Author: admin

ಸರಗೂರು: ಕಾನೂನು ವ್ಯವಸ್ಥೆ ಕಾಪಾಡಬೇಕಾದ ಶಾಸಕರೇ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ, ತಾಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆ (KPS) ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಸಿಡಿಸಿ (CDC) ಹಾಗೂ ಎಸ್ ಡಿಎಂಸಿ (SDMC) ಸದಸ್ಯರು ಮತ್ತು ಪೋಷಕರು ತೀರ್ಮಾನಿಸಿದ್ದಾರೆ. ಬಿ. ಮಟಕೆರೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಹಳ್ಳಿಗಳು ಹಾಗೂ ಗಿರಿಜನ ಹಾಡಿಗಳಿದ್ದು, ಇಲ್ಲಿನ ನೂರಾರು ಬಡ ಮಕ್ಕಳು ಈ ಕೆಪಿಎಸ್ ಶಾಲೆಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಶಾಲೆ ಪ್ರಾರಂಭವಾಗಿ 8 ವರ್ಷ ಕಳೆದಿದೆ. ಸರ್ಕಾರದ ಸುತ್ತೋಲೆಯ ಪ್ರಕಾರ, ಕರ್ನಾಟಕ ಪಬ್ಲಿಕ್ ಶಾಲೆಗೆ ಆಯಾ ಕ್ಷೇತ್ರದ ಶಾಸಕರೇ ಅಧ್ಯಕ್ಷರಾಗಿರಬೇಕು ಎಂಬ ನಿಯಮವಿದೆ. ಆದರೆ, ಸ್ಥಳೀಯ ಶಾಸಕರು, ಕೆಲವು ಕಾಂಗ್ರೆಸ್ ಮುಖಂಡರು ಹಾಗೂ ಶಾಲೆಯ ಪ್ರಿನ್ಸಿಪಾಲ್ ಸಂತೋಷ್ ಚಕ್ಕೋಡಿ ಮತ್ತು ಉಪ ಪ್ರಿನ್ಸಿಪಾಲ್ ಮಾರುತಿ ಗೌಡ ಅವರುಗಳು ಸರ್ಕಾರದ ಸುತ್ತೋಲೆಯನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಶಾಸಕರ ಅನುಪಸ್ಥಿತಿಯಲ್ಲಿ ‘ಮಾದಪ್ಪ’ ಎಂಬುವವರನ್ನು ಅಧ್ಯಕ್ಷರನ್ನಾಗಿ ಪತ್ರದ ಮೂಲಕ ಆಯ್ಕೆ ಮಾಡಿರುವುದು…

Read More

ಸರಗೂರು: ಪ್ರಸ್ತುತ ದಿನಗಳಲ್ಲಿ ದೇಶದ ಸಂವಿಧಾನವನ್ನು ದುರ್ಬಲಗೊಳಿಸುವ ಹುನ್ನಾರಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಯುವ ಪೀಳಿಗೆ ಹೆಚ್ಚು ಜಾಗರೂಕರಾಗಿ, ಅಂಬೇಡ್ಕರ್ ಅವರ ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ದ ತತ್ವಗಳನ್ನು ಅನುಸರಿಸಿ ಜೀವಿಸಬೇಕಾಗಿದೆ ಎಂದು ಮಾಜಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು. ಸರಗೂರು ಪಟ್ಟಣದ 4ನೇ ವಾರ್ಡಿನ ಅಂಬೇಡ್ಕರ್ ಭವನದಲ್ಲಿ ಆದಿ ಕರ್ನಾಟಕ ಮಹಾಸಭಾ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೆಲವು ರಾಜಕೀಯ ಪಕ್ಷಗಳು ಭಾರತದ ಪ್ರಜೆಗಳ ಪೌರತ್ವವನ್ನು ನಾಶಪಡಿಸುವ ನಿಟ್ಟಿನಲ್ಲಿ ಹಿಂಬಾಗಿಲಿನಿಂದ ಕೆಲಸ ಮಾಡುತ್ತಿವೆ. ಇದಕ್ಕಾಗಿಯೇ ಎನ್‌.ಪಿ.ಆರ್/ಎನ್‌.ಸಿ.ಆರ್‌ನಂತಹ (ವರದಿಯಲ್ಲಿ ಉಲ್ಲೇಖಿಸಿರುವ ಎಸ್‌ ಐಆರ್ ಪ್ರಕ್ರಿಯೆ) ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಆದ್ದರಿಂದ ಇಂತಹ ಪ್ರಕ್ರಿಯೆಗಳಲ್ಲಿ ಸಾರ್ವಜನಿಕರು ಅತ್ಯಂತ ಜಾಗರೂಕತೆಯಿಂದ ಮಾಹಿತಿಯನ್ನು ನೀಡಬೇಕು ಎಂದು ಮಹದೇವಪ್ಪ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು ಅವರ…

Read More

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದ್ದರೂ, ತಕ್ಷಣವೇ ಬರಗಾಲ ಘೋಷಿಸಲು ಸಾಧ್ಯವಿಲ್ಲ. ಜಿಲ್ಲಾ ಮಟ್ಟದ ವಾಸ್ತವ ವರದಿಗಳನ್ನು (Ground Reports) ತರಿಸಿಕೊಂಡು, ಅವುಗಳನ್ನು ಸಮಗ್ರವಾಗಿ ವಿಶ್ಲೇಷಣೆ ಮಾಡಿದ ಬಳಿಕವಷ್ಟೇ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬರ ಘೋಷಣೆ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಒಂದೇ ದಿನದಲ್ಲಿ ಬರಗಾಲ ಎಂದು ಘೋಷಿಸಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮಾವಳಿ ಹಾಗೂ ಮಾರ್ಗಸೂಚಿಗಳ ಪ್ರಕಾರ ಸಮೀಕ್ಷೆ ನಡೆಸಬೇಕಾಗುತ್ತದೆ. ಬೆಳೆ ಹಾನಿ ಹಾಗೂ ನೀರಿನ ಕೊರತೆಯ ವರದಿಯ ಆಧಾರದ ಮೇಲೆ ಬರ ಘೋಷಣೆ ಮಾಡಬೇಕಾಗಿರುವುದರಿಂದ ಇದಕ್ಕೆ ಸೂಕ್ತ ಕಾಲಾವಕಾಶದ ಅಗತ್ಯವಿದೆ” ಎಂದರು. ಉತ್ತರ ಕರ್ನಾಟಕ ಭಾಗದ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಇಂದು (ಮಂಗಳವಾರ) ಕಲಬುರಗಿಯಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಮಹತ್ವದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಅಲ್ಲಿನ ಪ್ರಸ್ತುತ ಪರಿಸ್ಥಿತಿ, ಮಳೆ ಕೊರತೆ ಮತ್ತು…

Read More

ಬೆಂಗಳೂರು: ರಾಜಧಾನಿಯ ಸದಾಶಿವನಗರದ ಪ್ರಸಿದ್ಧ ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತರನ್ನು ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದೆ. ಈಕೆ ಚಿಕ್ಕಬಾಣಾವರ ಸಮೀಪದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಸೋಮವಾರ ಮಧ್ಯಾಹ್ನ ಕಾಲೇಜಿನಿಂದ ಹೊರಟಿದ್ದ ತೇಜಸ್ವಿನಿ, ತಾನು ಸದಾಶಿವನಗರದ ಸ್ಯಾಂಕಿ ಕೆರೆ ಬಳಿ ಹೋಗುತ್ತಿದ್ದು, ಸಾಯುತ್ತಿರುವುದಾಗಿ ತನ್ನ ಸ್ನೇಹಿತನಿಗೆ ಮೊಬೈಲ್‌ನಲ್ಲಿ ಸಂದೇಶ (ಮೆಸೇಜ್) ಕಳುಹಿಸಿದ್ದಾಳೆ. ಇದನ್ನು ನೋಡಿ ಗಾಬರಿಗೊಂಡ ಆ ಸ್ನೇಹಿತ, ತಕ್ಷಣವೇ ಆ ಸಂದೇಶವನ್ನು ತೇಜಸ್ವಿನಿ ತಾಯಿಗೆ ಫಾರ್ವರ್ಡ್ ಮಾಡಿ ವಿಷಯ ತಿಳಿಸಿದ್ದಾನೆ. ಮಗಳ ಸಂದೇಶ ತಿಳಿಯುತ್ತಿದ್ದಂತೆ ಆತಂಕಗೊಂಡ ತಾಯಿ ಸದಾಶಿವನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಹಾಗೂ ಕುಟುಂಬದ ಸದಸ್ಯರು ಸೋಮವಾರ ತಡರಾತ್ರಿಯವರೆಗೂ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಮಂಗಳವಾರ ಬೆಳಗ್ಗೆ ಸ್ಯಾಂಕಿ ಕೆರೆಯಲ್ಲಿ ತೇಜಸ್ವಿನಿಯ…

