Author: admin

ತುರುವೇಕೆರೆ: ತಾಲ್ಲೂಕು ದಂಡಿನಶಿವರ ಹೋಬಳಿಯ ಚಿಮ್ಮನಹಳ್ಳಿ ಶ್ರೀಮುನೇಶ್ವರ ದಾಸೋಹಮಠಕ್ಕೆ ಮಠದ ಆವರಣದಲ್ಲಿ ನಡೆಯುತ್ತಿರುವ ವಿವಿಧ ದೇವರುಗಳ ದೇವಾಲಯಗಳ ಅಭಿವೃದ್ಧಿ ವೀಕ್ಷಣೆಗಾಗಿ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೇಲ್ ಕಾಂತರಾಜು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಾಸೋಹ ಮಠದ ಉಸ್ತುವಾರಿ ಹಾಗೂ ಕಾರ್ಯದರ್ಶಿಗಳಾದ ಸಿ.ಆರ್.ಶಿವಪ್ಪ ಅವರು ಕಾಂತರಾಜು ಅವರನ್ನು ಸನ್ಮಾನಿಸಿ, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಮೆಲ್ ಕಾಂತರಾಜು, ಈ ಕುಗ್ರಾಮದಲ್ಲಿ ಶಿವಪ್ಪರವರು ಶಿಕ್ಷಣಕ್ಕೆ ಅಕ್ಕ ಪಕ್ಕದ ಹಳ್ಳಿಗಳ ಬಡ ಮಕ್ಕಳ ಹಿತ ದೃಷ್ಟಿಯಿಂದ ಮಠವನ್ನು ಸ್ಥಾಪಿಸಿ ಕೈಲಾದಷ್ಟು ಸೇವೆ ನೀಡುತ್ತಿದ್ದಾರೆ. ಈ ಮಠದ ವಠಾರದಲ್ಲಿ ಹಲವಾರು ದೇವಾಲಯವನ್ನು ಸ್ಥಾಪಿಸುವ ಮೂಲಕ ಜನರಿಗೆ ದೇವರ ದರ್ಶನ ಇಲ್ಲೇ ಸಿಗುವಂತೆ ಮಾಡಬಹುದಾಗಿದೆ ಎಂದರು. ಕೊರೊನಾ ಮಹಾಮಾರಿಯಿಂದ ಶಾಲೆಯಲ್ಲಿ ಮಕ್ಕಳ ಹಾಜರಿ ಕಡಿಮೆಯಾಗಿದ್ದು, ಮುಂದಿನ ದಿನದಲ್ಲಿ ದಾಖಲಾತಿ ಹೆಚ್ಚಾಗಲಿ, ಮಠವು ಉನ್ನತಿಯನ್ನು ಕಾಣಲಿ, ಭಕ್ತರ ಸಂಖ್ಯೆ ಹೆಚ್ಚಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಠದ ಅಧಿಕಾರಿ ಸಿ.ಆರ್.ಶಿವಪ್ಪ, ತುರುವೇಕೆರೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷರಾದ…

Read More

ತಿಪಟೂರು: ತಾಲೂಕಿನ ಹೊನವಳ್ಳಿ ಹೋಬಳಿಯ ಕೆ.ಪಿ.ಎಸ್. ಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡಗಳನ್ನು ಹಾಗೂ ಪ್ರಯೋಗಾಲಯವನ್ನು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಅವರು ‌ ಉದ್ಘಾಟನೆ ಮಾಡಿದರು. ಇದೇ ವೇಳೆ 2 ಕೋ.ರೂ. ವೆಚ್ಚದಲ್ಲಿ ಕೆ.ಪಿ.ಎಸ್. ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆಪಿಎಸ್ ಶಾಲೆ ಹೋನವಳ್ಳಿ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ, ಹೊನವಳ್ಳಿ ಹೋಬಳಿ ಮುಖಂಡರು ಸೇರಿದಂತೆ ಪ್ರಮುಖರು ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: 108ಕ್ಕೆ ಕರೆ ಮಾಡಿ 7 ಗಂಟೆ ಕಳೆದರೂ ಆಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನೆಯಲ್ಲಿಯೇ ಹೆರಿಗೆಯಾದ ಘಟನೆ ತಾಲ್ಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮೀಣ ಭಾಗದಲ್ಲಿ ತುರ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ತಕ್ಷಣವೇ 108 ಕ್ಕೆ ಕರೆ ಮಾಡಿ, ವಿವರ ನೀಡಲಾಗಿದೆ. ಆದರೆ ಗಂಟೆಗಟ್ಟಲೆ ಕಾದರೂ ಆಂಬುಲೆನ್ಸ್ ಬರಲಿಲ್ಲ. ಕೊನೆಗೆ ಮಹಿಳೆ ಮನೆಯಲ್ಲಿಯೇ ಹೆರಿಗೆಯಾದ ಘಟನೆ ನಡೆದಿದ್ದು, ಮಹಿಳೆಯ ಪ್ರಾಣಕ್ಕೆ ತೊಂದರೆಯಾಗಿದ್ದರೆ ಹೊಣೆ ಯಾರು? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಾವಗಡದ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಕಿರಣ್ ರವರಿಗೆ ಈ ವ್ಯವಸ್ಥೆಯನ್ನು ಸರಿಪಡಿಸಲು ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತರುಣ್, ಸರಕಾರದಿಂದ 4 ಆಂಬುಲೆನ್ಸ್ ನೀಡಲಾಗಿದೆ ಹಾಗೂ ಸೋಲಾರ್ ವತಿಯಿಂದ 2 ಆಂಬುಲೆನ್ಸ್ ನೀಡಲಾಗಿದೆ ಆದರೆ ಈ…

