Author: admin

ನಂಜನಗೂಡು: ಕಾಡಿನಲ್ಲಿ ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ವೇಳೆ ರೈತರನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಂಜನಗೂಡು ತಾಲೂಕಿನ ಕೋಣನೂರು-ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಪ್ಪಿಸಿಕೊಂಡು ಹೋಗುವ ಭರದಲ್ಲಿ ಬೇಟೆಗಾರರ ಜೀಪು ಮಗುಚಿ ಬಿದ್ದ ಘಟನೆಯೂ ನಡೆದಿದೆ. ಕೋಣನೂರು ಗ್ರಾಮದ ಹೊರವಲಯದ ಎತ್ತಿನ ಮುಂಟಿ ಎಂಬ ಸ್ಥಳದಲ್ಲಿ ರಾತ್ರಿಯ ಸಮಯದಲ್ಲಿ ಜಿಂಕೆಯನ್ನು ಬೇಟೆಯಾಡಿದ ಬೇಟೆಗಾರರು, ಮರಕ್ಕೆ ನೇತು ಹಾಕಿ, ಮಾಂಸ ಮಾಡುತ್ತಿದ್ದರು. ಈ ವೇಳೆ ಜಮೀನಿನಲ್ಲಿದ್ದ ರೈತರನ್ನು ಕಂಡು ಹೆದರಿ, ಜೀಪು ಹತ್ತಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಗಾಬರಿಯಿಂದ ತೆರಳುವ ಭರದಲ್ಲಿ ಜೀಪು ಪಲ್ಟಿಯಾಗಿದ್ದು, ಜೀಪನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಕೋಣನೂರು ಮತ್ತು ಚುಂಚನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆಗಳು ಯಥೇಚ್ಛವಾಗಿವೆ, ಕುರುಚಲು ಅರಣ್ಯ ಪ್ರದೇಶವಾಗಿರುವ ಇಲ್ಲಿ ಸಾವಿರಾರು ಸಂಖ್ಯೆಯಲ್ಲಿರುವ ಜಿಂಕೆಗಳು ವಾಸಿಸುತ್ತಿವೆ. ಜೊತೆಗೆ ಕೃಷ್ಣಮೃಗಗಳು ಕೂಡ ವಾಸಿಸುತ್ತಿವೆ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಿಂಕೆಗಳು ಬೇಟೆಗಾರರಿಗೆ ಬಲಿಯಾಗುತ್ತಿವೆ  ಎಂದು ಕೋಣನೂರು ಮತ್ತು ಚುಂಚನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಪೊಲೀಸ್…

Read More

ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು ಈ ಸಮಿತಿಯ ತೀರ್ಮಾನವಾಗಿದೆ  ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಇದುವರೆಗೂ ಬಂದಿರುವ ಅರ್ಜಿಗಳನ್ನು ಆಯಾ ಜಿಲ್ಲಾ ಕಾಂಗ್ರೆಸ್ ಗಳಿಗೆ ಕಳುಹಿಸಿಕೊಡುತ್ತೇವೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ರಾಜ್ಯಮಟ್ಟದ ಚುನಾವಣಾ ಸಮಿತಿಯಿಂದ ಇಬ್ಬರು ಸದಸ್ಯರಿಗೆ ಒಂದೊಂದು ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು. ಪಕ್ಷದ 5 ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಚುನಾವಣಾ ಸಮಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಎಲ್ಲರೂ ಸೇರಿ ಚರ್ಚೆ ಮಾಡುತ್ತಾರೆ. ಆದಷ್ಟು ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ಸೇರಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಪ್ರತಿ ಕ್ಷೇತ್ರಗಳಲ್ಲಿ 1…

Read More

ತಿಪಟೂರು: ಕೊಬ್ಬರಿಗೆ ಬೆಂಬಲ ಬೆಲೆ ಕುರಿತು ರಾಜ್ಯಸಭೆಯಲ್ಲಿ ಚರ್ಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವಂತೆ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಕೊಬ್ಬರಿ ಬೆಲೆ ತುಂಬಾ ಕನಿಷ್ಠಕ್ಕೆ ಇಳಿದಿದ್ದು, ಪರಿಣಾಮವಾಗಿ ರೈತರಿಗೆ ತುಂಬಾ ನಷ್ಟ ಅನುಭವಿಸುವ ಸ್ಥಿತಿ ಉಂಟಾಗಿದೆ. ಆದ ಕಾರಣ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಕೆ.ಷಡಕ್ಷರಿ ಅವರ ಆದೇಶದಂತೆ ನಾ ಕೆನಹಳ್ಳಿ ಸುರೇಶ್ ಷಡಕ್ಷರಿ ಅವರ ಅಭಿಮಾನಿ ಬಳಗ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಕಲ್ಪತರು ನಾಡಿನ ಕೊಬ್ಬರಿಗೆ ಕನಿಷ್ಠ ರೂ.15,000 ಬೆಂಬಲ ಬೆಲೆ ಘೋಷಿಸುವಂತೆ ನ್ಯಾಫೆಡ್ ಕೇಂದ್ರ ಸ್ಥಾಪಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ಪಟ್ಟಣದ ಕೋಟೆ ಬೀದಿಯ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ  ಬೆಟ್ಟದಲ್ಲಿ ಮೇಯುತ್ತಿದ್ದ ಮೇಕೆಗಳ ಮೇಲೆ ಮೂರು ಚಿರತೆಗಳು ದಾಳಿ ನಡೆಸಿದೆ. ಚಿರತೆಗಳ ದಾಳಿಗೆ ಒಂದು ಮೇಕೆ ಬಲಿ:  ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮೇಕೆ ಕಳೆದುಕೊಂಡ ರೈತನಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಹಲವು ತಿಂಗಳುಗಳಿಂದ ಒಂದೊಂದಾಗಿ ಮೇಕೆ ಹಾಗೂ ಸಾಕು ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಗೆ ಆಹಾರವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಕುಡಿಯುವ ನೀರಿನ ಬಾವಿ ಇದ್ದು ಸಾರ್ವಜನಿಕರ ಪ್ರತಿನಿತ್ಯ ಅಲ್ಲಿಗೆ ಬರಬೇಕು.  ರಾತ್ರಿ ಸಮಯದಲ್ಲಿ ವಿದ್ಯುತ್ ಕಂಬಗಳಲ್ಲಿ  ಬೆಳಕು ಇಲ್ಲದ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಚಿರತೆಗಳು ದಾಳಿ ಮಾಡಿದರೆ, ಏನು ಮಾಡಬೇಕು? ಎಂದು ಆತಂಕ ವ್ಯಕ್ತಪಡಿಸಿರುವ ಸಾರ್ವಜನಿಕರು,  ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ವಹಿಸಿ ಚಿರತೆಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.…

Read More

ಬೆಂಗಳೂರು: ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕಿ ಅನಿತಾ ಕುಮಾರಸ್ವಾಮಿಯವರು, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾವೇರಿ: ನಾನು ಸತ್ತ ಮೇಲೆ ನನ್ನ ಹೆಣವನ್ನ ಶಿಗ್ಗಾಂವಿ ಕ್ಷೇತ್ರದಲ್ಲಿ ಹೂಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಸಚಿವ ಆರ್.ಅಶೋಕ್ ಅವರ​ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾಂವಿ ಕ್ಷೇತ್ರದ ಜನರು ನನಗೆ ಮಾಡಿದ ಆಶೀರ್ವಾದದಿಂದ ನಾನು ಈ ಹುದ್ದೆಗೆ ಬಂದಿದ್ದೇನೆ. ಶಿಗ್ಗಾಂವಿ ಕ್ಷೇತ್ರದ ಜನ ನನ್ನನ್ನು ಮನೆ ಮಗನಂತೆ ನೋಡಿಕೊಂಡಿದ್ದಾರೆ. ಇಲ್ಲಿಯ ಜನ ನೀಡಿದ ರೊಟ್ಟಿ ಬುತ್ತಿಯನ್ನು ಎಂದು ಮರೆಯುವುದಿಲ್ಲ. ನಾನು ಸತ್ತ ನಂತರವೂ ನನ್ನ ಹೆಣವನ್ನ ಶಿಗ್ಗಾಂವಿ ಕ್ಷೇತ್ರದಲ್ಲೇ ಹೂಳಬೇಕು ಎಂದು ಭಾವುಕರಾದರು.ಇನ್ನು ಸಿಎಂ ಮತ್ತು ಸಚಿವ ಆರ್ ಅಶೋಕ್ ವಸತಿ ಶಾಲೆಯ ವಿದ್ಯಾರ್ಥಿನಿಗಳ ಜೊತೆ ಸಹ ಪಂಕ್ತಿ ಭೋಜನ ಮಾಡಿದರು. ಉತ್ತರ ಕರ್ನಾಟಕದ ಜೋಳದ ರೊಟ್ಟಿ, ಮುಳುಗಾಯಿ ಎಣಗಾಯಿ, ಗೋಧಿ ಹುಗ್ಗಿಯನ್ನ ಬೊಮ್ಮಾಯಿ ಸವಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಬೆಂಗಳೂರು : ನಾಳೆಯಿಂದ ಡಿಸೆಂಬರ್ 31 ರವರೆಗೆ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ.ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ. ಈ ಸಂದರ್ಭದಲ್ಲಿ ಧಾರವಾಡ, ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳು ವರ್ಚುವಲ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಧಾನದಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಒಂದೇ ದಿನ 45 ಡಿವೈಎಸ್ಪಿ ಹಾಗೂ 8 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಈ ಕುರಿತು ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕೂಡಲೇ ಜಾರಿಗೆ ಬರುವಂತೆ 45 ಡಿವೈಎಸ್ ಪಿ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೇ 8 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭಾರತ – ಚೀನಾ ನಡುವಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಭಾರತ – ಚೀನಾ ನಡುವಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ಮೋದಿ ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ. ಯಾವಾಗ ‘ಚೀನಾ ಪೇ ಚರ್ಚಾ’ ನಡೆಯಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕೂಡಾ ಈ ಕುರಿತು ದನಿ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಉತ್ತರಿಸುವುದು ಕರ್ತವ್ಯವಾಗಿದೆ. ಸಂಸತ್ತಿನಲ್ಲಿ ಚರ್ಚಿಸಲು ಏಕೆ ನಿರ್ಬಂಧಿಸಲಾಗುತ್ತಿದೆ ಎಂಬುದರ ದೇಶದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಡೋಕ್ಲಾಮ್ನಲ್ಲಿರುವ ಸಿಲಿಗುರಿ ಕಾರಿಡಾರ್ ಸಮೀಪ ಜಂಫೇರಿ ಪರ್ವತದವರೆಗೆ ಚೀನಾದ ಸೇನಾ ಪಡೆಗಳು ತಮ್ಮ ನೆಲೆ ನಿರ್ಮಿಸುತ್ತಿವೆ ಎಂಬ ವಿಷಯ ಈಗ ಆಡಳಿತ ಹಾಗೂ ವಿರೋಧ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯದಿರುವುದು ದೇಶವು (ಪಾಕಿಸ್ತಾನ) ಮುಳುಗುವ ಸಂಕೇತವಾಗಿದೆ ಎಂಬ ಭಯ ಕಾಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.ಇಮ್ರಾನ್ ಖಾನ್ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಇಲ್ಲದಿದ್ದರೆ ದೇಶವು ಮುಳುಗಬಹುದು ಎಂಬ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದ ಸಮಸ್ಯೆಗಳಿಗೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯೊಂದೇ ಪರಿಹಾರ. ಸೋಲುವ ಭೀತಿಯಿಂದಾಗಿ ಸರ್ಕಾರ ಹೊಸ ಚುನಾವಣೆಗಳಿಗೆ ಹೆದರುತ್ತಿದೆ. ಸರ್ಕಾರಕ್ಕೆ ಚುನಾವಣೆ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಇಮ್ರಾನ್ ಖಾನ್ ತಿಳಿಸಿ್ದ್ದಾರೆ.ಜತೆಗೆ ಶೆಹಬಾಜ್ ಷರೀಫ್ ಸರ್ಕಾರದ ಅಡಿಯಲ್ಲಿ ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯ ಬಗ್ಗೆ ಇಮ್ರಾನ್ ಖಾನ್ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More