Author: admin

ತುರುವೇಕೆರೆ: ಭೀಕರ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟ ದಾರುಣ ಘಟನೆ 150 ಎ ರಾಷ್ಟ್ರೀಯ ಹೆದ್ದಾರಿಯಲ್ಲಿಯಲ್ಲಿ ಬೆಳಗ್ಗೆ ಸುಮಾರು 10 ಗಂಟೆಗೆ ನಡೆದಿದೆ. ಸಂಗ್ಲಾಪುರ ಗೇಟ್ ಬಳಿ ಇರುವ ಉಣ್ಣೆಬಸವೇಶ್ವರ ದೇವಸ್ಥಾನದ ಸ್ವಲ್ಪ ದೂರದಲ್ಲಿ ಹಾದು ಹೋಗಿರುವ 150 ಎ ರಾಷ್ಟ್ರೀಯ ಹೆದ್ದಾರಿಯಲ್ಲಿ, ಮಾಯಸಂದ್ರ ಕಡೆಯಿಂದ ಬರುತ್ತಿದ್ದ ಮಹೇಂದ್ರ ಜೀತೋ ಎಂಬ ನಾಲ್ಕು ಚಕ್ರದ ವಾಹನ ಅತಿ ವೇಗವಾಗಿ ಬಂದು, ತುರುವೇಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ರಭಸವಾಗಿ ಗುದ್ದಿದ್ದರಿಂದ, ಸ್ಥಳದಲ್ಲಿ ದ್ವಿಚಕ್ರವಾಹನ ಸವಾರ ಮೃತಪಟ್ಟಿದ್ದಾನೆ. ತುರುವೇಕೆರೆ ತಾಲೂಕಿನ ದಬ್ಬೇಗಟ್ಟ ಗ್ರಾಮದ ಸುರೇಶ್ ಮತ್ತು ಭಾಗ್ಯಮ್ಮ ಎಂಬುವರ ಒಬ್ಬನೇ ಮಗ ತಿಲಕ್ (22 ವರ್ಷ) ಮೃತಪಟ್ಟ ಯುವಕನಾಗಿದ್ದಾನೆ. ನಾಲ್ಕು ಚಕ್ರದ ವಾಹನದ ಹಿಂದೆ ಬರುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನದಲ್ಲಿ ಇಬ್ಬರು ವಾಹನ ಸವಾರರಿದ್ದು ಅದರಲ್ಲಿ ಒಬ್ಬ ಯುವಕನಿಗೆ ಗಂಭೀರವಾದ ಗಾಯವಾಗಿದ್ದು, ಆತನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನಗಳು ಪೂರ್ತಿ…

Read More

ನನ್ನ ಅರೋಗ್ಯ ಸಮಸ್ಯೆ ಕಡೆಗಣಿಸಿ ನಾನು ಶ್ರಮಿಸುತ್ತಿದ್ದೇನೆ. ಸ್ವಾರ್ಥಕ್ಕಾಗಿ ನನ್ನ ದೇಹ ದಂಡನೆ ಮಾಡುತ್ತಿಲ್ಲ. ಸಿಎಂ ಆಗಬೇಕೆಂದು ಈ ರೀತಿ ಶ್ರಮ ವಹಿಸುತ್ತಿಲ್ಲ. ನಮ್ಮ ಮನೆಯ ಬಳಿ ಬರುವ‌ ಬಡ ತಾಯಂದಿರ ಕಣ್ಣೀರು ನೋಡಿದ್ದೇನೆ. ಬಡವರ, ರೈತರ ಕಣ್ಣೀರು ಒರೆಸಬೇಕು ಎನ್ನುವುದೊಂದೇ ನನ್ನ ಉದ್ದೇಶ. ಮುಂದೆ ಜೆಡಿಎಸ್​ ನ ಬಹುಮತದ ಸರ್ಕಾರ ಬರುತ್ತದೆ, ಐದು ವರ್ಷ ಆಡಳಿತ ನಡೆಸಲಿದೆ ಎಂದು ನೋವಿನಲ್ಲಿ ಇರುವವರಿಗೆ ಹೇಳಿದ್ದೇನೆ. ರೈತರು ಸಾಲಗಾರ ಆಗಬಾರದು ಎನ್ನುವುದು ನನ್ನ ಗುರಿ. ಕೇವಲ 37 ಶಾಸಕರನ್ನು ಇಟ್ಟುಕೊಂಡು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೆ. ನಮ್ಮನ್ನು ವಿರೋಧಿಸಿದ್ದವರೇ ಸರ್ಕಾರ ರಚಿಸೋಣ ಎಂದು ಬಂದಾಗ ರೈತರ ಸಾಲಾ ಮನ್ನ ಮಾಡುವ ಉದ್ದೇಶದಿಂದ ಜೊತೆ ಸೇರಿದ್ದೆ ಎಂದು ತಿಳಿಸಿದರು. ದೇಶದ ಪ್ರಗತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಬಡ ಜನರ ಮಕ್ಕಳು ಶಿಕ್ಷಣ ಪಡೆಯಲು ಆಗದೆ ಪರದಾಡುತ್ತಿದ್ದಾರೆ ಎಂದು ಸರ್ಕಾರದ…

Read More

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನೂ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿ ತನ್ನ ಆಪ್ತ ಮಹೇಶ್ ಕುಮಟಳ್ಳಿ ಪರ ಬ್ಯಾಟ್ ಬೀಸಿದ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಟಿಕೆಟ್ ನೀಡಬೇಕು, ಟಿಕೆಟ್ ನೀಡದಿದ್ದರೇ ನಾನೂ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಲ್ಲ. ಬಿಜೆಪಿ ಸರ್ಕಾರ ಸ್ಥಾಪನೆಗಾಗಿ ಸಚಿವ ಸ್ಥಾನ ತ್ಯಾಗ ಮಾಡಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ. ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರಿದ್ದೇನೆ. ಹೀಗಾಗಿ ಸಚಿವ ಸ್ಥಾನದ ಆಸೆಗಾಗಿ ಬಿಜೆಪಿ ಪಕ್ಷಕ್ಕೆ ಬಂದಿಲ್ಲ ಎಂದರು. ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ನಾರಾಯಣಗೌಡರು ಬಿಜೆಪಿ ಬಿಡುವುದಾಗಿ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಮುಳುಗುವ ಹಡಗು. ಅಲ್ಲಿಗೆ ಹೋಗೋದು ಒಳ್ಳೆಯದಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಎಂದು ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಅಭಿವೃದ್ದಿ ಬಗ್ಗೆ ಪ್ರಧಾನಿ ಮೋದಿಗೆ ಕಾಳಜಿ ಇದೆ. ಹೀಗಾಗಿ ನನ್ನ ಸಂಪೂರ್ಣ ಬೆಂಬಲ ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಎಂದು ಘೋಷಿಸಿದರು. ಅಂಬಿ ಕುಟುಂಬ ದ್ವೇಷದ ರಾಜಕಾರಣ ಮಾಡಲ್ಲ. ಪಕ್ಷೇತರ ಸಂಸದೆಯಾದರೂ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹೆಚ್ಚು ಅನುದಾನ ನೀಡಿದ್ದಾರೆ. ಮೋದಿ ನಾಯಕತ್ವದಲ್ಲಿ ದೇಶ ಸಾಗುತ್ತಿದೆ. ಜಿಲ್ಲೆಯ ಭವಿಷ್ಯದ ದೃಷ್ಠಿಯಿಂದ ಒಂದು ಹೆಜ್ಜೆ ಮುಂದೆ ಇಟ್ಟಿದ್ದೇನೆ ಎಂದರು. ಚಾಮುಂಡಿ ತಾಯಿ ಮೇಲೆ ಆಣೆ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣ ಮಾಡಲ್ಲ ನನಗೆ ಅಂಬರೀಶ್ ಹೆಸರೂ ಉಳಿಯಬೇಕು. ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಪುತ್ರ ರಾಜಕಾರಣಕ್ಕೆ ಬರೋದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಬೆಳಗಾವಿ: ನಗರದಲ್ಲಿ ವಿವಿಧ ಕಡೆಗಳಲ್ಲಿ ಇಂದು ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು, ಸುಮಾರು 3 ಕೋಟಿಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅಶೋಕ ನಗರದಲ್ಲಿ ಸುಮಾರು 27 ಲಕ್ಷ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ, ಅಮನ ನಗರ ಮತ್ತು ಮಾರುತಿ ನಗರದಲ್ಲಿ 2.5 ಕೋಟಿ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ಕಾಮಗಾರಿಗೆ ಚಾಲನೆ, ಎಸ್ ಮೋಟರ್ಸ ಹತ್ತಿರ 50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಕಾಮಗಾರಿಗೆ ಚಾಲನೆ ನೀಡವ ವೇಳೆ ನಿವಾಸಗಳಿಂದ ಶಾಸಕ ಅನಿಲ ಬೆನಕೆ ಅವರಿಗೆ ಸನ್ಮಾನಿಸಲಾಯಿತು. ಶಾಸಕರು ಹೊದಲೆಲ್ಲ ಸ್ಥಳೀಯ ನಿವಾಸಿಗಳುನೀರಿನ ಸಮಸ್ಯೆ, ಕಸ ವಿಲೇವಾರಿ ಸಮಸ್ಯೆಡ್ರೈನೆಜ ಸಮಸ್ಯೆ ಬಗ್ಗೆ ಶಾಸಕರಿಗೆ ಹೇಳಿಕೊಂಡರು.‌ ಈ ವೇಳೆ ಶಾಸಕ ಅನಿಲ ಬೆನಕೆ ಅವರು, ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಗೆ ಸ್ಪಂದಿಸುವಂತರ ಸೂಚನೆ ನೀಡಿದರು. ಕಾಮಗಾರಿಗೆ ಚಾಲನೆ ನೀಡದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ…

Read More

ಸರಗೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಶೋಕ ಮಡುಗಟ್ಟಿದೆ. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಅವರು ಕಾಯಕಯೋಗಿ, ಹೃದಯವಂತ ರಾಜಕಾರಣಿಯಾಗಿದ್ದರು. ಅವರ ಅಕಾಲಿಕ ನಿಧನ ವೈಯಕ್ತಿಕವಾಗಿ ಹಾಗೂ ಅಭಿಮಾನಿಗಳಿಗೆ ತುಂಬಲಾರದ ನಷ್ಟ ಎಂದು ಯಜಮಾನರು ಶಿವಮೂರ್ತಿ ಸಂತಾಪ ವ್ಯಕ್ತಪಡಿಸಿದರು. ಹಾದನೂರು ಗ್ರಾಮದಲ್ಲಿ ಶನಿವಾರ ರಂದು ಆರ್. ಧ್ರುವನಾರಾಯಣ್ ರವರ ಪೋಟೋ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಅವರ ಸರಳತೆ, ಸಂಘಟನಾ ಚಾತುರ್ಯ ಹಾಗೂ ಪಕ್ಷ ನಿಷ್ಠೆ ಬಗ್ಗೆ ಅರಿತಿದ್ದೆ ಎಂದರು. ಗ್ರಾಪಂ ಸದಸ್ಯ ಪ್ರಕಾಶ್ ಮಾತನಾಡಿ, ಸಾಕಷ್ಟು ಸುಧಾರಣೆಗೆ ಮುಂದಾಗಿದ್ದ ಅವರು ಹೆಚ್ಚು ಬಾರಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಸಾಕಷ್ಟು ಬೇಡಿಕೆಗಳನ್ನು ಈಡೇರಿಸಿದ್ದಾರೆ. ಸದಾ ಹಸನ್ಮುಖಿಯಾಗಿರುತ್ತಿದ್ದ ಅವರಿಗೆ ಕ್ಯಾಬಿನೆಟ್ನಲ್ಲಿ ವಿಶೇಷ ಸ್ಥಾನಮಾನವಿತ್ತು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಬಗ್ಗೆ ಅಪಾರ ಅಭಿಮಾನ. ಅವರೊಬ್ಬ ಅಜಾತಶತ್ರು, ಉತ್ತಮ ಆಡಳಿತಗಾರ, ಸ್ನೇಹಜೀವಿ, ಈವರೆಗೆ ಯಾರಿಗೂ ತೊಂದರೆ ಕೊಟ್ಟವರಲ್ಲ…