Read More

ಇತ್ತೀಚೆಗೆ ಅಂದ್ರೆ 2021 ರಲ್ಲಿ ಟಾಲಿವುಡ್ ನ ಸ್ಟಾರ್ ಕಪಲ್ ಸಮಂತಾ – ನಾಗಚೈತನ್ಯ ಡಿವೋರ್ಸ್ ಪಡೆದಿದ್ದರು.. ಇದೀಗ ಸೌತ್ ಇಂಡಸ್ಟ್ರಿಯ ಮತ್ತೊಂದು ಸ್ಟಾರ್ ಜೋಡಿ ವಿಚ್ಛೇಧನ ಪಡೆದಿದೆ.. ನಟ ಧನುಷ್ ಹಾಗೂ ಪತ್ನಿ ಐಶ್ವರ್ಯಾ ರಜನಿಕಾಂತ್ ಇಬ್ಬರೂ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ. 18 ವರ್ಷಗಳ ಬಳಿಕ ಇಬ್ಬರೂ ಬೇರೆಯಾಗಲು ನಿರ್ಧರಿಸಿರುವುದು ತಮಿಳು ಚಿತ್ರರಂಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿದೆ. ರಜನಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ನಟ ಧನುಷ್ ಹಾಗೂ ಐಶ್ವರ್ಯಾ ಇಬ್ಬರೂ ಟ್ವಿಟ್ಟರ್ ನಲ್ಲಿ ಬೇರೆಯಾಗುತ್ತಿರುವ ವಿಷಯವನ್ನು ಘೋಷಣೆ ಮಾಡಿದ್ದಾರೆ. ಇಬ್ಬರೂ ಬೇರೆಯಾಗುತ್ತಿರುವುದಾಗಿ ಧನುಷ್ ಹಾಗೂ ಐಶ್ವರ್ಯಾ ಜೊತೆಯಾಗಿ ಟ್ವೀಟ್ ಮಾಡಿ ಘೋಷಣೆ ಮಾಡಿದ್ದಾರೆ. ಧನುಷ್ ಸೋಶಿಯಲ್ ಮೀಡಿಯಾ ಮೂಲಕ ವಿಚ್ಛೇದನದ ಬಗ್ಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. “18 ವರ್ಷ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಹಾಗೂ ಹಿತೈಷಿಯಾಗಿ ಜೊತೆಗಿದ್ದೆವು. ಬೆಳವಣಿಗೆ, ಪರಸ್ಪರ ಅರಿತುಕೊಳ್ಳುವಿಕೆ, ಹೊಂದಾಣಿಕೆ ಹಾಗೂ ಒಪ್ಪಿಕೊಳ್ಳುವ ಜರ್ನಿ ಮಧುರವಾಗಿತ್ತು. ಇವತ್ತು ನಾವು ನಮ್ಮ ಬೇರೆ ದಾರಿಗಳನ್ನು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಬೇತೂರ್ ಗ್ರಾಮದ ಅಂಬಾದೇವಿ ಜಾತ್ರ ಮಹೋತ್ಸವದಲ್ಲಿ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ಡಿ.ಸುಧಾಕರ್ ಭಾಗವಹಿಸಿದ್ದರು. ಈ ವೇಳೆ ಗ್ರಾಮದ ಗ್ರಾಮಸ್ಥರು ಹಾಗೂ ಅಂಬಾದೇವಿಯ ದೇವಸ್ಥಾನದ ಅರ್ಚಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ಡಿ.ಸುಧಾಕರ್ ರವರನ್ನು ಸನ್ಮಾನಿಸಿದರು. ಜಾತ್ರೆಯಲ್ಲಿ ಪಾಲ್ಗೊಂಡ ಡಿ.ಸುಧಾಕರ್ ರವರು ದೇವಿಯ ಕೃಪೆಗೆ ಪಾತ್ರರಾಗಿ ದೇವರ ದರ್ಶನ ಪಡೆದರು. ಈ ಸಂದರ್ಭ ಅಂಬಾದೇವಿಯ ಭಕ್ತಾಧಿಗಳು ಹಾಗೂ ದೇವಸ್ಥಾನದ ಅರ್ಚಕರು, ಮಂಡಳಿಯವರು ಇದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆಯನ್ನು ಒದಗಿಸಿ ಅವರ ಹಿತರಕ್ಷಣೆ ಮಾಡುವುದರ ಮೂಲಕ ಗಂಡಸ್ಥನ ಪ್ರದರ್ಶಿಸಬೇಕೆಂದು ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ನಗರದ ಹಿರಿಯ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆ ಹಾಗೂ ಸೇವಾ ವಿಲೀನತೆಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಅತಿಥಿ ಉಪನ್ಯಾಸಕರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದ್ದು, ಸುಮಾರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಅವರೊಂದಿಗೆ ಮಾತನಾಡುವ ಕನಿಷ್ಠ ಸೌಜನ್ಯ ತೋರಿಲ್ಲ. ಈ ಮಧ್ಯದಲ್ಲಿ ಹೊಸದೊಂದು ಆದೇಶ ಹೊರಡಿಸಿ ಅತಿಥಿ ಉಪನ್ಯಾಸಕರ ಒಗ್ಗಟ್ಟನ್ನು ಒಡೆದು ಆಳುವ ನೀಚ ನಡೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉನ್ನತ ಶಿಕ್ಷಣ ಸಚಿವರು ವೇದಿಕೆಯ ಮೇಲೆ ಸೂಟು ಬೂಟು ಧರಿಸಿ, ಗಂಡಸ್ಥನದ ಬಗ್ಗೆ ವೀರಾವೇಶವಾಗಿ ಮಾತನಾಡುತ್ತಾರೆ. ಅಷ್ಟು ಅಭಿವೃದ್ದಿಯ ಬಗ್ಗೆ ಕಾಳಜಿ ಹೊಂದಿರುವವರು ಅತಿಥಿ ಉಪನ್ಯಾಸಕರ ಹಿತ…

