Subscribe to Updates
Get the latest creative news from FooBar about art, design and business.
- ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ
- ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
- ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
- ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
- ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್ ಸಂಘ
- ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
- ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
- ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
Author: admin
ಗಾಲಿ ಜನಾರ್ದನ ರೆಡ್ಡಿ ಬೇರೆ ಪಕ್ಷ ಕಟ್ಟುವುದಿಲ್ಲ, ಒಂದು ವೇಳೆ ಪಕ್ಷ ಕಟ್ಟಿದರೆ ಸ್ನೇಹ ಬೇರೆ ಪಕ್ಷ ಬೇರೆ. ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಸ್ನೇಹ ಮತ್ತು ಪಕ್ಷ ಎರಡನ್ನೂ ಒಟ್ಟಾಗಿಯೇ ಇರುವಂತೆ ಮಾಡುತ್ತೇನೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ‌್ದಾರೆ. ಜನಾರ್ದನ ರೆಡ್ಡಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲೊಬ್ಬರು. ಅವರು ಈ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಕಟ್ಟುವ ಪ್ರಶ್ನೆಯೇ ಇಲ್ಲ. ಪಕ್ಷದೊಳಗೇ ಇರುತ್ತಾರೆ ಎಂದೂ ಪತ್ರಕರ್ತರ ಪ್ರಶ್ನೆಗೆ ರಾಮುಲು ಉತ್ತರಿಸಿದ್ದಾರೆ. ಸಾರಿಗೆ ಇಲಾಖೆಯ ನಿಗಮಗಳ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸಲು 2 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆಯನ್ನು ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ. 30 ಸಾವಿರ ಬಸ್‌ಗಳನ್ನು ಬದಲಾಗಿ ಹೊಸ ಬಸ್ ಖರೀದಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಗಂಗಾವತಿ ನಗರದಲ್ಲಿ ಇತ್ತೀಚೆಗಷ್ಟೇ ಮನೆ ಖರೀದಿ ಮಾಡಿರುವ ಜನಾರ್ದನ ರೆಡ್ಡಿ, ನಗರಸಭೆ ಬಿಜೆಪಿ ಸದಸ್ಯ ರಮೇಶ ಚೌಡ್ಕಿ ಹಾಗೂ ಹಲವು ಮುಖಂಡರ…
ವರನ ಮನೆಯಿಂದ ಮದುವೆ ದಿಬ್ಬಣ ಹೊರಡುವ ಕೆಲವೇ ಕ್ಷಣಗಳ ಮುನ್ನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ರಾಜಸ್ಥಾನ್ ನಲ್ಲಿ ಶುಕ್ರವಾರ ಸಂಭವಿಸಿದೆ. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತಿಥಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾಗ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿತು. ಇದರಿಂದ ಕನಿಷ್ಠ 50 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಜೋಧ್ ಪುರದಿಂದ 60 ಕಿ.ಮೀ. ದೂರದ ಭುಂಗ್ರಾ ಗ್ರಾಮದಲ್ಲಿ ಗ್ಯಾಸ್ ಸೋರಿಕೆಯಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರಲ್ಲಿ ಕೆಲವರಿಗೆ ಶೇ.80ರಿಂದ 100ರಷ್ಟು ಸುಟ್ಟ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಕುಸಿದಿದೆ. ಘಟನೆಯಲ್ಲಿ 12 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕನ್ನಡಕ್ಕೆ ಆತಂಕವಿದೆ. ಕನ್ನಡ ಮೂಲೆಗುಂಪಾಗುತ್ತದೆ ಎನ್ನುವ ಆತಂಕ ಸುಳ್ಳು’ ಎಂದು ಖ್ಯಾತ ಚಲನಚಿತ್ರ ನಿರ್ದೇಶಕರಾದ ಯೋಗರಾಜ ಭಟ್ ಅಭಿಪ್ರಾಯಪಟ್ಟರು. ಬಹುರೂಪಿ’ ಪ್ರಕಾಶನ ಹಾಗೂ ‘ಬ್ಲಾಸಮ್ ಬುಕ್ ಹೌಸ್’ ಜಂಟಿಯಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಖ್ಯಾತ ಕಿರುತೆರೆ ನಟಿ ರಂಜನಿ ರಾಘವನ್ ಅವರ ‘ಸ್ವೈಪ್ ರೈಟ್’ ಕಾದಂಬರಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಕನ್ನಡ ಭಾಷೆ ಹುಟ್ಟಿದಾಗಿನಿಂದಲೂ ಭಾಷೆ ಮೂಲೆಗುಂಪಾಗುತ್ತಿದೆ ಎನ್ನುವ ಮಾತೂ ಕೇಳಿಬರುತ್ತಿದೆ. ಬೆಂಗಳೂರು ದಾಟಿದರೆ ಕನ್ನಡ ನೆಮ್ಮದಿಯಾಗಿಯೇ ಇದೆ. ಬೆಂಗಳೂರಿನಲ್ಲಿ ಮಾತ್ರ ನಾವು ಅನಗತ್ಯ ಗೊಂದಲಕ್ಕೆ ಒಳಗಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು. ಇತ್ತೀಚೆಗೆ ಮಹಾಪ್ರಾಣ ಕಿತ್ತುಹಾಕಬೇಕು ಎನ್ನುವ ಮಾತು ಕೇಳಿಬರುತ್ತಿದೆ. ಮಹಾಪ್ರಾಣ ಇರಬೇಕೇ, ಇಲ್ಲದಿರಬೇಕೇ ಎನ್ನುವುದಕ್ಕಿಂತ ಕನ್ನಡ ಮಾತನಾಡುತ್ತ ಇರಬೇಕು ಎನ್ನುವುದೇ ಮುಖ್ಯವಾಗಬೇಕು ಎಂದು ಯೋಗರಾಜ ಭಟ್ ಅವರು ಕಿವಿಮಾತು ಹೇಳಿದರು. ರಂಜನಿ ರಾಘವನ್ ಅವರ ಬರಹ ಸ್ತ್ರೀ ಸಮುದಾಯಕ್ಕೆ ಸಹಜವಾಗಿ ಇರುವ ಕಥನ ಕಲೆಯ ಹಿರಿಮೆಯನ್ನು ತೋರಿಸುತ್ತದೆ. ಕಥನ ಕಲೆ ರಂಜನಿ ಅವರಿಗೆ ಸಿದ್ಧಿಸಿದೆ ಎಂದರು. ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ,…
ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಬಿಜೆಪಿ 157 ಸ್ಥಾನದಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಭೂತ ಪೂರ್ವ ಜಯ ಸಾಧಿಸಿದೆ. ಈ ಕುರಿತು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಭೂತಪೂರ್ವ ಚುನಾವಣಾ ಫಲಿತಾಂಶ ದಿಂದ ಸಂತಸದಿಂದಿದ್ದೇನೆ. ಅಭಿವೃದ್ದಿ ರಾಜಕಾರಣಕ್ಕೆ ಗುಜರಾತಿಗಳಿಂದ ಆಶೀರ್ವಾದ ಸಿಕ್ಕಿದೆ. ಗುಜರಾತ್ ನಲ್ಲಿ ಮತ್ತಷ್ಟು ಅಭಿವೃದ್ದಿ ವೇಗ ನೀಡಬೇಕೆಂಬ ಬಯಕೆ ಇದೆ. ಗುಜರಾತ್ ಜನಶಕ್ತಿಗೆ ನಾನು ತಲೆ ಬಾಗುತ್ತೇನೆ ಎಂದಿದ್ದಾರೆ. ಪ್ರಚಂಡ ಜಯಕ್ಕೆ ಕಾರಣಕರ್ತರಾದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ. ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಗೆಲುವು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತೆರಿಗೆ ಕಟ್ಟದೆ ವಂಚನೆ ಮಾಡುತ್ತಿರುವ ಆರೋಪದ ಮೇಲೆ ಬೆಂಗಳೂರು ಸೇರಿ ಹಲವೆಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟದೆ ವಂಚನೆ ಮಾಡಿದ ಆರೋಪದ ಮೇಲೆ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದೆ. ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ ರಾಮನಗರ, ಬಿಡದಿಯಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗಡಿವಿವಾದ ತಾರಕಕ್ಕೇರಿದ ಹಿನ್ನೆಲೆ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ-ಮಹಾರಾಷ್ಟ್ರ ನಡುವಿನ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇದೀಗ ಮತ್ತೆ ಆರಂಭವಾಗಿದೆ. ಬೆಳಗಾವಿ-ಮಹಾರಾಷ್ಟ್ರ ನಡುವೆ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಿದೆ. ಬೆಳಗಾವಿಯಿಂದ 400ಕ್ಕೂ ಹೆಚ್ಚು ಬಸ್ ಸಂಚರಿಸುತ್ತಿದ್ದು, ಮಹಾರಾಷ್ಟ್ರದಿಂದಲೂ ಬೆಳಗಾವಿಗೆ ಬಸ್ ಆಗಮಿಸುತ್ತಿವೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿವಿವಾದದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಹಾರಾಷ್ಟ್ರದ ಕೆಲ ಕಿಡಿಗೇಡಿ ಪುಂಡರು ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ಮಸಿ ಬಳಿದು ಉದ್ಧಟತನ ತೋರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಕಾಲೇಜು ಆಡಳಿತ ಮಂಡಳಿ ಡ್ಯಾನ್ಸ್ ಮಾಡಿದ ನಾಲ್ವರನ್ನ ಅಮಾನತು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದ ಚರಂಡಿಯಲ್ಲಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಮೃತದೇಹ ಸಿಕ್ಕಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾಗಿ ಸೂಟ್ಕೇಸ್ವೊಂದು ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಆ ಸೂಟ್ಕೇಸ್ನಿಂದ ದುರ್ವಾಸನೆ ಬರುತ್ತಿರುವುದಾಗಿ ಕರೆ ಮಾಡಿದವರು ತಿಳಿಸಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್ಕೇಸ್ ಅನ್ನು ಹೊರತೆಗೆದು ಪರಿಶೀಲಿಸಿದಾಗ ತೀರಾ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆ ಮಹಿಳೆಯ ವಯಸ್ಸು28ರಿಂದ 30 ವರ್ಷ ಎಂದು ಅಂದಾಜಿಸಲಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತ ತಂಡದ ನಾಯಕ, ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಸಿಕ್ಸರ್ ಬಾರಿಸಿದ, ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ ಎಂಬ ದಾಖಲೆ ಬರೆದರು. ವೆಸ್ಟ್ಇಂಡೀಸ್ನ ದೈತ್ಯ ಬ್ಯಾಟ್ಸ್ಮ್ಯಾನ್ ಕ್ರಿಸ್ ಗೇಲ್ 553 ಸಿಕ್ಸರ್ ಸಿಡಿಸಿದ ಮೊದಲಿಗರಾಗಿದ್ದು, ಈ ದಾಖಲೆ ಮುರಿಯಲು ರೋಹಿತ್ ಇನ್ನೂ 54 ಸಿಕ್ಸರ್ ಬಾರಿಸಬೇಕಿದೆ. ಬಾಂಗ್ಲಾ ವಿರುದ್ಧ ನಡೆದ 2ನೇ ಏಕದಿನ ಪಂದ್ಯದಲ್ಲಿ ಗಾಯದ ಮಧ್ಯೆಯೂ ಕೊನೆಯಲ್ಲಿ ಮೈದಾನಕ್ಕಿಳಿದ ಹಿಟ್ಮ್ಯಾನ್, 3 ಬೌಂಡರಿ 5 ಸಿಕ್ಸರ್ ಸಮೇತ 51 ರನ್ ಗಳಿಸಿದರೂ ಭಾರತ ಪಂದ್ಯ ಸೋಲು ಕಂಡಿತು. ರೋಹಿತ್ ಈ ಪಂದ್ಯದಲ್ಲಿ 3ನೇ ಸಿಕ್ಸರ್ ಬಾರಿಸಿದಾಗ 500 ಸಿಕ್ಸರ್ ದಾಖಲೆ ಬರೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜೊತೆ ಜೊತೆಯಲಿ ವಿವಾದದಿಂದ 2 ವರ್ಷ ಕಿರುತೆರೆಯಿಂದ ನಿಷೇಧಕ್ಕೆ ಒಳಗಾಗಿದ್ದ ನಟ ಅನಿರುದ್ಧ್ ಇದೀಗ ಕಿರುತೆರೆಗೆ ಮರಳುವ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ನಟ ಅನಿರುದ್ಧ್ರಿಗೆ ಯಾವುದೇ ವಾಹಿನಿಗಳು ಕೂಡ ಕೆಲಸ ಕೊಡದಂತೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಚಿತ್ರಣ ಬೇರೆ ರೀತಿಯಲ್ಲೇ ಬದಲಾಗಿದೆ. ನಿರ್ಮಾಪಕರ ಸಂಘ ಮಾಡಿಕೊಂಡಿದ್ದ ಮನವಿಯನ್ನು ಉದಯ ವಾಹಿನಿ ತಳ್ಳಿಹಾಕಿದೆ. ಪರಿಣಾಮ ಸೂರ್ಯವಂಶ ಧಾರಾವಾಹಿಗೆ ಅನಿರುದ್ಧ ಅವರನ್ನು ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಅನಿರುದ್ಧ ಅವರೇ ಸ್ಪಷ್ಟ ಪಡಿಸಿದ್ದಾರೆ. ತಾವು ಉದಯ ವಾಹಿನಿಯಲ್ಲಿ ಪ್ರಸಾರ ಕಾಣಲಿರುವ ಸೂರ್ಯವಂಶ ಧಾರಾವಾಹಿಯಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಅವರು, ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಧಾರಾವಾಹಿಯಲ್ಲಿ ನಟಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ. S.ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ…