Author: admin

ತುಮಕೂರು:  ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ಕಣ್ಣಿನ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಹೀಗಾಗಿ ತುಮಕೂರಿನ ಕೆ.ಎನ್.ರಾಜಣ್ಣ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಇಬ್ಬರೂ ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಬೆಂಗಳೂರಿನಿಂದ ಬೆಳಗಾವಿಗೆ ಹೋಗುವ ದಾರಿ ಮಧ್ಯೆ  ಕೆ.ಎನ್.ರಾಜಣ್ಣ ಮನೆಗೆ  ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಳಗಾವಿ:  ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ  ಬೆಳಗಾವಿ  ಜಿಲ್ಲೆಯ ಕಿತ್ತೂರು  ತಾಲೂಕಿನ ಇಟಗಿ ಕ್ರಾಸ್​ನ ರಾಷ್ಟ್ರೀಯ ಹೆದ್ದಾರಿ 4ರ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದ ರಾಮಚಂದ್ರ ಜಾಧವ್ (45),  ಮಗ ಮಹೇಶ್ ರಾಮಚಂದ್ರ ಜಾಧವ್ (18), ರಾಮಣ್ಣ ಅಲಿಯಾಸ್ ರಮೇಶ್ (38) ಮೃತಪಟ್ಟ ಕಾರ್ಮಿಕರಾಗಿದ್ದಾರೆ.  ಮೃತ ರಾಮಚಂದ್ರ ಪತ್ನಿ  ಲಕ್ಷ್ಮೀಬಾಯಿ, ಅನುಶ್ರೀ,  ಮೃತ ರಾಮಣ್ಣನ ಪತ್ನಿ ಭೀಮವ್ವ (55)  ಗಂಭೀರವಾಗಿ ಗಾಯಗೊಂಡಿದ್ದಾರೆ. ಎನ್ ​ಹೆಚ್ ಎಐನಲ್ಲಿ ದಿನಗೂಲಿ ಕೆಲಸಕ್ಕಾಗಿ ಕಲಬುರಗಿಯ ಕಲಬುರಗಿಯ ಶಹಬಾದ್, ಸೇಡಂ, ಚಿಂಚೋಳಿಯಿಂದ ಬಂದಿದ್ದರು.  ಭಾನುವಾರ ಬೆಳಿಗ್ಗೆ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯಿಲ್ ತುಂಬಿದ್ದ ಟ್ಯಾಂಕರ್ ಏಕಾಏಕಿ ಹರಿದು, ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್​ ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸರು ಹೊರ ತೆಗೆದಿದ್ದಾರೆ. ಟ್ಯಾಂಕರ್​ ಚಾಲಕ ದಿನೇಶ್ ಶೆಟ್ಟಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.  ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕ ಯುವತಿ ಮೇಲೆ ಬಸ್​ ಹತ್ತಿಸಲು ಯತ್ನಿಸಿರುವ ಘಟನೆ ಆಘಾತಕಾರಿ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್​ ಜಂಕ್ಷನ್​ (ಎಂ.ಜಿ.ರಸ್ತೆ) ಬಳಿ ನಡೆದಿದೆ. ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದೆ. ಬಿಎಂಟಿಸಿ ಬಸ್​ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೀನ್ಸ್​ ಜಂಕ್ಷನ್​ ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಈ ವೇಳೆ ಆಕ್ರೋಶಗೊಂಡ ಚಾಲಕ ಯುವತಿಯ ಮೇಲೆ​ ಬಸ್​ ನುಗ್ಗಿಸಿದ್ದಾನೆ. ಆದರೆ, ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನರು ಬೆಚ್ಚಿಬಿದ್ದಿದ್ದರು. ಇನ್ನು, ಯುವತಿಯ ಮೇಲೆ ಬಸ್​ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.  ಸದ್ಯ ಬಸ್  ಚಾಲಕ ಪ್ರಶಾಂತ್ ನನ್ನು ಅಮಾನತುಗೊಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಕಂತು ಯಾವಾಗ ಸಿಗುತ್ತದೆ ಎಂದು ಫಲಾನುಭವಿಗಳು ಕಾಯುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಬಂದಿಲ್ಲ ಎಂದು ಫಲಾನುಭವಿಗಳು ಕಂಗಾಲಾಗಿದ್ದರು.  ಈ ನಡುವೆ ನಿನ್ನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಏಪ್ರಿಲ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮಾವಾಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಜನವರಿ ಫೆಬ್ರವರಿಯ ಹಣ ನಾವು ಹಾಕಿದ್ದೀವಿ, ಒಂದು ತಿಂಗಳ ಮಾರ್ಚ್ ನಲ್ಲಿ ನಮ್ಮ ಪೈನಾನ್ಸ್ ಇಯರ್ ಇರುತ್ತದೆ ಹಾಗಾಗಿ ಒಂದು ತಿಂಗಳದ್ದು ಹೆಚ್ಚುಕಮ್ಮಿಯಾಗಿದೆ. ಮಿಕ್ಕಿದ್ದು ಯಥಾವತ್ತಾಗಿ ಜಮಾ ಆಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಿವಲಿಂಗ ಹೇಡೆಗೆ ಅವರಿಗೆ ಗುಲ್ಬರ್ಗಾವಿಶ್ವ ವಿದ್ಯಾಲಯ ಪಿಎಚ್.ಡಿ.ಪದವಿ ನೀಡಿದೆ. ಡಾ.ಜಯಶ್ರೀ ದಂಡೆ ಅವರ ಮಾರ್ಗದರ್ಶನದಲ್ಲಿ ’12ನೇ ಶತಮಾನದ ಶರಣರು: ಬೀದರ್ ಜಿಲ್ಲೆಯ ಮೌಖಿಕ ಸಾಹಿತ್ಯ ‘ ವಿಷಯ ಕುರಿತು ಮಂಡಿಸಿದ ಮಹಾಪ್ರಬಂಧವನ್ನು ವಿಶ್ವವಿದ್ಯಾಲಯ ಪಿಎಚ್.ಡಿ.ಪದವಿಗೆ ಮಾನ್ಯ ಮಾಡಿದೆ. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ ಮಾಡಿದೆ. ಡಿಜಿ & ಐಜಿಪಿ ಹೊಸ ರೂಲ್ಸ್  ಆದೇಶದಲ್ಲೇನಿದೆ? *   ಸಕಾರಣವಿಲ್ಲದೆ ವಾಹನಗಳನ್ನ ತಡೆದು ತಪಾಸಣೆಗೆ ಒಳಪಡಿಸಬಾರದು *   ಕಣ್ಣಿಗೆ ಕಾಣುವ (visible Violation) ಕಂಡುಬಂದಲ್ಲಿ ಮಾತ್ರವೇ ವಾಹನಗಳನ್ನ ನಿಲ್ಲಿಸಬೇಕು *   ಹೆದ್ದಾರಿಯಲ್ಲಿ ಜಿಗ್ ಜ್ಯಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಡೆಯಬಾರದು *   ರಸ್ತೆಯಲ್ಲಿ ದಿಢೀರನೆ ಅಡ್ಡ ಬಂದು ವಾಹನಗಳನ್ನ ನಿಲ್ಲಿಸುವಂತೆ ಹೇಳಬಾರದು *   ದ್ವಿಚಕ್ರವಾಹನದ ಹಿಂಬದಿ ಸವಾರನನ್ನ ಹಿಡಿದು ಎಳೆಯುವಂತಿಲ್ಲ *   ವಾಹನಗಳ ಕೀ ಕಸಿಯುವುದನ್ನು ಮಾಡಬಾರದು *   ವೇಗವಾಗಿ ಬರುವ ವಾಹನಗಳ ಬೆನ್ನಟ್ಟದೆ ನೊಂದಣಿ ಸಂಖ್ಯೆ ಗುರುತು ಮಾಡಿ ಕಂಟ್ರೋಲ್ ರೂಂ ಗೆ ಮಾಹಿತಿ ನೀಡುವುದು *   ವಾಹನಗಳ ತಪಾಸಣೆ ವೇಳೆ ಪೊಲೀಸ್ರು ರಿಫ್ಲೆಕ್ಟೀವ್ ಜಾಕೆಟ್ ಧರಿಸಿರಬೇಕು *   ಸಂಜೆ ಸಮಯದಲ್ಲಿ ಕಡ್ಡಾಯವಾಗಿ ಎಲ್ ಇ ಡಿ ಬಟನ್ ಬಳಸಬೇಕು…

Read More

ಥಾಣೆ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ನಗರದ ವಿಶೇಷ ನ್ಯಾಯಾಲಯ 40 ವರ್ಷದ ಗೃಹಿಣಿಯೊಬ್ಬರಿಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಮೇ 30ರಂದು ನೀಡಿರುವ ಆದೇಶದಲ್ಲಿ, ವಿಶೇಷ ಪೋಕ್ಸೊ ಕಾಯ್ದೆಯ ನ್ಯಾಯಾಧೀಶ ಡಿಎಸ್ ಎ ದೇಶ್‌ ಮುಖ್ ಅವರು ಮುಂಬೈನ ಗೋರೆಗಾಂವ್ ಪ್ರದೇಶದ ನಿವಾಸಿಯಾದ ಅಪರಾಧಿಗೆ 14,000 ರೂ. ದಂಡವನ್ನು ವಿಧಿಸಿದ್ದಾರೆ. ವಿಶೇಷ ಅಭಿಯೋಜಕಿ ರೇಖಾ ಹಿವ್ರಾಲೆ ಅವರ ಪ್ರಕಾರ, ವಿಚಾರಣೆಯ ಸಮಯದಲ್ಲಿ ಒಟ್ಟು ಏಳು ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಮುಂಬೈ ನಿವಾಸಿಯಾದ ಮಹಿಳೆಯನ್ನು 2021ರ ಏಪ್ರಿಲ್ 5 ರಂದು ಥಾಣೆಯ ವ್ಯಾಗ್ಲೆ ಎಸ್ಟೇಟ್ ಪ್ರದೇಶದ ಪಾಸ್‌ಪೋರ್ಟ್ ಕಚೇರಿ ಬಳಿಯ ಹೋಟೆಲ್‌ ನಲ್ಲಿ ಇಬ್ಬರು ಬಾಲಕಿಯರೊಂದಿಗೆ ಇದ್ದ ವೇಳೆ ಬಂಧಿಸಲಾಯಿತು. ‘ಓರ್ವ ಅಪ್ರಾಪ್ತೆ–A’ ಮತ್ತು ಮಹಿಳೆಯ ಮಗಳು ಸ್ನೇಹಿತರಾಗಿದ್ದರು. ಬಡ ಕುಟುಂಬದಿಂದ ಬಂದ ಅಪ್ರಾಪ್ತೆಗೆ ವೇಶ್ಯಾವಾಟಿಕೆ ಮಾಡಿದರೆ ಉತ್ತಮ ಹಣ ಸಿಗುತ್ತದೆ ಎಂದು ಮಹಿಳೆ ಹೇಳಿದ್ದಾಳೆ. ನಂತರ, ಮಹಿಳೆ ಆಕೆಯನ್ನು ಗ್ರಾಹಕರ…

Read More

ಬೆಂಗಳೂರು: ತಮಿಳಿನಿಂದಲೇ ಕನ್ನಡ ಜನಿಸಿದೆ ಎಂದು ಕಮಲ್ ಹಾಸನ್ ನೀಡಿರುವ ಹೇಳಿಕೆಗೆ  ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಅವರ ವಿರುದ್ಧ ಕೆಲವರು ಟೀಕೆಗಳನ್ನು ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ  ನಟ ಶಿವರಾಜ್ ಕುಮಾರ್ ಮೌನಮುರಿದಿದ್ದಾರೆ. ಕನ್ನಡವೇ ನನ್ನ ಮೊದಲ ಆದ್ಯತೆ, ಇದು ಮೊದಲ ಬಾರಿಯಲ್ಲ, ಪ್ರತಿಬಾರಿಯೂ ಕನ್ನಡದ ವಿಷಯ ಬಂದಾಗೆಲ್ಲ ನಾನು ನಿಂತಿದ್ದೇನೆ. ಕನ್ನಡಕ್ಕಾಗಿ ನಾನು ಏನು ಮಾಡಿದ್ದೇನೆ ಎಂಬುದು ಕರ್ನಾಟಕದ ಜನರಿಗೆ ಗೊತ್ತಿದೆ, ಅದನ್ನು ಯಾರಿಂದಲೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಂದಿನ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೆ ಎಂದು ಶಿವರಾಜ್ ಕುಮಾರ್ ಹೇಳಿದರು. ಇದೇ ವೇಳೆ ಈ ವಿವಾದಕ್ಕೆ ನಿಮ್ಮ ಹೆಸರು ಎಳೆದುತರಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಇರಲಿ ತೊಂದರೆ ಇಲ್ಲ, ನಾನು ಅದರ ಬಗ್ಗೆ ಎಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ, ನನ್ನ ಆತ್ಮಸಾಕ್ಷಿಗೆ ನಾನು ಸರಿಯಾಗಿದ್ದೇನೆ. ನಾನು ಕಲೆಗಾಗಿ ಬದುಕುತ್ತಿರುವವನು, ಕಲೆಯಿಂದಲೇ ನಾವು, ಎಲ್ಲ ಭಾಷೆಗಳ ಬಗ್ಗೆಯೂ ಗೌರವ ಇದೆ, ಆದರೆ ಕನ್ನಡ…

Read More

ಬೆಂಗಳೂರು:  ಯುವತಿಯೊಬ್ಬಳು ಆಟೋ ಚಾಲಕನಿಗೆ ಸಾರ್ವಜನಿಕ ಸ್ಥಳದಲ್ಲೇ ಚಪ್ಪಲಿಯಲ್ಲಿ ಹೊಡೆದ ಅಮಾನವೀಯ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿದೆ. ಆಟೋ ಚಾಲಕ ಬೆಳ್ಳಂದೂರಿಗೆ ಬಾಡಿಗೆಗೆ ಬಂದಿದ್ದರು. ಈ ವೇಳೆ ಸೆಂಟ್ರಲ್ ಮಾಲ್ ಬಳಿ ಬೈಕ್‍ನಲ್ಲಿ ಬಂದ ಯುವತಿ, ನೀನು ನಮ್ಮ ವಾಹನಕ್ಕೆ ಟಚ್ ಮಾಡಿದ್ದೀಯಾ ಎಂದು ಆಟೋ ಚಾಲಕನ ಬಳಿ ಹಿಂದಿಯಲ್ಲಿ ಗಲಾಟೆ ಆರಂಭಿಸಿದ್ದಾಳೆ. ಅಲ್ಲದೇ ಅವರ ಮೇಲೆ ಚಪ್ಪಲಿಯಲ್ಲಿ ಹಲ್ಲೆ ನಡೆಸಿದ್ದಾಳೆ. ಯುವತಿ ಹಲ್ಲೆ ನಡೆಸಿರುವ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ. ಹಲ್ಲೆ ನಡೆಸುವ ವೇಳೆ, ಸಾರ್ವಜನಿಕರು ಆಟೋ ಚಾಲಕನ ನೆರವಿಗೆ ಬಂದಿದ್ದು, ಯುವತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆಗೆ ಬರುವುದಾಗಿ ಹೇಳಿ ಯುವತಿ ಹಾಗೂ ಆಕೆಯ ಜೊತೆಗಿದ್ದ ಯುವಕ ಇಬ್ಬರೂ ಪರಾರಿಯಾಗಿದ್ದಾರೆ. ಈ ವಿಚಾರವಾಗಿ ಯುವತಿಯನ್ನು ಠಾಣೆಗೆ ಕರೆಸಿ ಕಾನೂನಾತ್ಕವಾಗಿ ಕ್ರಮ ಜರುಗಿಸಬೇಕು ಎಂದು ಆಟೋ ಚಾಲಕ ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ. ಈ ಕ್ರಮಕ್ಕೆ ಖಾಸಗಿ ಕಂಪನಿಯೊಂದು ಹಣಕಾಸು ಒದಗಿಸಿದ್ದು, ಸಪೋರ್ಟ್ ಫಾರ್ ನೆಟ್‌ ವರ್ಕ್ ಮತ್ತು ಎಕ್ಸ್‌ ಟೆನ್ಶನ್ ಹೆಲ್ಪ್ ಏಜೆನ್ಸಿ (SNEHA) ಎಂಬ ಸರ್ಕಾರೇತರ ಸಂಸ್ಥೆಯಿಂದ ಸೈರನ್ ವ್ಯವಸ್ಥೆ ಸ್ಥಾಪಿಸಲಾಗಿದೆ. ಕೊಡಗಿನ ವಿರಾಜಪೇಟೆಯಾದ್ಯಂತ ವನ್ಯಜೀವಿಗಳ ಚಲನೆಯ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಲು ಸೈರನ್ ವ್ಯವಸ್ಥೆಯನ್ನು SNEHA ಸಂಸ್ಥೆ ಪ್ರಾಯೋಗಿಕವಾಗಿ ಆರಂಭಿಸಿದೆ. ಬಡಗ ಬನಂಗಾಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಘರ್ಷ ವಲಯಗಳಲ್ಲಿ 12 ಅಂತಹ ಸೈರನ್‌ಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿ NGO ಕೆಲಸ ಮಾಡುತ್ತಿದೆ. ಈ ಯೋಜನೆ ಪ್ರಸ್ತುತ ಪ್ರಾಯೋಗಿಕ ಹಂತದಲ್ಲಿದ್ದರೂ, ಸ್ವಯಂಚಾಲಿತ ಎಚ್ಚರಿಕೆ ವ್ಯವಸ್ಥೆಗಳನ್ನು ಪರಿಚಯಿಸುವ ಮೂಲಕ ಅದನ್ನು ಮತ್ತಷ್ಟು ವಿಸ್ತರಿಸಲು SNEHA ಯೋಜಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More