Subscribe to Updates
Get the latest creative news from FooBar about art, design and business.
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
- ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
- ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
- ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
- ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
- ಎರಡೂವರೆ ವರ್ಷದಲ್ಲಿ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
- ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್.ರಾಜಾಸಾಬ್
Author: admin
ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೋವಿಡ್-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡೇ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.ಕೋವಿಡ್-19 ನಿಯಮಾವಳಿ ಪಾಲನೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. ಎಸೆಸೆಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಸುವ ಉದ್ದೇಶದಿಂದ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರ ರಚಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಕ್ಷೇತ್ರದಲ್ಲಿ ಅಭಿವೃಧ್ದಿಯ ಪರ್ವವನ್ನು ಮುಂದುವರೆಸಿದ್ದು, ಅದರಂತೆಯೇ ಇಂದು ಬೆಳಗಾವಿ ನಗರದ ಮುಖ್ಯ ರಸ್ತೆ ಎನಿಸಿಕೊಂಡಿರುವ ಮಹಾಂತೇಶ ನಗರದ ಬ್ರಿಡ್ಜ ದಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ 2 ಕಿ.ಮೀ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯಡಿ 1 ಕೋಟಿ ರೂಪಾಯಿ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಅವರ ಅಮೃತ ಹಸ್ತದಿಂದ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಈಗಾಗಲೇ ನಗರದಲ್ಲಿ ಎಲ್ಲ ಕಡೆಗಳಲ್ಲಿ ಅಭಿವೃಧ್ದಿ ಕಾಮಗಾರಿಗಳು ಚಾಲ್ತಿಯಲ್ಲಿವೆ ಅದರಂತೆಯೇ ಇಂದು ನಗರದ ಮುಖ್ಯ ರಸ್ತೆಯಾಗಿರುವ ಮಹಾಂತೇಶ ನಗರ ಬ್ರಿಡ್ಜ ಕಡೆಗಿನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯು ನಡೆಯುತ್ತಿದ್ದರಿಂದ ರಸ್ತೆ ನಿರ್ಮಾಣ ಕಾಮಗಾರಿಯು ತಡವಾಗಿತ್ತು. ಆದ್ದರಿಂದ ಸದ್ಯ ಮಹಾಂತೇಶ ನಗರ ಬ್ರಿಡ್ಜ ರಸ್ತೆ ಯಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಡಿಯ 1 ಕೋಟಿ ರೂಪಾಯಿ…
ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಹೈಕಮಾಂಡ್ ನಿಂದ ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, , ವರಿಷ್ಠರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ.ಇನ್ನು ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ , ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವ ಸ್ಥಾನಕ್ಕೆ ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಇಬ್ಬರನ್ನು ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಬಂದ ದುಷ್ಕರ್ಮಿಗಳು ಇಬ್ಬರು ವ್ಯಕ್ತಿಗಳ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬಸವರಾಜ ಬೆಳಗಾಂವಾಕ್ಕರ್ (23), ಗಿರೀಶ್ ನಾಗಣ್ಣನವರ್ (34) ಮೃತರು ಎಂದು ಗುರುತಿಸಲಾಗಿದೆ. ಪಂದ್ಯಾವಳಿ ವೇಳೆ ಮೈದಾನಕ್ಕೆ ಅಪರಿಚಿತ ವಾಹನ ನುಗ್ಗಿದ್ದು, ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ವಾಹನದಿಂದ ಕೆಳಗಿಳಿದ ಅಪರಿಚಿತರು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾದಾಮಿ ನೀರು ಸೇವನೆಯಿಂದ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದು! ಬಾದಾಮಿ ಅಂದ್ರೆ, ಯಾರಿಗೆ ಇಷ್ಟ ಇಲ್ಲ ಹೇಳಿ, ಬಾದಾಮಿ ಕೇವಲ ರುಚಿಗೆ ಮಾತ್ರವಲ್ಲದೇ ನಮ್ಮ ಆರೋಗ್ಯಕ್ಕೂ ಅತ್ಯುತ್ತಮವಾಗಿದೆ. ಹಾಗೆಯೇ ಬಾದಾಮಿಯ ನೀರು ಕೂಡ ಆರೋಗ್ಯಕ್ಕೆ ಉತ್ತಮವಾಗಿದೆ. ಬಾದಾಮಿ ನೀರನ್ನು ಸೇವನೆ ಮಾಡುವುದರಿಂದ ದೇಹ ತಂಪಾಗಿರುತ್ತದೆ. ಒಂದಷ್ಟು ಬಾದಾಮಿಯನ್ನು ರಾತ್ರಿ ವೇಳೆ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಒಂದು ವಾರಗಳ ವರೆಗೆ ಬಾದಾಮಿ ನೀರನ್ನು ಸೇವನೆ ಮಾಡುವುದರಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೆ ದೇಹವು ದುರ್ಬಲವಾಗಿರುವವರು ಬಾದಾಮಿ ನೀರನ್ನು ಸೇವನೆ ಮಾಡುವುದು ಉತ್ತಮ. ಯಾಕೆಂದರೆ ಬಾದಾಮಿ ನೀರು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.ಬಾದಾಮಿ ನೀರಿನ ಸೇವನೆಯಿಂದ ನೆನಪಿನ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ. ಜೊತೆಗೆ ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿಡಲು ಬಾದಾಮಿ ನೀರು ಒಳ್ಳೆಯದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೋವಿಡ್ ಬಗ್ಗೆ ಆತಂಕ ಪಡುವುದು ಬೇಡ. ಹೊಸ ವರ್ಷಕ್ಕೆ ಇಂದು ಸಂಜೆ ಅಥವಾ ನಾಳೆ ಗೈಡ್ ಲೈನ್ ಬಿಡುಗಡೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಭೆ ಮಾಡುತ್ತಿದ್ದೇವೆ. ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಜನ ಸಹಕರಿಸಿದರೆ ಕೋವಿಡ್ ತಡೆಯಬಹುದು ಎಂದಿದ್ದಾರೆ. ಸದ್ಯಕ್ಕೆ ಯಾವುದೇ ಕಠಿಣ ನಿರ್ಬಂದ ಹಾಕಲ್ಲ. ಎಲ್ಲರೂ ಮಾಸ್ಕ್ ಸ್ಯಾನಿಟೈಸರ್ ಬಳಸಿ ಎಂದು ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತಡೆಯಲು ಬಿಜೆಪಿ ಮತ್ತೆ ಕೊರೊನಾ ಬಳಕೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದನ್ನು ಸಹಿಸಿಕೊಳ್ಳದ ಬಿಜೆಪಿ ಅದನ್ನು ತಡೆಯಲು ಕೊರೊನಾ ನೆಪ ಹೇಳುತ್ತಿದೆ ಎಂದರು. ಇನ್ನು ದೇಶದಲ್ಲಿ 2019ರಿಂದ ಕೊರೊನಾ ಇತ್ತು. ಮೊದಲ ಹಾಗೂ ಎರಡನೇ ವರ್ಷದಲ್ಲಿ ಬಹಳ ವೇಗವಾಗಿ ಹರಡಿತ್ತು. ಆದರೆ ಈಗ ಕೊರೊನಾ ಅಂತಹ ಅಪಾಯಕಾರಿಯಾಗಿ ಕಾಣಿಸುತ್ತಿಲ್ಲ. ಈಗ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ನಡೆಗೆ ದೇಶದ ಜನ ಹೆದರಿ ಮತ್ತೆ ಮಾಸ್ಕ್ ಹಾಕಿಕೊಳ್ಳಲು ಯೋಚಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ : ರೈತ ದಿನಾಚರಣೆಯ ಅಂಗವಾಗಿ ಕೊರಟಗೆರೆ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ.ಲಕ್ಷ್ಮೀಕಾಂತ್ ತಾಲ್ಲೂಕಿನ ಕೋಳಾಲ ಹೋಬಳಿಯ ಗುಡಿಬೇವಿನಹಳ್ಳಿ ಗ್ರಾಮದಲ್ಲಿ ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ಉಚಿತ ನೇತ್ರಾ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಯಿತು. ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ. ಲಕ್ಷ್ಮೀಕಾಂತ್ ಮಾತನಾಡಿ, ರೈತರು ದೇವರ ಮತ್ತೊಂದು ಪ್ರತಿರೂಪವಾಗಿದ್ದು,ಆದ್ದರಿಂದ ರೈತ ದಿನಾಚರಣೆಯ ಅಂಗವಾಗಿ ಇಂದು ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ತಾಲ್ಲೂಕಿನ ಗುಡಿಬೇವಿನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದ ವಯೋವೃದ್ಧರ ಅನುಕೂಲಕ್ಕಾಗಿ ನೇತ್ರಾ ತಪಾಸಣಾ ಶಿಬಿರವನ್ನು ಏರ್ಪಡಿಸಿರುವುದು ಗ್ರಾಮದ ಜನರ ಅನುಕೂಲಕ್ಕೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು. ಕೋವಿಡ್ ಮಹಾಮಾರಿಯ ಸೋಂಕು ಹೊರದೇಶಗಳಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು ರಾಜ್ಯ ಸರಕಾರದ ಆದೇಶದಂತೆ ನಾಡಿನ ಜನತೆ ಮತ್ತು ನಮ್ಮ ಕೊರಟಗೆರೆ ಕ್ಷೇತ್ರದ ಜನರು 3ನೇ ಬೂಸ್ಟರ್ ಡೊಸ್ ಲಸಿಕೆ ಪಡೆಯದೆ ಇರುವವರು ಕೂಡಲೇ ಲಸಿಕೆ ಪಡೆದು ಸದಾ…
ಯುದ್ಧದಲ್ಲಿ ದಣಿದ ಮತ್ತು ಬಡವರನ್ನು ನೆನಪಿಟ್ಟುಕೊಳ್ಳಲು ಪೋಪ್ ಅವರ ಕ್ರಿಸ್ಮಸ್ ಸಂದೇಶ ತಿರುಪಿರವಿಯ ಸ್ಮರಣೆಯನ್ನು ನವೀಕರಿಸುವ ಮೂಲಕ ಭಕ್ತರು ಕ್ರಿಸ್ಮಸ್ ಸ್ವಾಗತಿಸುತ್ತಾರೆ. ಪತಿರಾ ಮಾಸಕ್ಕೆ ಭಕ್ತರು ದೇವಸ್ಥಾನಗಳಿಗೆ ಆಗಮಿಸಿದ್ದರು. ಪುರೋಹಿತರು ಉಣ್ಣೀಸುವಿನ ಆಕೃತಿಯನ್ನು ನೈವೇದ್ಯದಿಂದ ಹುಲ್ಲಿಗೆ ತೆಗೆದುಕೊಂಡು ಹೋಗುವ ಮೂಲಕ ಸೇವೆ ಸಲ್ಲಿಸಿದರು. ಕಾಕ್ಕನಾಡಿನ ಸೇಂಟ್ ಥಾಮಸ್ ಮೌಂಟ್ ನಲ್ಲಿ ನಡೆದ ನೇಟಿವಿಟಿ ಸೇವೆಯ ಅಧ್ಯಕ್ಷತೆಯನ್ನು ಕಾರ್ಡಿನಲ್ ಮಾರ್ ಜಾರ್ಜ್ ಆಲೆಂಚೇರಿ ವಹಿಸಿದ್ದರು. ಕಾರ್ಡಿನಲ್ ಅವರ ಕ್ರಿಸ್ಮಸ್ ಸಂದೇಶದಲ್ಲಿ ವಿಝಿಂಜಮ್ ಅನ್ನು ಸೇರಿಸಲಾಯಿತು. ಎರ್ನಾಕುಲಂ ಸೇಂಟ್ ಫ್ರಾನ್ಸಿಸ್ ಆಫ್ ಅಸ್ಸಿಸಿ ಕ್ಯಾಥೆಡ್ರಲ್‌ನಲ್ಲಿ ಲ್ಯಾಟಿನ್ ಆರ್ಚ್‌ಡಯಾಸಿಸ್ ಆರ್ಚ್‌ಬಿಷಪ್ ಜೋಸೆಫ್ ಕಲಾತಿಪರಮ್ ಮತ್ತು ಕೊಟ್ಟಾಯಂ ದೇವಲೋಕದಲ್ಲಿರುವ ಆರ್ಥೊಡಾಕ್ಸ್ ಚರ್ಚ್ ಪ್ರಧಾನ ಕಚೇರಿಯಲ್ಲಿ ಪರಮಪೂಜ್ಯ ಬೆಸಿಲಿಯೊಸ್ ಮಾರ್ಥೋಮ್ಮಾ ಮ್ಯಾಥ್ಯೂಸ್ ತೆರ್ತಿಯನ್ ಕಥೋಲಿಕಾ ಬಾವಾ ಅವರು ಪತಿರ ಕುರ್ಬಾನ ಅಧ್ಯಕ್ಷತೆ ವಹಿಸಿದ್ದರು. ಕೋಝಿಕ್ಕೋಡ್ ಡಿವೈಸಿಸನ್ ಬಿಷಪ್ ವರ್ಗೀಸ್ ಚಾಕಲಕಲ್ ಅವರು ಕೋಝಿಕ್ಕೋಡ್ ಡಿವೈನ್ ಮದರ್ ಕ್ಯಾಥೆಡ್ರಲ್‌ನಲ್ಲಿ ನಡೆದ ಸಮಾರಂಭಕ್ಕೆ ಚಾಲನೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 98ನೇ ಜನ್ಮದಿನ ಅಂಗವಾಗಿ ಸ್ಮಾರಕಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಕೇಂದ್ರ ಸಚಿವ ಅಮಿತ್ ಶಾ, ಸಚಿವೆ ನಿರ್ಮಲಾ ಸೀತಾರಾಮನ್, ಹರ್ದೀಪ್ ಸಿಂಗ್ ಸೇರಿದಂತೆ ಹಲವು ಗಣ್ಯರು ಅಟಲ್ ಸ್ಮಾರಕಕ್ಕೆ ತಮ್ಮ ಗೌರವವನ್ನು ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy