Subscribe to Updates
Get the latest creative news from FooBar about art, design and business.
- ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್.ರಾಜಾಸಾಬ್
- ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್ ಮೇಲ್: ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
- ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
- ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
- ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
- ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
- ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
- ನವೆಂಬರ್ 19: ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
Author: admin
ಬೆಂಗಳೂರು : ಇಂದು ಸಂಜೆ ಸಮಯ 4ಗಂಟೆಗೆ ನಗರದ ಬಸವನ ಗುಡಿಯ ಎನ್.ಆರ್.ಕಾಲೋನಿಯ ಡಾ.ಸಿ. ಅಶ್ವಥ್ ಕಾಲ ಭವನದಲ್ಲಿ ಜನ್ಮ ಭೂಮಿ ಸೇವಾ ಟ್ರಸ್ಟ್ ವತಿಯಿಂದ ಕನ್ನಡ ಹಬ್ಬ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾದ ಹೆಮ್ಮೆಯ ಕನ್ನಡಿಗ ಮತ್ತು ಹೆಮ್ಮೆಯ ಕನ್ನಡತಿ ಪ್ರಶಸ್ತಿಯನ್ನು ನೀಡಲಾಗುವುದು. ಕನ್ನಡ ಪರ ಹೋರಾಟಗಾರ ಹಾಗೂ ಸಮಾಜ ಸೇವಕ ಪ್ರಗತಿ ಪರ ಚಿಂತಕರಾದ ಡಾ. ಜನ್ಮಭೂಮಿ ವಿ.ರವಿ ರವರು ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ.. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು, ಕನ್ನಡ ಪರ ಸಂಘಟನೆಗಳ ಹೋರಾಟಗಾರರು,ಸಮಾಜ ಸೇವಕರು,ಕಲಾವಿದರು,ಪ್ರಗತಿ ಪರ ಚಿಂತಕರು,ಸಾಮಾಜಿಕ ಹೋರಾಟಗಾರು ಮತ್ತು ಕನ್ನಡ ಮನಸುಗಳು ಈ ಕಾರ್ಯಕ್ರಮದಲ್ಲಿ ಸಾಕ್ಷಿಯಾಗಲಿದ್ದಾರೆ.. ಕಾರ್ಯಕ್ರಮದಲ್ಲಿ ಭರತನಾಟ್ಯ, ಯಕ್ಷಗಾನ, ವೀರಗಾಸೆ, ಕಂಸಾಳೆ, ನೃತ್ಯ,ಯೋಗ, ಜನಪದ ಹಾಗೂ ಭಾವಗೀತೆ ಇನ್ನು ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜನ್ಮ ಭೂಮಿ ಸೇವಾ ಟ್ರಸ್ಟ್ ನಾ ಸಂಸ್ಥಾಪಕ ಅಧ್ಯಕ್ಷರಾದ…
2024ರ ಅಂತ್ಯದ ವೇಳೆಗೆ ದೇಶದ ರಸ್ತೆ ಗುಣಮಟ್ಟವು ಅಮೆರಿಕದ ರಸ್ತೆಗೆ ಸಮನಾಗಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.95ನೇ ಎಫ್‍ಐಸಿಸಿಐ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಯನ್ನು ಮಾಡುತ್ತಿದ್ದೇವೆ ಎಂದಿದ್ದಾರೆ. 2024ರ ಅಂತ್ಯದ ವೇಳೆಗೆ ನಮ್ಮ ರಸ್ತೆ ಮೂಲ ಸೌಕರ್ಯವು ಅಮೆರಿಕ, ಇಂಗ್ಲೆಂಡ್‍ಗೆ ಸಮನಾಗಿರುತ್ತದೆ. ರಕು ವೆಚ್ಚವು ನಮ್ಮ ದೊಡ್ಡ ಸಮಸ್ಯೆಯಾಗಿದೆ. ಪ್ರಸ್ತುತ 14 ಪ್ರತಿಶತವಿದೆ. ಆದರೆ 2024ರ ಅಂತ್ಯದ ವೇಳೆಗೆ 9 ಪ್ರತಿಶತಕ್ಕೆ ಇಳಿಕೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಗತ್ತಿನಲ್ಲಿ ಜಾಗತಿಕ ಸಂಪನ್ಮೂಲವು ಶೇ.40ರಷ್ಟು ಖರ್ಚಾಗುತ್ತಿದೆ. ಇದರ ಬದಲಾಗಿ ನಿರ್ಮಾಣ ಕಾರ್ಯದಲ್ಲಿ ಬದಲಿ ವ್ಯವಸ್ಥೆಯನ್ನು ಮಾಡಿ, ಉಕ್ಕಿನ ಬಳಕೆ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಗಡ್ಕರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾಡ ಬಂದೂಕಿನಲ್ಲಿ ಆಟವಾಡುತ್ತಿದ್ದಾಗ, ಆಕಸ್ಮಿಕವಾಗಿ ಗುಂಡು ಸಿಡಿದು 7 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಕಾಡಶಿವನಹಳ್ಳಿಯಲ್ಲಿ ನಡೆದಿದೆ. UP ಮೂಲದ ಅಮಿನುಲ್ಲಾ, ಸಮ್ನ್ ಕುಟುಂಬ 3 ದಿನದ ಹಿಂದೆ ಕೂಲಿ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದು, ತಂದೆತಾಯಿ ಕೆಲಸದಲ್ಲಿ ನಿರತರಾಗಿದ್ದರು. ಆ ವೇಳೆ 16 ವರ್ಷದ ಮಗ ಸಾಜೀದ್ ಬಂದೂಕಿನ ಟ್ರಿಗರ್ ಒತ್ತಿದ್ದು, ಮಗಳು ಶಮಾ ಮೇಲೆ ಗುಂಡು ಸಿಡಿದು ಪ್ರಾಣಬಿಟ್ಟಿದ್ದಾಳೆ. ಪೊಲೀಸರು ಸಾಜೀದ್, ತೋಟದ ಮಾಲೀಕ ಮಲ್ಲೇಶ್‌ನನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಪುರಾ ಮತ್ತು ಮೇಘಾಲಯ ಎರಡರಲ್ಲೂ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಇದು ಬಿಜೆಪಿಗೆ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಲಾಗುತ್ತಿದೆ. ಇತ್ತೀಚೆಗಷ್ಟೇ ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಈಗ ಚುನಾವಣೆ ಎದುರಿಸಿರುವ ತ್ರಿಪುರಾ ಮತ್ತು ಮೇಘಾಲಯದತ್ತ ಗಮನ ಹರಿಸುತ್ತಿದೆ. ಮೋದಿ ಈಶಾನ್ಯ ಕೌನ್ಸಿಲ್‌ನ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ನಡೆಯಲಿರುವ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೆಚ್.ಡಿ.ಕೋಟೆ: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಬಗೆಹರಿಸಲು ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನೆ ಮೆರವಣಿಗೆ ಪಟ್ಟಣದ ಗದ್ದಿಗೆ ವೃತ್ತದಿಂದ ಹುಣಸೂರು–ಬೇಗೂರು ರಸ್ತೆಯಲ್ಲಿ ಸಾಗಿ ನಂತರ ತಾಲ್ಲೂಕು ಆಡಳಿತ ಸೌಧದ ಎದುರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಜನಸಾಮಾನ್ಯರ ಬದುಕ ಆತಂತ್ರವಾಗಿದೆ, ಅದರಲ್ಲೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದ್ದರು ಸರ್ಕಾರ ಕಿವಿ ಮೂಗು ಇಲ್ಲದ ರೀತಿಯಲ್ಲಿ ವರ್ತನೆ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಸಾಲಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಆದರೆ ಫಲಿತಾಂಶ ವಿಳಂಬ ಮಾಡಿದರಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದೆ. ಈ ಹಿಂದೆ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವ್ಯವಸ್ಥೆ ಇತ್ತು, ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರದ್ದು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ/ ಪರಿಶಿಷ್ಟ…
ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಪುರಾ ಮತ್ತು ಮೇಘಾಲಯ ಎರಡರಲ್ಲೂ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಇದು ಬಿಜೆಪಿಗೆ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಲಾಗುತ್ತಿದೆ. ಇತ್ತೀಚೆಗಷ್ಟೇ ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಈಗ ಚುನಾವಣೆ ಎದುರಿಸಿರುವ ತ್ರಿಪುರಾ ಮತ್ತು ಮೇಘಾಲಯದತ್ತ ಗಮನ ಹರಿಸುತ್ತಿದೆ. ಮೋದಿ ಈಶಾನ್ಯ ಕೌನ್ಸಿಲ್‌ನ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ನಡೆಯಲಿರುವ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೊಸಪೇಟೆ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಶವಂತ , ಅಂಜಿನಿ, ಗುರುರಾಜ್ ಮೃತಪಟ್ಟ ವಿದ್ಯಾರ್ಥಿಗಳು. ಕಾಲುವೆಗೆ ಆರು ಮಂದಿ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
