Subscribe to Updates
Get the latest creative news from FooBar about art, design and business.
- ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್.ರಾಜಾಸಾಬ್
- ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್ ಮೇಲ್: ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
- ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
- ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
- ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
- ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
- ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
- ನವೆಂಬರ್ 19: ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
Author: admin
ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವ ವಿಧಾನವನ್ನು ಸರಳೀಕರಣಗೊಳಿಸಿ, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಅವರು ತಿಳಿಸಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 95(2)ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಛಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಯು ನಿಯಮಗಳಿಗೆ ಒಳಪಟ್ಟು ಅನುಮತಿಯನ್ನು ನಿರಾಕರಿಸಬಹುದು ಅಥವಾ ತಾನು ಯುಕ್ತವೆಂದು ಆಲೋಚಿಸುವಂತ ಷರತ್ತುಗಳಿಗೆ ಒಳಪಟ್ಟು ಕೊಡಬಹುದಾಗಿದೆ. ಅರ್ಜಿದಾರರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 96(4)ರನ್ವಯ ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶಕ್ಕೆ ಹೊಂದಿರುವ ಯಾವುದೇ ಭೂಮಿಯನ್ನು ಯಾವುದೇ ಇತರೆ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಯ ಅನುಮತಿಯಿಲ್ಲದೇ ಕಟ್ಟಡಗಳನ್ನು ಕಟ್ಟುವುದು ಅಥವಾ ಉಪಯೋಗ ಮಾಡಿದ್ದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ…
ಮರಾಠ ಸಮುದಾಯವನ್ನು 3(ಎ) ಪ್ರವರ್ಗದಿಂದ 2(ಎ) ಪ್ರವರ್ಗಕ್ಕೆ ಸೇರಿಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು. ಆಯೋಗದ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಶೂನ್ಯ ವೇಳೆಯಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ ಅವರು 2012ರಲ್ಲಿ ಶಂಕರಪ್ಪ ಆಯೋಗ ಮರಾಠಿ ಜನಾಂಗ 2ಎಗೆ ಸೇರುವ ಅರ್ಹತೆ ಹೊಂದಿದೆ ಎಂದು ವರದಿ ನೀಡಿದ್ದು ಅದರಂತೆ ಈ ಜನಾಂಗವನ್ನು ಪ್ರವರ್ಗ2ಎ ಗೆ ಸೇರಿಸಲು