Read More

ಕೊರಟಗೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನ ಉದ್ಘಾಟನಾ ಸಮಾರಂಭ ನಡೆಯಿತು. ದೀಪ ಬೆಳಗಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ತಾಲೂಕು ವೈದ್ಯಾಧಿಕಾರಿ ಡಾ.ಜ್ಯೋತ್ಸ್ನಾ ರೆಡ್ಡಿ ಮಾತನಾಡಿ, “ಗರ್ಭಕಂಠದ ಕ್ಯಾನ್ಸರ್ ನಮ್ಮ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಪ್ರಮುಖ ಆರೋಗ್ಯ ಕಾಳಜಿಯಾಗಿದೆ. ಇದು ಹ್ಯೂಮನ್ ಪ್ಯಾಪಿಲೋಮಾ ವೈರಸ್‌ನಿಂದ ಉಂಟಾಗುತ್ತದೆ. ಲಸಿಕೆಯಿಂದ ತಡೆಯಬಹುದಾದ ಏಕೈಕ ಕ್ಯಾನ್ಸರ್ ಇದಾಗಿದೆ. ಆದ್ದರಿಂದ 14 ವರ್ಷದ ಎಲ್ಲಾ ಹೆಣ್ಣುಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು” ಎಂದು ಕರೆ ನೀಡಿದರು. ಕೊರಟಗೆರೆ ತಾಲ್ಲೂಕಿನಲ್ಲಿ ಈಗಾಗಲೇ ಶೇ.70ರಷ್ಟು ಅಭಿಯಾನ ಮುಗಿದಿದ್ದು, ಉಳಿದ ವಿದ್ರ‍್ಥಿನಿಯರಿಗೂ ಶಾಲೆಗಳ ಮೂಲಕ ಲಸಿಕೆ ನೀಡಲಾಗುತ್ತಿದೆ ಎಂದರು. ತಾ.ಪಂ. ಇ.ಒ ಅಪೂರ್ವ ಅನಂತರಾಮು ಮಾತನಾಡಿ, ಪೋಷಕರು ಯಾವುದೇ ಭಯವಿಲ್ಲದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಇದು ಮಕ್ಕಳ ಭವಿಷ್ಯದ ರಕ್ಷಣೆಗೆ ಬಹಳ ಮುಖ್ಯ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಫೈರೋಜ್ ಬೇಗಂ…

Read More

ಬೀದರ್: ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಬೀದರ್ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳನ್ನು ಭೇಟಿಯಾದ ರೈತ ಮುಖಂಡರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಹಸ್ತಾಂತರಿಸಿದರು. ಎಕರೆಗೆ ₹50 ಸಾವಿರ ಪರಿಹಾರಕ್ಕೆ ಒತ್ತಾಯ: ಮುಂಗಾರು ಹಂಗಾಮು ಆರಂಭವಾಗಿ ಒಂದು ತಿಂಗಳು ಕಳೆದರೂ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗಿಲ್ಲ. ಬಿತ್ತನೆಗಾಗಿ ಸಾಲಸೋಲ ಮಾಡಿ ಬೀಜ, ಗೊಬ್ಬರ ಖರೀದಿಸಿದ್ದ ರೈತರು ಈಗ ಮಳೆಯ ಕೊರತೆಯಿಂದಾಗಿ ಬೆಳೆ ಹಾನಿಯಾಗುವ ತೀವ್ರ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯನ್ನು ತಕ್ಷಣವೇ ‘ಬರಪೀಡಿತ ಪ್ರದೇಶ’ ಎಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಕೃಷಿ ಸಾಲವನ್ನು ಮನ್ನಾ ಮಾಡುವುದರ ಜೊತೆಗೆ, ಪ್ರತಿ ಎಕರೆಗೆ ₹50 ಸಾವಿರ ರೂಪಾಯಿಗಳ ಪರಿಹಾರ ಧನ ನೀಡಬೇಕು ಎಂದು ಸಂಘದ ಪದಾಧಿಕಾರಿಗಳು ಸಿಎಂ ಅವರನ್ನು ಒತ್ತಾಯಿಸಿದರು. ಮೋಡ ಬಿತ್ತನೆಗೆ ಆಗ್ರಹ:…