Read More

ಬೆಂಗಳೂರು: ಚಿನ್ನದ ಗಟ್ಟಿ ಖರೀದಿಸಲು ಚಿಕ್ಕಬಳ್ಳಾಪುರದಿಂದ ನಗರಕ್ಕೆ ಬಂದಿದ್ದ ಜ್ಯುವೆಲ್ಲರಿ ಮಾಲೀಕನ ಬ್ಯಾಗಿಗೆ ಬ್ಲೇಡ್ ಹಾಕಿದ ಚೋರರು 3.57 ಲಕ್ಷ ರೂ. ಹಣ ಹಾಗೂ 28 ಗ್ರಾಂ ಆಭರಣ ಕಳ್ಳತನ ಮಾಡಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಮೆಹರಾಮ್ ಎಂಬುವರು ಚಿನ್ನದ ಗಟ್ಟಿ ಖರೀದಿಸಲು ಜ.10ರಂದು ಹಣದೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ. ಅಂದು ಮಧ್ಯಾಹ್ನ ಎಸ್‍ಪಿ ರಸ್ತೆಯ ಎಚ್‍ಕೆಕೆ ರಸ್ತೆಯಲ್ಲಿ ನಡೆದುಕೊಂಡು ಇವರು ಹೋಗುತ್ತಿದ್ದಾಗ ಜನಜಂಗುಳಿ ಮಧ್ಯೆ ಖದೀಮ ಇವರ ಬ್ಯಾಗನ್ನು ಬ್ಲೇಡ್‍ನಿಂದ ಕೊಯ್ದು ಹಣ ಹಾಗೂ ಆಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಕೆಲಸ ಸಮಯದ ಬಳಿಕ ಬ್ಯಾಗ್ ನೋಡಿಕೊಂಡಾಗ ಬ್ಯಾಗ್‍ನ ಒಂದು ಬದಿ ಕೊಯ್ದಿರುವುದು ಗಮನಿಸಿ ತೆಗೆದು ನೋಡಿದಾಗ ಅದರಲ್ಲಿದ್ದ ಹಣ ಹಾಗೂ 28 ಗ್ರಾಂ ಚಿನ್ನದ ಸರ ಕಳ್ಳತನವಾಗಿರುವುದು ಕಂಡುಬಂದಿದೆ.ತಕ್ಷಣ ಮೆಹರಾಮ್ ಅವರು ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆ ಸ್ಥಳದ ಸುತ್ತಮುತ್ತಲಿನ ಸಿಸಿ ಟಿವಿ ಪರಿಶೀಲಿಸಿ…

