Author: admin

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಅವರಿಗೆ ‘ಕನ್ನಡ ಕಲಾಭೂಷಣ’ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದೆ. ಸಿನಿಮಾರಂಗದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಕನ್ನಡ ಗೆಳೆಯರ ಬಳಗ ಸಮಿತಿ ಈ ಪ್ರಶಸ್ತಿ ಪ್ರದಾನ ಮಾಡಿದೆ. ಚಿರು ಸಹೋದರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದ್ದ ಚಿರು 2020ರ ಜೂನ್ 7ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರವಾಗಿ ನೀಡಲಾದ ಪ್ರಶಸ್ತಿಯನ್ನು ಸಹೋದರ ಹಾಗೂ ನಟ ಧ್ರುವ ಸರ್ಜಾ ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು.ಪ್ರಶಸ್ತಿ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು. ಇನ್ನು ಸಂಸದರಾದ ತೇಜಸ್ವಿ ಸೂರ್ಯ, ಡಿಕೆ ಸುರೇಶ್ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಮಿಳು ನಟ ಉದಯನಿಧಿ ಸ್ಟಾಲಿನ್ ಸಿನಿಮಾ ರಂಗಕ್ಕೆ ವಿದಾಯ ಘೋಷಿಸಿದ್ದಾರೆ. ದಶಕ ಕಾಲ ಸಿನಿ ರಂಗದಲ್ಲಿ ಮಿಂಚಿದ ಆತ, ತಮಿಳುನಾಡಿನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಂತರ ಮಾತನಾಡಿ, ‘ಇನ್ಮುಂದೆ ಸಿನಿಮಾಗಳಲ್ಲಿ ನಟಿಸಲ್ಲ. ಕಮಲ್ ಹಾಸನ್ ನಿರ್ಮಿಸುತ್ತಿರುವ ಚಿತ್ರದಲ್ಲೂ ನಟಿಸುವುದಿಲ್ಲ. “ಮಾಮನ್ನನ್” ನನ್ನ ಕೊನೆಯ ಚಿತ್ರ. ಉದಯನಿಧಿ ನಾಯಕನಾಗಿ ನಟಿಸಿದ ಹಲವು ಚಿತ್ರಗಳು ಡಬ್ ಆಗಿದ್ದು, ಹಲವು ಚಿತ್ರಗಳನ್ನೂ ನಿರ್ಮಿಸಿದ್ದಾರೆ. ಇವರು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ರಾಜಕೀಯವಾಗಿ ಯಶಸ್ಸು ಕಂಡಿದ್ದಾರೆ. ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಪ್ರಸ್ತುತ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತು ಕೇಳಿಬಂದಿದ್ದವು. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ತೋರಿಸಿಲ್ಲ. ಹೀಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಸ್ತಾಪಕ್ಕೆ ಬಹುತೇಕ ತೆರೆಬಿದ್ದಿದೆ. ಇನ್ನು ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ , ಸಂಪುಟ ವಿಸ್ತರಣೆ ಸಂಬಂಧ ತಾವು ಪ್ರಸ್ತಾಪಿಸಿದ್ದು, ಅದರ ಅವಶ್ಯಕತೆ ಏನಿದೆ. ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತಿಳಿಸುವುದಾಗಿ ವರಿಷ್ಠರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗುವ ವಿವಿಧ ಇಲಾಖೆಯ ಸರ್ಕಾರಿ ನೌಕರರು, ಕಡ್ಡಾಯವಾಗಿ ಇಲಾಖಾ ಗುರುತಿನ ಚೀಟಿ ಧರಿಸಿ, ಕಾರ್ಯಕಲಾಪಗಳಲ್ಲಿ ಭಾಗಿಯಾಗುವಂತೆ ಸರ್ಕಾರ ಸೂಚಿಸಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಕಾರ್ಯಕಲಾಪದಲ್ಲಿ ಭಾಗವಹಿಸುವಂತ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಕರ್ನಾಟಕ ಸರ್ಕಾರ ಸಚಿವಾಲಯದಿಂದ ನೀಡಲಾಗುವ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿ ಹಾಜರಾಗುವಂತೆ ತಿಳಿಸಿದೆ. ಇನ್ನೂ ಭದ್ರತೆಯ ಹಿನ್ನಲೆಯಲ್ಲಿ ಪ್ರವೇಶಕ್ಕೆ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಧರಿಸಿದ್ದರೇ ಮಾತ್ರವೇ ಪ್ರವೇಶಕ್ಕೆ ಅನುಮತಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಮುಖ ಆರೋಪಿಯನ್ನು ಗೋಕಾಕ್​ ನಗರ ಪೊಲೀಸರು ಬಂಧಿಸಿದ್ದಾರೆ. ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಸೋಮನಗೌಡ ಪಾಟೀಲ ಬಂಧಿತ ಆರೋಪಿ. ಗದಗಿನ ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಅಭ್ಯರ್ಥಿಗಳಿಗೆ ರವಾನಿಸಿದ ಆರೋಪ ಕೇಳಿಬಂದಿದೆ. ಗದಗ ಮುನ್ಸಿಪಲ್ ಪಿಯು ಕಾಲೇಜಿನ ಉಪಪ್ರಾಚಾರ್ಯ ಮಾರುತಿ ಸೋನವಣೆ ಪುತ್ರ ಸುಮಿತ್‌ಕುಮಾರ್‌ನನ್ನು ಈಗಾಗಲೇ ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಉಪ ಪ್ರಾಚಾರ್ಯ ಮಾರುತಿ ಪುತ್ರನ ಜೊತೆಗೆ ಡೀಲ್ ಕುದುರಿಸಿದ್ದ ಸೋಮನಗೌಡ ಅಭ್ಯರ್ಥಿಗಳಿಂದ 7.10 ಲಕ್ಷ ರೂ. ಪಡೆದು ಅದರಲ್ಲಿ 4.50 ಲಕ್ಷ ರೂ. ಸುಮಿತ್‌ಕುಮಾರ್‌ಗೆ ನೀಡಿದ್ದ ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೀನದಯಾಳ ಅಂತ್ಯೋದಯ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ 03 ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಹತೆ: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಮಿತಿಯ ನಿರ್ಣಯವೇ ಅಂತಿಮವಾಗಿದ್ದು ಹುದ್ದೆಯ ಹೆಸರು ಸಮುದಾಯ ಸಂಪನ್ಮೂಲ ವ್ಯಕ್ತಿ, ಒಟ್ಟು ಹುದ್ದೆಗಳ ಸಂಖ್ಯೆ 3 (ಮೂರು), ಗೌರವಧನ ಮಾಸಿಕ ರೂ. 8000, ಟಿಎ ಗರಿಷ್ಟ ರೂ. 2000 ನೀಡಲಾಗುವುದು, ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು, ಒಂದು ವೇಳೆ ಹೆಚ್ಚುವರಿ ವಿಧ್ಯಾರ್ಹತೆ ಹೊಂದಿದ್ದಲ್ಲಿ ಅಂತಹ ಸದಸ್ಯರಿಗೂ ಸಹ ಆಧ್ಯತೆ ನೀಡಲಾಗುವುದು ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು), ನಿಪ್ಪಾಣ ನಗರಸಭೆ ಡೇ-ನಲ್ಮ್ ಯೋಜನೆಯಡಿ ರಚಿಸಿದ ಸ್ವ-ಸಹಾಯ ಸಂಘದಲ್ಲಿ ಕನಿಷ್ಟ 3 ವರ್ಷದಿಂದ ಸದಸ್ಯೆರಾಗಿರಬೇಕು/ಪ್ರದೇಶದ ಮಟ್ಟದ ಒಕ್ಕೂಟದ ಸದಸ್ಯರಾಗಿರಬೇಕು. ಸ್ವ-ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿಸಿರಬೇಕು, ಸ್ವ-ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು  ಬಾಕಿದಾರರಾಗಿರಬಾರದು. ಆಸಕ್ತ…

Read More

ತುರುವೇಕೆರೆ: ತಾಲೂಕಿನ ಲೋಕಮ್ಮನಹಳ್ಳಿ  ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜಗದಾಂಬ ಶಂಕರಪ್ಪ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧಿಕಾರದಲ್ಲಿದ್ದ ಮಮತಾರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ನಾಮಪತ್ರ ಸಲ್ಲಿಸುವ ವೇಳೆ ಲೋಕಮ್ಮನಹಳ್ಳಿ ಕ್ಷೇತ್ರದ ಜಗದಾಂಬ ಶಂಕರಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ತೇಜಸ್ವಿನಿ ರವರು ಜಗದಾಂಬ ಶಂಕರಪ್ಪ ರವರನ್ನು ಅವಿರೋಧ  ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷರನ್ನು ಯೂನಿಯನ್ ಬ್ಯಾಂಕ್ ನ ನಿರ್ದೇಶಕ ಮಾವಿನಹಳ್ಳಿ  ವಿಜಯ್ ಕುಮಾರ್, ಟಿಎಪಿಎಂಎಸ್ ನ ಮಾಜಿ ಅಧ್ಯಕ್ಷ  ಕೋಳಗಟ್ಟ ಶಿವಾನಂದ್, ಪಟ್ಟಣ ಪಂಚಾಯಿತಿಯ ಅಧ್ಯಕ್ಷ ರಾಮೇಗೌಡ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೇ ರತ್ನಮ್ಮ ಸದಸ್ಯರಾದ ಎಲ್ ಎ ಗಂಗಾಧರಯ್ಯ, ನಾಗರತ್ನಮ್ಮ ಜಿ, ಮಂಜುನಾಥ್, ಶೋಭಾ,ಲಕ್ಷ್ಮಣ್ ಕುಮಾರ್, ಪುಟ್ಟ ಲಕ್ಷ್ಮಮ್ಮ, ನಳಿನ ಜೆ, ಅಲ್ಲಪ್ಪ ಆರ್, ಮಂಜುಳಾ ರಂಗಯ್ಯ, ಛಾಯಾ ಎ.ಬಿ.,  ಮುಖಂಡರುಗಳಾದ ಶಿವಕುಮಾರ್, ಜಗದೀಶ್,ಬಾಣಸಂದ್ರ ಪ್ರಕಾಶ್, ತಾವರೆಕೆರೆ ಕೃಷ್ಣಮೂರ್ತಿ,ಮಹಾಲಿಂಗಪ್ಪ ಓಂಕಾರ್ ಮೂರ್ತಿ,…

Read More

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಪದೇ ಪದೇ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚೂ ಮುಂದಕ್ಕೆ ಹೋಗಿಲ್ಲ. ಸರ್ಕಾರದ ಈ ನಡೆ ನ್ಯಾಯಾಲಯದ ಆದೇಶಗಳನ್ನು ‌ನಿಷ್ಕ್ರೀಯಗೊಳಿಸುವಂತಹದ್ದಾಗಿದೆ. ಜನವರಿ 30ರೊಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ‌ಪೂರ್ಣಗೊಳಿಸಬೇಕು ಎಂದು ಗಡುವು ನೀಡಿದೆ.ದಂಡದ ಮೊತ್ತದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ವಕೀಲರ ಸಂಘಕ್ಕೆ ತಲಾ 2 ಲಕ್ಷ ರೂ. ಮತ್ತು 1 ಲಕ್ಷ ರೂ.ಗಳನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಲು ಸರ್ಕಾರಕ್ಕೆ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ತಿಪಟೂರು: ಕಲ್ಪತರು ನಾಡು ಪ್ರಮುಖ ಬೆಳೆಯಾಗಿರುವ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದ್ದು, ಬೆಂಬಲ ಬೆಲೆಯನ್ನು 12,500 ರಿಂದ 15 ಸಾವಿರಕ್ಕೆ ಏರಿಸಬೇಕು ಹೋರಾಟ ಸಮಿತಿ ಅಧ್ಯಕ್ಷ ಲೋಕೇಶ್ವರ್ ಒತ್ತಾಯಿಸಿದರು. ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿಲು ಒತ್ತಾಯಿಸಿ ಸ್ವಯಂ ಪ್ರೇರಿತರಾಗಿ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಬಂದ್ ಆಚರಿಸಿದರು. ಈ ವೇಳೆ ಮಾತನಾಡಿದ ಲೋಕೇಶ್ವರ್,  ದಿನನಿತ್ಯದ ವಸ್ತುಗಳ ಬೆಲೆ ಗಗನಕೇರಿದ್ದು ಆದರೆ ಅಡಿಕೆ ಕೊಬ್ಬರಿ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿರಿ ಬಿಜೆಪಿ ಸರ್ಕಾರ ಬಂದ ಮೇಲಂತೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗಿದ್ದು, ಜನಸಾಮಾನ್ಯರು ಬದುಕೋದೇ ಕಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮುಂದಿನ ದಿನಗಳಲ್ಲಿ ರೈತರಿಗೆ ನ್ಯಾಯ ಒದಗಿಸಬೇಕು ಇಲ್ಲವಾದರೆ, ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಈ ಪ್ರತಿಭಟನೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಗಣೇಶ್ ಯಗಚಿ ಕಟ್ಟೆ, ರಾಗವ, ರೇಣುಕ, ಪ್ರಸಾದ್, ಶಶಿಭೂಷಣ್, ನಿಜಗುಣ ಹಾಗೂ ಹೋರಾಟ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ತಿಪಟೂರು: ಪಾಶ್ಚಿಮಾತ್ಯ ಜೀವನ ಶೈಲಿಯನ್ನು ನಿಧಾನವಾಗಿ ಅಳವಡಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ನಶಿಸಿಹೋಗುತ್ತಿರುವ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸಂರಕ್ಷಿಸುವ ಹಾಗೂ ಜೀರ್ಣೋದ್ಧಾರ ಮಾಡುವುದು ನಾಗರಿಕನ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ಯೋಜನಾಧಿಕಾರಿ ಉದಯ್ ಅಭಿಪ್ರಾಯಪಟ್ಟರು. ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ಬೆಳಗರಹಳ್ಳಿ ಗ್ರಾಮದಲ್ಲಿ ನೂತನವಾಗಿ  ನಿರ್ಮಿಸುತ್ತಿರುವ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಮೂರು ಲಕ್ಷದ ಡಿಡಿಯನ್ನು ಹಸ್ಥಾಂತರಿಸಿ ಮಾತನಾಡುತ್ತಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ  ಗ್ರಾಮಗಳಲ್ಲಿನ ದೇವಸ್ಥಾನಗಳ ಜೀರ್ಣೋದ್ಧಾರ ಹಾಲಿನ ಡೈರಿ ಕಟ್ಟಡ, ಸಮುದಾಯಭವನ, ರುದ್ರಭೂಮಿಯ ಅಭಿವೃದ್ಧಿಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದು, ಪ್ರಸ್ತುತ ಆರ್ಥಿಕ ವರ್ಷದಲ್ಲಿ ತಾಲೂಕಿನಲ್ಲಿ ಈಗಾಗಲೇ 42 ಲಕ್ಷ ರೂ  ಅನುದಾನಗಳನ್ನು ವಿವಿಧ ಅಭಿವೃದ್ಧಿಗಳಿಗೆ ಕಾರ್ಯಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ದೇವಸ್ಥಾನದ ಅಭಿವೃದ್ಧಿ ಸಮಿತಿಯ ಶಿವಶಂಕರಯ್ಯ ಮಾತನಾಡಿ  ಅನುದಾನ ಪಡೆಯಲು ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದಾಗ ಅವರು ನಮಗೆ ನೀಡಿದ ಆತಿಥ್ಯವನ್ನು ವರ್ಣಿಸಲಾಗದು …

Read More