Subscribe to Updates
Get the latest creative news from FooBar about art, design and business.
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
- ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
- ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
- ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
- ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
- ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
Author: admin
ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಸ್ವಗ್ರಾಮ ಯಾದಗಿರಿಯ ಕೊಡೇಕಲ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ಹಿನ್ನೆಲೆ ಕೊಡೇಕಲ್, ಹುಣಸಗಿ ಹಾಗೂ ಸುರಪುರದಲ್ಲಿ ಖಾಕಿ ಪಡೆ ಸುತ್ತುವರಿದಿದೆ. ಗಲಾಟೆ ನಿಯಂತ್ರಣಕ್ಕಾಗಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಈಗಾಗಲೇ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದು, ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸೆಕ್ಷನ್ 144 ಕಲಂ ಜಾರಿಯಾಗಿದೆ. ಸಂಘರ್ಷ ಹಿನ್ನೆಲೆ ಗುರುವಾರ ರಾತ್ರಿ ಕೊಡೇಕಲ್‌ಗೆ ಆಗಮಿಸಿರುವ ಕಲಬುರಗಿ ಈಶಾನ್ಯ ವಲಯ ಐಜಿಪಿ ಅನುಪಮ ಅಗರವಾಲ್ ಹಾಗೂ ಯಾದಗಿರಿ ಎಸ್‌ಪಿ ಡಾ. ಸಿಬಿ ವೇದಮೂರ್ತಿ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ನಿಷೇಧಾಜ್ಞೆ ಜಾರಿ ಹಿನ್ನೆಲೆ ಇಡೀ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ 3 ಕೆಎಸ್‌ಆರ್‌ಪಿ ತುಕಡಿ, 1 ಪ್ಯಾರಾ ಮಿಲಿಟರಿ ಫೋರ್ಸ್ ಕಂಪನಿ, 2 ಡಿಎಸ್‌ಪಿ, 5 ಸಿಪಿಐ, 10 ಸಿಪಿಐ 100 ಕಾನ್ಸ್ಟೇಬಲ್ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ 142 ಕೆ.ಜಿ ಬೆಳ್ಳಿಯ ಕಾಲು ಚೈನುಗಳು ಸೇರಿ 1 ಕೋಟಿ 5 ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣಗಳ ಜೊತೆಗೆ ಕಾರು ಕೂಡ ಜಪ್ತಿ ಮಾಡಲಾಗಿದೆ. ಒಟ್ಟು 8 ಬ್ಯಾಗ್ ಗಳಲ್ಲಿ 142 ಕೆಜಿ ಬೆಳ್ಳಿಯ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗಜಾನನ ಎಂಬವರಿಗೆ ಸೇರಿದ ಕಾರಿನಲ್ಲಿ ಅಪಾರ ಪ್ರಮಾಣದ ಬೆಳ್ಳಿಯ ಕಾಲು ಚೈನುಗಳು ಪತ್ತೆಯಾಗಿವೆ. ಕಾರಿನ ಮಾಲೀಕರು ನಿಖರವಾದ ದಾಖಲೆಗಳು ನೀಡದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಕಿತ್ತೂರು ಕ್ಷೇತ್ರ ದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೆ ಅಸಮಾಧಾನ ಭುಗಿಲೆದಿದ್ದು, ಕಿತ್ತೂರು ಕ್ಷೇತ್ರಕ್ಕೆ ಬಾಬಾಸಾಹೇಬ್ ಪಾಟೀಲ್‍ಗೆ ಟಿಕೆಟ್ ಹಂಚಿಕೆಗೆ ಕ್ಷೇತ್ರದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಲಾಬಿಗೆ ಮಣಿದು ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಟಿಕೆಟ್ ಹಂಚಿಕೆ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ, ಸತೀಶ್ ಜಾರಕಿಹೊಳಿ ಆಪ್ತ ಹಬೀಬ್ ಶಿಲೇದಾರ್ ಅಸಮಾಧಾನ ಹೊರಹಾಕಿದ್ದು, ಹೈಕಮಾಂಡ್ ಮಾಡಿದ ಎಡುವಟ್ಟು ಕ್ಷೇತ್ರದಲ್ಲಿ ಸೋಲು ಅನುಭವಿಸುತ್ತದೆ ಎಂದು ಹೇಳಿದ್ದಾರೆ. ಕಿತ್ತೂರು ಕ್ಷೇತ್ರದಲ್ಲಿ ಬಂಡಾಯದ ಮುನ್ಸೂಚನೆಯನ್ನು ನೀಡಿರುವ ಮುಖಂಡ ಶಿಲೇದಾರ್ , ಪರೋಕ್ಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್, ವಿನಯ ಕುಲಕರ್ಣಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡ ಬಾಬಾಸಾಹೇಬ್ ಪಾಟೀಲ್‍ಗೆ ಬಂಡಾಯದ ಭೀತಿ ಎದುರಾಗಿದ್ದು ಕಿತ್ತೂರಲ್ಲಿ ಡಿ.ಬಿ ಇನಾಮದಾರ್ ಸೊಸೆ ಲಕ್ಷ್ಮಿ ಇನಾಮದಾರ್, ಹಬೀಬ್ ಶಿಲೇದಾರ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು.ಟಿಕೆಟ್ ಕೈ ತಪ್ಪಿದಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆಗಿ ಕಣಕ್ಕಿಳಿಯಲು ಲಕ್ಷ್ಮಿ, ಹಬೀಬ್ ನಿರ್ಧಾರ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಕಾಂಗ್ರೆಸ್ ಯಾವಾಗಲೂ ಪ್ರಾಮಾಣಿಕ ಅಭ್ಯರ್ಥಿಗಳನ್ನು ಗುರುತಿಸಿ ಅವಕಾಶ ಕೊಡುತ್ತಿದೆ, ಸತ್ಯಕ್ಕೆ, ಪ್ರಾಮಾಣಿಕತೆಗೆ ದೊರೆತಿರುವ ಗೆಲುವು ಅಂತಾ ಭಾವಿಸುತ್ತೇನೆ ಎಂದು ತುಮಕೂರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹ್ಮದ್ ಹೇಳಿದರು. ಕಾಂಗ್ರೆಸ್ ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ಕೊಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು. ತುಮಕೂರು ನಗರದ ಏಳಿಗೆ ಹಾಗೂ ಶಾಂತಿಗಾಗಿ ಶ್ರಮಿಸುತ್ತೇನೆ. ಎಲ್ಲಾ ಪಕ್ಷದಲ್ಲೂ ಭಿನ್ನಾಭಿಪ್ರಾಯ ಇರುತ್ತದೆ. ಎಲ್ಲರನ್ನೂ ವಿಶ್ವಾಸದಿಂದ ತೆಗೆದುಕೊಂಡು ಹೋಗ್ತೇನೆ. ನಾನು ಹಿರಿಯ ಮುಖಂಡ ಷಫಿ ಅಹ್ಮದ್ ಜೊತೆ 20 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಷಫಿ ಅಹ್ಮದ್ ಸೇರಿ ಎಲ್ಲಾ ಅಸಮಾನಿತರ ಜೊತೆ ಸೌಹಾರ್ದಯುತವಾಗಿ ಮಾತನಾಡ್ತೇನೆ. ಷಫಿ ಅಹ್ಮದ್ ಹಾಗೂ ಪಕ್ಷದ ಮುಖಂಡರ ಜೊತೆಯಲ್ಲೇ ಪ್ರಚಾರ ಕಾರ್ಯ ಮಾಡ್ತೇನೆ ಎಂದು ಅವರು ಹೇಳಿದರು. ಅರ್ಹರನ್ನು ಪಕ್ಷ…
