Subscribe to Updates
Get the latest creative news from FooBar about art, design and business.
- ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ: ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
- ತಿಪಟೂರು: ಜೆಡಿಎಸ್ ಎಸ್ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
- ತುಮಕೂರು ಪ್ರಿಂಟಿಂಗ್ ಹಬ್ ಆಗಲಿ: ಸಿ.ಸಿ.ಪಾವಟೆ
- ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
- ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
- ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
Author: admin
ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಹಾಗೂ ರೈತರು ಸೇರಿದಂತೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಮತ್ತು ಯೋಜನೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮರನಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಒಳಗೆ ಚಾಪೆ, ದಿಂಬು, ಹೊದಿಕೆಯೊಂದಿಗೆ ಉಪವಾಸ ಆರಂಭಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಮೊಕ್ಕಾಮ್ ಹೂಡಿದ್ದಾರೆ. ಹೇಮಾವತಿ ಲಿಂಕ್ ಕೇನಾಲ್ ಯೋಜನೆ ವಿರೋಧಿಸಿ ಹೋರಾಟಕ್ಕೆ ಬೆಂಬಲಿಸಿ ಭಾಗಿಯಾಗಿದ್ದ ಸ್ವಾಮೀಜಿಗಳ ಮೇಲೆ ಎಫ್ ಐ ಆರ್ ದಾಖಲು ಮಾಡಿ ಸರ್ಕಾರ ಅವರನ್ನು ಹೆದರಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದಾರೆ. ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯ ನೋಡಲು ಆಗದೆ ಸಂಕಟ ವಾಗುತ್ತಿದೆ ಎಂದರು. ಮಠಾಧೀಶರನ್ನು ಬಂಧಿಸುತ್ತೇವೆ ಎಂದರೆ ಅದು ದೇವಸ್ಥಾನಗಳ ಬಾಗಿಲನ್ನು ಹಾಕಿದಂತೆ. ಹೀಗಾಗಿ…
ಕೊರಟಗೆರೆ : ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 19ನೇ ವರ್ಷದ ವಾಷಿಕೋತ್ಸವ ಅಂಗವಾಗಿ ಜೂ.8ರಂದು ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಾಮೂಹಿಕ ವಿವಾಹಗಳು. ಜನ ಜಾಗೃತಿ ಧರ್ಮ ಸಮಾರಂಭ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ತಿಳಿಸಿದರು. ಪಟ್ಟಣದ ಶ್ರೀಬಸವೇಶ್ವರ ದೇವಾಲಯದಲ್ಲಿ ಸಿದ್ದರಬೆಟ್ಟ ಶ್ರೀಮಠದಿಂದ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಪ್ರತಿವರ್ಷದಂತೆ ಈ ವರ್ಷವು ಸಹ ಮಠದ ವಾರ್ಷಿಕೋತ್ಸವದ ಅಂಗವಾಗಿ ಜೂ.6ರಿಂದ 8ರವರೆಗೆ ಮೂರು ದಿನಗಳ ಕಾಲ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ನಡೆಯಲಿವೆ. ಮೊದಲ ದಿನ(ಜೂ.6) ಗಂಗಾ ಪೂಜೆ, ಗಣಪತಿಪೂಜೆ, ಪುಣ್ಯಾಹ ನಾಂದಿ, ಪಂಚ ಕಳಸ ಸ್ಥಾಪನೆ, ನವಗ್ರಹ ಮತ್ತು ಶ್ರೀರುದ್ರ ಹೋಮ, ಎರಡನೇ ದಿನ (ಜೂನ್ 7 ) ರಾಜ್ಯದ ಹಲವು ಶ್ರೀಮಠದ ದಿವ್ಯ ಸಾನಿದ್ಯದಲ್ಲಿ ಪುಸ್ತಕ ದಾಸೋಹ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಮೂರನೇ ದಿನ(ಜೂ.8) ಬ್ರಾಹ್ಮೀ…
ಉತ್ತರ ಕನ್ನಡ: ಗೋಕರ್ಣ ಮತ್ತು ಅಂಕೋಲಾ ಸಂಪರ್ಕಿಸುವ ಹೊಸದಾಗಿ ನಿರ್ಮಿಸಲಾದ ಗಂಗಾವಳಿ ಸೇತುವೆಯ ಮೇಲೆ ಮಗುವಿನೊಂದಿಗೆ ದಂಪತಿಗಳು ಅಪಾಯಕಾರಿಯಾಗಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದು, ಸ್ವಲ್ಪದರಲ್ಲೇ ಮೂವರೂ ಅಪಾಯದಿಂದ ಪಾರಾಗಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಯತ್ನಿಸುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ತಕ್ಷಣವೇ ಉತ್ತರ ಕನ್ನಡ ಪೊಲೀಸರು, ವೈ-ಫೈ ಸಂಪರ್ಕಿತ ಇಂಟೆಲಿಜೆಂಟ್ ಕ್ಯಾಮೆರಾವನ್ನು ಬಳಸಿ, ದಂಪತಿಗಳಿಗೆ ಲೈವ್ ಎಚ್ಚರಿಕೆ ನೀಡಿದ್ದಾರೆ. ಕೆಳಗೆ ಪ್ರಬಲವಾದ ನದಿ ಪ್ರವಾಹವಿದ್ದು ತಕ್ಷಣ ಸ್ಥಳದಿಂದ ಹೊರಹೋಗುವಂತೆ ಸೂಚಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಏಕಾಏಕಿ ಪೊಲೀಸರ ಧ್ವನಿ ಕೇಳಿದ ಕೂಡಲೇ ಆ ದಂಪತಿ, ಪೊಲೀಸರ ಸೂಚನೆಯಂತೆ ಮಗುವನ್ನು ಎತ್ತಿಕೊಂಡು ಆಚೆ ಹೋಗಿದ್ದಾರೆ. ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಸ್ವಲ್ಪ ಯಾಮಾರಿದ್ದರೆ ಮಗು ನದಿಗೆ ಬೀಳುವ ಅಪಾಯವಿತ್ತು. ಸಕಾಲಿಕ ಎಚ್ಚರಿಕೆಯು ಬಹುಶಃ ಜೀವವನ್ನು ಉಳಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಭೇಟಿ ಮಾಡಿದರು. ತುಮಕೂರು ಜಿಲ್ಲೆಯಲ್ಲಿನ ಕಳೆದ ಹತ್ತಾರು ವರ್ಷಗಳಿಂದ ನನೆಗುದಿಗೆ ಬಿದ್ದ ರಸ್ತೆ ಅಭಿವೃದ್ದಿ, ರಾಜ್ಯದಲ್ಲಿನ ಹಲವು ರೈಲ್ವೆ ಮಾರ್ಗಗಳ ಕಾಮಗಾರಿಗಳು ನಡೆಯುತ್ತಿರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಗಮನಕ್ಕೆ ತಂದಿದ್ದಾರೆ. ವಿಶೇಷವಾಗಿ ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆಯ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಕೇಂದ್ರದ ಗೃಹ ಸಚಿವ ಶ್ರೀ ಅಮಿತ ಷಾ ಬಳಿ ವಿನಂತಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹೋರಾಟಗಾರರ ಮೇಲೆ ಎಫ್ ಐಆರ್ ದಾಖಲು ಹಿನ್ನಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನವಚೇತನ್ ಸೇರಿ ನಾಲ್ವರನ್ನು ಗುಬ್ಬಿ ಪೊಲೀಸರಿಂದ ಬಂಧನವಾಗಿದೆ. ನವಚೇತನ್, ಯುವಮೋರ್ಚಾ ಅಧ್ಯಕ್ಷ, ಚೇತನ್ ಬೊಮ್ಮರನಹಳ್ಳಿ, ಬೆಣಚಗೆರೆ ಲೋಕಿ, ಹಾಗೂ ಕೌಶೀಕ್, ಸಿ.ಎಸ್ ಪುರ ಬಂಧನ ಮಾಡಲಾಗಿದೆ. ನಾಲ್ವರ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಳೆದ ಶನಿವಾರ ನಡೆದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಿದ್ದ ನಾಲ್ವರು ಆಗಿದ್ದಾರೆ. ನಾಲ್ವರನ್ನು ಪೊಲೀಸರು ಬಂಧಿಸಿ ಗುಬ್ಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ಸರ್ಕಾರ 1960ರ ಇಸವಿಯಲ್ಲಿ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ವೇ ನಂ. 130ರಲ್ಲಿ 4 ಎಕೆರೆ 6 ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ ಮುಜರಾಯಿ ಇಲಾಖೆ ಒಳಪಡಲಿದ್ದು. ಇಲಾಖೆಗೆ ಗೊತ್ತಿಲ್ಲದೆ ಅರ್ಚಕರ ಕುಟುಂಬ ನೆಲಮಂಗಲದ ಮಹಿಳೆಗೆ ಕ್ರಯ ಮಾಡಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ. ಕೊರಟಗೆರೆ ತಾಲ್ಲೂಕಿನ ಹೊಳವಹಳ್ಳಿ ಹೋಬಳಿ ತೊಗರಿಘಟ್ಟ ಗ್ರಾಮದ ಶ್ರೀ ಚೆನ್ನಿಗರಾಯ ಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ಸೇರಿದೆ. ಸರ್ಕಾರದ ಜಮೀನನ್ನು ಕ್ರಯ ಮಾಡುವ ಮುನ್ನ ಇಲಾಖೆ ಗಮನಕ್ಕೆ ತರದೇ ನೆಲಮಂಗಲ ಭಾಗ್ಯಮ್ಮ ಮತ್ತು ದೀಪ.ಜೆ ಎಂಬುವವರಿಗೆ ಮಾರಾಟ ಮಾಡಿದ್ದು, ಒತ್ತಡಕ್ಕೆ ಮಣಿದ ಕುಣಿಗಲ್ ಉಪ ನೋಂದಾಣಾಧಿಕಾರಿಗಳು ಜಮೀನಿನ ದಾಖಲೆಗಳನ್ನು ಪರಿಶೀಲಿಸದೆ ಕ್ರಯ ಮಾಡಿದ್ದರೆಂದು ತಾಲ್ಲೂಕು ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆಯಲ್ಲಿ ಆಕ್ರೋಶ ಹೊರ ಹಾಕಿದರು. ಸರ್ಕಾರದಿಂದ ದೇವಾಲಯಕ್ಕೆ ಜಮೀನು ಮಂಜುರಾದ ವೇಳೆ ಲ್ಯಾಂಡ್ ಟ್ಯೂಬುನಲ್ ಅಡಿಯಲ್ಲಿ ಸದರಿ ದೇವಾಲಯದ ಅರ್ಚಕ ಚೆನ್ನಕೇಶವಚಾರ್ ಮತ್ತು…
