Subscribe to Updates
Get the latest creative news from FooBar about art, design and business.
- ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ: ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
- ತಿಪಟೂರು: ಜೆಡಿಎಸ್ ಎಸ್ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
- ತುಮಕೂರು ಪ್ರಿಂಟಿಂಗ್ ಹಬ್ ಆಗಲಿ: ಸಿ.ಸಿ.ಪಾವಟೆ
- ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
- ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
- ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
Author: admin
ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು…
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆಯುತ್ತಿದ್ದ ಹೋರಾಟಗಾರರ ಮೇಲೆ ಎಫ್ ಐ ಆರ್ ಮಾಡಿರುವುದನ್ನು ವಿರೋಧಿಸಿ ತುಮಕೂರು ಎಸ್ಪಿ ಕಚೇರಿ ಎದುರು ಪ್ರತಿಭಟನೆಗೆ ಕರೆ ಕೊಟ್ಟ ಹಿನ್ನಲೆ, ಎಸ್ ಪಿ ಕಚೇರಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ. ಇಂದು ಪ್ರತಿಭಟನೆ ನಡೆಸಲು ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಶಾಸಕ ಸುರೇಶ್ ಗೌಡ ಕರೆ ಕೊಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಎಸ್ ಪಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರತಿಭಟನಾಕಾರರು ಯಾರು ಎಸ್ ಪಿ ಕಚೇರಿ ಒಳಹೋಗದಂತೆ ಭದ್ರತೆ ಮಾಡಲಾಗಿದೆ. ನೂರಾರು ಪೊಲೀಸ್ ಸಿಬ್ಬಂದಿಗಳನ್ನ ಹಾಕಿ ಭದ್ರತೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಜಿಲ್ಲೆಯಲ್ಲಿ 14 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಅದರಲ್ಲಿ ಗುಬ್ಬಿ ತಾಲೂಕಿನಲ್ಲಿಯೇ 13 ಪ್ರಕರಣಗಳು ಪತ್ತೆಯಾಗಿವೆ, ಚಿರಾ ತಾಲೂಕಿನಲ್ಲಿ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದ್ದಾರೆ. ಕೊರೋನ ಸೋಂಕು ತಗಲಿರುವ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ಈಗಾಗಲೇ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ. ಕೋವಿಡ್ ಸೋಂಕು ತಗಲಿರುವ ವ್ಯಕ್ತಿಗಳಿಗೆ ಪೂರಕವಾಗಿ ವೈದ್ಯರು ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಯಾವ ಸೋಂಕಿತರು ಸೀರಿಯಸ್ ಪ್ರಕರಣಗಳು ಆಗಿಲ್ಲ ಎಂದು ಹೇಳಿದರು. ತುರುವೇಕೆರೆ ಮೂಲದ 42 ವರ್ಷದ ವ್ಯಕ್ತಿಯು ಕೋವಿಡ್ ಸೋಂಕಿನಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹೇಮಾವತಿ ಹೋರಾಟದಲ್ಲಿ ಐವರ ಬಂಧನ ಹಿನ್ನೆಲೆ ತುಮಕೂರು ಜೈಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ನವಚೇತನ್ ಹಾಗೂ ನಾಲ್ವರು ಯುವ ರೈತರನ್ನ ಭೇಟಿ ಮಾಡಿರುವ ವಿಜಯೇಂದ್ರ, ಬಂಧಿತರಿಗೆ ಧೈರ್ಯ ತುಂಬಿದರು. ಅಲ್ಲದೇ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದರು. ಹೋರಾಟದಿಂದ ಹಿಂದೆ ಸರಿಯದಂತೆ ವಿಜಯೇಂದ್ರ ಸಲಹೆ ನೀಡಿದ್ದಾರೆ. ವಿಜಯೇಂದ್ರ ಜೊತೆ ಎಂಎಲ್ ಸಿ ಸಿ.ಟಿ. ರವಿ, ನಾರಾಯಣ ಸ್ವಾಮಿ, ದೀರಜ್ ಮುನಿರಾಜ್, ಶಾಸಕ ಸುರೇಶ್ ಗೌಡ ಸಾಥ್ ನೀಡಿದರು. ಹೇಮಾವತಿ ಹೋರಾಟಕ್ಕೆ ಸಂಬಂಧಿಸಿದಂತೆ ಇದುವರೆಗೂ ಐವರು ಹೋರಾಟಗಾರನ್ನ ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯಗಳಿಸಿದೆ. ಈ ಮೂಲಕ ಹಲವು ವರ್ಷಗಳ ಆರ್ ಸಿಬಿ ಅಭಿಮಾನಿಗಳ ಕನಸು ನನಸಾಗಿದೆ. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಆರ್ ಸಿಬಿ ನೀಡಿದ 191 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಪಂಜಾಬ್ ಪರ ಪ್ರಿಯಾಂಶ್ ಆರ್ಯ 24 ರನ್ ಗಳಿಸಿದರೆ, ಪ್ರಭ್ ಸಿಮ್ರನ್ ಸಿಂಗ್ 26 ರನ್ ಗಳಿಸಿ ಔಟಾದರು. ನಾಯಕ ಶ್ರೇಯಸ್ ಅಯ್ಯರ್ ಕೇವಲ 1 ರನ್ ಗಳಿಸಿ ರೊಮಾರಿಯೋ ಶೆಫರ್ಡ್ ಗೆ ವಿಕೆಟ್…
ಬೆಂಗಳೂರು: RCB ಮತ್ತು ಪಂಜಾಬ್ ನಡುವೆ ಇಂದು IPL ಫೈನಲ್ ಮ್ಯಾಚ್ ನಡೆಯಲಿದ್ದು, ಇದೇ ವೇಳೆ ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ಕ್ರಮಕೈಗೊಂಡಿದ್ದು, ಸಾರ್ವಜನಿಕರಿಗೆ ತೊಂದರೆ ನೀಡದಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಸೂಚನೆ ನೀಡಿದ್ದಾರೆ. ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ. ಇನ್ನೂ ಪೊಲೀಸರಿಗೆ ಮಾಹಿತಿ ಇಲ್ಲದೇ ಎಲ್ ಇಡಿ ಸ್ಕ್ರೀನ್ ಅಳವಡಿಸಿದ್ರೆ ಹಾಗೂ ಪಂದ್ಯದ ಬಳಿಕ ಸಂಭ್ರಮಾಚರಣೆ ಮಾಡಿ, ಇತರರಿಗೆ ತೊಂದರೆಕೊಟ್ಟರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸೂಚನೆ ನೀಡಿದ್ದಾರೆ. ಇಂದು ಸಂಜೆ 7:30ಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರಕ್ಕೆ ಭಾರೀ ಹಿನ್ನಡೆ ಸೃಷ್ಟಿಸಿದೆ. ಚಿತ್ರತಂಡಕ್ಕೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಹೌದು… ಥಗ್ ಲೈಫ್ ಚಿತ್ರ ಜೂನ್ 5ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದ್ದರಿಂದ ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ಹಿನ್ನಡೆಯಾಗಿದೆ. ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಚಿತ್ರತಂಡ ಹೈಕೋರ್ಟ್ ಮೊರೆ ಹೋಗಿದ್ದತ್ತು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ಮೊಂಡಾಟ ಮೆರೆದಿದ್ದರು. ಇಂದು ಹೈಕೋರ್ಟ್ ನಲ್ಲಿ ಚಿತ್ರತಂಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು…
