತನ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಅವರ ಗೌರವಾಭಿನಂದನೆ ಮತ್ತು ಅಂತರ್ಭುವಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಮರೇಗುದ್ದಿಯ ಅಡವಿಸಿದ್ಧೇಶ್ವರಮಠದ ಪೂಜ್ಯಶ್ರೀ ನಿರುಪಾಧೀಶ ಮಹಾಸ್ವಾಮಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುವೆಂಪು, ಬೇಂದ್ರೆ ಬಳಗದಂತೆ ಕಟಗಿಹಳ್ಳಿಮಠ ಅವರ ಶಿಷ್ಯಬಳಗವು ಅಪಾರವಾಗಿದೆ. ವಿದ್ಯಾರ್ಥಿಗಳು ದೇಶದ ಆಸ್ತಿಯಾಗಬೇಕಾದರೆ ಶಿಕ್ಷಣ ಮತ್ತು ಶಿಕ್ಷಕರ ಪಾತ್ರದೊಡ್ಡದು. ಕಟಗಿಹಳ್ಳಿಮಠ ಅವರು ಸುಸಂಸ್ಕೃತ ಕುಟುಂಬ ಸಾಹಿತ್ಯ, ಸಂಗೀತ, ಮತ್ತು ಕಲೆಯನ್ನು ನಿರಂತರ ಪ್ರೊತ್ಸಾಹಿಸುತ್ತಾ ಬಂದಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಖ್ಯಾಥಿತಿಯಾದ ಜಾನಪದ ವಿದ್ವಾಂಸ ಶ್ರೀರಾಮ ಇಟ್ಟಣ್ಣವರು ಮಾತನಾಡಿ ಡಾ.…

Read More

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಬೆನ್ನಲ್ಲೇ ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಲಕ್ಷ್ಮಣ ಸವದಿ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‍ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಅವರು, ನಾನು ಸೋತರೂ ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದರು. ಅದನ್ನು ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಎಂದು ಈಗ ಬಿಜೆಪಿ ನಾಯಕರು , ಟೀಕೆ ಮಾಡುತ್ತಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ದರು. ಅಥಣಿಯಿಂದ 2023ರ ಚುನಾವಣೆಗೆ ಟಿಕೆಟ್ ನೀಡುತ್ತೇನೆ ಎಂದಿದ್ದರು. ಆದರೆ ಯಾವುದೇ ಮಾಹಿತಿ ಇಲ್ಲದೆ ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು. ಕೊಟ್ಟ ಮಾತಿನಂತೆ ಈ…

Read More

ಬೆಳಗಾವಿ: ಇದು ಪ್ರಜಾಪ್ರಭುತ್ವದ ಬೆಳವಣಿಗೆಯ ದೃಶ್ಯ ಚುನಾವಣೆ ಸಂದರ್ಭದಲ್ಲಿ ಬಂದ ವೈರಿಗಳು ಜೋಡು ಎತ್ತಿನಂತೆ ಹೆಗಲ ಮೇಲೆ ಕೈ ಹಾಕಿ ಸಾಗುತ್ತಿರುವ ದೃಶ್ಯ ಬೆಳಗಾವಿಯಲ್ಲು ಕಂಡುಬಂದಿದೆ. ಕಾಂಗ್ರೆಸ್   ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕರು ಶೇಠ್  ಹಾಗೂ ಭಾರತೀಯ ಜನತಾ ಪಕ್ಷದ ಶಾಸಕರಾದ ಅನಿಲ್ ಬೆನಕೆ ಇಬ್ಬರು ಹೆಗಲ ಮೇಲೆ ಕೈಹಾಕಿ  ಮಾತನಾಡುತ್ತಿರುವ  ದೃಶ್ಯ ಇಂದು ಕಂಡು ಬಂದಿದ್ದು ಈ ದೃಶ್ಯ ಎಲ್ಲರ ಗಮನ ಸಳದಿದೆ. ಬೆಳಗಾವಿಯ ರಾಜಕೀಯ ಪಡಸಾಲೆಯಲ್ಲಿ ಗುಸು ಗುಸು ಮಾತುಗಳು ಶುರುವಾಗಿವೆ. ಲಕ್ಷ್ಮಣ್ ಸೌದಿ ಅವರ ಜೊತೆ ಅನಿಲ್ ಬೆನಕೆ ಕೂಡ ಕಾಂಗ್ರೆಸ್ ಜೊತೆ ಕೈ ಜೋಡಿಸಲಿದ್ದಾರಾ? ಎಂಬ ಚರ್ಚೆ ಶುರುವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಗೋಕಾಕ್: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್​ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ. 6 ಜನ ಸ್ನೇಹಿತರು ಸೇರಿ ಮಧ್ಯಾಹ್ನ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ನಿವಾಸಿಗಳು ಎಂದು ಗುರುತಿಸಲಾಗಿದೆ. ಇದೀಗ 4 ಮಂದಿಯ  ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್  ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More