Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಕಾಂಗ್ರೆಸ್ ನಾಯಕ ಇತ್ತೀಚೆಗೆ ದೇಶಾದ್ಯಂತ ಭಾರತ್ ಜೋಡೋ ಪಾದಯಾತ್ರೆ ಮಾಡಿದ್ದು ಯಶಸ್ವಿಯಾಗಿತ್ತು. ಈ ಯಾತ್ರೆ ಕುರಿತು ಮಾತನಾಡಿ ಕಾಂಗ್ರೆಸ್ ಟೀಕಿಸಿರುವ ಬಿ.ಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಟಾಂಗ್ ಕೊಟ್ಟರು. ಬೆಳಗಾವಿ ರಾಯಭಾಗದಲ್ಲಿ ಬಿಜೆಪಿ ಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ತ್ರಿಪುರಾ ನಾಗಲ್ಯಾಂಡ್ ಸೇರಿ ಮೂರು ಕಡೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೋದಿ ಎಲ್ಲಾ ಧರ್ಮದವರನ್ನ ಸಮಾನವಾಗಿ ನೋಡಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರನ್ನೂ ಸಮಾನವಾಗಿ ನೋಡಿದ್ದಾರೆ. ಒಂದು ದಿನವೂ ಅವರು ವಿಶ್ರಾಂತಿ ಪಡೆದಿಲ್ಲ ಎಂದು ತಿಳಿಸಿದರು. ಟಿಕೆಟ್ ನೀಡುವ ವಿಚಾರವನ್ನ ಹೈಕಮಾಂಡ್ ತಿರ್ಮಾನಿಸುತ್ತದೆ. ಹೈಕಮಾಂಡ್ ಹಾಗೂ ಚುನಾವಣಾ ಸಮಿತಿಯಲ್ಲಿ ಚರ್ಚೆಯಾದ ಬಳಿಕ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ನಿರ್ಧಾರವಾಗುತ್ತದೆ. ಇಲ್ಲಿನ ವಾಸ್ತವಿಕ ಸ್ಥಿತಿಯನ್ನ ತಿಳಿದುಕೊಂಡು ಹೈಕಮಾಂಡ್ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದು ಬಿಎಸ್ ವೈ ತಿಳಿಸಿದರು. ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತೇವೆ ಎಂದು ಕನಸು…
ಬೀದರ್: ತಾಲ್ಲೂಕಿನ ಬಗದಲ್ ಗ್ರಾಮದ 30ಕ್ಕೂ ಹೆಚ್ಚು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಜಿ ಶಾಸಕ ಅಶೋಕ ಖೇಣಿ ಅವರು ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು. ಕಾರ್ಯಕರ್ತರಿಗೆ ಸ್ಪಂದನೆ ದೊರಕದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದೇವೆ ಎಂದು ಮುಖಂಡ ಕಾರ್ತಿಕ ದೇಸಾಯಿ ಹೇಳಿದರು. ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಮುಖಂಡರಾದ ಸಂತೋಷ ಪಾಟೀಲ, ಉದಯಕುಮಾರ ಚಟ್ನಳ್ಳಿ, ಆನಂದ ಕೆ, ವೈಜಿನಾಥ ಮೊದಲಾದವರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ವಿದ್ಯಾರ್ಥಿಗಳಿಗಾಗಿ ಈ ವರ್ಷ 150 ಕನಕದಾಸ ಹಾಸ್ಟೆಲ್ ಮಂಜೂರು ಮಾಡಲಾಗಿದ್ದು, 1 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟಲ್ ಸೌಲಭ್ಯ ಕೊಡಲಾಗಿದೆ. ವಿದ್ಯಾರ್ಥಿಗಳ ಸಮಸ್ಯೆ ಅರ್ಥಮಾಡಿಕೊಂಡರೇ ಮಾತ್ರ ಇದು ಸಾಧ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು. ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಮೀಸಲಾತಿ ಕೆಲವೇ ಕೆಲವರಿಗೆ ಸಿಗುತ್ತಿತ್ತು. ಸೌಲಭ್ಯವನ್ನ ಕೆಲವರು ಮಾತ್ರ ಕಬಳಿಸುತ್ತಿದ್ದರು. ಅಶಿಕ್ಷಿತರಿಗೆ ಮುಗ್ದರಿಗೆ ಸೌಲಭ್ಯ ಸಿಗುತ್ತಿರಲಿಲ್ಲ ಬಿಜೆಪಿ ಸರ್ಕಾರದದಿಂದ ಜಾಗೃತಿ ಮೂಡಿಸಲಾಗುತ್ತಿದೆ. ಗಂಗಾಯಕಲ್ಯಾಣ ಯೋಜನೆ ಜನರಿಗೆ ತಲುಪುತ್ತಿದೆ ಎಂದರು. ಈ ವರ್ಷ 150ಕನಕದಾಸ ಹಾಸ್ಟೆಲ್ ಮಂಜೂರು ಮಾಡಲಾಗುತ್ತಿದೆ . ಶಿಕ್ಷಣಕ್ಕಾಗಿ ಸುತ್ತಮುತ್ತಲಿನ ಹಳ್ಳಿಗಳ ಮಕ್ಕಳು ಬರುತ್ತಾರೆ. ಆದರೆ ಆ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರೆಯುತ್ತಿರಲಿಲ್ಲ. ಬಜೆಟ್ ಇಲ್ಲದಿದ್ದರೂ 450 ಕೋಟಿ ನೀಡಿದ್ದೇವೆ ಅರ್ಹ ಫಲಾನುಭವಿಗಳಿಗೆ ಬೈಕ್ ವಿತರಣೆ ಮಾಡುತ್ತಿದ್ದೇವೆ. ಸಾಮಾಜಿಕ ನ್ಯಾಯ ಎನ್ನುವ ಪಕ್ಷಗಳು ಯಾಕೆ ಹಾಸ್ಟೆಲ್ ಮಾಡಲಿಲ್ಲ…?…
ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲೀಂ ರಾಜರು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ ವಿರುದ್ದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಪ್ರಮೋದ್ ಮುತಾಲಿಕ್ ಸಾವಿರಾರು ವರ್ಷದಿಂದ ಮಠದಲ್ಲಿ ಪೂಜೆ ನಡೆಯುತ್ತಿದೆ. ಮುಸ್ಲೀಂ ವೋಟ್ ಬ್ಯಾಂಕ್ ಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಕೀರ್ತಿ ಗಳಿಸಲು ಇಂತಹ ಅಸಹ್ಯ ಹೇಳಿಕೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲಿ ಇಂತಹ ಹೇಳಿಕೆ ಬೇಕಿತ್ತಾ…? ಎಂದು ಪ್ರಶ್ನಿಸಿದರು. ಮಿಥುನ್ ರೈ ತಮ್ಮ ಹೇಳಿಕೆಯನ್ನ ಹಿಂಪಡೆಯಬೇಕು. ಇಲ್ಲದಿದ್ದರೇ ಹಿಂದೂಗಳು ಮತ ಹಾಕಲ್ಲ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಹೆಚ್.ಡಿ ದೇವೇಗೌಡರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಹಾಸನ ಜಿಲ್ಲಾ ಬಿಜೆಪಿ ಮುಖಂಡರಿಗೆ ಮಾನ ಮರ್ಯಾದೆ ಏನೂ ಇಲ್ಲ ಎಂದು ಹೆಚ್.ಡಿ.ರೇವಣ್ಣ ಕಿಡಿಕಾರಿದರು. ಹಾಸನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಿದ ಬಳಿಕ 5 ವರ್ಷ ಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಕೆಲಸ ಮತ್ತೆ ಪುನಾರಂಭವಾಗಿ 1 ವರ್ಷ ಕಳೆದರು ಅಡಿಗಲ್ಲು ಹಾಕುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗೊತ್ತಿದೆಯೋ ಇಲ್ವೋ ನನಗೆ ಗೊತ್ತಿಲ್ಲ ಎಂದು ಕುಟುಕಿದರು. ಆಸ್ಪತ್ರೆ ಕಟ್ಟಡ ನಿರ್ಮಾಣ ಇನ್ನೂ ಮುಗಿದಿದ್ದರೂ ಉದ್ಘಾಟನೆಗೆ ಹೊರಟಿದ್ದಾರೆ. ಬರುವ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆಲ್ಲುತ್ತಾರೆ ಅಂತ ಹೇಳಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅವರೇ ಉದ್ಘಾಟನೆ ಮಾಡಿಕೊಳ್ಳಲಿ. ನಾನು ಜಾರಿಗೆ ತಂದಿದ್ದ ಯೋಜನೆಗೆ ಅಡಿಗಲ್ಲು ಹಾಕಲು ಮುಂದಾಗಿದ್ದಾರೆ. ಹಾಗೇನಾದರೂ ಮಾಡಲು ಮುಂದಾದರೇ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಹುಲಿ ಯಾವತ್ತೂ ಸಣ್ಣ ಪುಟ್ಟ ಬೇಟೆಯಾಡಲ್ಲ. ಕಾದು ನೋಡಿ ದೊಡ್ಡ ಜಿಂಕೆಯನ್ನೇ ಬೇಟೆಯಾಡುತ್ತೆ ಎಂದು ಬಿಜೆಪಿಗೆ ಜನಾರ್ಧನ ರೆಡ್ಡಿ ಪರೋಕ್ಷ ಟಾಂಗ್ ನೀಡಿದರು. ಕೊಪ್ಪಳದ ಕನಕಗಿರಿಯಲ್ಲಿ ಮಾತನಾಡಿದ ಜನಾರ್ಧನ ರೆಡ್ಡಿ ನಾನು ಬೆಂಗಳೂರಿನ ಯಾವುದೇ ಕ್ಷೇತ್ರದಲ್ಲಿ ನಿಂತರೂ ಶಾಸಕನಾಗುತ್ತಿದ್ದೆ. ನನಗೆ ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಬೇಡಿ ಎಂದಿದ್ದರು ಆದರೆ ನಾನು ಕಾಯುವ ಜಾಯಮಾನದವನಲ್ಲ. ಇಲ್ಲಿ ಸೇರಿದ ಜನ ನೋಡಿದರೇ 20 ಮಾತ್ರೆ ತೆಗದುಕೊಳ್ಳವವರು 40 ಮಾತ್ರೆ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಶ್ರೀರಾಮುಲುಗೆ ಪರೋಕ್ಷ ಟಾಂಗ್ ನೀಡಿದರು. ಬಿಎಸ್ ವೈ ರನ್ನ ಸಿಎಂ ಮಾಡಿದ್ದು ನಾನು ಅಂತ ಜನರು ಹೇಳುತ್ತಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣ ಮಾಡಿದ್ದು ನಾನು. ಬಳ್ಳಾರಿ ವಿಮಾನ ನಿರ್ಮಿಸುವ ಕನಸಿತ್ತು. ಅದು ಅರ್ಧಕ್ಕೆ ನಿಂತಿದೆ. ಇನ್ನೊಂದು ವರ್ಷದಲ್ಲಿ ನಾವು ಅಧಿಕಾರಕ್ಕೆ ಬಂದರೇ ವಿಮಾನ ನಿಲ್ದಾಣ ಪೂರ್ಣಗೊಳಿಸುತ್ತೇವೆ ಎಂದರು. ಕೆಲ ಹುಚ್ಚು ರಾಜಕಾರಣಿಗಳು 12 ವರ್ಷದಿಂದ ರೆಡ್ಡಿ ರಾಜಕೀಯದಿಂದ ದೂರವಿದ್ದಾನೆ ರಾಜಕೀಯ ಜೀವನ ಮುಗಿಯಿತು ಎಂದುಕೊಂಡಿದ್ದರು. ಹುಲಿ ಯಾವತ್ತೂ ಸಣ್ಣ…
ನನಗೆ ಮತದಾರರೇ ದೇವರು ಕ್ಷೇತ್ರದ ಮತದಾರರೇ ನನ್ನ ತಂದೆ ತಾಯಿಂದಿರು. ಉಸಿರು ಇರುವವರೆಗೂ ಕ್ಷೇತ್ರ ಬಿಟ್ಟು ಹೋಗಲ್ಲ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ಬೂಕನಕೆರೆಯಲ್ಲಿ ಸಭೆಯೊಂದರಲ್ಲಿ ಭಾವುಕರಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಮತದಾರರಿಗೆ ಅನ್ಯಾಯ ಮಾಡಿದ್ರೆ ಭಗವಂತ ಬಿಡಲ್ಲ. ಕ್ಷೇತ್ರದ ಮತದಾರರೇ ನನ್ನ ತಂದೆ ತಾಯಿ. ನೀವು ಆಶೀರ್ವಾದ ಮಾಡಿದರೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೇ ನಿಮ್ಮ ಸೇವೆ ಮಾಡಿಕೊಂಡು ಇರುತ್ತೇನೆ. ನಿನ್ನಮ್ಮ ಬಿಟ್ಟು ಎಲ್ಲೂ ಹೋಗಲ್ಲ ಎಂದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗೆ ನಿನ್ನೆ ಸ್ಪಷ್ಟನೆ ನೀಡಿದ್ದ ಸಚಿವ ನಾರಾಯಣಗೌಡ, ಬಿಜೆಪಿ ಪಕ್ಷ ಬಿಡುವುದಿಲ್ಲ ಎಂದಿದ್ದರು. ಇದೀಗ ಕ್ಷೇತ್ರದ ಗ್ರಾಮಗಳಿಗೆ ಭೇಟಿ ನೀಡಿ ಸಭೆ ನಡೆಸುತ್ತಿದ್ದು ಸಚಿವ ನಾರಾಯಣಗೌಡರ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಹಿಳೆ ಸಮಾಜದಲ್ಲಿ ಮಹತ್ತರ ಸಾಧನೆಗಳನ್ನು ಮಾಡಿದರೂ ಕೂಡ ಅದರ ‘ಗುರುತಿಸುವಿಕೆ’ಗಾಗಿ ಆಕೆ ಇನ್ನೂ ಕಾಯಬೇಕಾಗಿದೆ. ಈ ‘ಕಾಯುವಿಕೆ’ ನಿಂತಾಗಲೇ ಮಹಿಳಾ ದಿನಾಚರಣೆಗೊಂದು ಅರ್ಥ ಬರಲಿದೆ’ ಎಂದು ಬೆಂಗಳೂರು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಎಸ್.ಶೈಲಜಾ ಅಭಿಪ್ರಾಯಪಟ್ಟರು. ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಸಾಂಸಾರಿಕ ಜವಾಬ್ದಾರಿಗಳ ಜೊತೆಗೆ ಪ್ರತಿ ಹೆಣ್ಣು ತನ್ನದೇ ಆದ ‘ಐಡೆಂಟಿಟಿ’ ಹೊಂದುವುದು ಅಗತ್ಯ’ ಎಂದರು. ಇದೇ ವೇಳೆ, ಸಾಗರ ಚಂದ್ರಮ್ಮ ಆಸ್ಪತ್ರೆಯ ಖ್ಯಾತ ಪ್ರಸೂತಿ ತಜ್ಞರಾದ ಡಾ. ವಿದ್ಯಾಮಣಿ ಹೆಣ್ಣುಮಕ್ಕಳ ಆರೋಗ್ಯದ ಕುರಿತು ಅರಿವು ಮೂಡಿಸಿದರು. ನ್ಯಾಷನಲ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಚ್. ಎನ್. ಸುಬ್ರಹ್ಮಣ್ಯ ಮಾತನಾಡಿ ‘ಸಮಾಜದ ಎಲ್ಲಾ ಸ್ತರಗಳಲ್ಲಿಯೂ ಮಹಿಳೆಯ ಕೊಡುಗೆ ಅಪಾರ ಮತ್ತು ಅವಿಸ್ಮರಣೀಯ’ ಎಂದರು. ಕಾರ್ಯಕ್ರಮದಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ವೈ.ಜಿ.ಮಧುಸೂಧನ್, ಕಾರ್ಯದರ್ಶಿಗಳಾದ ವಿ.ವೆಂಕಟಶಿವಾ ರೆಡ್ಡಿ, ಬಿ.ಎಸ್. ಅರುಣ್ ಕುಮಾರ್, ಪ್ರಾಂಶುಪಾಲರಾದ ಪ್ರೊ.ಪಿ.ಎಲ್.ರಮೇಶ್, ಜಯನಗರ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾದ…
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕನ್ನಡ ಹಿರಿಯ ಸಾಹಿತಿ ಮಲೆಯೂರು ಗುರುಸ್ವಾಮಿ ವಿಧಿವಶರಾಗಿದ್ದಾರೆ. ಕ್ಯಾನರ್ ನಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 5ಕ್ಕೂ ಹೆಚ್ಚು ಕಾದಂಬರಿ ರಚನೆ. 10ಕ್ಕೂ ಹೆಚ್ಚು ಕೃತಿಗಳನ್ನು ಸಂಪಾದಿಸಿದ್ದ ಗುರುಸ್ವಾಮಿ, ಮಹಾಕವಿ ಷಡಕ್ಷರಿ ದೇವ ಸ್ಮಾರಕ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪಡೆದಿದ್ರು. ನಾಳೆ ಸ್ವಗೃಹ ಮಲೆಯೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಮಲೆಯೂರು ಗುರುಸ್ವಾಮಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರು ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರು ಜೆ.ಎಸ್.ಎಸ್. ಮಹಾವಿದ್ಯಾಪೀಠದ ಬಳಿ ಇಂದು ಬೆಳಿಗ್ಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಅವರ ಹುಟ್ಟೂರಾದ ಚಾಮರಾಜನಗರ ತಾಲ್ಲೂಕಿನ ಮಲೆಯೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಸಿದ್ಧರಾಮಯ್ಯ ಎಲ್ಲಾ ಭರವಸೆ ಈಡೇರಿಸಿದ್ದಾರೆ ಎನ್ನುತ್ತಾರೆ ಆದರೆ ಚಾಮುಂಡೇಶ್ವರಿಯಲ್ಲಿ ಯಾಕೆ ಸೋತರು ಎಂದು ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಸಿದ‍್ಧರಾಮಯ್ಯ ಸ್ವಾರ್ಥಿ. ಪಕ್ಷಾಂತರ ಪ್ರವೀಣ. ಸಿದ್ಧರಾಮಯ್ಯ ಬಿಜೆಪಿ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸಾಯುವ ಹಂತದಲ್ಲಿದೆ. ಸಿದ್ಧರಾಮಯ್ಯಗೆ ಪಕ್ಷ ನಿಷ್ಟೆ ಇಲ್ಲ ಎಂದರು. ಇದೇ ವೇಳೆ ಡಿ.ಕೆ ಶಿವಕುಮಾರ್ ವಿರುದ್ಧವೂ ಕಿಡಿಕಾರಿದ ಕೆ.ಎಸ್ ಈಶ್ವರಪ್ಪ, ಡಿಕೆ ಶಿವಕುಮಾರ್ ಮನೆಯಲ್ಲಿ ಎಷ್ಟು ಹಣ ಇದೆ ಅಂತಾ ರೈಡ್ ಆಗುವವರೆಗೂ ಡಿಕೆ ಶಿವಕುಮಾರ್ ಗೆ ಗೊತ್ತಿರಲಿಲ್ಲ. ಅವರಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನೈತಿಕತೆ ಇಲ್ಲ. ಸುಳ್ಳು ಹೇಳುವ ಕಾಂಗ್ರೆಸ್ ಗೆ ಸೋಲು ಖಚಿತ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA