Subscribe to Updates
Get the latest creative news from FooBar about art, design and business.
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
- ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
- ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
- ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
- ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
- ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
Author: admin
ಕೊರಟಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ, ತಾಲ್ಲೂಕು ಪಂಚಾಯಿತಿಯ ಅನುಷ್ಠಾನಾಧಿಕಾರಿಗಳ ನೇತೃತ್ವದಲ್ಲಿ, ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಂಡದೊಂದಿಗೆ, ಎಲ್ಲಾ ಗ್ರಾಮಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಬುಕ್ಕಾಪಟ್ಟಣ,ಕುರಂಕೋಟೆ, ತೋವಿನಕೆರೆ, ಬೂದಗವಿ ಮತ್ತು ತುಂಬಾಡಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲಾಡಳಿತವು ಆದೇಶಿಸಿರುವ ಕಾರ್ಯಕ್ರಮಗಳ ಪಟ್ಟಿಯಂತೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿಡಿಪಿಓ ಅಂಬಿಕಾ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ದೀಪ ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರ…
ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದಿಂದ ಹಿಂದುಳಿದ ವರ್ಗಗಳ ಸಮಾವೇಶ ಮಾಡಲು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ನಿರೀಕ್ಷೆಗೂ ಹೆಚ್ಚು ಮುಖಂಡರು ಭಾಗವಹಿಸಿದ್ದು ವಿಶೇಷವಾಗಿತ್ತು. ಸಭೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಮಾತನಾಡಿ, ನಾವು ಕೆಲವರಿಗೆ ಮಾತ್ರ ಈ ಪೂರ್ವಭಾವಿ ಸಭೆ ಬರುವಂತೆ ಆಹ್ವಾನ ನೀಡಿದ್ದೆವು. ಈ ಸಭೆಗೆ ಇಷ್ಟು ಮುಖಂಡರು ಭಾಗವಹಿಸಿದ್ದು ಬಹಳ ಖುಷಿಯ ಸಂಗತಿ ಎಂದರು. ದೇವೇಗೌಡರ ಅಂದಿನ ದೂರದೃಷ್ಟಿಯ ಕಾರಣ ಇಂದು ಬಹುತೇಕ ಎಲ್ಲಾ ಸಮುದಾಯಕ್ಕೆ ಮೀಸಲಾತಿ ಸಿಕ್ಕಿದೆ. ಹಾಗಾಗಿ ಈ ಬಾರಿ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯದ ಗದ್ದುಗೆ ಏರಲು ತಾವೆಲ್ಲ ಶ್ರಮಿಸಬೇಕು ಎಂದು ಕರೆ ನೀಡಿದರು. ಇದೇ ವೇಳೆ ಕೆಲ ಸಮುದಾಯಗಳ ಮುಖಂಡರು ಮಾತನಾಡಿ, ಈ ಬಾರಿ 2013 ರ ಫಲಿತಾಂಶ ಮರುಕಳಿಸುತ್ತಿದೆ. ಈ ಬಾರಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಖಚಿತ. ಮತ್ತೊಮ್ಮೆ ಕೊರಟಗೆರೆ ಜೆಡಿಎಸ್ ಭದ್ರಕೋಟೆ ಎಂಬುದು ಸಾಬೀತಾಗಲಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ…
ತುಮಕೂರು: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019-20ರಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಕೊರಟಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಕಮಿಷನರ್ ಆಗಿದ್ದ ವೇಳೆ 1300 ಕೋಟಿ ಅಕ್ರಮ ನಡೆಸಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಡಾ. ವಿಶ್ವನಾಥ್ ಆರೋಪಿಸಿದರು. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಅವರು ಬಿಬಿಎಂಪಿ ಕಮಿಷನರ್ ಆಗಿದ್ದ ಸಂದರ್ಭದಲ್ಲಿ ಮೂರು ಪ್ರಮುಖ ಅಕ್ರಮಗಳು ನಡೆಸಿದ್ದಾರೆ, ಸ್ಮಾರ್ಟ್ ಪಾರ್ಕಿಂಗ್ ಗೆ 31.6 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಅಷ್ಟು ಹಣ ಖರ್ಚಾಗದಿದ್ದರೂ ಹೆಚ್ಚುವರಿಯಾಗಿ 2 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ, ಅನಿಲ್ ಕುಮಾರ್ ಗುತ್ತಿಗೆ ಸಂಸ್ಥೆಯಾದ ಬಿಲ್ಡಿಂಗ್ಸ್ ಕಂಟ್ರೋಲ್ ಸಲ್ಯೂಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಇದನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ದೂರಿದರು. ಅಲ್ಲದೇ ಕಮಿಷನರ್ ಆಗಿದ್ದ ವೇಳೆ ಮಳೆ ನೀರಿನ ಹೂಳು ತೆಗೆಯುವ ಕಾಮಗಾರಿಯಲ್ಲಿ ಅವ್ಯವಹಾರವಾಗಿದೆ. ಎಂಟು ವಲಯಗಳ ಗುತ್ತಿಗೆಯನ್ನು ಮೆಸರ್ಸ್ಯೋಗ ಅಂಡ್ ಕಂಪನಿ ಎಂಬ ಒಂದೇ…
ತುಮಕೂರು: ಮುಂಬರುವ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗೃತ ಕ್ರಮವಾಗಿ ತುಮಕೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ಪೂರಕವಾಗಿ ಕೆಲಸ ನಿರ್ವಹಿಸಲು ಬಿಎಸ್ ಎಫ್ ನ ಆರು ತುಕಡಿಗಳು ನಗರಕ್ಕೆ ಬಂದಿಳಿದಿವೆ. ಶಸ್ತ್ರ ಸಜ್ಜಿತ ಬಿಎಸ್ಎಫ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ತುಮಕೂರು ನಗರದ ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಇಂದು 400 ಸಿಬ್ಬಂದಿಗಳು ರೂಟ್ ಮಾರ್ಚ್ ನಡೆಸಿದರು. ಸ್ಥಳೀಯರಲ್ಲಿ ಶಾಂತಿಯುತ ಹಾಗೂ ಮುಕ್ತ ಮತದಾನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂಬ ಒಂದು ವಾತಾವರಣವನ್ನು ನಿರ್ಮಿಸಲು ಈ ಕ್ರಮ ಕೈಗೊಳ್ಳಲಾಯಿತು. ಶಸ್ತ್ರ ಸಜ್ಜಿತ ಪೊಲೀಸ್ ಸಿಬ್ಬಂದಿಗಳು ಹಾಗೂ ಬಿಎಸ್ ಎಫ್ ಸಿಬ್ಬಂದಿಗಳು ತುಮಕೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರದ ಶಾಂತಿನಗರ, ಗೂಡ್ಸ್ ಷೆಡ್ ಕಾಲೋನಿ, ಮರಳು ರೆಡ್ಡಿ ದಿಣ್ಣೆ, ಬನಶಂಕರಿ ಬಡಾವಣೆ, ಕುರಿಪಾಳ್ಯ ಬಡಾವಣೆ, ಚಾಂದಿನಿ ಚೌಕ ಬಡಾವಣೆ, ಪಿಎಚ್ ಕಾಲೋನಿ, ತಿಲಕ್ ಪಾರ್ಕ್ ವ್ಯಾಪ್ತಿಯ ರಸ್ತೆಗಳು, ಬಿಜಿ ಪಾಳ್ಯ, ಸಂತೆಪೇಟೆ, ಮಂಡಿಪೇಟೆ,…
ಮಧುಗಿರಿ : ಹಾಲಿ ಶಾಸಕರಾದ ಎಂ.ವಿ.ವೀರಭದ್ರಯ್ಯ ರಿಂದ ಇತಿಹಾಸದಲ್ಲೇ ಕಂಡರಿಯದಂತಹ ತಲೆ ತಗ್ಗಿಸುವ ಘಟನೆ ನಡೆದಿದೆ ಎಂದು ಜಿಲ್ಲಾ ಡಿ ಎಸ್ ಎಸ್ ಸಂಘಟನಾ ಸಂಚಾಲಕರಾದ ಡಾ.ದೊಡ್ಡೇರಿ ಕಣಿಮಯ್ಯ ತಿಳಿಸಿದರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಮಧುಗಿರಿ ಕ್ಷೇತ್ರವನ್ನು ಆಳಿದ ಮಹಾನೀಯರ ಕಾಲದಲ್ಲೂ ಇಂತಹ ಘಟನೆ ಎಂದಿಗೂ ನಡೆದಿಲ್ಲ, ಆದರೆ ಈ ಬಾರಿಯ ಹಾಲಿ ಶಾಸಕರಿಂದ ಆದ ಅವಮಾನದಿಂದ ಕ್ಷೇತ್ರದ ಮತದಾರರು ತಲೆತಗ್ಗಿಸುವಂತಾಗಿದೆ, ಮತದಾರರಿಗೆ ಆದ ಅವಮಾನವನ್ನು ಖಂಡಿಸುತ್ತಾ ಈ ದಿನ ತಾಲೂಕಿನ ಎಲ್ಲಾ ಪ್ರಗತಿಪರ, ದಲಿತಪರ, ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪತ್ರಿಕಾಗೋಷ್ಠಿ ನಡೆಸಿದ್ದೇವೆ ಎಂದರು. ಶಾಸಕರ ಅವಧಿಯಲ್ಲಿ ಬಹು ಜನರಿಗೆ ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿಲ್ಲ, ಕಳೆದ ಕೋರೋಣ ಸಾಂಕ್ರಾಮಿಕ ರೋಗದ ಸಮಯದಲ್ಲಿ ಕ್ಷೇತ್ರದ ಮತದಾರರ ಕಷ್ಟಕ್ಕೆ ಸ್ಪಂದಿಸದ ಶಾಸಕರು, ಈಗ ಚುನಾವಣೆ ಸಮೀಪ ಇರುವ ಸಂದರ್ಭದಲ್ಲಿ ಮತದಾರರಿಗೆ ಹಣದ, ಪ್ರವಾಸದ ಅಮಿಷಾಗಳು ಒಡ್ಡುತ್ತಿರುವುದು ಖಂಡನೀಯವಾಗಿದೆ. ಕ್ಷೇತ್ರದ ಮತದಾರರ…
ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಎಂಟನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಇಂದು ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಸಂಜು ಮತ್ತು ಅವರ ತಂಡ ಇಂದು ಹೊರ ಬರುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 7 ರನ್‌ಗಳಿಂದ ಸೋಲಿಸಿದ ಪಂಜಾಬ್ ಕೂಡ ಆತ್ಮವಿಶ್ವಾಸದಲ್ಲಿದೆ. ಗುವಾಹಟಿಯ ಬರಸ್ಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾತ್ರಿ 7.30 ಪಂದ್ಯ ನಡೆಯಲಿದೆ. ಸನ್‌ರೈಸರ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿದ ನಂತರ ರಾಯಲ್ಸ್ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸುವ ಗುರಿಯನ್ನು ಹೊಂದಿದೆ. ಕಳೆದ ಪಂದ್ಯದಲ್ಲಿ ರಾಜಸ್ತಾನ ತಂಡದ ಅಮೋಘ ಫಾರ್ಮ್‌ಗೆ ಸಾಕ್ಷಿಯಾಗಿತ್ತು. ಇಂಗ್ಲೆಂಡನ್ನು ವಿಶ್ವ ಚಾಂಪಿಯನ್ ಮಾಡಿದ ಜೋಸ್ ಬಟ್ಲರ್ ಪ್ರಮುಖ ಶಕ್ತಿಯಾಗಿದ್ದಾರೆ. ನಾಯಕ ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಾಟಿಕಲ್ ಮತ್ತು ರಿಯಾನ್ ಪರಾಗ್ ಅವರಂತಹ ಪ್ರತಿಭೆಗಳ ಸೇರ್ಪಡೆಯೊಂದಿಗೆ, ಬ್ಯಾಟಿಂಗ್ ಲೈನ್ ಅಪ್ ಯಾವುದೇ ಬೌಲಿಂಗ್ ಲೈನ್-ಅಪ್ ಅನ್ನು ಪುಡಿಮಾಡುತ್ತದೆ.ಮೊದಲ ಪಂದ್ಯದಲ್ಲಿ ರಾಜಸ್ಥಾನ ಪರ ಬಟ್ಲರ್…
2018 ಹಾಗೂ 19ರ ಚುನಾವಣೆಗಳಲ್ಲಿ ದಲಿತ ಸಮುದಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಇರುವ ಕಾರಣದಿಂದಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಬೇಕಾಯಿತು. ಆದರೆ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಈ ವಿಷಯ ಚರ್ಚೆ ಮಾಡಿ ನಂತರ ಅದರ ಫಲವೇ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರು ಎಂದು ಕಾಂಗ್ರೆಸ್ ಎಸ್ ಸಿ ವಿಭಾಗ ರಾಜ್ಯಾಧ್ಯಕ್ಷರಾದ ಆರ್. ಧರ್ಮಸೇನಾ ಹೇಳಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಕೊನೆಯ ಗಳಿಗೆಯಲ್ಲಿ ಮೀಸಲಾತಿ ಬದಲಾವಣೆಗಳ ಕುರಿತು ಮಾತನಾಡುತ್ತಾ ಹಿಂದುಳಿದ ಸಮುದಾಯಗಳಿಗೆ ಹಾಗೂ ದಲಿತ ಸಮುದಾಯಗಳಿಗೆ ಸರ್ಕಾರ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡುತ್ತಿದೆ. ಮೀಸಲಾತಿ ಹೆಚ್ಚಳ ಮಾಡುವ ನಿರ್ಣಯಕ್ಕೆ ಸರಕಾರದ ಕಡೆ ಯಾವುದೇ ಆದೇಶ ಪ್ರತಿ ಇಲ್ಲ, ಸದನದಲ್ಲಿ ಚರ್ಚೆಯಾಗಿಲ್ಲ ಇದು ಅಸಂವಿಧಾನಕವಾಗಿ ತೆಗೆದುಕೊಂಡಿರುವ ನಿರ್ಣಯ ಎಂದರು. ಚುನಾವಣೆ ಗಿಮಿಕ್ ಅನ್ನೋದು ಬಿಟ್ಟರೆ ಬೇರೆ ಏನು ಇಲ್ಲ .ನಿಜವಾಗಲೂ ಸರ್ಕಾರಕ್ಕೆ ಕಾಳಜಿ ಇದ್ದರೆ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು.…
ವಿವಾಹಿತ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಕ್ಕಾಗಿ ಆಕೆಯ ಪ್ರಿಯಕರನ ಸಹೋದರನನ್ನು ಕಟ್ಟಿಹಾಕಿ ಸಜೀವ ದಹನ ಮಾಡಲಾಗಿದೆ. ಕಾರಿನೊಳಗೆ ಕಟ್ಟಿಹಾಕಿ ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಾಗರಾಜು ಅವರನ್ನು ಮಹಿಳೆಯ ಸಂಬಂಧಿಕರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆತನ ಕಿರಿಯ ಸಹೋದರ ಪುರುಷೋತ್ತಮ್ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ಸಂಬಂಧಕ್ಕೆ ಹುಡುಗಿಯ ಸಂಬಂಧಿಕರು ವಿರೋಧ ವ್ಯಕ್ತಪಡಿಸಿದ್ದರು. ವಿಷಯ ಬಗೆಹರಿಸುವ ನೆಪದಲ್ಲಿ ಸಂಬಂಧಿಕರು ನಾಗರಾಜು ಅವರನ್ನು ಕರೆಸಿದ್ದರು.ನಾಗರಾಜು ಜೊತೆ ಕಾರಿನಲ್ಲಿ ಹೋಗುತ್ತಿದ್ದಾಗ ಸಂಬಂಧಿಕರು ಥಳಿಸಿ, ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ಬಳಿಕ ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ಕಾರನ್ನು ಕಮರಿಗೆ ತಳ್ಳಲು ಯತ್ನಿಸಿದರಾದರೂ ಕಲ್ಲಿನಿಂದ ತಡೆದ ಕಾರಣ ಪ್ರಯತ್ನ ವಿಫಲವಾಯಿತು. ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಯುವಕರನ್ನು ಹೊರತೆಗೆದಿದ್ದಾರೆ. ಆದರೆ ತೀವ್ರ ಸುಟ್ಟಗಾಯಗಳಿಂದ ನಾಗರಾಜು ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ…
ನೀತಾ-ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರವನ್ನು ಪ್ರಾರಂಭಿಸಿದ ನಂತರ, ಕುಟುಂಬವು ಆಯೋಜಿಸಿದ ಪಾರ್ಟಿಯ ಚಿತ್ರ ಎಂದು ಹೇಳಿಕೊಳ್ಳುವ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಚಿತ್ರವು ಟಿಪ್ಪಣಿಗಳಿಂದ ಅಲಂಕರಿಸಲ್ಪಟ್ಟ ಸಿಹಿ ಐಟಂ ಅನ್ನು ತೋರಿಸುತ್ತದೆ. ಅಂಬಾನಿ ಪಕ್ಷವು ಟಿಶ್ಯೂ ಪೇಪರ್ ಬದಲಿಗೆ 500 ರೂಪಾಯಿ ನೋಟುಗಳನ್ನು ಪಡೆಯುತ್ತದೆ ಎಂದು ಶೀರ್ಷಿಕೆ ನೀಡಲಾಗಿದೆ. ಕಳೆದ ಮಾರ್ಚ್ 31 ರಂದು ಮುಂಬೈನಲ್ಲಿ ನೀತಾ ಮುಖೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು. ಹಾಲಿವುಡ್ ಮತ್ತು ಬಾಲಿವುಡ್ ಸೂಪರ್‌ಸ್ಟಾರ್‌ಗಳು, ಟಾಪ್ ಮಾಡೆಲ್‌ಗಳು, ರಾಜಕೀಯ ಮುಖಂಡರು ಮತ್ತು ಧಾರ್ಮಿಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಡೆದ ಔತಣಕೂಟದ ಚಿತ್ರವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿತ್ರದಲ್ಲಿ 500 ರೂಪಾಯಿ ನೋಟುಗಳು ಆ ಬಟ್ಟಲಿನಲ್ಲಿ ಸಿಹಿತಿಂಡಿಗಳೊಂದಿಗೆ ಸಾಲಾಗಿ ನಿಂತಿವೆ. ಅಂಬಾನಿ ಕುಟುಂಬ ಆಯೋಜಿಸಿದ್ದ ಈವೆಂಟ್‌ನ ಚಿತ್ರ ಎಂದು ಪ್ರಸಾರವಾದ ಚಿತ್ರವು ಸಾಕಷ್ಟು ಟೀಕೆಗಳನ್ನು ಎದುರಿಸಿದೆ. ಆದರೆ ವಾಸ್ತವವಾಗಿ ಅದು 500 ರೂಪಾಯಿ ನೋಟುಗಳಾಗಿರಲಿಲ್ಲ. ಈ ಎಲ್ಲಾ…
ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತು ಎಎಪಿ ಸೇರಿದಂತೆ 14 ವಿರೋಧ ಪಕ್ಷಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದೆ. ಇಡಿ, ಸಿಬಿಐನಂತಹ ತನಿಖಾ ಸಂಸ್ಥೆಗಳು ಬೇಟೆಯಾಡುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ತೀರ್ಪು ಬಂದ ನಂತರ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಸರ್ಕಾರವನ್ನು ಟೀಕಿಸಿದರೆ ಅಥವಾ ವಿರೋಧಿಸಿದರೆ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮೋದಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ವರ್ಷದಲ್ಲಿ (2013-14) ಎಎಂಎಲ್ ಪ್ರಕರಣಗಳ ಸಂಖ್ಯೆ 209. ಇದು 2020-21ರಲ್ಲಿ 981ಕ್ಕೆ ಮತ್ತು 2021-22ರಲ್ಲಿ 1180ಕ್ಕೆ ಏರಿಕೆಯಾಗಲಿದೆ. ಮೋದಿ ಅಧಿಕಾರಕ್ಕೆ ಬಂದ ನಂತರದ ಒಟ್ಟು ಪ್ರಕರಣಗಳಲ್ಲಿ 95% ಪ್ರತಿಪಕ್ಷ ನಾಯಕರ ವಿರುದ್ಧ ಮತ್ತು ವಿರೋಧ ಪಕ್ಷದ ನಾಯಕರ ಮೇಲಿನ…