Read More

ಮಾವೋವಾದಿ ಪೀಡಿತ ರಾಯಗಢದ ಜನರ ಏಳಿಗೆಗೆ ಶ್ರಮಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪದ್ಮಶ್ರೀ ಪುರಸ್ಕøತೆ ಶಾಂತಿ ದೇವಿ ಅವರು ಒಡಿಶಾದ ಗುನುಪುರ್‍ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಟ್ವಿಟ್ ಮೂಲಕ ಸಂತಾಪ ಕೋರಿದ್ದು, ಮಹಾತ್ಮ ಗಾಂಧೀಜಿಯವರ ಅನುಯಾಯಿಗಳಾಗಿದ್ದ ಶಾಂತಿದೇವಿ ಅವರು ಸುಮಾರು 6 ದಶಕಕ್ಕೂ ಹೆಚ್ಚು ಕಾಲ ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡಿದ್ದು, ಬಡವರು ಹಾಗೂ ಹಿಂದು ಳಿದವರ ಧ್ವನಿಯಾಗಿದ್ದ ಅವರು ತಳಮಟ್ಟ ಜನಾಂಗದ ಹೆಣ್ಣು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ. ಅವರು ನಮ್ಮನ್ನಗಲಿದ್ದರೂ ಕೂಡ ಅವರ ಸೇವೆ ಸದಾ ಅಮರವಾಗಿರುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ನ್ಯಾಯ ಯುತ ಹಾಗೂ ಆರೋಗ್ಯಕರ ಸಮಾಜವನ್ನು ರೂಪಿಸುವಲ್ಲಿ ಶಾಂತಿ ದೇವಿ ಜೀ ಅವರ ಸೇವೆ ಅಪಾರ, ಬಡವರು ಹಾಗೂ ಹಿಂದುಳಿದವರ ಧ್ವನಿಯಾಗಿ ಅವರು ಸದಾ ಜನರ ಮನಸ್ಸಿನಲ್ಲಿರುತ್ತಾರೆ, ಅವರ ನಿಧನದಿಂದ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು…

Read More

ಹೈದ್ರಾಬಾದ್: ಸಂಕ್ರಾಂತಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕೊಬ್ಬಿದ ಹೋರಿಗಳನ್ನು ಹಿಡಿಯಲು ಹೋದ 30 ಮಂದಿಗೆ ಗಾಯಗಳಾಗಿರುವ ಘಟನೆ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ. ಪಶುವಲ ಪಂಡಾಗದಲ್ಲಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೆಲ್ಲೂರು, ಕಡಪ, ಚಿತ್ತೂರು ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಿಂದಲೂ ಸ್ಪರ್ಧಾಳುಗಳು ಪಾಲ್ಗೊಂಡು ಕೊಬ್ಬಿದ ಹೋರಿಗಳನ್ನು ಬೆದರಿಸುವ ಹಾಗೂ ಹಿಡಿಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ತೆಲುಗುದೇಶಂನ ಮುಖ್ಯಸ್ಥ ಚಂದ್ರಬಾಬುನಾಯ್ಡು ಅವರು ಕೂಡ ಕೊಪ್ಪಂ ವಿಧಾನಸಭಾ ಕ್ಷೇತ್ರದ ಗುಂಡುಪಾಳ್ಯ ಮಂಡಲ್‍ನಲ್ಲಿ ಕೂಡ ಜಲ್ಲಿಕಟ್ಟು ಕಾರ್ಯಕ್ರಮವನ್ನು ಆಯೋಜಿಸಿದ್ದರು.ಇತ್ತೀಚೆಗೆ ತಮಿಳುನಾಡಿನ ಮಧುರೈನ ಅವನಿಪುರಂನಲ್ಲಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 80ಕ್ಕೂ ಹೆಚ್ಚು ಮಂದಿ ಗಾಯಗೊಂಡು ಒಬ್ಬರು ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು. ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8…

Read More