ರಾಯಚೂರು: ಬಿಜೆಪಿ ಶಾಸಕನ ಭಾವಚಿತ್ರವಿದ್ದ ಅಂಬುಲೆನ್ಸ್‌ನ್ನು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸೀಜ್ ಮಾಡಿದ ಪ್ರಕರಣ ದೇವದುರ್ಗದ ಅರಕೇರಾದಲ್ಲಿ ನಡೆದಿದೆ. ಶಾಸಕ ಶಿವನಗೌಡ ನಾಯಕ್ ಭಾವಚಿತ್ರವಿದ್ದ ಅಂಬುಲೆನ್ಸ್ ಅರಕೆರಾದ ನಾಡಗೌಡ ಆಸ್ಪತ್ರೆ ಬಳಿ ನಿಂತಿತ್ತು. ಈ ವೇಳೆ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಅಂಬುಲೆನ್ಸ್ ವಶಕ್ಕೆ ಪಡೆದಿದ್ದಾರೆ. ಚಾಲಕ ಫಕೀರಯ್ಯ ಹಾಗೂ ಆಂಬ್ಯುಲೆನ್ಸ್ ಮಾಲೀಕ ಹನುಂತರಾಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದೇವದುರ್ಗದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಶಾಸಕನ ಭಾವಚಿತ್ರವನ್ನು ಅಂಬುಲೆನ್ಸ್‌ನಲ್ಲಿ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೈಸೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಇಂದು ವಿಶ್ವ ಆರೋಗ್ಯ ದಿನ. ವಿಶ್ವ ಆರೋಗ್ಯ ಸಂಸ್ಥೆ ಅಸ್ತಿತ್ವಕ್ಕೆ ಬಂದು ಎಪ್ಪತ್ತೈದು ವರ್ಷಗಳು ಕಳೆದಿವೆ. ಜಾಗತಿಕ ಸವಾಲನ್ನು ಒಡ್ಡುವ ನೈಸರ್ಗಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವುದು ಈ ದಿನದ ಉದ್ದೇಶವಾಗಿದೆ. ಆರೋಗ್ಯ ರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತದ ಜನರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು WHO ಗುರಿ ಹೊಂದಿದೆ. ಈ ವರ್ಷದ ಥೀಮ್ ಎಲ್ಲರಿಗೂ ಆರೋಗ್ಯಕರ ಜೀವನ. ವ್ಯಕ್ತಿಯ ಆರೋಗ್ಯದ ಗುಣಮಟ್ಟವು ಜೀವನ ಪರಿಸ್ಥಿತಿಗಳಿಗೆ ಸಂಬಂಧಿಸಿದೆ. ಆಫ್ರಿಕನ್ ದೇಶಗಳು ಸೇರಿದಂತೆ ಎಬೋಲಾ ಮತ್ತು ಸಾರ್ಸ್ ವೈರಸ್‌ನಂತಹ ಗಂಭೀರ ಸಾಂಕ್ರಾಮಿಕ ರೋಗಗಳು ಬಿಕ್ಕಟ್ಟಾಗುತ್ತಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಅದಕ್ಕೆ ಸಾಮೂಹಿಕ ಪ್ರಯತ್ನ ಬೇಕು. ದೇಶವು ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ಸಂದರ್ಭದಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಬಿಜೆಪಿಯು ಪ್ರಚಾರಕ್ಕೆ ಸ್ಟಾರ್ ನಟರ ಮೊರೆ ಹೋಗಿದ್ದು , ಈ ನಡುವೆ ಎಲ್ಲಾ ಸ್ಟಾರ್ ನಟರು ಬಿಜೆಪಿ ಪರ ಪ್ರಚಾರಕ್ಕೆ ಬಂದರೆ ಸ್ವಾಗತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನಟ ಕಿಚ್ಚ ಸುದೀಪ್ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ ಬೊಮ್ಮಾಯಿ ಅವರು ಹೇಳಿದ ಕಡೆಗಳಲ್ಲಿಯೂ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್, ನಟ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ ಪಕ್ಷದ ಸ್ಟಾರ್ ಕ್ಯಾಂಪೇನರ್ ಆಗಿಯೇ ಪ್ರಚಾರ ಮಾಡುತ್ತಾರೆ. ಈಗಾಗಲೇ ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಸುದೀಪ್ ಎಲ್ಲೆಲ್ಲಿ ಪ್ರಚಾರ ಮಾಡ್ತಾರೆಂದು ಶೀಘ್ರವೇ ತೀರ್ಮಾನ ಮಾಡಲಾಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…
ಗೋಕಾಕ: ಕಾಂಗ್ರೆಸ್ ಹೈಕಮಾಂಡ್ 2ನೇ ಪಟ್ಟಿ ಇಂದು ಬಿಡುಗಡೆಗೊಳಿಸಿದ್ದು, ಶೀಘ್ರವೇ 3ನೇ ಪಟ್ಟಿ ಬಿಡುಗಡೆಗೊಳಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಿಂದ ಸರ್ವೇ ಮಾಡಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಸ್ಥಳೀಯ ನಾಯಕರ ಅಭಿಪ್ರಾಯ ಕೂಡ ಪಡೆದಿದೆ. ಕೆಲವು ಕ್ಷೇತ್ರಗಳ ಆಕಾಂಕ್ಷಿಗಳು ಒಮ್ಮತ ಸೂಚಿಸಿದ್ದಾಗ ತಾವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು. ನಾಳೆ 3ನೇ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಏಕೆಂದರೆ ಅಭ್ಯರ್ಥಿಗಳು ಮತದಾರರ ಮನೆ ಮನೆಗೆ ತಲುಪಬೇಕು. ಕೆಲವು ಕ್ಷೇತ್ರಗಳಲ್ಲಿ ಹೊಸಬರಿಗೆ ನೀಡಿದ್ದಾರೋ, ಹಳಬರಿಗೆ ಟಿಕೆಟ್ ನೀಡದ್ದಾರೋ ಅನ್ನುವುದು ಮುಖ್ಯವಲ್ಲ. ಪಕ್ಷದ ತೀರ್ಮಾನವೇ ಅಂತಿಮವೆಂದು ಹೇಳಿದರು. ಚಿತ್ರ ನಟ ಸುದೀಪ್ ಅವರಿಗೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲು ಅಥವಾ ಯಾವುದೇ ಪಕ್ಷದ ಪರ ಪ್ರಚಾರ ಮಾಡಲು ನಿರ್ಬಂಧವಿಲ್ಲ. ನನಗೆ ಬೇಕಾದ ವ್ಯಕ್ತಿಗಳ ಪರ ಅಷ್ಟೇ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾರಣ ಸುದೀಪ್ ನಿಲುವಿನಲ್ಲಿ ಸ್ಪಷ್ಟತೆ ಇಲ್ಲ ಎಂದರು.…
ಇಂದು ಜಗತ್ತಿನಾದ್ಯಂತ ಕ್ರೈಸ್ತರು ಕ್ರಿಸ್ತನ ಸಂಕಟದ ನೆನಪಿಗಾಗಿ ಶುಭ ಶುಕ್ರವಾರವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ ಬೆಳಗಿನ ಪ್ರಾರ್ಥನೆ ಮತ್ತು ವಿಶೇಷ ಸೇವೆಗಳು ನಡೆಯಲಿವೆ. ಇಡೀ ಪ್ರಪಂಚದ ಪಾಪಗಳನ್ನು ಕಳೆದುಕೊಳ್ಳಲು ಶಿಲುಬೆಗೇರಿಸಿದ ದೇವರ ಮಗನಾದ ಕ್ರಿಸ್ತನ ಸ್ಮರಣೆಯೊಂದಿಗೆ ವಿವಿಧ ಚರ್ಚ್‌ಗಳಲ್ಲಿ ವೇ ಆಫ್ ದಿ ಕ್ರಾಸ್ ಇರುತ್ತದೆ. ಯೊವಾನ್ನನು ಬರೆದ ಯೇಸು ಕ್ರಿಸ್ತರ ಪೂಜ್ಯ ಯಾತನೆಗಳ ವೃತ್ತಾಂತ 18:1–19:42 ನಿರೂಪಕ ಯೇಸು ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು. ಅವರು ತಮ್ಮ ಶಿಷ್ಯರೊಡನೆ ಆಗಾಗ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು. ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯ ಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನು ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು. ಯೇಸುವಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, ಯೇಸು: ನೀವು ಯಾರನ್ನು ಹುಡುಕುತ್ತಿದ್ದೀರಿ ? ನಿರೂಪಕ: ಎಂದು ಕೇಳಿದರು, ಅವರು,…