250 ವರ್ಷಗಳ ಇಂಡೋನೇಷ್ಯಾದ ಪಫುವಾದಲ್ಲಿನ ದೂರದ ಹಳ್ಳಿಯನ್ನು ಆಳಿದ ಬುಡಕಟ್ಟು ಸಮುದಾಯದ ಮುಖ್ಯಸ್ಥ ಅಗಾತ್ ಮಾಮೆಟೆ ಮಾಬೆಲ್ ಅವರ ಮೃತದೇಹವನ್ನು ಇಂದಿಗೂ ಸಂರಕ್ಷಿಸಲಾಗಿದೆ. ಪ್ರಸ್ತುತ ಬುಡಕಟ್ಟು ಸಮುದಾಯದ ಮುಖ್ಯಸ್ಥರಾಗಿರುವ ಎಲಿ ಮಾಬೆಲ್ ಅವರು ತಮ್ಮ ಪೂರ್ವಜರಾಗಿರುವ ಅಗಾತ್ ಮಾಮೆಟೆ ಮಾಬೆಲ್ ಅವರ ಮೃತದೇಹವನ್ನು ಸಂರಕ್ಷಿಸುತ್ತಿದ್ದಾರೆ. ಈ ಬುಡಕಟ್ಟು ಸಮುದಾಯದಲ್ಲಿ ವೀರರು ಹಾಗೂ ಸಮುದಾಯದ ಪ್ರಮುಖ ಹಿರಿಯರು ಮೃತಪಟ್ಟರೆ ಅವರ ಮೃತದೇಹವನ್ನು ಸಂರಕ್ಷಿಸಿಡುವ ಸಂಪ್ರದಾಯವಿದೆ. ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ರೀತಿಯ ಆಚರಣೆಯನ್ನು ಮಾಡಲಾಗುತ್ತದೆ. ಹಿರಿಯರ ಮೃತದೇಹವನ್ನು ಹೊಗೆ ಮತ್ತು ಪ್ರಾಣಿಗಳ ಕೊಬ್ಬು ಸವರಿ ಕೊಳೆತು ಹೋಗದಂತೆ ರಕ್ಷಿಸಲಾಗುತ್ತದೆ. ಆ ಮೂಲಕ ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕಾರ್ಯವನ್ನು ಇವರು ಮಾಡುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಮನಗರ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದು, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಪಂಚರತ್ನ ಯಾತ್ರೆಯ ವೇಳೆ ಅನಿತಾ ಕುಮಾರಸ್ವಾಮಿ ಅವರು ಈ ವಿಚಾರವನ್ನು ತಿಳಿಸಿದ್ದು, ನಿಖಿಲ್ ಹೆಸರು ಘೋಷಿಸುತ್ತಿದ್ದಂತೆಯೇ ಕಾರ್ಯಕರ್ತರು ಹಾಗೂ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದರು. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡಬೇಡಿ ಎಂದು ಅವರು ಇದೇ ವೇಳೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ಉಂಡೆ ಕೊಬ್ಬರಿಯ ಬೆಲೆ ಕುಸಿಯುತ್ತಿರುವ ಸಂದರ್ಭದಲ್ಲಿ ಹಾಗೂ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನೆರವಿಗೆ ಬರುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಆಗ್ರಹಿಸಿ ಇಲ್ಲಿನ ಕಾಂಗ್ರೆಸ್ ಮುಖಂಡ ಸಿ. ಬಿ. ಟೂಡಾ ಶಶಿಧರ್ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ತುಮಕೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಬೆಂಗಳೂರು, ಶಿವಮೊಗ್ಗ ಜಿಲ್ಲೆಯ ರೈತರು ತೆಂಗನ್ನು ಹೆಚ್ಚು ಬೆಳೆಯುತ್ತಾರೆ. ಇದರಲ್ಲಿ ತುಮಕೂರು ಜಿಲ್ಲೆಯ ರೈತರಿಗೆ ಸಂಪೂರ್ಣವಾಗಿ ತೆಂಗು ಆರ್ಥಿಕ ಬೆಳೆ ಹಾಗೂ ಅದೇ ಜೀವನಾಧಾರವಾಗಿದೆ. ಪ್ರಮುಖವಾಗಿ ತಿಪಟೂರು ರೈತರು ಬಲಿತ ತೆಂಗಿನ ಕಾಯಿಯಿಂದ ವಿಶ್ವದಲ್ಲೇ ಅತೀ ವಿಶಿಷ್ಟವಾದ ಉಂಡೆ ಕೊಬ್ಬರಿ ತಯಾರಿಸುತ್ತಾರೆ. ಈ ರೀತಿ ತಯಾರಿಸಿದ ಉಂಡೆ ಕೊಬ್ಬರಿಯನ್ನು ರೈತರು ಕೃಷಿ ಉತ್ಪನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಾರೆ. ಉಂಡೆ ಕೊಬ್ಬರಿಗೆ ಸಂಬಂಧಿಸಿದಂತೆ ತಿಪಟೂರಿನಲ್ಲಿ ಘೋಷಣೆಯಾದ ಟೆಂಡರ್ ಧಾರಣೆಯನ್ನೇ ಮೂಲಧಾರಣೆಯನ್ನಾಗಿ ರಾಜ್ಯಾದ್ಯಂತ ಪರಿಗಣಿಸಲಾಗುತ್ತದೆ. ಇತ್ತೀಚಿನ…