Read More

ಬೆಳಗಾವಿ: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಕಾರಣ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೆಚ್ಚಿನ ಗಮನ ನೀಡಬೇಕು. ನಿಮಗೆ ಬೇಕಾದ ಸಹಾಯ, ಸಹಕಾರ ನೀಡಲು ನಾನು ಸದಾ ಬದ್ಧನಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಮುಚ್ಚಂಡಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಕನ್ನಡ ಶಾಲೆ ಸನ್ 2022 – 23 ರಲ್ಲಿ ” 4059″ ಕಟ್ಟಡಗಳ ಯೋಜನೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡುವ ಗುರಿ ಹೊಂದಬೇಕು. ಉನ್ನತ ಹುದ್ದೆಗಳ ಗುರಿಯೊಂದಿಗೆ ವ್ಯಾಸಂಗ ಮಾಡಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಮಾತ್ರ ಯಾವುದೇ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕೆಂದು ತಿಳಿಸಿದರು. ಈ ನೂತನ ಶಾಲಾ ಕೊಠಡಿಗಳಿಂದ ಮುಂದಿನ ಹತ್ತು ವರ್ಷಗಳ ಅವಧಿಗೆ ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ಆಗಲ್ಲ. ಮತಕ್ಷೇತ್ರದಲ್ಲಿ ಕಳೆದ…

Read More

ಮಾಜಿ ಶಾಸಕ ಹಾಗೂ ಕಾಂಗ್ರೆಸ ಮುಖಂಡ ಫಿರೋಜ್ ಶೆಠ ಮಾಧ್ಯಮಗಳೊಂದಿಗೆ ಮಾತನಾಡಿ ಬೆಳಗಾವಿ ನಗರಕ್ಕೆ ನರೇಂದ್ರ ಮೋದಿ ಭೇಟಿಯಿಂದ ಬೆಳಗಾವಿ ರಾಜಕಾರಣದಲ್ಲಿ ಏನು ಬದಲಾವಣೆಯಾಗುವುದಿಲ್ಲ. ಜನ ಅಭಿವೃದ್ಧಿ ಕಾರ್ಯಕ್ರಮಗಳತ್ತ ಒಲವು ನೀಡುತ್ತಿದ್ದಾರೆ. ನಾನು ಹತ್ತು ವರ್ಷಗಳ ಕಾಲ ಅವಧಿಯಲ್ಲಿ ಮಾಡಿರುವಂತ ಅಭಿವೃದ್ಧಿ ಕಾರ್ಯಕ್ರಮಗಳಿಂದ ಜನರ ಮನಸ್ಸಿನಲ್ಲಿ ಮತ್ತು ಜನರ ಹೃದಯದಲ್ಲಿ ನಾನಿದ್ದೇನೆ ಎಂದರು. ಭಾರತೀಯ ಜನತಾ ಪಕ್ಷ ಸುಳ್ಳಿನ ಪಕ್ಷ ಇದು ಜನರಿಗೆ ಮೋಸ ಮಾಡುವಂತ ಪಕ್ಷ. ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಇವೆಲ್ಲವೂ ಜನಸಾಮಾನ್ಯರ ಕಷ್ಟಕ್ಕೆ ಕಾರಣವಾಗಿವೆ. ಅದರಿಂದಾಗಿ ಜನ ಬಿಜೆಪಿ ಸರ್ಕಾರ ಆಡಳಿತ ದಿಂದ ಕಂಗಟ್ಟಿ ಹೋಗಿದ್ದಾರೆ ಎಂದು ಫಿರೋಜ್ ಶೆಠ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಇದು ಅಧಿಕೃತವಾಗಿ ಕಾಶ್ಮೀರದಲ್ಲಿ ವಸಂತವಾಗಿದೆ. ಶ್ರೀನಗರವು ಗುಲಾಬಿ ಮತ್ತು ಬಿಳಿ ಹೂವುಗಳಿಂದ ತುಂಬಿದೆ. ಇದು ಪ್ರವಾಸಿ ಋತುವಿನ ಆರಂಭ ಮತ್ತು ವಸಂತಕಾಲದ ಆಗಮನವನ್ನು ಸೂಚಿಸುತ್ತದೆ. ಪ್ರವಾಸಿಗರ ಆಗಮನವು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯುತ್ತದೆ ಎಂದು ಅಧಿಕಾರಿಗಳು ಹಾರೈಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯು ಮಾರ್ಚ್ ಮಧ್ಯದಲ್ಲಿ ಶ್ರೀನಗರದ ವಿವಿಧ ಉದ್ಯಾನಗಳಲ್ಲಿ ವಸಂತವನ್ನು ಆಚರಿಸಲು ಯೋಜಿಸುತ್ತಿದೆ. ಬಾದಾಮಿ ಹೂವಿನ ಹೊರತಾಗಿ, ಏಷ್ಯಾದ ಅತಿದೊಡ್ಡ ಟುಲಿಪ್ ಉದ್ಯಾನವು ಮುಂದಿನ ಕೆಲವು ವಾರಗಳಲ್ಲಿ ಸಾರ್ವಜನಿಕರಿಗೆ ತೆರೆಯುವ ನಿರೀಕ್ಷೆಯಿದೆ. ಶ್ರೀನಗರದ ಹರಿ ಪರ್ಬತ್ ಕೋಟೆಯ ಕಣಿವೆಯಲ್ಲಿ ಸಾವಿರಾರು ಬಾದಾಮಿ ಮರಗಳು ಅರಳುತ್ತಿವೆ. ಈ ಋತುವಿನ ಹೂಬಿಡುವಿಕೆಯು ಕಠಿಣ ಚಳಿಗಾಲದಲ್ಲಿ ಒಳಾಂಗಣದಲ್ಲಿ ಉಳಿಯುವ ಹೆಚ್ಚಿನ ಸ್ಥಳೀಯರನ್ನು ಎಚ್ಚರಗೊಳಿಸಲು ನಿರ್ವಹಿಸುತ್ತದೆ. ವಸಂತವು ಉದ್ಯಾನವನಗಳಿಗೆ ಮಾತ್ರವಲ್ಲದೆ ಜನರ ಜೀವನಕ್ಕೂ ಬಣ್ಣವನ್ನು ತರುತ್ತದೆ. ಶ್ರೀನಗರದಲ್ಲಿರುವ ಈ ಪ್ರಸಿದ್ಧ ಬಾದಾಮಿ ತೋಟವನ್ನು ಬಾದಾಮ್ವಾರಿ ಎಂದು ಕರೆಯಲಾಗುತ್ತದೆ. ನೂರಾರು ಪ್ರವಾಸಿಗರು ಈಗಾಗಲೇ ಬಾದಾಮವಾರಿಗೆ ಭೇಟಿ ನೀಡಿದ್ದಾರೆ. ಈ ಉದ್ಯಾನವನದ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳನ್ನು…

Read More

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಬೆಳಗಾವಿ ವಿಭಾಗದಿಂದ 2019-20 ನೇ ಸಾಲಿನ ನಬಾರ್ಡ್ ಆರ್.ಐ.ಡಿ.ಎಫ್ 25ನೇ ಯೋಜನೆಯಡಿ ನಿರ್ಮಿಸಲಾದ ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ “ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇತರ ಮೂಲಸೌಲಭ್ಯಗಳ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೂ ಸಾಕಷ್ಟು ಒತ್ತು ನೀಡಲಾಗಿದೆ. ಗ್ರಾಮಿಣ ಭಾಗದ ಅನೇಕ ಶಾಲೆಗಳನ್ನು ಸ್ಮಾರ್ಟ್ ಆಗಿ ಉನ್ನತೀಕರಿಸಿದ್ದು ಹಲವಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಪಟ್ಟಣ, ನಗರಗಳಲ್ಲಿ ಲಭಿಸುವ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ” ಎಂದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, “ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರಾದ್ಯಂತ ಕೈಗೊಳ್ಳಲಾಗುತ್ತಿದ್ದು ಇನ್ನೂ ಹೆಚ್ಚಿನ ಅಭಿವೃದ್ಧಿಯ ಸಂಕಲ್ಪ ಸಾಕಾರವಾಗಲು ಜನತೆ ಕೂಡ ಕೈಜೋಡಿಸಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More