Author: admin

ಕಾಂತಾರ ಸಿನಿಮಾ ಸಕ್ಸಸ್, ನಿರ್ದೇಶಕ ಹಾಗೂ ನಿರ್ಮಾಪಕರು ಮರುಚಿಂತಿಸುವಂತೆ ಮಾಡಿದೆ ಎಂದು ಖ್ಯಾತ ನಿರ್ದೇಶಕ ರಾಜಮೌಳಿ ಹೇಳಿದ್ದಾರೆ. ಕಾಂತಾರ ಸಕ್ಸಸ್ ಬಗ್ಗೆ ಮೊದಲ ಬಾರಿಗೆ ಮಾತನಾಡಿರುವ ರಾಜಮೌಳಿ, ಕಾಂತಾರ ಗಳಿಕೆ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹೆಚ್ಚು ಹಣ ಗಳಿಸಲು ಬಿಗ್ ಬಜೆಟ್ ಸಿನಿಮಾವನ್ನೇ ಮಾಡಬೇಕಿಲ್ಲ. ಕಡಿಮೆ ಬಜೆಟ್‌ನ, ಒಳ್ಳೆಯ ಫ್ಲ್ಯಾನ್ ಇರುವ ಸಿನಿಮಾ ಕೂಡ ಉತ್ತಮ ಕಲೆಕ್ಷನ್ ಮಾಡಬಹುದು. ಇದಕ್ಕೆ ಕಾಂತಾರ ಉತ್ತಮ ಉದಾಹರಣೆ ಎಂದು ರಾಜಮೌಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರಿಗೆ ಇದು ಎಕ್ಸಾಯಿಟ್ ಆಗಿರುತ್ತದೆ. ಆದರೆ ನಿರ್ದೇಶಕರಾಗಿ ನಾವು ಏನು ಮಾಡುತ್ತೀವಿ ಅಂತ ಮರುಚಿಂತಿಸಬೇಕಾಗಿದೆ’ ಎಂದು ಹೇಳಿದರು. ರಾಜಮೌಳಿ ಹೆಚ್ಚಾಗಿ ಬಿಗ್ ಬಜೆಟ್ ಸಿನಿಮಾಗಳನ್ನು ಮಾಡಿ ಸಕ್ಸಸ್ ಕಂಡವರು. ಇದೀಗ ಕಡಿಮೆ ಬಜೆಟ್ ನ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿ ಬೀಗುತ್ತಿರುವ ರೀತಿ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಾಂತಾರ ಸಕ್ಸಸ್ ಸಿನಿಮಾ ತಂತ್ರದ ಬಗ್ಗೆ ಮರುಚಿಂತಿಸುವಂತೆ ಮಾಡಿದೆ ಎಂದು ರಾಜಮೌಳಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಲು ಪ್ರತಿದಿನ ಜೇನುತುಪ್ಪವನ್ನು ಸೇವಿಸಿ > ತೆಂಗಿನಕಾಯಿ ಅಥವಾ ಎಳ್ಳಿನ ಎಣ್ಣೆಯಿಂದ ಪಾದದ ಅಡಿಭಾಗವನ್ನು ಹಗುರವಾಗಿ ಪ್ರತಿದಿನ ಮಸಾಜ್ ಮಾಡಿ > ದ್ವಿದಳ ಧಾನ್ಯಗಳು, ಮೊಟ್ಟೆಯಂತಹ ಪ್ರೋಟೀನ್ ಭರಿತ ಸೇವಿಸಿ > ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯಿರಿ ಖಾಲಿ ಹೊಟ್ಟೆಯಲ್ಲಿ ಕ್ಯಾರೆಟ್ ಜ್ಯೂಸ್ ಕುಡಿಯಿರಿ ಬಾದಾಮಿ, ವಾಲ್ ನಟ್ ಗಳನ್ನು ಆಹಾರದಲ್ಲಿ ಸೇರಿಸಿ. ವಾರಕ್ಕೆ ಒಮ್ಮೆಯಾದರೂ ಮಾಂಸಾಹಾರಿಗಳು ಮೀನನ್ನು ಸೇವಿಸಿದರೆ ಉತ್ತಮ ಕಾರಣ ಮೀನಿನಲ್ಲಿ ಒಮೆಗಾ-3 ಕೊಬ್ಬಿನ ಆಮ್ಲಗಳು ಇರುವುದರಿಂದ ಕಣ್ಣಿಗೆ ಉತ್ತಮವಾಗಿ ಇರುತ್ತದೆ. ಕಣ್ಣನ್ನು ಹತ್ತು ನಿಮಿಷಕ್ಕೆ ಒಂದು ಬಾರಿ ಅಥವಾ ಸಮಯ ಸಿಕ್ಕಾಗ ಕಣ್ಣನ್ನು ಮಿಟಿಕಿಸಿ ನಿಯಮಿತವಾಗಿ ಆಗ ಕಣ್ಣುಗಳು ಫ್ರೆಶ್ ಆಗಿ ಇರುತ್ತದೆ. ಮುಂಜಾನೆ ಅಥವಾ ಸಂಜೆಯ ವೇಳೆ ಬಿಸಿಲಿನಲ್ಲಿ ನೀವು ಇದ್ದಾಗ ಆಗ ಬರುವ ಸೂರ್ಯನ ಕಿರಣಗಳು ನಿಮ್ಮ ಕಣ್ಣುಗಳಿಗೆ ಉತ್ತಮ ಚಿಕಿತ್ಸೆ ಆಗಿರುತ್ತದೆ. ಮೊಬೈಲ್ ಹಾಗೂ ಕಂಪ್ಯೂಟರ್ ಬಳಸುವಾಗ ಬ್ರೈಟ್ನೆಸ್ ಕಡಿಮೆ ಇಟ್ಟು ಉಪಯೋಗಿಸಿ. ಪಾಲಕ್ ಸೊಪ್ಪನ್ನು ನಿಮ್ಮ…

Read More

ಉಡುಪಿ : ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಾರು ಗ್ರಾಮದಲ್ಲಿ ನಡೆದಿದೆ. ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಗರಾಜು (40), ಪತ್ನಿ ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಗಡಿ ವಿವಾದ ಕುರಿತು ಮಹಾರಾಷ್ಟ್ರ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮಿತ್ ಶಾ ಅವರನ್ನು ಭೇಟಿಯಾಗುವಂತೆ ಕರ್ನಾಟಕ ಸಂಸದರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ತಾವು ಕೂಡ ಸ್ವತಃ ದೆಹಲಿಗೆ ತೆರಳಿ ಮಾತುಕತೆ ನಡೆಸಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರೀಂ ಕೋರ್ಟ್​​​ನಲ್ಲಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಗಡಿ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿ ಮಾಡುವಂತೆ ರಾಜ್ಯ ಸಂಸದರಿಗೆ ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು…

Read More

ಪತ್ನಿ ಮೋಸ ಮಾಡಿದಳೆಂದು ಪತಿ 42 ವರ್ಷಗಳಿಂದ ಮನೆಯಲ್ಲಿ ಅನ್ನ ತಿನ್ನದೆ ಚಹಾ ಕುಡಿದು ಜೀವನ ಸಾಗಿಸುತ್ತಿದ್ದಾನೆ. ಜೈಪುರದ ರಾಮಚಂದ್ರ ಮತ್ತು ಸೀತಾ ಗಂಡ ಹೆಂಡತಿ. ಆದರೆ ಒಂದು ದಿನ ರಾಮಚಂದ್ರ, ಸೀತೆಗೆ ಅನ್ನ ಹಾಕಲು ಹೇಳಿದ. ಸೀತೆ ಅಸ್ವಸ್ಥಳಾಗಿದ್ದರಿಂದ ಅನ್ನ ಹಾಕಲು ಸಾಧ್ಯವಾಗಿರಲಿಲ್ಲ. ಪತ್ನಿಯ ಮೇಲೆ ಸಿಟ್ಟಿಗೆದ್ದ ಪತಿ 42 ವರ್ಷಗಳಿಂದ ಅನ್ನ ತಿನ್ನದೆ ಕೇವಲ ಚಹಾ, ಇತರೆ ತಿಂಡಿಗಳನ್ನು ತಿನ್ನುತ್ತಿದ್ದಾನೆ. ಆದರೆ ಅವರು ಇವತ್ತಿಗೂ ಹೆಂಡತಿ ಜೊತೆ ಉತ್ತಮ ಸಂಬಂಧಹೊಂದಿದ್ದಾರೆ. ವಿಭಿನ್ನ ಅನ್ನಿಸಿದರು ವಿಚಿತ್ರ ನೈಜ ಘಟನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗ್ಗೆ ಎದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿ.ಕೆ.ಶಿವಕುಮಾರ್ ಒದ್ದಾಡುತ್ತಿದ್ದಾರೆ. ಆದರೆ ನಾವೆಲ್ಲರೂ ಇದ್ದೇವೆ, ಧೈರ್ಯವಾಗಿರಪ್ಪ ಎಂದು ಆತ್ಮಸ್ಥೆರ್ಯ ತುಂಬುತ್ತಿದ್ದೇವೆಂದು ಡಾ.ಜಿ.ಪರಮೇಶ್ವರ್ ಹೇಳಿದ್ದು, ಈ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಪಕ್ಷವೊಂದರ ಅಧ್ಯಕ್ಷ ಸ್ಥಾನ ನಿಭಾಯಿಸುವುದು ಸುಲಭವಲ್ಲ. ಟಿಕೆಟ್ ಕೊಡಬೇಕು, ಗೆಲ್ಲಿಸಬೇಕು, ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ನನಗೆ ಸಾಮರ್ಥ್ಯ ಇದೆ ಎಂದೇ 8 ವರ್ಷ ಅಧ್ಯಕ್ಷ ಸ್ಥಾನ ನೀಡಿದ್ದರು ಎಂದಿದ್ದಾರೆ. ತುಮಕೂರಿನ ಕೊರಟಗೆರೆಯಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್, ಯಾವುದೇ ವ್ಯಕ್ತಿ ಪಕ್ಷ ಬರಬೇಕಾದರೇ ಉದ್ದೇಶ, ಕ್ಷೇತ್ರದ ಕೆಲಸ ಆಗಬೇಕು. ಕೆಲಸ ಮಾಡುವ ಸಾಮರ್ಥ್ಯ ಇರಬೇಕು. ಆ ಸಾಮರ್ಥ್ಯ ನನಗಿದೆ ಅಂದುಕೊಂಡಿದ್ದೇನೆ. ಬೇರೆಯವರಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಸಮರ್ಥ ನಾಯಕ ಎಂದು ನನ್ನನ್ನ ಪಕ್ಷ ಗುರುತಿಸಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮ್ಯಾಂಡಸ್ ಚಂಡಮಾರುತ ಉಂಟಾಗಿದ್ದು, ರಾತ್ರಿ 1.30ರ ವೇಳೆಗೆ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಸುಮಾರು 70 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ತಮಿಳುನಾಡಿನ ಚೆಂಗಲ್ ಪೇಟೆ, ನಾಗಪಟ್ಟಣಂ, ಕೊಡೈಕೆನಾಲ್, ಪುದುಚೇರಿ ಸೇರಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು & ಪುದುಚೇರಿ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ಇನ್ನು ಭಾರೀ ಮಳೆ ಪರಿಣಾಮ ನಗರದ ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕಾಂಗ್ರೆಸ್ ಪಕ್ಷ ಯಾರೊಬ್ಬರ ಮನೆ ಆಸ್ತಿಯಲ್ಲ, ಇದು ನಮ್ಮ ಶಕ್ತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು..? ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಕಾಂಗ್ರೆಸ್ ನಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ನಾವು ಬೇರೆಯವರ ಹಾಗೆ ಮುಸ್ಲಿಂ ಸಿಎಂ ಮಾಡ್ತೀವಿ ಎಂದು ಹೇಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡಿದರು. ದಲಿತ ಎಂತಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಅವರು ಪಕ್ಷದಲ್ಲಿ ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ಹಾಗೂ ಸಮರ್ಥ ರಾಜಕಾರಣಿ ಎಂಬ ಕಾರಣಕ್ಕೆ ಅಧ್ಯಕ್ಷ ಹುದ್ದೆ ನೀಡಲಾಗಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ಸಭೆ ನಡೆಸಲಿದ್ದಾರೆ. ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಮುಖ್ಯಮಂತ್ರಿಗೆ ಸೂಚಿಸಬೇಕು ಎಂದು ಹೇಳಿದೆ. ಇನ್ನು ಗಡಿ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್‍ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿರುವ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಶಾಲೆಗಳಲ್ಲಿ, ಹಾಗೂ ಒಂದೇ ಅಡುಗೆ ಮನೆ ಇರುವ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 1-5ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ, 6 ರಿಂದ 10ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ 2 ಗಂಟೆಯಿಂದ 2.40 ರವರೆಗೆ ಪ್ರತ್ಯೇಕ ಸಮಯದಲ್ಲಿ ಬಿಸಿಯೂಟ ವಿತರಿಸಲು ತಿಳಿಸಲಾಗಿದೆ. ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಚರ್ಚಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ದೊಡ್ಡ ಮಕ್ಕಳೊಂದಿಗೆ ಚಿಕ್ಕ ಮಕ್ಕಳನ್ನು ಒಟ್ಟಿಗೆ ನಿಲ್ಲಿಸಿ ಆಹಾರ ವಿತರಿಸಿವುದು ಮತ್ತು ಕಡಿಮೆ ಸಮಯದಲ್ಲಿ ಊಟ ನೀಡುವುದು, ತಟ್ಟೆ – ಲೋಟ ತೊಳೆಯುವಾಗ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಬಿಸಿಯೂಟ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲು ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More