Author: admin

ಹುಬ್ಬಳ್ಳಿ : ಮೀಸಲಾತಿ ಶೇ.50 ಕ್ಕಿಂತ ಹೆಚ್ಚಳ ಅಸಾಧ್ಯ ಎಂದು ಕೇಂದ್ರ ಸರ್ಕಾರ ಯಾವ ಹಿನ್ನೆಲೆಯಲ್ಲಿ ಲಿಖಿತ ಉತ್ತರ ನೀಡಿದೆ ಎಂದು ಪರಿಶೀಲಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ಧವಾಗಿವೆ ಎಂದು ಸ್ಪಷ್ಟಪಡಿಸಿದರು. ಮೀಸಲಾತಿ ಹೆಚ್ಚಳವನ್ನು ರಾಜ್ಯ ಸರ್ಕಾರ ನಿಯಮಬದ್ಧವಾಗಿ ಮಾಡಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಕೈಬಿಡಲಿದೆ ಎಂಬ ಆತಂಕ ಬೇಡ. ಅವರ ಮೀಸಲಾತಿ ಹೆಚ್ಚಳ ಸರ್ಕಾರ ಹಾಗೂ ನಮ್ಮ ಪಕ್ಷದ ಬದ್ಧತೆಯಾಗಿದೆ. ಆದರೆ ಕೇಂದ್ರ ಸರ್ಕಾರದ ನೀಡಿರುವ ಲಿಖಿತ ಉತ್ತರ ಯಾವ ಹಿನ್ನೆಲೆಯಲ್ಲಿ ಹೇಳಲಾಗಿದೆ ಎಂದು ಮಾಹಿತಿ ಪಡೆದು ಸ್ಪಷ್ಟವಾಗಿ ತಿಳಿಸುತ್ತೇನೆಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ಅವರು ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟಿರುವ ವಿಚಾರ. ಈ ಕುರಿತು ರಾಷ್ಟ್ರ ನಾಯಕರು ಯಾವ ಸೂಚನೆ ನೀಡುತ್ತಾರೋ…

Read More

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿವೆ. ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ತೊಡಗಿದ್ದರೇ, ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು ಕೈಗೊಂಡಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ವಿಪಕ್ಷ ನಾಯಕ ಸಿದ್ಧರಾಮಯ್ಯ ಬಸ್ ಯಾತ್ರೆಯನ್ನು ಆರಂಭಿಸಲಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿರೋದು, ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದೆ ಎನ್ನಲಾಗುತ್ತಿದೆ. ಇನ್ನೂ ಹೀಗೆ ರೆಡಿಯಾಗಿರುವಂತ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್ ಎನ್ನಲಾಗಿದೆ. ಅಲ್ಲದೇ ಮೂರ್ನಾಲ್ಕು ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಸಾಧ್ಯತೆಯನ್ನು ಹೊರತು ಪಡಿಸಿ, ಬಹುತೇಕರು ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಅಂದಹಾಗೇ ಕೆಪಿಸಿಸಿಯಿಂದ ಆಹ್ವಾನಿಸಿದ್ದಂತ ಟಿಕೆಟ್ ಅರ್ಜಿಯ ವೇಳೆಯಲ್ಲಿ ಒಂದೊಂದು ಕ್ಷೇತ್ರಕ್ಕೂ ನಾಲ್ಕೈದು, 10, 15 ಅರ್ಜಿಗಳನ್ನು ಟಿಕೆಟ್ ಆಕಾಂಕ್ಷಿತರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಹೀಗೆ ಸಲ್ಲಿಸಿದ್ದಂತ ತೀವ್ರ ಪೈಪೋಟಿಯ ನಡುವೆಯೂ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸಂಭವನೀಯ ಪಟ್ಟಿಯನ್ನು ಸಿದ್ಧ ಮಾಡಿಟ್ಟುಕೊಂಡಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಫೈನಲ್ ಎನ್ನುವ…

Read More

ವಿಜಯಪುರ: ವಸಂತ ಕಾಲ ಬರಲಿ, ವಸಂತ ಬಂದಾಗಲೇ ಕಾಗೆ ಯಾವುದು ಕೋಗಿಲೆ ಯಾವುದು ಗೊತ್ತಾಗುವುದು ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವರನ್ನು ಕಾಗೆ ಎಂದು ಟೀಕಿಸಿದರು. ಬ್ರೋಕರ್ ಸ್ವಾಮಿ ಎಂಬ ಶಾಸಕ‌ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿಕೆಗೆ ಹರಿಹರ ಪೀಠದ ವಚನಾನಂದ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಹರಿಹರ ಪೀಠದ ಸ್ವಾಮೀಜಿ ಬ್ರೋಕರ್ ಸ್ವಾಮಿ ಆಗಿದ್ದಾರೆ. ಹಣ ವಸೂಲಿ ಮಾಡೋದು, ಮಂತ್ರಿ ಮಾಡಿ ಎಂದು ಹಣ ಕೇಳೋ ಕೆಲಸ ಮಾಡುತ್ತಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಹರಿಹರ ಶ್ರೀಗಳು 10 ಕೋಟಿ ರೂ. ಹಣ ವಸೂಲಿ ಮಾಡಿದ್ದಾರೆ. ಮಠದ ಹಣದ ವಿಚಾರದಲ್ಲಿ ಬಹಳ ಅವ್ಯವಹಾರ ಮಾಡಿದ್ದಾರೆ. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಅವ್ಯವಹಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು ಎಂದು ಯತ್ನಾಳ್​ ಆರೋಪಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ಇದೀಗ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ. ದೆಹಲಿಗೆ ಬರುವಂತೆ ಸೂಚನೆ ಬಂದಿದ್ದು, ನಾಳೆ ತೆರಳಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾ ರೆಡ್ಡಿ, ಧ್ರುವ ನಾರಾಯಣ್ ಮತ್ತಿತರರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಚುನಾವಣೆಗೆ ರಣತಂತ್ರ ರೂಪಿಸುವ ಕುರಿತು ರಾಜ್ಯ ನಾಯಕರ ಜತೆ ಮಹತ್ವದ ಮಾತುಕತೆ ನಡೆಸಲಿರುವ ಹೈಕಮಾಂಡ್, ಅಭ್ಯರ್ಥಿಗಳ ಆಯ್ಕೆ ವಿಚಾರ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ: ಸಾಮಾಜಿಕ ಜಾಲ ತಾಣಗಳಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದ ಕುರಿತು ವದಂತಿ ಹರಡಿಸಲಾಗಿದೆ. ನಗರದ ಜ್ಞಾನ ಯೋಗಾಶ್ರಮದ ಪೀಠಾಧಿಪತಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದ ಕುರಿತು ವದಂತಿ ಹರಡಿದೆ. 83 ವರ್ಷದ ಶ್ರೀ ಸಿದ್ದೇಶ್ವರ ಶ್ರೀಗಳು ಸದ್ಯ ವಿಜಯಪುರ ನಗರದ ಜ್ಞಾನ ಯೋಗಾಶ್ರಮದಲ್ಲಿಯೇ ಇದ್ದಾರೆ. ನಿತ್ಯ ಎಂದಿನಂತೆ ಸ್ನಾನ ಪೂಜೆ ಮಾಡಿರುವ ಶ್ರೀಗಳು ಇಂದೂ ಸಹ ಭಕ್ತರಿಗೆ ದರ್ಶನ ಭಾಗ್ಯ ನೀಡಿದ್ದಾರೆ. ಚಳಿಗಾಲವಿರುವ ಕಾರಣ ಸಹಜವಾದ ನೆಗಡಿ ಕೆಮ್ಮು ಶ್ರೀಗಳನ್ನು ಬಾಧಿಸುತ್ತಿದೆ. ನೆಗಡಿ ಕೆಮ್ಮು ಬಿಟ್ಟು ಇತರೆ ಯಾವುದೇ ಆರೋಗ್ಯ ಸಮಸ್ಯೆ ನಡೆದಾಡುವ ದೇವರಿಗೆ ಇಲ್ಲ. ಹೀಗಾಗಿ ಅವರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ತಾಲೂಕಿನ ಇರಕಸಂದ್ರ ಕಾಲೋನಿ ಬಳಿ ಚಿರತೆ ದಾಳಿಯಿಂದ ಗಾಯಗೊಂಡವರು ದಾಖಲಾಗಿರುವ  ಆಸ್ಪತ್ರೆಗೆ, ಮಾಜಿ ಡಿಸಿಎಂ, ಶಾಸಕ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಇರಕಸಂದ್ರಕಾಲೋನಿಯ ಗ್ರಾಮದಲ್ಲಿ ಕಳೆದ ಶನಿವಾರ ಬೆಳಿಗ್ಗೆ ಚಿರತೆಯೊಂದು ಬಸ್ ನಿಲ್ದಾಣದ ಸಮೀಪ ಶ್ರೀನಿವಾಸ(60), ರಾಜು(46) ಎನ್ನುವರ ಮೇಲೆ ದಾಳಿ ನಡೆಸಿ, ನಂತರ ಕೆಂಪರಾಜು ಎಂಬುವರ ದನದ ಕೊಟ್ಟಿಗೆಗೆ ನುಗ್ಗಿ ಅಲ್ಲಿ ಹಾಲು ಕರೆಯುತ್ತಿದ್ದ ಚೇತನ್ (15) ಹಾಗೂ ಧನುಷ್ (13) ಎಂಬ ಬಾಲಕರ ಮೇಲೆ ದಾಳಿ ಮಾಡಿತ್ತು.  ಈ ಘಟನೆ ನಡೆದ ಸಂದರ್ಭದಲ್ಲಿ ಶಾಸಕ ಡಾ.ಜಿ.ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ ಅಭಿನಂದನಾ ಕಾರ್ಯಕ್ರಮಕ್ಕೆ ಕಲಬುರ್ಗಿಗೆ ಹೋಗಿದ್ದರು, ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬಂದ ಶಾಸಕರು ಹಿಂದೆಯೇ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯ ಗೊಂಡ ಇಬ್ಬರು ಬಾಲಕರ ಮತ್ತು ವೃದ್ದರ ಆರೋಗ್ಯ ವಿಚಾರಿಸಿದರು ಇದೇ ವೇಳೆ ತಮ್ಮ ವೈಯಕ್ತಿಕ ಹಣದಿಂದ ಬಾಲಕರ ತಂದೆಗೂ ಹಾಗೂ…

Read More

ಕೊರಟಗೆರೆ: ಕ್ಯಾಂಟರ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರ ಸಹಿತ ಮೂವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಶಾಪುರ ಗೇಟ್ ಸಮೀಪದ ಮುಖ್ಯರಸ್ತೆಯಲ್ಲಿ ನಡೆದಿದೆ. ಕೊರಟಗೆರೆಯಿಂದ ಗೌರಿಬಿದನೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ಅರಸಾಪುರ ಮತ್ತು ಕಾಶಾಪುರ ಗೇಟ್ ಬಳಿ ಈಗಾಗಲೇ ಅಪಘಾತ ವಲಯ ಎಂದು ಗುರುತಿಸಲಾಗಿದೆ. ಇದೇ ಪ್ರದೇಶದಲ್ಲಿ ಇದೀಗ ಅಪಘಾತ ಸಂಭವಿಸಿದ್ದು, ಮೂರು ಜೀವಗಳು ಬಲಿಯಾಗಿದೆ. ಕೊರಟಗೆರೆ ಪಟ್ಟಣದ ನಿವಾಸಿಯಾದ ಮೀಲಾನಿ(25), ಜೈರಾಭಿ(70), ಆಟೋ ಚಾಲಕ ಕಲಂದರ್(36) ಮೃತಪಟ್ಟವರಾಗಿದ್ದು, ಆಟೋ ಚಾಲಕ ಕಲಂದರ್ ಅವರ ಮಕ್ಕಳಾದ ಅರ್ಪ(5), ಅಸೀತಾ(3) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿರ್ಲಕ್ಷ್ಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ತಿರುವಿನಲ್ಲಿ…

Read More

ತುರುವೇಕೆರೆ: ತಾಲೂಕಿನ ಸೂಳೆಕೆರೆ ಗ್ರಾಮ ಮತ್ತು ಸೂಳೆಕೆರೆ ಪಾಳ್ಯ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಂಘದ ಸದಸ್ಯರು  ಇಂದು ಗ್ರಾಮದಲ್ಲಿರುವ ಶ್ರೀ ಗಣಪತಿ ದೇವಾಲಯದ ಆವರಣದಲ್ಲಿ ಹೆಚ್ಚುವರಿ ಷೇರು ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದ್ದರು. ಮಹಿಳಾ ಮುಖ್ಯ ಪ್ರವರ್ತಕರಾದ ರಾಧಮ್ಮ ಎಂ.ಆರ್. ಲೋಕೇಶ್ ಈ ಸಂದರ್ಭದಲ್ಲಿ ಮಾತನಾಡಿ,  ಸೂಳೆಕೆರೆ ಮತ್ತು ಸೂಳೆಕೆರೆ ಪಾಳ್ಯದ ಈ ಮಹಿಳಾ ಹಾಲು ಉತ್ಪಾದಕರ ಸಂಘದ ಶೇರುದಾರರು ಇಲ್ಲಿಯವರೆಗೂ 160 ಜನ ಷೇರುದಾರರಿದ್ದು, ಇನ್ನೂ ನಮ್ಮ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶೇರುದಾರರಾಗಿ ಈ ಹಾಲು ಒಕ್ಕೂಟ ಆರಂಭಿಸಲು ಸಹಕಾರಿಯಾಗಬೇಕು ಎಂದು ತಿಳಿಸಿದರು. ಶೇರುದಾರರಾದ  ಮಹಾಲಕ್ಷ್ಮಿ ರುದ್ರೇಶ್ ಮಾತನಾಡಿ , ಸೂಳೆಕೆರೆ ಗ್ರಾಮದಲ್ಲಿ ಈ ಹಾಲು ಉತ್ಪಾದಕರ ಸಂಘ ಅಧಿಕೃತವಾಗಿ ಪ್ರಾರಂಭವಾಗಿರುವುದು ನಮ್ಮೆಲ್ಲರಿಗೂ ಖುಷಿ ತಂದಿರುವ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಹಿಳೆಯರು ಈ ಹಾಲು ಉತ್ಪಾದಕರ ಸಂಘಕ್ಕೆ ಶೇರುದಾರರಾಗಿ ಈ ಒಕ್ಕೂಟ ಪ್ರಾರಂಭಿಸಲು ಸಹಕಾರಿಯಾಗಬೇಕು. ನಮ್ಮ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಮಹಾಲಿಂಗಯ್ಯ ಅವರು ಈ ಹಾಲು…

Read More

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮಧ್ಯರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದಲ್ಲಿ ಈ ಘಟನೆ ನಡೆದಿದೆ. ರಾತ್ರಿ ವೇಳೆ ಮುಸ್ಲಿಮ್ ಯುವಕರೊಂದಿಗೆ ತಿರುಗಾಡುತ್ತಿದ್ದ ಹಿಂದೂ ಯುವತಿಯರನ್ನು ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಇಲ್ಲಿ ಏನು ಮಾಡುತ್ತಿದ್ದೀರಿ ಎಂದು ಕಾರ್ಯಕರ್ತರು ಪ್ರಶ್ನಿಸಿದಾಗ, ಹೊಟೇಲ್‌ಗೆ ಊಟಕ್ಕೆ ಬಂದಿರೋದಾಗಿ ಜೋಡಿಗಳು ಹೇಳಿದ್ದಾರೆ. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಬಳಿಕ ಜೋಡಿ ಪೊಲೀಸ್ ಠಾಣೆಗೆ ತೆರಳಿದ್ದು, ವಿಚಾರಣೆಯ ಬಳಿಕ ಮನೆಗೆ ಕಳುಹಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಲಕ್ನೋ:  ಬೀದಿನಾಯಿಗಳು ಕಚ್ಚಿದ ಪರಿಣಾಮ 40 ವರ್ಷದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ನೋದ ಜಾನಕಿಪುರಂ ಎಕ್ಸ್ಟೆನ್ಷನ್ ಪ್ರದೇಶದಲ್ಲಿ ನಡೆದಿದೆ. ಶ್ರೀಸ್ತಿ ಅಪಾರ್ಟ್ಮೆಂಟ್ ನಿವಾಸಿ ರಿಹಾನ್ನಾ ಆಸಿಫ್ ರಾತ್ರಿ 9 ಗಂಟೆಗೆ ತನ್ನ ಮಾವನೊಂದಿಗೆ ವಾಯುವಿಹಾರಕ್ಕೆ ತೆರಳಿದ್ದು, ಬಳಿಕ  ಅಲ್ಲೇ ಇದ್ದ ಬೆಂಚಿನ ಮೇಲೆ ಕುಳಿತುಕೊಂಡಿದ್ದರು. ಈ ವೇಳೆ ಸುಮಾರು 6 ನಾಯಿಗಳು ಅವರ ಮೇಲೆ ದಾಳಿ ನಡೆಸಿದ್ದು, ಈ ವೇಳೆ ನಾಯಿಗಳು ಮಹಿಳೆಯ ದೇಹದಿಂದ ಮಾಂಸವನ್ನು ಕಿತ್ತು ಹಾಕಲು  ಪ್ರಯತ್ನಿಸಿದ್ದು, ತೀವ್ರವಾದ ದಾಳಿ ನಡೆಸಿದೆ. ಈ ವೇಳೆ ಮಹಿಳೆಯ ಮಾವ ಸ್ಥಳಕ್ಕೆ ಓಡಿ ಬಂದು ನಾಯಿಗಳನ್ನು ಸ್ಥಳದಿಂದ ಬೆದರಿಸಿ ಓಡಿಸಿ ಮಹಿಳೆಯನ್ನು ಕಾಪಾಡಿದ್ದಾರೆ. ರಿಹಾನ್ನಾ ಎಂಬ ಮಹಿಳೆ ನಾಯಿಯಿಂದ ಕಡಿತಕ್ಕೊಳಗಾದ ಮಹಿಳೆಯಾಗಿದ್ದು, ತನ್ನ ಮಾವ ರಕ್ಷಣೆಗೆ ಬಾರದೇ ಇದ್ದಿದ್ದರೆ, ನಾಯಿಗಳು ನನ್ನನ್ನು ಕಚ್ಚಿ ಸಾಯಿಸುತ್ತಿದ್ದವು ಎಂದು ಮಹಿಳೆ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More