Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಆರ ಪಿ ಐ ನಗರದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಆರ. ಪಿ .ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ವೆಂಕಟ ಸ್ವಾಮಿ ಮಾತನಾಡುತ್ತಾ ಬೆಳಗಾವಿ ಹಾಗೂ ಕರ್ನಾಟಕದಲ್ಲಿ ಆರ ಪಿ ಐ ಪಕ್ಷ ಒಂದು ಭೀಮ ಶಕ್ತಿ ಯಾಗಿ ಹೊರ ಹೊಮ್ಮುತ್ತಿದೆ ಎಂದರು. 2023ರ ಚುನಾವಣೆಯ ಮುಂಚಿತವಾಗಿ ನಾವು ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ. ಅದರ ಅಂಗವಾಗಿ ಬೆಳಗಾವಿಯಲ್ಲಿ ಮಾಜಿ ಕಾರ್ಪೊರೇಟರ್ ಹಾಗೂ ಜನಸೇವಕರಾದ ಶಿವ ಲಿಂಬುಜಿ ಚೌಗುಲೆ .ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಅವರಿಗೆ ನಾವು ಜಿಲ್ಲಾ ಉಸ್ತುವಾರಿ ಹಾಗೂ ಚುನಾವಣೆಯ ಮಹತ್ವದ ಜವಾಬ್ದಾರಿಗಳನ್ನು ಶಿವ ಲಿಂಬುಜಿ ಚೌಗುಲೆ ಅವರಿಗೆ ನೀಡಲಿದ್ದೇವೆ. ಇದೇ ವೇಳೆ ಮಾತನಾಡುತ್ತಾ ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟದಲ್ಲಿ ನಾವಿದ್ದು ನಮ್ಮ ರಾಜ್ಯಾಧ್ಯಕ್ಷರಾದ ರಾಮದಾಸ್ ಸಟೋಲೆ ಮಂತ್ರಿ ಕೂಡ ಇದ್ದಾರೆ. 2023ರ ಚುನಾವಣೆಯಲ್ಲಿ ನಾವು ಭಾರತೀಯ ಜನತಾ ಪಕ್ಷದ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲಿದ್ದೇವೆ. ನಮ್ಮ ಸ್ಪಷ್ಟವಾದ ಉದ್ದೇಶ ಕಾಂಗ್ರೆಸ್ ರಾಜ್ಯದಲ್ಲಿ…
ಸಂಜಯ ಗೂಡಾವಥ ಗ್ರೂಪ್ 2013 ರಿಂದ ಪ್ರಾರಂಭವಾಗಿದ್ದು ತನ್ನ ಗ್ರಾಹಕ ಕೇಂದ್ರ ವ್ಯಾಪಾರ ನೀತಿಗಳ ಮೂಲಕ ಸಂಸ್ಥೆ ಲಕ್ಷಾಂತರ ಜನರಿಗೆ ಪ್ರೀಯವಾಗಿದೆ. ಈ ಸಂಸ್ಥೆಯಿಂದ ಕರ್ನಾಟಕ ದಲ್ಲಿ ಕಿರಾಣಿ ಅಂಗಡಿಗಳ ಸಮಕಾಲೀನ ವ್ಯಾಪಾರಿಗಳು ಹಾಗೂ ಲೇಔಟ್ ಮೂಲಕ ತನ್ನ ಉತ್ಪನ್ನಗಳ ಲಾಭ ಆಗುವಂತೆ ಮಾಡುವ ಜಿಸಿಎಲ್ ತನ್ನ ಗ್ರಾಹಕರ ಮಾರುಕಟ್ಟೆ ವ್ಯಾಪ್ತಿಯನ್ನು ಹೆಚ್ಚಿಸಲು ಉದ್ದೇಶಿಸಿದೆ, ಜಿ ಸಿ ಎಲ್ ನಿರಂತರ ಉತ್ಪನ್ನ ನಾಮಿನೇತೇ ಸ್ಪರ್ಧಾತಕ ಬೆಲೆ ಮತ್ತು ಗುಣಮಟ್ಟವನ್ನು ಸೃಷ್ಟಿಸುವ ಮೂಲಕ ತನ್ನದೇ ಆದ ವಿಶಿಷ್ಟವಾದ ಬ್ರಾಂಡ್ ವನ್ನು ಗುರುತಿಸಿ ಸೃಷ್ಟಿಸಿಕೊಂಡಿದೆ. ಈಗ ಬೆಳಗಾವಿ ಮತ್ತು ಹುಬ್ಬಳ್ಳಿ ಇಂದ ಕರ್ನಾಟಕದಲ್ಲಿ ಪ್ರಾರಂಭ ಮಾಡಲಿದ್ದು ಸಣ್ಣ ವ್ಯಾಪಾರಸ್ಥರಿಂದ ಎಲ್ಲಾ ವ್ಯಾಪಾರಸ್ಥರುಗಳಿಗೆ ನಾವು ನಮ್ಮ ಪ್ರಾಡಕ್ಟ್ ವಿತರ್ಣಗಳನ್ನು ಮಾಡಲಿದ್ದೇವೆ ನಮ್ಮ ಗ್ರಾಹಕರ ಸಂತೃಪ್ತಿಯ ನಮ್ಮ ದಯವಾಗಲಿದೆ.ಎಂದು ಜಿ ಸಿ ಎಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋನಾಲಿ ಗೋಡಾವಥ ಬೆಳಗಾವಿ ನಗರದ ಯು ಕೆ 27 ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ತಿಳಿಸಿದರು. ಮುಂದಿನ ದಿನಗಳಲ್ಲಿ…
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಖುರ್ದ ಗ್ರಾಮದ ಶ್ರೀ ಗ್ರಾಮದೇವತೆ ಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ದೇವಿಯ ಉಡಿ ತುಂಬಿ ಆಶೀರ್ವಾದ ಪಡೆದರು. ಈ ಸಮಯದಲ್ಲಿ ಸಿದ್ರಾಯಿ ಪಾಟೀಲ, ಕಲ್ಲಪ್ಪ, ಮಹೇಶ. ಪಾಟೀಲ, ರಂಜನಾ ಗಿರಿಯಾಲ್ಕರ್, ಭಾರತಾ ಪಾಟೀಲ, ಮಾರುತಿ ಕೂನಸಿನಕೊಪ್ಪ, ಶಿವಬಸ್ಸು ಚಚಡಿ ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದ ಆವರಣದಲ್ಲಿ ಜನ ಸಂಪರ್ಕ ಸಭೆ ಹಾಗೂ ಕೆ.ಸಿ.ನಾರಾಯಣಗೌಡ ಅಭಿಮಾನಿ ಬಳಗದ ವತಿಯಿಂದ ಹೋಬಳಿ ಮಟ್ಟದ ಬೃಹತ್ ಸಮಾವೇಶ ನಡೆಯಿತು. ಗಣ್ಯರೊಂದಿಗೆ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಚಿವ ನಾರಾಯಣಗೌಡ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ಯಾರು ತಂದೆ ತಾಯಿ ಸೇವೆ ಮಾಡುತ್ತಾರೋ ಅಂಥವರಿಗೆ ದೇವರು ಉತ್ತಮ ಭವಿಷ್ಯ ಕೊಡುತ್ತಾನೆ. ಅದಕ್ಕೆ ಉದಾಹರಣೆಯಾಗಿ ನಾನೇ ಸಾಕ್ಷಿ ಎಂದರು. ಕ್ಷೇತ್ರಕೆ ಯಾರೇ ಬರಲಿ ಅಭಿವೃದ್ಧಿ ಕೆಲಸ ಆಗಿಲ್ಲ ಅನ್ನುತ್ತಾರೆ. ಆದರೆ ಇಲ್ಲಿ ಯಾರು ಕಣ್ಣಿಗೆ ಪಟ್ಟಿ ಕಟ್ಟಿಕೊಂಡಿಲ್ಲ, ಮತದಾರ ದೇವರುಗಳು ನಿಮಗೆ ಗೊತ್ತು. ರಾಜಕೀಯದಲ್ಲಿ ಇರಬೇಕಾ ಇರಬಾರದೆಂದು ತೀರ್ಮಾನ ನಿಮ್ಮದು. ಗೂಂಡ ರಾಜಕಾರಣಿಗಳಿಗೆ ಭಯಪಡುವ ಅಗತ್ಯ ಇಲ್ಲ ಆದರಿಂದ ಈ ತಾಲ್ಲೂಕನ್ನು ಮಾದರಿ ತಾಲ್ಲೂಕನ್ನಾಗಿ ಮಾಡಬೇಕಾದರೆ, ಈ ಸಲ ನನಗೆ ಆಶೀರ್ವದಿಸಿ ಎಂದು ಅವರು ಮತದಾರರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾದ ವಾಸು, ಪಕ್ಷದ ಮುಖಂಡರುಗಳಾದ ಅಂಬರೀಶ್, ಮಂಜಣ್ಣ,…
ಕೊರಟಗೆರೆ : ಮಧುಗಿರಿ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ಕೊರಟಗೆರೆ ,ಮಧುಗಿರಿ,ಸಿರಾ, ಪಾವಗಡದ ಯುವ ಮೋರ್ಚಾ ಸಮಾವೇಶವನ್ನು ಮಾರ್ಚ್ 12 ರಂದು ಕೊರಟಗೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಒಕ್ಕೊರಲಿನಿಂದ ಏರ್ಪಡಿಸಲಾಗಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಘಟಕದ ಅದ್ಯಕ್ಷ ಬಿ.ಕೆ ಮಂಜುನಾಥ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾದ್ಯಕ್ಷ ಬಿ. ಕೆ.ಮಂಜುನಾಥ್ ಮಾತನಾಡಿ 2023 ರ ಚುನಾವಣೆಯಲ್ಲಿ ಪಾವಗಡ, ಮಧುಗಿರಿ, ಕೊರಟಗೆರೆ, ಸಿರಾ ವಿಧಾನ ಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 12 ರಂದು ಕೊರಟಗೆರೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಯುವ ಮೋರ್ಚಾ ಸಮಾವೇಶ ಒಕ್ಕೊರಲಿನಿಂದ ಏರ್ಪಡಿಸಲಾಗಿದ್ದು ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ,ರಾಜ್ಯಸಭಾ ಸದಸ್ಯ ನಟ ಜಗ್ಗೇಶ್, ಸಂದೀಪ್ , ನವೀನ್ ಕುಮಾರ್, ಮಾಜಿ ಸಂಸದ ಮುದ್ದಹನುಮೇಗೌಡ ಸೇರಿದಂತೆ ಹಲವಾರು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಬಾರತೀಯ ಜನತಾ ಪಕ್ಷಕ್ಕೆ ಹೆಚ್ಚು ಹೆಚ್ಚಾಗಿ ಯುವಕರನ್ನು ಪಕ್ಷಕ್ಕೆ ಕರೆತಂದು ಪಕ್ಷವನ್ನು ಗಟ್ಟಿಗೊಳಿಸುವ ಉದ್ದೇಶದಿಂದ…
ನಾವು ತಿನ್ನುವ ಆಹಾರಕ್ಕೂ ಹೃದಯದ ಆರೋಗ್ಯಕ್ಕೂ ನಿಕಟ ಸಂಬಂಧವಿದೆ. ಕೊಬ್ಬಿನಂಶವಿರುವ ಆಹಾರಗಳು, ಹೆಚ್ಚಿನ ಉಪ್ಪು ಇತ್ಯಾದಿಗಳು ಹೃದಯದ ಆರೋಗ್ಯವನ್ನು ಕೆಡಿಸುತ್ತವೆ. ಹೃದಯದ ಆರೋಗ್ಯವು ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಉರಿಯೂತದಂತಹ ಅನೇಕ ಅಂಶಗಳಿಂದ ಪ್ರಭಾವಿತವಾಗಿರುತ್ತದೆ. ಒಳ್ಳೆಯ ಆಹಾರವನ್ನು ಸೇವಿಸುವುದರಿಂದ ಹೃದಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಮನಃಪೂರ್ವಕವಾಗಿ ಸೇವಿಸಬಹುದಾದ ಕೆಲವು ಆಹಾರಗಳ ಪರಿಚಯ ಮಾಡಿಕೊಳ್ಳೋಣ. ಕಿತ್ತಳೆ ಕಿತ್ತಳೆಯಲ್ಲಿರುವ ಪೆಕ್ಟಿನ್ ಎಂಬ ಫೈಬರ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಒಳ್ಳೆಯದು. ಕಿತ್ತಳೆ ರಕ್ತನಾಳಗಳ ಆರೋಗ್ಯಕ್ಕೆ ಒಳ್ಳೆಯದು ಎಂದು ಅಧ್ಯಯನಗಳು ತೋರಿಸಿವೆ. ಹಸಿರು ಎಲೆಗಳ ಸೊಪ್ಪು ಅನೇಕ ಜೀವಸತ್ವಗಳು ಮತ್ತು ಖನಿಜಗಳ ಉಗ್ರಾಣವಾಗಿದೆ. ಎಲೆಗಳ ಹಸಿರುಗಳಲ್ಲಿನ ಆಹಾರ ನೈಟ್ರೇಟ್‌ಗಳು ರಕ್ತದೊತ್ತಡವನ್ನು ಕಡಿಮೆ ಮಾಡುತ್ತವೆ. ಟೊಮೆಟೊ ಟೊಮೆಟೊದಲ್ಲಿ ಕಂಡುಬರುವ ಲೈಕೋಪೀನ್ ಎಂಬ ವಸ್ತುವು ಉರಿಯೂತದಿಂದ ಉಂಟಾಗುವ ಹಾನಿಯನ್ನು ಸರಿಪಡಿಸಲು ಮತ್ತು ಹೃದಯದ ಆರೋಗ್ಯವನ್ನು ರಕ್ಷಿಸಲು ಒಳ್ಳೆಯದು. ಬೆಳ್ಳುಳ್ಳಿ ಬೆಳ್ಳುಳ್ಳಿಯನ್ನು ಅಡುಗೆಮನೆಯಲ್ಲಿ ವಿವಿಧ ಕಾಯಿಲೆಗಳಿಗೆ ಔಷಧಿ ಎಂದು ಕರೆಯಲಾಗುತ್ತದೆ. ಬೆಳ್ಳುಳ್ಳಿಯಲ್ಲಿ ಕಂಡುಬರುವ ಆಲಿಸಿನ್ ಎಂಬ ವಸ್ತುವು…
ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿದಿದ್ದಾರೆ. ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಜೀವ್ ಕುಮಾರ್ ಅವರ ತಂಡದಲ್ಲಿ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ , ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿಗಳಾಗಿರುವ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ, ಡಿಜಿಪಿ ಮತ್ತು ಐಜಿ ಪ್ರವೀಣ್…
ಪಂಚರತ್ನಯಾತ್ರೆ ಮತ್ತು ನಮ್ಮ ಪಕ್ಷದ ಬೆಳವಣಿಗೆಯಿಂದ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಆತಂಕ ಶುರುವಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ನುಡಿದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಗುಂದ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೆಡಿಎಸ್ ಅನ್ನು ಕಾಂಗ್ರೆಸ್ ನ ಬಿ ಟೀಂ ಎನ್ನುತ್ತಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪದೇಪದೇ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎನ್ನುತ್ತಾರೆ. ಆದರೆ, ನಾವು ನಾಡಿನ ಜನತೆಯ ಬಿ ಟೀಂ ಎಂದು ಹೇಳಿದ್ದೇವೆ. ಬಿಜೆಪಿ ಹಾಗೂ ಕಾಂಗ್ರೆಸ್ ಗೆ ನಮ್ಮ ಪಕ್ಷದ ಬೆಳವಣಿಗೆಯಿಂದ ಆತಂಕವಾಗಿದೆ. ನಾವು ಪಂಚರತ್ನ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದೇವೆ. ಇದರಿಂದ ಎರಡು ರಾಷ್ಟ್ರೀಯ ಪಕ್ಷಗಳು ಕಂಗಾಲಾಗಿವೆ ಎಂದು ಟೀಕಿಸಿದರು. ನಮ್ಮ ಭದ್ರಕೋಟೆಯನ್ನು ಛಿದ್ರ ಮಾಡುತ್ತೇವೆ ಅಂತ ಹೊರಟಿದ್ದಾರೆ. ಆದರೆ, ಹೆಚ್ಡಿ ದೇವೇಗೌಡರು ಬೆಳಿಸಿರುವ ಲಕ್ಷಾಂತರ ಕಾರ್ಯಕರ್ತರು ಇದ್ದಾರಲ್ಲ, ಅವರು ನಮ್ಮ ಶಕ್ತಿ. ಅವರು ಇರುವ ವರೆಗೂ ಈ ಪಕ್ಷಕ್ಕೆ ಅವರು ಯಾರಿಂದಲೂ ಏನೂ…
ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಕೆಲವು ದಿನಗಳಲ್ಲಿ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಮಧ್ಯೆ ಮತದಾರರ ಓಲೈಕೆಗಾಗಿ ರಾಜಕಾರಣಿಗಳು ಏನೆಲ್ಲಾ ಪ್ಲಾನ್ ಮಾಡುತ್ತಾರೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಅಂತೆಯೇ ಜಾತಿರಾಜಕಾರಣದ ಓಲೈಕೆಗಾಗಿ ಶಾಸಕರೊಬ್ಬರು ದೇವರ ಹುಂಡಿ ಹಣದಲ್ಲಿ ಸಮುದಾಯ ನಿರ್ಮಾಣ ಹಾಗೂ ಶಾದಿ ಮಹಲ್ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರಸ್ತಾಪ ಸಲ್ಲಿಸಿದ್ದು ಸಿಎಂ ಕೂಡ ಪ್ರಸ್ತಾಪಕ್ಕೆ ಸಮ್ಮತಿ ಸೂಚಿಸಿರುವ ವಿಚಾರ ಬಹಿರಂಗವಾಗಿದೆ. ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ಈ ರೀತಿ ಪ್ರಸ್ತಾಪವನ್ನಿಟ್ಟಿದ್ದಾರೆ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಲ್ಲಿ ಸಾಕಷ್ಟು ಅನುದಾನವಿದ್ದು, ಈ ಹಣವನ್ನ ಬಳಸಿ ಶಾದಿ ಮಹಲ್ ಸಮುದಾಯ ಭವನ ಸೇರಿ ವಿವಿಧ ಕಾಮಗಾರಿಗಳನ್ನ ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಬಳಿ ಪ್ರಸ್ತಾಪವಿಟ್ಟಿದ್ದಾರೆ. ಶಾಸಕ ಹರ್ಷವರ್ದನ್ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಕೂಡ ಸೈ ಎಂದು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಮುಜರಾಯಿ ಇಲಾಖೆ ಕಾಯ್ದೆ ಪ್ರಕಾರ ಯಾವುದೇ ದೇವಸ್ಥಾನದ ಹುಂಡಿ ಹಣವನ್ನು ಆ ದೇಗುಲದ ಅಭಿವೃದ್ಧಿಗೆ ಮಾತ್ರ…
ದೆಹಲಿ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮನೀಶ್ ಸಿಸೋಡಿಯಾ ಅವರನ್ನು ನಿರ್ದೇಶನಾಲಯ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ತಿಹಾರ್ ಜೈಲಿನಲ್ಲಿ ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಕಳೆದ ವಾರ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಸಿಸೋಡಿಯಾ ಅವರನ್ನು ನಿನ್ನೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆ ನಂತರವೇ ಇಡಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಕಳೆದ ನವೆಂಬರ್‌ನಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಿದ ದೆಹಲಿ ಅಬಕಾರಿ ನೀತಿಯೇ ವಿವಾದದ ಮೂಲ. ನೀತಿ ನಿರೂಪಣೆ ಮತ್ತು ಅನುಷ್ಠಾನದಲ್ಲಿ ಅವ್ಯವಹಾರ ನಡೆದಿದೆ ಎಂಬ ಮುಖ್ಯ ಕಾರ್ಯದರ್ಶಿ ವರದಿ ಕುರಿತು ರಾಜ್ಯಪಾಲರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ. ಮದ್ಯ ನೀತಿಯಲ್ಲಿನ ಅವ್ಯವಹಾರದ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಅಬಕಾರಿ ಸಚಿವ ಸಿಸೋಡಿಯಾ ಸೇರಿದಂತೆ 15 ಜನರ ವಿರುದ್ಧ ಎಫ್‌ಐಆರ್ ಸಿದ್ಧಪಡಿಸಲಾಗಿದೆ. ನಂತರ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ವಿವಾದಗಳ ನಡುವೆಯೇ ಸರ್ಕಾರ ಮದ್ಯ…