Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಲಂಡನ್: ಬಿಜೆಪಿ ತಾನು ಶಾಶ್ವತವಾಗಿ ಅಧಿಕಾರದಲ್ಲಿರುತ್ತೇನೆ ಎಂಬ ಭ್ರಮೆಯಲ್ಲಿದೆ. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಲಂಡನ್ ನ ಚಥಮ್ ಹೌಸ್ ಥಿಂಕ್ ಟ್ಯಾಂಕ್ನಲ್ಲಿ ಸೋಮವಾರ ಸಂಜೆ ನಡೆದ ಸಂವಾದದಲ್ಲಿ ಮಾತನಾಡಿದ ವಯನಾಡು ಸಂಸದ ರಾಹುಲ್ ಗಾಂಧಿ, ದೇಶದಲ್ಲಿ ಭಿನ್ನಾಭಿಪ್ರಾಯ ಹತ್ತಿಕ್ಕುವ ಯತ್ನ ನಡೆಯುತ್ತಿದ್ದು, ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಅನ್ನು ತಮ್ಮ ಫೋನ್ ನಲ್ಲಿ ಹಾಕಲಾಗಿದೆ ಎಂದು ಮತ್ತೊಮ್ಮೆ ಆರೋಪಿಸಿದರು. ಅಧಿಕಾರದ ದೃಷ್ಟಿಕೋನದಲ್ಲಿ ಹೇಳುವುದಾದರೆ, ಸ್ವಾತಂತ್ರ್ಯದಿಂದ ಇಲ್ಲಿಯವರೆಗಿನ ಬಹುಪಾಲು ಸಮಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ” ಎಂದು ರಾಹುಲ್ ಗಾಂಧಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಮಂಡ್ಯ: ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಬೆಂಗಳೂರು—ಮೈಸೂರು ರಾಷ್ಟ್ರೀಯ ಹೆದ್ದಾರಿಯ ದಶಪಥ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮದಲ್ಲಿ ಡ್ರೋಣ್ ಕ್ಯಾಮರ ಬಳಸಿ ಕಾರ್ಯಕ್ರಮವನ್ನು ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮ ನಡೆಯುವ ಪ್ರದೇಶದಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚನೆ ನೀಡಲಾಗಿದ್ದು, ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಅಗತ್ಯ ಕ್ರಮವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮುಂಬೈ: ನಟಿ ರಶ್ಮಿಕಾ ಮಂದಣ್ಣ ನನ್ನ ಕ್ರಶ್ ಎಂದು ನಾನು ಯಾವಾಗ ಹೇಳಿದ್ದೆ ಎಂದು ಪ್ರಶ್ನಿಸಿ ಯುವ ಕ್ರಿಕೆಟಿಗ ಶುಭ್ ಮನ್ ಗಿಲ್ ಗರಂ ಆಗಿದ್ದಾರೆ. ಶುಭ್ ಮನ್ ಗಿಲ್ ರಶ್ಮಿಕಾ ನನ್ನ ಕ್ರಶ್ ಎಂದು ಹೇಳಿಕೆ ನೀಡಿದ್ದರು ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ರಶ್ಮಿಕಾ ಮಂದಣ್ಣ ಎಂದರೆ ಇಷ್ಟ ಎಂದು ಯಾವಾಗ ಹೇಳಿದ್ದೆ ಆಕ್ರೋಶ ವ್ಯಕ್ತಪಡಿಸಿದ ಪ್ರಶ್ನಿಸಿದ್ದಾರೆ. ಎಲ್ಲಿಯೂ ನಾನು ಇದರ ಬಗ್ಗೆ ಮಾತಾಡಿಲ್ಲ ಅಂತ ಯೋಚನೆ ಮಾಡ್ತಿರುವ ಎಮೋಜಿ ಹಾಕಿ ಕಾಮೆಂಟ್ ಮಾಡಿದ್ದಾರೆ. ರಶ್ಮಿಕಾ ನನ್ನ ಕ್ರಶ್ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಕ್ರಶ್ ಅವಳಲ್ಲ. ಯಾವತ್ತೂ ನಾನು ಹೇಳಿಲ್ಲ, ಹೇಳುವುದೂ ಇಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದಾವಣಗೆರೆ: ಜಿಲ್ಲೆಯಾದ್ಯಂತ ಬಣ್ಣದೋಕುಳಿ ಸಂಭ್ರಮ, ಸಡಗರ ಮನೆ ಮಾಡಿತ್ತು. ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಯುವಕ, ಯುವತಿಯರು, ಮಹಿಳೆಯರು ಪರಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು. ಬಣ್ಣ ಎರಚಿಕೊಳ್ಳುತ್ತಾ ಡಿಜೆ ಸೌಂಡ್ಗೆ ಸಖತ್ತಾಗಿಯೇ ಸ್ಟೆಪ್ ಹಾಕಿದ ಜನರು ಬಣ್ಣದ ಲೋಕದಲ್ಲಿ ಮಿಂದೆದಿದ್ದರು. ಬಣ್ಣ ಬಣ್ಣದ ವೇಷ ತೊಟ್ಟವರ ಬಟ್ಟೆಗಳೆಲ್ಲವೂ ಬಣ್ಣಗಳಿಂದ ಕಂಗೊಳಿಸುತ್ತಿದ್ದವು. ಇನ್ನು ಬಣ್ಣದಲ್ಲಿ ಮಿಂದೆದ್ದ ಯುವಸಮೂಹ ಡಿಜೆ ಸೌಂಡ್ಗೆ ಸಖತ್ ಸ್ಟೆಪ್ ಹಾಕಿದರು. ಚಿಣ್ಣರ ಸಂಭ್ರಮವೂ ಕೂಡ ವಿಶೇಷವಾಗಿ ಗಮನ ಸೆಳೆಯಿತು. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಕಾಲೇಜು ಯುವಕ, ಯುವತಿಯರ ಡ್ಯಾನ್ಸ್ ಮತ್ತಷ್ಟು ಕಳೆಗಟ್ಟುವಂತೆ ಮಾಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಚಿಕ್ಕನಾಯಕನಹಳ್ಳಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಶಿವರಾಜ್ ಎಂಬವರು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಇಲಾಖೆಯಲ್ಲಿ ಮಾಸಿಕ ಬಾಡಿಗೆ ಆಧಾರದಲ್ಲಿ ಕಾರು ಓಡಿಸಿದ್ದ ಚಾಲಕ ನರೇಂದ್ರ ಎಂಬವರ ಬಾಡಿಗೆ ಬಿಲ್ 34,800 ರೂಪಾಯಿ ನೀಡಲು ಶಿವರಾಜ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಶಿವರಾಜ್ ನ ಲಂಚಬಾಕತನದಿಂದ ಬೇಸತ್ತ ನರೇಂದ್ರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಡಿವೈಎಸ್ ಪಿ ಜಿ.ಮಂಜುನಾಥ್, ಹರೀಶ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು, ಪುರುಷರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗ ಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮತ್ತು “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ” ಮಾಡಿ ಮಾತನಾಡಿದರು. ತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿದ್ದು, ಇದೊಂದು ಪವಿತ್ರ ಸಂಬಂಧ. ಮನುಕುಲದ ಮುಂದುವರಿಕೆ ನಿರಂತರವಾಗಿ ತಾಯಿಂದಿರು ಮಾಡಿದ್ದಾರೆ. ನಮ್ಮ ತಾಯಿ, ಮಕ್ಕಳು, ಪತ್ನಿಯಿಂದ ಸದಾ ಸೇವೆ ಪಡೆಯುವುದು ಪುರುಷ. ಮಹಿಳೆಗೆ ತೊಂದರೆಯಾದರೆ ಅದು ಗಂಡು ಮಕ್ಕಳಿಂದ , ಹೀಗಾಗಿ ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. ಜಗತ್ತಿನ ಎಲ್ಲಾ ದೇಶಗಳಲ್ಲಿ ಮಹಿಳೆಯರನ್ನು ಒಗ್ಗೂಡಿಸಿ ಅವರ ಸುರಕ್ಷತೆ ಹಾಗೂ ಆರ್ಥಿಕ ಸ್ವಾತಂತ್ರ್ಯ ನೀಡಿ ಸಬಲರನ್ನಾಗಿ ಮಾಡಲು ಸಂಯುಕ್ತ ರಾಷ್ಟ್ರ ತೀರ್ಮಾನ ಮಾಡಿ ಈ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ.9 ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ಕರೆ ನೀಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮ ವಾಸಿಯಾದ ರಮೇಶ್ ಎಂ ಎನ್ ಬಿನ್ ನಂಜುಂಡಪ್ಪ ಎನ್ನುವ ಪ್ರಗತಿಪರ ರೈತನ ಜಮೀನಿಗೆ ಬೆಂಕಿ ಬಿದ್ದು ಅಪಾರ ಹಾನಿಯಾಗಿರುವ ಘಟನೆ ಮಂಗಳವಾರ ನಡೆದಿದೆ. ಮರೇನಾಯಕನಹಳ್ಳಿ ಗ್ರಾಮದ ಸರ್ವೆ ನಂಬರ್ 7 ರಲ್ಲಿ ತೆಂಗಿನ ತೋಟವಿದ್ದು ತೋಟದಲ್ಲಿದ್ದ ಗುಡಿಸಲಿನಲ್ಲಿ ವ್ಯವಸಾಯಕ್ಕಾಗಿ ಬಳಸುತ್ತಿದ್ದ ಪರಿಕರಗಳಾದ ಮೋಟಾರ್ ಸ್ಟಾರ್ಟರ್ ಪೈಪ್ ಕೇಬಲ್ ಏರ್ ಕಂಪ್ರೆಸರ್ ಕೇಬಲ್ ಪೈಪ್ ಪವರ್ ಸ್ಟ್ರೈಯರ್ ಮತ್ತು ಇತ್ಯಾದಿ ಬೆಲೆ ಬಾಳುವ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವುದು ಕಾಣಬಹುದಾಗಿದೆ.. ರೈತ ರಮೇಶ್ ಮಾತನಾಡಿ ಮರೇನಾಯಕನಹಳ್ಳಿ ಗ್ರಾಮದ ಸರ್ವೆ ನಂಬರ್ 7 ರಲ್ಲಿ ನಾನು ಜಮೀನು ಹೊಂದಿದ್ದು ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿನಲ್ಲಿ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಮೂರು ಸ್ಟಾರ್ಟರ್, ಮೋಟಾರ್ ಗಳು, ಒಂದು 5 ಎಚ್ ಪಿ ಮೋಟಾರ್, ಒಂದು ಏರ್ ಕಂಪ್ರೆಸರ್, ಎರಡು ಪವರ್ ಸ್ಪೇಯರ್,30 ಮೀಟರ್ ನಷ್ಟು ಕೇಬಲ್ ಬೆಂಕಿಯಿಂದ ಸುಟ್ಟು ಹೋಗಿರುತ್ತವೆ ಇದಕ್ಕೆ ಸಂಬಂಧ…
ಔರಾದ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಎಕಲಾರ ಗ್ರಾಮ ಪಂಚಾಯತ್ ಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೇ ನಿರ್ಲಕ್ಷ್ಯವಹಿಸುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2 ದಿನಗಳಿಂದ ಇಲ್ಲಿನ ಕೊಲ್ಲೂರು ಗ್ರಾಮದ ಯುವಕರು ಪಂಚಾಯತ್ ಗೆ ಭೇಟಿ ನೀಡಿದರೂ ಇಲ್ಲಿ ಯಾವುದೇ ಅಧಿಕಾರಿಗಳು ಕೂಡ ಕಂಡು ಬರುತ್ತಿಲ್ಲ. ಸಮಯ ಮಧ್ಯಾಹ್ನ 12:28 ಕಳೆದರೂ ಯಾವುದೇ ಅಧಿಕಾರಿಗಳು ಕೂಡ ಪಂಚಾಯತ್ ಗೆ ಆಗಮಿಸುತ್ತಿಲ್ಲ ಎಂದು ಯುವಕ ಕೊಲ್ಲೂರು ಗ್ರಾಮದ ಸಂದೀಪ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಪಂಚಾಯತ್ ಅಧಿಕಾರಿಗಳು ಯಾವುದೇ ಸಹಕಾರ ನೀಡುತ್ತಿಲ್ಲ, ಸ್ವಚ್ಛ ಭಾರತದ ಕಸವಿಲೇವಾರಿಯ ವಾಹನ ಕೂಡ ಪಂಚಾಯತ್ ಆವರಣದಲ್ಲಿದ್ದು, ಇದು ಕಾರ್ಯಾಚರಿಸದೇ ನಿಂತಿದ್ದು, ತುಕ್ಕು ಹಿಡಿಯಲು ಸಿದ್ಧವಾಗಿದೆ ಎಂದು ಆರೋಪಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್…
ಬೆಂಗಳೂರು: ಮನೆಗೆ ನುಗ್ಗಿದ ಕಳ್ಳರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ ಬೆದರಿಸಿ ಮನೆಯನ್ನು ದರೋಡೆ ಮಾಡಿದ ಘಟನೆ ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ನಡೆದಿದೆ. ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಲಕ್ಷ್ಮಿನಗರ ಲೇಔಟ್ನಲ್ಲಿ ವಿದ್ಯಾರ್ಥಿನಿ ಮಾತ್ರವೇ ಇದ್ದ ಸಂದರ್ಭದಲ್ಲಿ ದರೋಡೆಕೋರರು ನುಗ್ಗಿದ್ದಾರೆ. ಈ ವೇಳೆ ಮನೆ ಬಳಿಗೆ ಬಂದ ಕೆಲ ವ್ಯಕ್ತಿಗಳು ಸ್ಥಳೀಯ ವ್ಯಕ್ತಿಯೊಬ್ಬನನ್ನು ಹುಡುಕುತ್ತಿರವುದಾಗಿ ಹೇಳಿದ್ದಾರೆ. ವ್ಯಕ್ತಿಗಳೊಂದಿಗೆ ಮಾತನಾಡಿದ ಕೀರ್ತನಾ ಅವರು ಅನುಮಾನಗೊಂಡು ಬಾಗಿಲು ಹಾಕಲು ಮುಂದಾಗಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಒಳನುಗ್ಗಿರುವ ದುಷ್ಕರ್ಮಿಗಳು ಆಕೆಯ ಕೈಕಾಲು ಕಟ್ಟಿ, ಬಾಯಿಯನ್ನು ಮುಚ್ಚಿದ್ದಾರೆ. ನಂತರ ಮನೆಯಲ್ಲಿದ್ದ ಚಿನ್ನ, ಬೆಳ್ಳಿಯ ವಸ್ತುಗಳನ್ನು ದೋಚಿದ್ದಾರೆ. ನಂತರ ಯುವತಿಯನ್ನು ಶೌಚಾಲಯದ ಒಳಗೆ ತಳ್ಳಿ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿ ಪರಾರಿಯಾಗಿದ್ದಾರೆ. ಸ್ವಲ್ಪ ಸಮಯದ ಬಳಿಕ ಕೈಕಾಲುಗಳಿಗೆ ಹಾಕಲಾದ ಕಟ್ಟುಗಳನ್ನು ಬಿಚ್ಚುವಲ್ಲಿ ಯಶಸ್ವಿಯಾದ ವಿದ್ಯಾರ್ಥಿನಿ ಕೂಗಾಡಿದ್ದು, ಈ ವೇಳೆ ಸ್ಥಳೀಯರು ರಕ್ಷಣೆಗೆ…