Author: admin

ಅಶ್ಲೀಲ ಚಿತ್ರ ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಾಜ್ ಕುಂದ್ರಾ ಮಾತ್ರವಲ್ಲದೇ ಈ ಪ್ರಕರಣದಲ್ಲಿ ನಟಿಯರಾದ ಶೆರ್ಲಿನಾ ಚೋಪ್ರಾ, ಪೂನಂ ಪಾಂಡೆಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನು ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ನೀಡಲಾಗಿದೆ. ಮಗೆ ನಿರೀಕ್ಷಣಾ ಜಾಮೀನು ಸಿಗುವತನಕ ಮುಖಮುಚ್ಚಿಕೊಂಡೇ ಓಡಾಡುವುದಾಗಿ ಶಪಥ ಮಾಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹೆಚ್.ಡಿ.ಕೋಟೆ: ತಾಲೂಕಿನ ನುಗು ಬಿರ‍್ವಾಳು ಗ್ರಾಮದ ಶ್ರೀ ಕಾಳಮಂಟೇಶ್ವರ ದೇವಸ್ಥಾನ ಮುಂಭಾಗದಲ್ಲಿ ಶ್ರೀ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. ಮಹೋತ್ಸವದ ಅಂಗವಾಗಿ ದೇವಸ್ಥಾನವನ್ನು ವಿವಿಧ ಬಗೆಯ ಬಣ್ಣಗಳಿಂದ ಬಳಿದು ಸಿಂಗಾರಿಸಲಾಗಿತ್ತು. ದೇವಸ್ಥಾನವನ್ನು ವಿದ್ಯುತ್ ದೀಪಾಲಂಕಾರಗೊಳಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೋರಣ ಕಟ್ಟಿ ಮಧುವಣಗಿತ್ತಿಯಂತೆ ಅಲಂಕೃತಗೊಳಿಸಲಾಗಿತ್ತು. ವಾದ್ಯಗೋಷ್ಠಿಗಳು ಮೊಳಗಿದವು. ಬೆಳಗ್ಗೆ 7 ಕ್ಕೆ ದೇವರಿಗೆ ಗಣಪತಿ ಪೂಜೆ, ವಿವಿಧ ಹೋಮ ಹವನಗಳು ನಡೆದವು. ದೇವರ ಉತ್ಸವ ಮೂರ್ತಿಯನ್ನು ಗಂಗೆಸ್ನಾನ ಮಾಡಿಸಿ, ನಂತರ ದೇವಸ್ಥಾನದ ಬಳಿಗೆ ಕರೆತಂದು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬಸವೇಶ್ವರ ಮೂರ್ತಿಯನ್ನೂ ಪ್ರತಿಷ್ಠಾಪಿಸಿ, ಮಹಾಮಂಗಳಾರತಿ ನಡೆಸಲಾಯಿತು. ಭಕ್ತರು ದಾರಿಯುದ್ದಕ್ಕೂ ದೇವರ ಭಜನೆ ನಡೆಸಿಕೊಟ್ಟರು. ನುಗು ಜಲಾಶಯದ ನಾಲೆ ಸಮೀಪದಲ್ಲೇ ದೇವಸ್ಥಾನವಿರುವುದರಿಂದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹರಕೆ ತೀರಿಸಿದರು. ಬಿಜೆಪಿ ಮುಖಂಡ ಡಾ.ಎಚ್.ವಿ.ಕೃಷ್ಣಸ್ವಾಮಿ, ಆಪ್ತ ಕಾರ್ಯದರ್ಶಿ ಶಿವಕುಮಾರ್, ಹೊಸ ಬಿರ‍್ವಾಳು, ನುಗು ಬಿರ‍್ವಾಳು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ವರದಿ:…

Read More

ಕರ್ನಾಟಕ ಸರ್ಕಾರವು, ದುರ್ಬಲ ವರ್ಗಗಳ ಜನರಿಗೆ, ಅದರಲ್ಲಿಯೂ ವಿಶೇಷವಾಗಿ ಕೊಳಗೇರಿ ನಿವಾಸಿಗಳು, ದಿನಗೂಲಿ ನೌಕರರು ಹಾಗೂ ಸಮಾಜದ ಆರ್ಥಿಕವಾಗಿ ಬಲಹೀನವಾಗಿರುವ ಸಮಾಜದ ಜನರಿಗೆ ಪ್ರಾಥಮಿಕ ಆರೋಗ್ಯಸೇವಾ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ, ಡಿಸೆಂಬರ್ 14(ನಾಳೆ) ರಂದು 114 ‘ನಮ್ಮ ಕ್ಲಿನಿಕ್’ಗಳನ್ನು ಉದ್ಘಾಟಿಸಲಿದೆ. ಈ ಚಿಕಿತ್ಸಾಲಯಗಳಲ್ಲಿ 12 ವಿವಿಧ ರೀತಿಯ ಆರೋಗ್ಯ ಸೇವೆಗಳು ಲಭ್ಯವಿದ್ದು, ಪ್ರತಿ ಕ್ಲಿನಿಕ್‌ ನಲ್ಲಿ ಓರ್ವ ವೈದ್ಯಕೀಯ ಅಧಿಕಾರಿ, ಓರ್ವ ಶುಶ್ರೂಷಕಿ, ಲ್ಯಾಬ್ ಟೆಕ್ನಿಷಿಯನ್ ಹಾಗೂ ಓರ್ವ ‘ಡಿ’ ಗ್ರೂಪ್ ಕಾರ್ಮಿಕರಿರುತ್ತಾರೆ.ಈ ಯೋಜನೆಗೆ ರೂ.೧೫೦ ಕೋಟಿ ವೆಚ್ಚವಾಗಲಿದ್ದು, ಬಹುಪಾಲು ಕ್ಲಿನಿಕ್‌ ಗಳು ಸರ್ಕಾರಿ ಕಟ್ಟಡಗಳಲ್ಲಿ ಕಾರ್ಯನಿರ್ವಹಣೆಯನ್ನು ಆರಂಭಿಸಲಿದೆ. “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14ರಂದು ಈ ‘ನಮ್ಮ ಕ್ಲಿನಿಕ್’ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಆರಂಭದಲ್ಲಿ ರಾಜ್ಯಾದ್ಯಂತ ಒಂದೇ ಬಾರಿಗೆ 114 ಕ್ಲಿನಿಕ್‌ ಗಳನ್ನು ಉದ್ಘಾಟಿಸಲಾಗುವುದು. ಇದು ಚರಿತ್ರೆಯಲ್ಲೇ ಮೊಟ್ಟ ಮೊದಲ ಬಾರಿಗೆ ಒಟ್ಟಿಗೆ ೧೦೦ಕ್ಕೂ ಹೆಚ್ಚು ಸಂಖ್ಯೆಯ ಕ್ಲಿನಿಕ್‌ ಗಳನ್ನು ಉದ್ಘಾಟಿಸುತ್ತಿರುವ ಕಾರ್ಯಕ್ರಮವಾಗಿದೆ. ಇದು ಸಾರ್ವಕಾಲಿಕ ದಾಖಲೆಯಾಗಲಿದೆ,” ಎಂದು ಆರೋಗ್ಯ…

Read More

ಬೆಂಗಳೂರಿನಲ್ಲಿ ಇಂದಿನಿಂದ ಜಿ 20 ಶೃಂಗಸಭೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಹೊರವಲಯದಲ್ಲಿರುವ ದೇವನಹಳ್ಳಿಯ ಪ್ರೆಸ್ಟಿಜ್ ಗಾಲ್ಪ್ ಶೈರ್ ಜೆಡಬ್ಯ್ಲೂ ಮ್ಯಾರಿಯಟ್ ಹೋಟೆಲ್ ನಲ್ಲಿ ಶೃಂಗಸಭೆ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹಲವು ದೇಶಗಳ ಹಣಕಾಸು ಕಾರ್ಯದರ್ಶಿ ಗಳು ಸೇರಿದಂತೆ ಹಲವು ಗಣ್ಯರು ಜಿ20 ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಅತಿಥಿಗಳ ಭದ್ರತೆಗೆ 6 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸುಮಾರು 700 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಐದು ದಿನ ಈ ಸಭೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು : ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ, ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಕೂಡ ಚರ್ಚೆ ನಡೆಸಲಿದ್ದೇನೆ ಎಂದರು. ಗಡಿ ವಿವಾದದ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನು ಗೃಹ ಸಚಿವರ ಮುಂದಿಡುತ್ತೇನೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpagaxhmLTkOnd50sAy

Read More

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ಪೊಲೀಸ್ ತಂಡ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದ್ದಾರೆ. ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವ ವೇಳೆ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ರಾಜಾ ಪಟೇರಿಯಾ ವಿವಾದ ಸೃಷ್ಟಿಸಿದ್ದರು. ಅಂದಹಾಗೆ ರಾಜಾ ಪಟೇರಿಯಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ : ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ಅಂತಹದೇ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ್ ಬೈಪಾಸ್ ಬಳಿ ನಡೆದಿದೆ.ತಂದೆಯನ್ನೇ ಹತ್ಯೆ ಮಾಡಿ 30 ತುಂಡುಗಳನ್ನು ಜಮೀನು ಒಂದರ ನಿರುಪಯುಕ್ತ ಬೋರ್ವೆಲ್ ನಲ್ಲಿ ಹಾಕಿದ್ದಾನೆ. 54 ವರ್ಷದ ಪರಶುರಾಮ ಕುಳಲಿ ಕೊಲೆಯಾದ ವ್ಯಕ್ತಿ. ಅವರ ಪುತ್ರ ವಿಠ್ಠಲ್(20) ಕೊಲೆ ಆರೋಪಿಯಾಗಿದ್ದಾನೆ.ಸಿಪಿಐ ಅಯ್ಯನಗೌಡ ಪಾಟೀಲ, ಎಸ್ಐ ಸಂಗಮೇಶ ಹೊಸಮನಿ, ಕ್ರೈಂ ಪಿಎಸ್ಐ ಕೆ.ಬಿ. ಮಾಂಗ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಪರಶುರಾಮ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ವಿಠ್ಠಲ್ ಕೊಲೆ ಮಾಡಿ ನಿರುಪಯುಕ್ತ ಬೋರ್ವೆಲ್ ನಲ್ಲಿ ಅಂಗಾಂಗಗಳನ್ನು ಹಾಕಿದ್ದಾನೆ ಎನ್ನುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಹೊಸದುರ್ಗ : ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೊಸದುರ್ಗ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಮುಂಬರುವ ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಇನ್ನು ಈ ವರ್ಷವೂ 100 ಪದವಿ ಪೂರ್ವ ಕಾಲೇಜು ಹಾಗೂ 100 ಪ್ರೌಢಶಾಲೆಗಳನ್ನು ಕೊಟ್ಟಿದ್ದೇವೆ. ಎಲ್ಲಿ ಶಾಲೆ ಹಾಗೂ ಕಾಲೇಜು ಅವಶ್ಯಕತೆ ಇದೆಯೋ ಅಲ್ಲಿ ನೂತನವಾಗಿ ಆರಂಭವಿಸಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಮಾಂಡೌಸ್​ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಶೀತ ಗಾಳಿ ವರದಿಯಾಗಿದ್ದು, ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರೆಯುವ ಸಾಧ್ಯತೆಯಿದೆ. ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಲ್ಲಿಗೆ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಾಗೂ ಮುಂಬರುವ ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು, ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಆರೋಗ್ಯ ಇಲಾಖೆ ಬಿಡುಗಡೆ ಮಾಡುತ್ತಿರುವ ಸಲಹೆಗಳನ್ನು ಪಾಲಿಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅರುಣಾಚಲ ಪ್ರದೇಶ : ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಉಭಯ ದೇಶಗಳ ಸೈನಿಕರು ಗಾಯಗೊಂಡಿದ್ದಾರೆ. ತವಾಂಗ್ ಬಳಿ ಡಿಸೆಂಬರ್ 9 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 2021ರಲ್ಲಿ, ಅರುಣಾಚಲ ಪ್ರದೇಶದ ಯಾಂಗ್ಸೆಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ವಿವಾದವಿತ್ತು. 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಜೂನ್ 15, 2020ರ ಘಟನೆಯ ನಂತರ ಇದೇ ಮೊದಲನೆಯದು. ನಂತರ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು ಮತ್ತು ಅನೇಕರು ಗಾಯಗೊಂಡರು. ಈ ಚಕಮಕಿಯಲ್ಲಿ ಚೀನಾದ ಹಲವು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಅಕ್ಟೋಬರ್ 2021ರಲ್ಲಿ, ಕೆಲವು ಚೀನೀ ಸೈನಿಕರನ್ನು ಯಾಂಗ್ಸೆಯಲ್ಲಿ ಕೆಲವು ಗಂಟೆಗಳ ಕಾಲ ಭಾರತೀಯ ಸೈನಿಕರು ಬಂಧಿಸಿದಾಗ ಇದೇ ರೀತಿಯ ಘಟನೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More