Read More

ಪಾವಗಡ: ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಸಿದ್ಧರಿದ್ದಾರೆ ಎಂದು ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕ ಎಚ್.ವಿ. ವೆಂಕಟೇಶ್ ತಿಳಿಸಿದರು. ಅವರು ಪುರಸಭೆ ಕಚೇರಿ ಹಾಗೂ ತಾಲೂಕು ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಸವಲತ್ತು ವಿತರಣಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು. ನಗರೋತ್ಥಾನ ಹಂತ–4ರ ಶೇ. 5ರಷ್ಟು ಮೀಸಲು ಅನುದಾನದಡಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ವಿಶೇಷ ಮೋಟಾರ್ ಸೈಕಲ್, ಟ್ರೈ ಸೈಕಲ್, ವ್ಹೀಲ್ ಚೇರ್, ಎಲ್ಬೋ ಕ್ರಚ್, ದೃಷ್ಟಿಹೀನರಿಗೆ ಸ್ಮಾರ್ಟ್ ಕೇನ್, ಶ್ರವಣದೋಷವುಳ್ಳವರಿಗೆ ಹಿಯರಿಂಗ್ ಏಡ್, ಬುದ್ಧಿಮಾಂದ್ಯರಿಗೆ ಎಂ.ಆರ್. ಕಿಟ್ ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಟೈಲರಿಂಗ್ ಮೆಷಿನ್‌ಗಳನ್ನು ಮತ್ತು ವಿದ್ಯಾವಂತ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಕಂಪ್ಯೂಟರ್, ಲ್ಯಾಪ್‌ಟಾಪ್, ಡ್ರೈಸಿ ಪ್ಲೇಯರ್, ವಾಟರ್ ಬೆಡ್ ಹಾಗೂ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲಾಗಿದೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.…

Read More

ಗುಬ್ಬಿ: ಇತ್ತೀಚಿನ ದಿನದಲ್ಲಿ ಆಹಾರ ಕ್ರಮ ಕಲುಷಿತವಾಗುತ್ತಿದ್ದು, ಪ್ರತಿಯೊಬ್ಬರು ರಾಸಾಯನಿಕಯುಕ್ತ ಆಹಾರ ಸೇವನೆ ಮಾಡುತ್ತಾ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನುಪಮ ಡಿ. ತಿಳಿಸಿದರು. ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರುಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ಎಚ್‌ ಪಿವಿ ಲಸಿಕೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಆರೋಗ್ಯ ರಕ್ಷಣೆಗೆ ಧೈರ್ಯ ತೋರಿಸಬೇಕಾಗಿದೆ. ಸರ್ಕಾರವು ಹಲವಾರು ವ್ಯಾಕ್ಸಿನ್ ಗಳನ್ನು ಜಾರಿಗೆ ತಂದಿದ್ದರೂ ಅವುಗಳನ್ನು ಹಾಕಿಸಿಕೊಳ್ಳದೆ ಕಾಯಿಲೆಗೆ ಬಲಿಯಾಗುತ್ತಿರುವುದು ಹೆಚ್ಚು ಕಂಡುಬರುತ್ತದೆ ಎಂದು ವಿಷಾದ ವ್ಯಕ್ತ ಪಡಿಸಿದರು. ಅಧಿಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪೂರ್ಣಿಮಾ ಕೆ. ಯಾದವ್ ಮಾತನಾಡಿ, ತಾಯಿಯಾಗಿ ಮಕ್ಕಳನ್ನು ರಕ್ಷಣೆ ಮಾಡುವುದು ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು ಮಕ್ಕಳ ರಕ್ಷಣೆಗಾಗಿ ಎಚ್‌ ಪಿವಿ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಸರ್ಕಾರಕ್ಕೆ ಜವಾಬ್ದಾರಿ ಇರುವುದರಿಂದ ಆರೋಗ್ಯ ರಕ್ಷಣೆ…

Read More

ತುರುವೇಕೆರೆ: ಬ್ಯಾಂಕ್ ಅಧಿಕಾರಿಗಳಿಂದ ನ್ಯಾಯ ಸಿಗದ ಸಂದರ್ಭದಲ್ಲಿ ಹಸಿರು ಶಾಲು ನಮಗೆ ನ್ಯಾಯ ದೊರಕಿಸಿಕೊಡುವ ಅಸ್ತ್ರವಾಗಿದೆ. ಹಾಗಾಗಿ ರೈತರು ಯಾವುದೇ ಸಂದರ್ಭದಲ್ಲೂ ಶಾಲನ್ನು ತೆಗೆಯಬೇಡಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮಂಡ್ಯ ಜಿಲ್ಲಾಧ್ಯಕ್ಷ ಇಂದುವಾಳು ಚಂದ್ರಶೇಖರ್ ರೈತ ಸಂಘದ ಸದಸ್ಯರುಗಳಿಗೆ ಕಿವಿಮಾತು ಹೇಳಿದರು. ಅವರು ತಾಲೂಕಿನ ಮಾಯಸಂದ್ರ ಹೋಬಳಿ ಕಣಕೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾ. ಅಧ್ಯಕ್ಷ ಕಣಕೂರು ಚಂದ್ರಶೇಖರ್ ಇವರ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಟಕದ ಉದ್ಘಾಟನಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ನೀವುಗಳು ಹಸಿರು ಶಾಲನ್ನು ಹೆಗಲಿಗೆ ಹಾಕಿದ್ದೀರಿ. ಇದನ್ನು ಯಾವುದೇ ಪರಿಸ್ಥಿತಿಯಲ್ಲೂ ತೆಗೆಯಬೇಡಿ. ಹೊರದೇಶದಲ್ಲಿಯೂ ಸಹ ನನ್ನನ್ನು ಹಸಿರು ಶಾಲಿನಿಂದ ಗುರುತಿಸಿದರೆಂದರೆ ಇದು ಹಸಿರು ಶಾಲಿನ ಮಹತ್ವವೇ ಸರಿ ಎಂದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬನ್ನೂರು ನಾರಾಯಣ್, ಅಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

Read More

ತುಮಕೂರು: ಸಂಗೀತ ಕ್ಷೇತ್ರದ ದಿಗ್ದರ್ಶರಾದ ಶ್ರೀ ತ್ಯಾಗರಾಜರು, ಮುತ್ತುಸ್ವಾಮಿ ದೀಕ್ಷಿತರು, ಶ್ಯಾಮಶಾಸ್ತ್ರಿಗಳ ಸವಿನೆನಪಿನಲ್ಲಿ ಜುಲೈ 12ರಂದು ಶಾಸ್ತ್ರೀಯ ಸಂಗೀತೋತ್ಸವ ಕಾರ್ಯಕ್ರಮವನ್ನು ನಗರದ ಕನ್ನಡ ಭವನದಲ್ಲಿ ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಲಾಗಿದೆ. ಸಂಗೀತ ಕಚೇರಿಯನ್ನು ವಿದ್ವಾನ್ ಈ. ರಾಮಕೃಷ್ಣಾಚಾರ್, ಸಂಗೀತ ವಿದುಷಿ ಕು. ಸ್ನೇಹ ಮತ್ತು ಸ್ನೇಹ ಹೆಚ್. ರಾಯಪ್ಪ, ರಾಧಕೃಷ್ಣ ಭಜನಾ ಮಂಡಳಿಯಿಂದ ದಾಸರ ಕೀರ್ತನೆಗಳನ್ನು ನಡೆಸಿಕೊಡುವರು, ಸಂಗೀತ ಕ್ಷೇತ್ರದ ಹಿರಿಯ ಸಪ್ತ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ಮುಳ್ಳುಹಾದಿ ಚಲನಚಿತ್ರದ ಟ್ರೈಲರ್ ಅನ್ನು ಮುರಳೀಧರ ಹಾಲಪ್ಪ ರವರು ಬಿಡುಗಡೆಗೊಳಿಸುವರು, ಕುರು ಪಾಂಡವ ನಾಟಕದ ಪುಸ್ತಕದ ಬಿಡುಗಡೆಯನ್ನು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ನಡೆಸಿಕೊಡುವರು ಕಾರ್ಯಕ್ರಮವನ್ನು ಶಾಸಕ ಜಿ.ಬಿ. ಜ್ಯೋತಿಗಣೇಶ್ ಉದ್ಘಾಟಿಸುವರು. ವ.ಚ. ಚನ್ನೇಗೌಡ ರವರು ಅಧ್ಯಕ್ಷತೆವಹಿಸುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More