ಕೊರಟಗೆರೆ : ಸರಳತೆಯೊಂದಿಗೆ ಕರ್ತವ್ಯದಲ್ಲಿ ನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ ನಿವೃತ್ತಿಯಾದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ರವರ ಕಾರ್ಯವೈಖರಿ ಮತ್ತೊಬ್ಬರಿಗೆ ಪ್ರೇರಣೆಯಾಗಿದೆ ಎಂದು ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿದರು. ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಮೀಟಿಂಗ್ ಹಾಲ್ ನಲ್ಲಿ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ, ಪ್ರಾಮಾಣಿಕ ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್ ಗೆ ಕೊರಟಗೆರೆ ಸರ್ಕಾರಿ ಆಸ್ಪತ್ರೆ ಹಾಗೂ ಹೊಳೆನರಸೀಪುರ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಂದ ನಿವೃತ್ತಿ ಬೀಳ್ಕೊಡುಗೆ ನಡೆಸಲಾಯಿತು. ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಕರ್ತವ್ಯ ನಿರ್ವಹಿಸಿ ಕೊರಟಗೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಡಳಿತ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾಕ್ಟರ್ ಲಕ್ಷ್ಮಿಕಾಂತ್ ರವರಿಗೆ ತಮ್ಮ ವೈದ್ಯಕೀಯ ವೃತ್ತಿಯಲ್ಲಿ 60 ವರ್ಷಗಳು ಪೂರೈಸಿದ್ದು, ಅವರಿಗೆ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭವನ್ನು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಅದ್ದೂರಿಯಾಗಿ ನಡೆಸಿಕೊಟ್ಟರು. ಜನಸ್ನೇಹಿ ಎಲ್ಲರ ನೆಚ್ಚಿನ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್ ಅವರಿಗೆ ನಿವೃತ್ತಿ ಬೀಳ್ಕೊಡುಗೆ ಅದ್ದೂರಿಯಾಗಿ ನೆರವೇರಿಸಿ…
ತುಮಕೂರು: ಹೇಮಾವತಿ ಲಿಂಕ್ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಒಳಗೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಅಮರಣಾಂತರ ಉಪವಾಸ ಸತ್ಯಾಗ್ರಹ ಕುಳಿತಿದ್ದ ಸೊಗಡು ಶಿವಣ್ಣ, ತುಮಕೂರಿನ ಡಿಸಿ ಕಚೇರಿ ಒಳಗೆ ಚಾಪೆ, ದಿಂಬು ಹಾಕಿಕೊಂಡು ಮಲಗಿದ್ದರು. ಇಂದು ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ಕುಳಿತಿದ್ದರು. ಸತ್ಯಾಗ್ರಹನಿರತ ಶಿವಣ್ಣರನ್ನ ತುಮಕೂರು ಎಎಸ್ಪಿ ಹಾಗೂ ಪೊಲೀಸ್ ಸಿಬ್ಬಂದಿಗಳು ವಶಕ್ಕೆ ಪಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ನಡೆಯುತ್ತಿರೋ ಹೋರಾಟ ಹಿನ್ನಲೆಯಲ್ಲಿ ಅಲ್ಲದೆ ಹೋರಾಟಗಾರರ ವಿರುದ್ದ ಎಫ್ ಐ ಆರ್ ದಾಖಲಾದ ಬೆನ್ನಲ್ಲೆ ಬಿ.ವೈ.ವಿಜಯೇಂದ್ರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಗುಬ್ಬಿ ತಾಲೂಕಿನ ಸುಂಕಾಪುರ ಬಳಿ ನಡೆಯುತ್ತಿದ್ದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಸುಂಕಾಪುರ ಗ್ರಾಮಕ್ಕೆ ಭೇಟಿ ನೀಡಿದ ವಿಜಯೇಂದ್ರ ಸಂಪೂರ್ಣ ಮಾಹಿತಿ ಪಡೆದರು. ಈ ವೇಳೆ ಸಿ.ಟಿ ರವಿ, ಛಲವಾದಿ ನಾರಾಯಣ ಸ್ವಾಮಿ, ಶಾಸಕರಾದ ಸುರೇಶ್ ಗೌಡ, ಜಿಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು. ಕಳೆದ 31 ರಂದು ಇದೇ ಸುಂಕಾಪುರದಲ್ಲಿ ಸಾವಿರಾರು ಜನ ಹೋರಾಟ ನಡೆಸಿದ್ರು. ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಹೋರಾಟ ನಡೆಸಿದ್ರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…