Author: admin

ಸರಗೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಬಾಬು ಜಗಜೀವನ್‌ ರಾಮ್ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಎನ್.ನಾಗಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು “ಮಾದಿಗ ಜನಾಂಗವೂ ಸುಮಾರು 30 ವರ್ಷಗಳಿಂದ ನ್ಯಾ.ಸದಾಶಿವ ಆಯೋಗ ಜಾರಿಗೊಳಿಸುವಂತೆ ನಿರಂತರವಾಗಿ ಹೋರಾಟ ಮಾಡುತ್ತಿದೆ. ಆದರೆ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷವಾಗಲೀ ಒಳಮೀಸಲಾತಿ ಜಾರಿಗೊಳಿಸಲು ಮುಂದಾಗದೇ ಮೀನಾಮೇಷ ಎಣಿಸುತ್ತಿವೆ” ಎಂದು ಆರೋಪಿಸಿ ಸರಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ ರಾಜಕೀಯ ಪಕ್ಷಗಳು ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿ ಮತ ಪಡೆದು ನಂತರ ಅಧಿಕಾರ ಏರಿದ ಮೇಲೆ ಜನಾಂಗವನ್ನು ಸಂಪೂರ್ಣವಾಗಿ ಮರೆತು ಮೋಸ ಮಾಡುತ್ತಿವೆ. ಅಲ್ಲದೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಒಳಮೀಸಲಾತಿಗಾಗಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ವೇದಿಕೆಯ ತಾಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ ಮಾತನಾಡಿ, ಮಾದಿಗ ಜನಾಂಗವೂ ಒಳ ಮೀಸಲಾತಿಗಾಗಿ…

Read More

ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಬೈಕೊಂದುವಿದ್ಯಾರ್ಥಿನಿಯರ ಸಮೀಪ ವೇಗ ಕಡಿಮೆ ಮಾಡುತ್ತಾ ಬಂದು ಗ್ಲಾಸ್ ನಲ್ಲಿದ್ದ ಆ್ಯಸಿಡ್ ನ್ನು ಎರಚಿದ್ದು, ಈ ವೇಳೆ ಆ್ಯಸಿಡ್ ತಾಗಿದ ಬಾಲಕಿಯು ಮುಖವನ್ನು ಕೈಯಿಂದ ಮುಚ್ಚಿಕೊಂಡು ನೋವಿನಿಂದ ಓಡುತ್ತಿರುವ ದೃಶ್ಯ ಸೆರೆಯಾಗಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ಆತನ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎಂ.ಹರ್ಷವರ್ಧನ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಹುಬ್ಬಳ್ಳಿ : ಆರೋಗ್ಯ ಕ್ಷೇತ್ರಕ್ಕೆ ಮುಂದಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ರೂ. ಅನುದಾನ ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೊಮ್ಮಾಯಿ ಆರೋಗ್ಯ ಕ್ಷೇತ್ರಕ್ಕೆ ಮುಂದಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲು ಇಡಲಾಗುತ್ತದೆ. ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಮಹತ್ವ ನೀಡಲಾಗುತ್ತದೆ. 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ : ಮುಂಬರುವ ಚುನಾವಣೆಗೆ ಕ್ಷೇತ್ರ ಹುಡುಕಾಟದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಈ ಕುರಿತು ಇಂದು ಅವರೇ ತಮ್ಮ ಸ್ಪರ್ಧೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಹೇಳಿದ ಕಡೆ ನಾನು ಸ್ಪರ್ಧಿಸುತ್ತೇನೆ. ಬಾದಾಮಿ, ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಒತ್ತಾಯ ಮಾಡಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ : ಮಹದಾಯಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್ಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ತಿಳಿಸಿದರು.ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಮಹದಾಯಿ ಕುರಿತು ಕಾಂಗ್ರೆಸ್ ಸಮಾವೇಶ ಮಾಡುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಕಾಮಗಾರಿ ಪ್ರಾರಂಭವಾಗಿದ್ದು. ನಾನು ನೀರಾವರಿ ಸಚಿವನಿದ್ದ ಸಂದರ್ಭದಲ್ಲಿ ಕಾಲುವೆಯನ್ನು 5.5 ಮೀಟರ್ ಗಳಷ್ಟು ನಿರ್ಮಾಣವಾಯಿತು. ಕಾಂಗ್ರೆಸ್ ಏನು ಮಾಡಿದರು ಎಂದು ವಾಗ್ದಾಳಿ ನಡೆಸಿದರು.ಸೋನಿಯಾ ಗಾಂಧಿ ಗೋವಾದಲ್ಲಿ ಒಂದು ಹನಿ ನೀರನ್ನು ತಿರುಗಿಸಲು ಬಿಡುವುದಿಲ್ಲ ಎಂದಿದ್ದರು. ಅವರ ಕಾಲದಲ್ಲಿ ನಾವು ನಿರ್ಮಿಸಿದ್ದ ಕಾಲುವೆಗೆ ಗೋಡೆ ಕಟ್ಟಿದ್ದಾರೆ. ಮಹದಾಯಿ ನೀರನ್ನು ಕರ್ನಾಟಕಕ್ಕೆ ತರುವ ಕಾಲುವೆಗೆ ಗೋಡೆ ಕಟ್ಟಿರುವುದೇ ದೊಡ್ಡ ಸಾಧನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತುಮಕೂರು ಜಿಲ್ಲೆ ತಿಪಟೂರು ಬಂದ್ ಗೆ ಕರೆ ನೀಡಲಾಗಿದೆ. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕ್ಷೇತ್ರ ತಿಪಟೂರು ಬಂದ್ ಗೆ ಕರೆ ನೀಡಲಾಗಿದ್ದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಬಂದ್ ಶಾಂತಿಯುತವಾಗಿ ನಡೆಯುತ್ತಿದೆ. ತಿಪಟೂರು ಹೋರಾಟ ಸಮಿತಿಯ ನೇತೃತ್ವದಲ್ಲಿ ಬಂದ್ ಮಾಡಲಾಗಿದೆ. ಮುಖ್ಯವಾಗಿ ಕೊಬ್ಬರಿ ಬೆಳೆಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಲಾಗಿದೆ. ತಿಪಟೂರಿನಲ್ಲಿ ಅಂಗಡಿ ಮುಂಗಟ್ಟು ಬಂದ್ ಆಗಿವೆ. ಬಂದ್ ಗೆ ವ್ಯಾಪಾರಿಗಳು ಸಂಘಸಂಸ್ಥೆಗಳು ಶಿಕ್ಷಣ ಸಂಸ್ಥೆಗಳು, ಆಟೋಚಾಲಕರು, ಹೋಟಲ್ ಮಾಲೀಕರು ಬೆಂಬಲ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪೋಷಕರ ಜತೆ ಸೇರಿ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ‘ಅನುಭವʼ ಚಿತ್ರದ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ. ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿ ಜೈಲು ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಒಳ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವನ್ನ ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿದ್ದು ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಉಪಸಮಿತಿ ರಚನೆ ಕೇವಲ ಕಣ್ಣೊರೆಸುವ ತಂತ್ರ. ಸದಾಶಿವ ಆಯೋಗ ವರದಿ ಮಂಡನೆಯಾಗಿಲ್ಲ. ಅಸೆಂಬ್ಲಿಯಲ್ಲಿ ವರದಿ ಚರ್ಚೆಯೂ ಆಗಿಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಕೇವಲ ಕಣ್ಣೊರೆಸುವ ತಂತ್ರ ಬೇಡ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ನ (ಬಿಎಸ್‌ಸಿಎಲ್) ಮಹತ್ವಾಕಾಂಕ್ಷಿ ವರ್ಚ್ಯುವಲ್ ಸ್ಮಾರ್ಟ್ ಕ್ಲಿನಿಕ್ (ವಿಎಸ್‌ಸಿ) ಕೇಂದ್ರಗಳ ಯೋಜನೆ ಹೊಸ ವರ್ಷದಿಂದ ಕಾರ್ಯಾರಂಭಗೊಳ್ಳಲಿದೆ. ಬಿಎಸ್‌ಸಿಎಲ್ ಅಧಿಕಾರಿಗಳ ಪ್ರಕಾರ ಈ ಯೋಜನೆಯಡಿ ಒಟ್ಟು ೨೭ ಕೇಂದ್ರಗಳ ಪೈಕಿ ೨೬ ಕೇಂದ್ರಗಳ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿದ್ದು, ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿ ಪ್ರಾಯೋಗಿಕವಾಗಿ ಕಾರ್ಯಾಚರಣೆ ಆರಂಭಿಸಲು ಸಿದ್ಧವಾಗಿದೆ. ಗುಟ್ಟಹಳ್ಳಿಯಲ್ಲಿನ ಪ್ರಾಯೋಗಿಕ ಕೇಂದ್ರದ ಕಾಮಗಾರಿಗಳು ಪೂರ್ಣಗೊಂಡಿದ್ದು, ಕಾರ್ಯಾರಂಭಗೊಳ್ಳಲು ಸಿದ್ಧವಾಗಿದೆ. ಸದಾಶಿವನಗರದಲ್ಲಿರುವ ಜನತಾ ಬಜಾರ್‌ ನಲ್ಲಿ ಸ್ಥಾಪಿಸಿರುವ ಸೆಂಟ್ರಲ್ ಕ್ಲಿನಿಕಲ್ ಕಮಾಂಡ್ ಸೆಂಟರ್ (ಸಿಸಿಸಿಸಿ) ಪೂರ್ಣಗೊಳ್ಳುವುದಕ್ಕಾಗಿ ನಾವು ಕಾಯುತ್ತಿದ್ದೇವೆ. ಅದು ಡಿಸೆಂಬರ್ ೨೦೨೨ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ,” ಎಂದು ಬಿಎಸ್ ಸಿಎಲ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ ಅವರು ತಿಳಿಸಿದ್ದಾರೆ. ಈ ಸ್ಮಾರ್ಟ್ ವರ್ಚ್ಯುವಲ್ ಕ್ಲಿನಿಕ್‌ ಗಳನ್ನು ಬೆಂಗಳೂರು ನಗರದಾದ್ಯಂತ ಇರುವ ೨೭ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತಿವೆ. ಸಿಸಿಸಿ ಕೇಂದ್ರದಲ್ಲಿ ಒಂಬತ್ತು ವಿಶೇಷ ತಜ್ಞ ವೈದ್ಯರ ಸೇವೆಗಳನ್ನು ಲಭ್ಯಗೊಳಿಸಲಾಗುತ್ತದೆ. ಇವರನ್ನು ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ…

Read More

ಸಾಮಾನ್ಯವಾಗಿ, ಗರ್ಭಾವಸ್ಥೆಯಲ್ಲಿ ಆಹಾರವನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಮಹಿಳೆಯರು ತುಂಬಾ ಗೊಂದಲಕ್ಕೊಳಗಾಗುತ್ತಾರೆ. ಯಾವ ಆಹಾರ ಸೇವಿಸಬೇಕು, ಯಾವ ಆಹಾರ ಸೇವಿಸಬಾರದು ಎಂಬ ಪ್ರಶ್ನೆಗಳು ಸಾಮಾನ್ಯ. ಈ ಪ್ರಶ್ನೆಗಳಿಗೆ ಉತ್ತರವೇ ಈ ಪೋಸ್ಟ್. ಈ ಕೆಳಗೆ ನೀಡಿರುವ ಆಹಾರಗಳನ್ನು ಹೆಚ್ಚು ಸೇವಿಸುವುದರಿಂದ ಮಗುವಿಗೆ ಬೇಕಾದ ಆರೋಗ್ಯವು ನಷ್ಟವಿಲ್ಲದೆ ಸಿಗುತ್ತದೆ. ಆ ರೀತಿಯಲ್ಲಿ, ಗರ್ಭಾವಸ್ಥೆಯಲ್ಲಿ, ಮಹಿಳೆಯರು ಹೆಚ್ಚು ಹಾಲು, ಕಾಳುಗಳು, ಕಬ್ಬು, ಸಾಲ್ಮನ್, ಮೊಟ್ಟೆ, ಕೋಸುಗಡ್ಡೆ ಮತ್ತು ಹಸಿರು ಎಲೆಗಳು, ಹಣ್ಣುಗಳು, ಧಾನ್ಯಗಳು, ಆವಕಾಡೊ, ಒಣ ಹಣ್ಣುಗಳನ್ನು ತಿನ್ನಬೇಕು. ಬೇಯಿಸದ ಹಸಿರು ತರಕಾರಿ, ಬಿಸಿಯಾದ ಹಾಲು, ಯಕೃತ್ತು, ಆಲ್ಕೊಹಾಲ್ಯುಕ್ತ ಪಾನೀಯಗಳು, ಕಾಫಿ, ಚಹಾವನ್ನು ಸಂಪೂರ್ಣವಾಗಿ ತ್ಯಜಿಸಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More