ವೈ.ಎನ್ .ಹೊಸಕೋಟೆ: ಕನ್ನಡ ಸಾಹಿತ್ಯ ಪರಿಷತ್ತು, ಆಂಧ್ರ ಪ್ರದೇಶ ಗಡಿನಾಡು ಘಟಕದ ವತಿಯಿಂದ ಭಾನುವಾರ ಆಂಧ್ರದ ಕಲ್ಯಾಣದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಫಾದರ್ ವಿನ್ಸೆಂಟ್ ಫೆರರ್ ಕಲ್ಯಾಣ ಮಂಟಪದಲ್ಲಿ 9ನೇ ಸಾಹಿತ್ಯ ಸಮ್ಮೇಳನ ಅತ್ಯಂತ ಅದ್ದೂರಿಯಾಗಿ ವೈಭವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಆಂಧ್ರ ಘಟಕದ ರಾಜ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ ವಕೀಲರು ಆದ ಅಂಜನ್ ಕುಮಾರ್ ಮಾತನಾಡಿ, ಗಡಿ ಭಾಗದ ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಮೀಸಲಾತಿಯನ್ನು ನೀಡಬೇಕು. ಈಗಾಗಲೇ ತಮಿಳುನಾಡು ಮತ್ತು ಕೇರಳ ಕಾಸರಗೋಡು ಭಾಗದಲ್ಲಿ ಮೀಸಲಾತಿಯನ್ನು ನೀಡಿದ್ದು, ಆಂಧ್ರದ ಮಡಕಶಿರಾ ಆದೋನಿ ಕಲ್ಯಾಣ ದುರ್ಗ ಮತ್ತಿತರ ಕರ್ನಾಟಕದ ಗಡಿಭಾಗದಲ್ಲಿರುವ ಆಂಧ್ರದ ಕನ್ನಡಿಗರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು. ಅಧಿಕೃತವಾಗಿ, ಗಡಿಭಾಗದಲ್ಲಿ ಕನ್ನಡ ಕಾರ್ಯಕ್ರಮ ನಡೆಸಲು ಸಮುದಾಯ ಭವನ ಮತ್ತು ಸಾಂಸ್ಕೃತಿಕ ಭವನ ಗಳ ನಿರ್ಮಾಣಕ್ಕೆ ಸರ್ಕಾರ ಅನುದಾನ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಸಮ್ಮೇಳನದ ಅಧ್ಯಕ್ಷ ಸತ್ಯನಾರಾಯಣ ಶಾಸ್ತ್ರಿ ಗ್ರಾಮದ ಕೋದಂಡರಾಮಸ್ವಾಮಿ ದೇವಸ್ಥಾನದಿಂದ ಕಾರ್ಯಕ್ರಮ ನಡೆಯುವ ವೇದಿಕೆಯವರೆಗೂ…
ಪಾವಗಡ: ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಅವರ 65 ಹುಟ್ಟು ಹಬ್ಬವನ್ನು ಬಲ್ಲೇನಹಳ್ಳಿ ಗ್ರಾಮದಸ್ಥರು, JDS ಕಾರ್ಯಕರ್ತರು ಸರಳವಾಗಿ ಆಚರಿಸಿದರು. ಅಂಬೇಡ್ಕರ್ ರವರ ಪುತ್ಥಳಿಗೆ ಪುಷ್ಪ ಮಾಲೆ ಹಾಕಿ ಅಂಬೇಡ್ಕರ್ ರವರಿಗೆ ಪಾದಾಭಿನಂದನೆ ಮಾಡಿ ನಂತರ ಅಭಿಮಾನಿಗಳ ಮಧ್ಯೆ ಕೆಕ್ ಕತ್ತರಿಸುವ ಮೂಲಕ ತಮ್ಮ 65ನೇ ಹುಟ್ಟು ಹಬ್ಬವನ್ನು ಅಭಿಮಾನಿಗಳ ಅಸೆಯಂತೆ ಕೆ.ಎಂ.ತಿಮ್ಮರಾಯಪ್ಪ ಸರಳವಾಗಿ ಅಚರಿಸಿದರು. ನಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿ ತಿಮ್ಮರಾಯಪ್ಪ ರವರಿಗೆ ಪೇಟಾ ಮತ್ತು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ಮಾತನಾಡಿದ ಬಿ ಹೊಸಹಳ್ಳಿ ಮಲ್ಲಿಕಾರ್ಜುನ, ತಿಮ್ಮರಾಯಪ್ಪ SCP ಮತ್ತುTSP ಯೋಜನೆಯ ಜಾರಿಗೆ ಬರುವುದರಲ್ಲಿ ಪ್ರಮುಖರು, ಅದೇ ರೀತಿಯಲ್ಲಿ ಪಾವಗಡ ತಾಲೂಕಿಗೆ ಗುಡಿಸಲು ರಹಿತ ಮನೆಗಳು ಬರುವಂತೆ ಶ್ರಮಿಸಿದರು. ಹಾಗೆಯೇ 8 ಮುರಾರ್ಜಿ ಮತ್ತು ವಾಜಪೇಯಿ ವಸತಿ ಶಾಲೆಗಳನ್ನು ತಂದಿರುವಂತ ದಿಮಾಂತ ನಾಯಕರು ಎಂದರು. ಈ ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ ಗೋಪಾಲ್, ಚನ್ನಕೇಶವ, ರಾಮಾಂಜಿ ಮಲ್ಲೇಶ, ಅಶೋಕ್, ನಾಗರಾಜಪ್ಪ, ರಾಮಣ್ಣ ಹಾಗೂ…
ತುಮಕೂರು: ಅಪರಿಚಿತ ವಾಹನ ಹರಿದು ಯುವಕನ ಕಾಲು ಅಪ್ಪಚ್ಚಿಯಾಗಿರುವ ಘಟನೆ ನೆಲಹಾಳು ಬಳಿಯ ರಾಷ್ಟ್ರೀಯ ಹೆದ್ದಾರಿ ನಂ48 ರಲ್ಲಿ ನಡೆದಿದೆ. ತುಮಕೂರು ತಾಲೂಕಿನ ನೆಲಹಾಳ್ ನಲ್ಲಿ ಈ ಘಟನೆ ನಡೆದಿದ್ದು, ತೋವಿನಕೆರೆಯ ಪದ್ಮರಾಜು ಎಂಬ ಯುವಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಡಿಕೆ ಮಂಡಿ ನಡೆಸುತ್ತಿದ್ದ ಪದ್ಮರಾಜು ಶಿರಾದಿಂದ ಗ್ರಾಮಕ್ಕೆ ಹಿಂತಿರುಗುವಾಗ ಘಟನೆ ನಡೆದಿದೆ. ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ವಾಹನ ಹರಿದು ಯುವಕ ಗಂಭೀರವಾಗಿ ಗಾಯಗೊಂಡಿದ್ದ ವೇಳೆ ತಕ್ಷಣದಲ್ಲೇ ಆ್ಯಂಬುಲೆನ್ಸ್ ಸಿಗದೇ ಪರದಾಡುವಂತಾಗಿತ್ತು. ಇದರಿಂದಾಗಿ ಯುವಕನ ಸ್ಥಿತಿ ಗಂಭೀರ ಸ್ಥಿತಿಗೆ ಹೋಗಿತ್ತು. ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹೇಮಾವತಿ ಕೆನಾಲ್ ವಿರುದ್ಧ ರಾಜಕೀಯ ನಾಯಕರ ಹೋರಾಟ ಹಿನ್ನೆಲೆ ಬಿಜೆಪಿ, ಜೆಡಿಎಸ್ ಶಾಸಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆ ಕಾಂಟ್ರ್ಯಾಕ್ಟ್ ಪಡೆದ ಕಂಪನಿಯ ಸಿಬ್ಬಂದಿ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ. ಎ 1 ತುರುವೇಕೆರೆ ಜೆಡಿಎಸ್ ಶಾಸಕ ಕೃಷ್ಣಪ್ಪ ಎಂ.ಟಿ., ಎ 2 ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಎ 3 ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್, ಎ 4 ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ, ಎ 5 ಜಿಲ್ಲಾ ರೈತ ಸಂಘದ ಅಧ್ಯಕ್ಷ ಗೊವಿಂದರಾಜು, ಎ 6 ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಎ 7 ಚೇತನ್ ಹಾಗೂ ಎ8 ಇತರ 25 ರಿಂದ 30 ಮಂದಿ ಎಂದು ಎಫ್ ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…