ಆಗ್ರಹಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಒಂದು ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಅವಶ್ಯಕವಾಗಿದ್ದು ಶಂಕರಪ್ಪ ವರದಿಯನ್ನು ಮರುಶಿಫಾರಸ್ಸು ಮಾಡಲಾಗುವುದು. ನಂತರ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಹಿಂದುಳಿದ ವರ್ಗಗಳ 2ಎಗೆ ತೀರ್ಮಾನ ಮಾಡಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಮಗಳ ಹುಟ್ಟುಹಬ್ಬ ಆಚರಿಸಲು ಸುವರ್ಣಸೌಧವನ್ನು ಬಾಡಿಗೆ ಕೊಡಿ ಎಂದು ಸಭಾಪತಿಗಳಿಗೆ ಮತ್ತು ಜಿಲ್ಲಾಧಿಕಾರಿಗೆ ತಂದೆಯೊಬ್ಬರು ಪತ್ರ ಬರೆದ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಘಟಪ್ರಭಾನ ವಕೀಲ ಮಲ್ಲಿಕಾರ್ಜುನ ಚೌಕಾಶಿ ಎಂಬುವರೇ ಪತ್ರ ಬರೆದವರಾಗಿದ್ದಾರೆ. ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ಹುಟ್ಟುಹಬ್ಬ ಮಾಡುವ ಪದ್ಧತಿಯಿದ್ದು, ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕು ಎಂದು ವಿನಂತಿಸಿದ್ದಾರೆ. ಪ್ರತಿ ವರ್ಷ ಚಳಿಗಾಲದ ಅಧಿವೇಶನಕ್ಕೆ ಮಾತ್ರ ಸುವರ್ಣ ವಿಧಾನಸೌಧದ ಬಳಕೆಯಾಗುತ್ತದೆ. ಸರ್ಕಾರ ಹತ್ತು ದಿನ ಅಧಿವೇಶನಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತದೆ.ಈ ಖರ್ಚು ಸರಿ ಹೊಂದಿಸಲು ಬಾಡಿಗೆ ಕೊಟ್ಟರೆ ಒಳ್ಳೆಯದು. ಸದ್ಯಕ್ಕೆ ಅಧಿವೇಶನ…
ಬೆಂಗಳೂರು: ವಾಹನ ಅಪಘಾತದ ಪ್ರಕರಣದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದ ಹಕ್ಕಿಲ್ಲ. ಆದರೇ ಮೃತ ವಿವಾಹೇತರ ಸಂಬಂಧದ ಮಕ್ಕಳಿಗೆ ಪರಿಹಾರದ ಹಕ್ಕಿದೆ ಎಂದು ಹೈಕೋರ್ಟ್ ಮಹತ್ವದ ಆದೇಶದಲ್ಲಿ ತಿಳಿಸಿದೆ. 2012ರಲ್ಲಿ ಮೋಟಾರು ವಾಹನ ಅಪಘಾತದಲ್ಲಿ ಮಲ್ಲಿಕಾರ್ಜುನ ಎಂಬುವರು ಮೃತಪಟ್ಟಿದ್ದರು. ಪರಿಹಾರ ನೀಡದ ವಿಮಾ ಕಂಪನಿಯಿಂದ ಪರಿಹಾರ ಕೋರಿ ಹೈಕೋರ್ಟ್ ಗೆ ಮೃತನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆ, ಪುತ್ರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರಿದ್ದ ನ್ಯಾಯಪೀಠವು, ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದಲ್ಲಿ ಹಕ್ಕಿಲ್ಲ. ಆದ್ರೇ ಆ ಸಂಬಂಧಕ್ಕೆ ಹುಟ್ಟಿದ ಪುತ್ರನಿಗೆ ಪರಿಹಾರದಲ್ಲಿ ಹಕ್ಕಿದೆ ಎಂದು ಅಭಿಪ್ರಾಯ ಪಟ್ಟರು.
ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬಹುತೇಕ ಕಡೆಗಳಲ್ಲಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ.ಸುಮಾರು 30 ಸೇವೆಗಳನ್ನು ಆನ್‍ಲೈನ್ ಮೂಲಕವೇ ಒದಗಿಸಲಾಗುತ್ತಿದೆ. ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕ ರಹಿತವಾಗಿ ಸೇವೆಗಳನ್ನು ಪಡೆಯುವ ಸೌಲಭ್ಯಗಳಿರುವುದರಿಂದ ರಾಜ್ಯದಲ್ಲಿ ಹೊಸದಾಗಿ ಪ್ರಾದೇಶಿಕ ಸಾರಿಗೆ (ಆರ್‍ಟಿಓ)ಕಚೇರಿಗಳನ್ನು ಸ್ಥಾಪಿಸುವುದಿಲ್ಲ ಎಂದು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಬೈಂದೂರು ಶಾಸಕ ಸುಕುಮಾರಶೆಟ್ಟಿ ಬಿ.ಎಂ.ಅವರ ಪ್ರಶ್ನೆಗೆ ಉತ್ತರಿಸುತ್ತ ಈ ಮಾಹಿತಿ ನೀಡಿದರು.ಉಡುಪಿ ಜಿಲ್ಲೆಯ ಕುಂದಾಪುರ , ಬೈಂದೂರು ತಾಲೂಕುಗಳು ಮತ್ತು ಸುತ್ತಮುತ್ತಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಕುಂದಾಪುರದಲ್ಲಿ ಪ್ರತಿ ಮಂಗಳವಾರ ಸಾರಿಗೆ ಶಿಬಿರ ನಡೆಯುತ್ತಿದೆ.ರಾಜ್ಯದ ಇತರೆಡೆಗಳಲ್ಲಿಯೂ ಅವಶ್ಯಕತೆಗೆ ಅನುಗುಣವಾಗಿ ನಿಯಮಿತವಾಗಿ ಸಾರಿಗೆ ಶಿಬಿರಗಳು ನಡೆಯುತ್ತಿವೆ. ಕುಂದಾಪುರದಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಸ್ಥಾಪಿಸಬೇಕೆಂಬ ಪ್ರಸ್ತಾವ ಸರ್ಕಾರದ ಗಮನಕ್ಕೆ ಬಂದಿದ್ದು,ಅಲ್ಲಿ ಕಚೇರಿ ಸ್ಥಾಪನೆಗೆ ಮಾನದಂಡಗಳು ಪೂರೈಕೆಯಾಗಿಲ್ಲ ಎಂಬ ಎಂದು ಉಡುಪಿ ಆರ್‍ಟಿಓ ವರದಿ ಸಲ್ಲಿಸಿದ್ದಾರೆ. ಹೊಸ ಆರ್‍ಟಿಓ ಅಥವಾ ಎಆರ್‍ಟಿಓ ಕಚೇರಿಗಳನ್ನು ತೆರೆಯಲು ನಿಗದಿಪಡಿಸಿರುವ ಮಾನದಂಡಗಳನ್ನು…
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಬೆಳಗಾವಿ ರವರ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ಅಧಿವೇಶನದ ನಿಮಿತ್ತವಾಗಿ 22.12.2022 ರಿಂದ 30.12.2022ರವರೆಗೆ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಈ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಾಗೂ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಣೆ ಸಮಾರಂಭವನ್ನು ದಿನಾಂಕಃ22.12.2022 ಸಾಯಂಕಾಲ 6.00 ಗಂಟೆಗೆ ಸರ್ದಾರ್ ಮೈದಾನದಲ್ಲಿನ ಭವ್ಯ ಸಭಾಂಗಣದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿರವರು ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾಗಿರುವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ರವರು ಉಪಸ್ಥಿತರಿರುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಹೆಚ್.ಡಿ.ಕೋಟೆ: ಪಟ್ಟಣದಲ್ಲಿ ಹನುಮ ಜಯಂತೋತ್ಸವ ಸೇವಾ ಸಮಿತಿ ವತಿಯಿಂದ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ನಡೆಸಿದರು. ಪಟ್ಟಣದ ಕನಕ ಭವನದಿಂದ ಮೆರವಣಿಗೆಗೆ ನಂದಿ ಕಂಬಕ್ಕೆ ಬಿಜೆಪಿ ಮುಖಂಡ ಕೃಷ್ಣಸ್ವಾಮಿ ಹಾಗೂ ಅಪ್ಪಣ್ಣ, ಬಿಡಗಲು ಮಠದ ಮಹದೇವಸ್ವಾಮಿ ಸ್ವಾಮೀಜಿ ಮತ್ತು ಜಯಪ್ರಕಾಶ್ ಚಿಕ್ಕಣ್ಣ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೇ ನೀಡಿದರು ಆನೇಕ ಜಾನಪದ ಕಲಾ ತಂಡಗಳು ತಮಟೆ ನಗಾರಿ ವೀರಗಾಸೆ,ಡೊಳ್ಳುಕುಣಿತ ಕಾರ್ಯಕ್ರಮಕ್ಕೆ ಮೆರಗು ನೀಡಿದವು. ಮೆರವಣಿಗೆಯು ಕನಕ ಭವನದಿಂದ ಪ್ರಾರಂಭವಾಗಿ ವರದರಾಜ ಸ್ವಾಮಿ ದೇವಾಲಯದ ಹತ್ತಿರ ಮುಕ್ತಾಯ ಗೊಂಡಿತ್ತು. ನೂರಾರು ಹನುಮ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಮ ಘೋಷಗಳನ್ನು ಕೂಗುತ್ತಾ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಕಾರ್ಯಕ್ರಮದಲ್ಲಿ ಮೊತ್ತ ಬಸವಾರಾಜು, ಟೀ ಅಂಗಡಿ ಮುತ್ತಣ್ಣ, ಗಿರೀಶ್, ಚಂದ್ರಮೌಳಿ, ವೆಂಕಟಸ್ವಾಮಿ, ಲಕ್ಷಣ, ಗುರುಸ್ವಾಮಿ, ಸಾವಿರಾರು ಹನುಮ ಭಕ್ತರು, ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು, ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೆ.ಆರ್.ಪೇಟೆ: ಕೆ.ಆರ್ ಪೇಟೆ ತಾಲೂಕು ಹಕ್ಕಿ ಹೆಬ್ಬಾಳು ಹೋಬಳಿಯ ಹೊಸ ದಡದಹಳ್ಳಿಯಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಯುವಕರ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಸಂಘದ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಸಂಜೆ ಭದ್ರಾವತಿ ಮೆಲೋಡಿಸ್ ಅವರಿಂದ ವಿಶೇಷ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಮುಖಂಡರು, ಪದಾಧಿಕಾರಿಗಳು , ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ಮಂಜು, ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ದೇಶದಲ್ಲಿ ಯೂಟ್ಯೂಬ್ ಚಾನೆಲ್ ಗಳ ಸಂಖ್ಯೆ ಹೆಚ್ಚುತ್ತಿರುವುದು ಗೊತ್ತೇ ಇದೆ. ಹೀಗಿರುವಾಗ ಯೂಟ್ಯೂಬ್ ಚಾನೆಲ್‌ಗಳ ಚಟುವಟಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಸಂಚಲನ ಮೂಡಿಸಿದೆ. ಸುಳ್ಳು ಸುದ್ದಿ ಸೃಷ್ಟಿಸುವುದು, ಜಾತಿ ವಿರೋಧಿ, ಸರ್ಕಾರ ವಿರೋಧಿ, ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಧಾರ್ಮಿಕ ವಿರೋಧಿ ಪ್ರಚಾರವನ್ನು ಹರಡುವ ಮೂಲಕ ಹಣಗಳಿಸುವ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಹಾಕುತ್ತಿದೆ. PIB ಈಗಾಗಲೇ ಹಲವಾರು YouTube ಚಾನಲ್‌ಗಳನ್ನು ನಿರ್ಬಂಧಿಸಿದೆ. ಅಲ್ಲದೆ, ಸುಳ್ಳು ಸುದ್ದಿ ಮತ್ತು ಸುಳ್ಳು ಮಾಹಿತಿಯನ್ನು ಹರಡಿದರೆ, ಚಾನೆಲ್ ಅನ್ನು ನಿಷೇಧಿಸುವುದು ಸೇರಿದಂತೆ ಮಾಲೀಕರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
1. ತಾಜ್ – ಭಾರತ 2. ಪ್ರೀಮಿಯರ್ ಇನ್ – ಬ್ರಿಟನ್ 3. ಹಿಲ್ಟನ್ – USA 4. ಹ್ಯಾಂಪ್ಟನ್ ಇನ್ – USA 5. ಎಂಬಸಿ ಸೂಟ್ಸ್ – USA 6. JW ಮ್ಯಾರಿಯೊಟ್ – USA 7. ಶಾಂಗ್ರಿ-ಲಾ – ಹಾಂಗ್ ಕಾಂಗ್ 8. ರೆಸಿಡೆನ್ಸ್ ಇನ್ ಮ್ಯಾರಿಯೊಟ್ – USA 9. ವಾಲ್ಡೋರ್ಫ್ ಆಸ್ಟೋರಿಯಾ – USA 10. W ಹೋಟೆಲ್‌ಗಳು – USA ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy