Subscribe to Updates
Get the latest creative news from FooBar about art, design and business.
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
- ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
- ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
- ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
- ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
- ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
- ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್ ಗೌಡ
- ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
Author: admin
ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ‘ದಹಿ’ ಎಂದು ಮುದ್ರಣ ಮಾಡುವುದು ಕಡ್ಡಾಯ ಎಂದು ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಆದೇಶಿಸಿರುವುದನ್ನ ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಪ್ರಧಾನಿ ಮೋದಿ ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ. ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್…
ಔಷಧಿಗಳ ಬೆಲೆ ಇಷ್ಟು ಏರಿಕೆಯಾಗಿರುವುದು ಇದೇ ಮೊದಲು ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 900 ಔಷಧಿಗಳ ಬೆಲೆ ಶೇ.12ರಷ್ಟು ಏರಿಕೆಯಾಗಿದೆ. ಪ್ರಸ್ತುತ ಅವುಗಳನ್ನು ನಿಯಂತ್ರಿತ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಕಳೆದ ವರ್ಷ ಶೇ 10ರಷ್ಟು ಬೆಲೆ ಏರಿಕೆಯಾಗಿತ್ತು. ಎರಡು ವರ್ಷಗಳಲ್ಲಿ ಶೇ.22ರಷ್ಟು ಹೆಚ್ಚಳವಾಗಿದೆ .ನೋವು ನಿವಾರಕಗಳು, ಆ್ಯಂಟಿಬಯೋಟಿಕ್‌ಗಳು ಮತ್ತು ಅಲರ್ಜಿ ಔಷಧಿಗಳ ಬೆಲೆಯೂ ಏರಿಕೆಯಾಗಲಿದೆ. ಇದರಿಂದ ಜನಸಾಮಾನ್ಯರ ವೈದ್ಯಕೀಯ ವೆಚ್ಚದಲ್ಲಿ ಭಾರಿ ಏರಿಕೆಯಾಗಲಿದೆ. ಕಳೆದ ವರ್ಷ, ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು ಔಷಧಿಗಳ ಸಗಟು ಬೆಲೆ ಸೂಚ್ಯಂಕದಲ್ಲಿ 10.7 ಶೇಕಡಾ ಹೆಚ್ಚಳವನ್ನು ಘೋಷಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೆಚ್.ಡಿ.ಕೋಟೆ: ಹೆಚ್.ಡಿ. ಕೋಟೆ ಆಡಳಿತ ಸೌಧ ಕಾರ್ಯಲಯದಲ್ಲಿ ವಿಧಾನಸಭಾ ಸದಸ್ಯರ ಬೋರ್ಡ್ ತೆರವು ಗೊಳಿಸದ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಘಟನೆ ನಡೆದಿದೆ. ಆಡಳಿತ ಸೌಧದ ಕೊಠಡಿ ಒಂದರ ಮುಂದೆ ಶಾಸಕ ಅನಿಲ್ ಚಿಕ್ಕಮಾದು ಹೆಸರು ರಾರಾಜಿಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣದಲ್ಲಿ ಅಧಿಕಾರಿಗಳು ಬೋರ್ಡ್ ತೆರವುಗೊಳಿಸಬೇಕಿತ್ತು. ಆದರೆ, ತಾಲೂಕು ಆಡಳಿತ ಸಿಬ್ಬಂದಿ ವರ್ಗವು ದಿವ್ಯ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ. ಮಾರ್ಚ್ 29ರಂದು ನೀತಿ ಸಂಹಿತೆ ಜಾರಿಯಾಗಿತ್ತು. ಆದರೆ ಮಾರ್ಚ್ 30 ಆದರೂ ಅಧಿಕಾರಿಗಳು ಬೋರ್ಡ್ ತೆರವುಗೊಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ. ಬೋರ್ಡ್ ತೆರವುಗೊಳಿಸದೇ ಇಲ್ಲಿನ ತಹಶೀಲ್ದಾರ್ ಮಹೇಶ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಕ್ಷಿಣ ರೈಲ್ವೆಯ ಅಧಿಕೃತ ಫೇಸ್‌ಬುಕ್ ಪೇಜ್ ಹ್ಯಾಕ್ ಆಗಿದೆ. ಹ್ಯಾಕ್ ಮಾಡಿದ ಫೇಸ್ ಬುಕ್ ಪೇಜ್ ನಿನ್ನೆ ಮಧ್ಯಾಹ್ನ ಅಶ್ಲೀಲ ಚಿತ್ರಗಳು ಮತ್ತು ಕಾಮೆಂಟ್ ಗಳನ್ನು ಪೋಸ್ಟ್ ಮಾಡಿದೆ. ಪುಟದ ಕೊನೆಯ ಪೋಸ್ಟ್ ಈ ವರ್ಷದ ಜನವರಿಯಲ್ಲಿತ್ತು. ಹ್ಯಾಕ್ ಮಾಡಿದ ನಂತರ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲಾಗಿದೆ. ಪೇಜ್ ಹ್ಯಾಕ್ ಆಗಿದ್ದು, ಈಗ ಅದನ್ನು ಮರುಸ್ಥಾಪಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ. ಸ್ವಲ್ಪ ಸಮಯದ ನಂತರ, ರೈಲ್ವೆಯ ಅಧಿಕೃತ ಫೇಸ್‌ಬುಕ್ ಪುಟವನ್ನು ಹ್ಯಾಕ್ ಮಾಡಲಾಗಿದೆ ಮತ್ತು ಪೋಸ್ಟ್‌ಗಳನ್ನು ಹ್ಯಾಕರ್ ಹಂಚಿಕೊಂಡಿದ್ದಾರೆ ಎಂದು ರೈಲ್ವೆ ಸ್ವತಃ ಫೇಸ್‌ಬುಕ್ ಮೂಲಕ ಸ್ಪಷ್ಟಪಡಿಸಿದೆ. ರೈಲ್ವೆ ಸಚಿವಾಲಯ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಮತ್ತು ಫೇಸ್‌ಬುಕ್ ಅಧಿಕಾರಿಗಳ ಬೆಂಬಲವಿಲ್ಲದೆ ದಕ್ಷಿಣ ರೈಲ್ವೇ ಫೇಸ್‌ಬುಕ್ ಖಾತೆಯನ್ನು ಯಶಸ್ವಿಯಾಗಿ ಮರುಸ್ಥಾಪಿಸಿದೆ. ಹ್ಯಾಕರ್‌ನ ಪ್ರವೇಶವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. “ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು” ಎಂದು ಅಧಿಕಾರಿಗಳು ಅಧಿಕೃತ ಪುಟದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಮಗುವಿಗೆ ಥಳಿಸುವ ವಿಚಾರದಲ್ಲಿ ಜಗಳ ನಡೆದು ಪತಿ ಪತ್ನಿಯನ್ನು ಕೊಂದಿರುವ ಘಟನೆಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ರತನ್‌ಪುರಿ ಗ್ರಾಮದಲ್ಲಿ ನಡೆದಿದೆ.ಕೊಲೆ ಆರೋಪಿ ನಯೀಮ್ ಅಲಿಯನ್ನು ಪೊಲೀಸರು ಬಂಧಿಸಿದ್ದಾರೆ. ನರ್ಗೀಸ್ ಎಂಬ ಯುವತಿ ಕೊಲೆಯಾದಳು. ಈ ಘಟನೆ ಮಂಗಳವಾರ ರತನ್‌ಪುರಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಹೊಡೆಯುವ ವಿವಾದದ ಹಿನ್ನೆಲೆಯಲ್ಲಿ ಕೋಪದಿಂದ ನರ್ಗೀಸ್ ಪತಿ ನಯೀಮ್ ಅಲಿ ಆಕೆಯ ಕತ್ತು ಹಿಸುಕಿದ್ದಾನೆ ಎಂದು ರತನ್‌ಪುರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಪಂಕಜ್ ರೈ ಹೇಳಿದ್ದಾರೆ. ನಯೀಮ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಮೃತದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಪಂಕಜ್ ರೈ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಭಾರೀ ಗಾಂಜಾ ಬೇಟೆ. ಟ್ರಕ್ ನಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 541 ಕೆಜಿ ಗಾಂಜಾವನ್ನು ಬೆಂಗಳೂರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಎನ್‌ಸಿಬಿ ವಶಕ್ಕೆ ಪಡೆದಿದೆ. ಅಂತಾರಾಜ್ಯ ಡ್ರಗ್ಸ್ ಗ್ಯಾಂಗ್ ಭಾರೀ ಪ್ರಮಾಣದಲ್ಲಿ ಗಾಂಜಾವನ್ನು ಸಂಗ್ರಹಿಸಿ ತರಕಾರಿ ಟ್ರಕ್ ನಲ್ಲಿ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿರುವ ಬಗ್ಗೆ ಎನ್ ಸಿ ಬಿ ಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ವಾಹನ ತಪಾಸಣೆ ವೇಳೆ 541 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾವನ್ನು ಹೊಂದಿದ್ದ ಟ್ರಕ್ ನೊಂದಿಗೆ ಬಂದಿದ್ದ ಕಾರನ್ನು ಸಹ ಎನ್‌ಸಿಬಿ ವಶಪಡಿಸಿಕೊಂಡಿದೆ. ಈ ಗ್ಯಾಂಗ್ ಆಂಧ್ರ-ಒರಿಸ್ಸಾ ಗಡಿಯಿಂದ ಗಾಂಜಾವನ್ನು ತಂದು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ತಲುಪಿಸಲು ಯೋಜಿಸುತ್ತಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ಕೋವಿಡ್ ಹರಡುವಿಕೆ ತೀವ್ರಗೊಂಡಿರುವ ದೆಹಲಿ ಸರ್ಕಾರ ದೆಹಲಿಯಲ್ಲಿ ತುರ್ತು ಸಭೆಯನ್ನು ಕರೆದಿದೆ. ದಿನನಿತ್ಯದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಸುಮಾರು 300 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ವರ್ಷ ಆಗಸ್ಟ್ 31 ರಿಂದ ಇಷ್ಟು ಕೋವಿಡ್ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು. ನಗರ ಆರೋಗ್ಯ ಇಲಾಖೆಯ ಪ್ರಕಾರ ಧನಾತ್ಮಕ ಪ್ರಮಾಣವು 13.89% ಆಗಿದೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ತಜ್ಞ ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರು ಭಾಗವಹಿಸಲಿದ್ದಾರೆ. 2020 ರಲ್ಲಿ ದೇಶದಲ್ಲಿ ಕೋವಿಡ್ ದೃಢೀಕರಣದ ನಂತರ, ದೆಹಲಿಯು ಕೋವಿಡ್ ತೀವ್ರವಾಗಿ ಹರಡಲು ಸಾಕ್ಷಿಯಾಗಿದೆ. ನಂತರ ಜನವರಿ 16 ರಂದು, ದೈನಂದಿನ ರೋಗಿಗಳ ಸಂಖ್ಯೆ ಶೂನ್ಯಕ್ಕೆ ತಲುಪಿತು. ಪ್ರಸ್ತುತ, 300 ಹೊಸ ಕೋವಿಡ್ ಪ್ರಕರಣಗಳ ಸೇರ್ಪಡೆಯೊಂದಿಗೆ, ದೆಹಲಿಯಲ್ಲಿ ಒಟ್ಟು ಕೋವಿಡ್ ರೋಗಿಗಳ ಸಂಖ್ಯೆ 20,09,361 ಕ್ಕೆ ತಲುಪಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಮೋದಿ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಪಾಟ್ನಾ ಕೋರ್ಟ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ. ಏಪ್ರಿಲ್ 12 ರಂದು ನೇರವಾಗಿ ಕಾಣಿಸಿಕೊಳ್ಳಲು ಸಲಹೆ ನೀಡಲಾಗುತ್ತದೆ. ಸಾಕ್ಷಿ ಹೇಳಲು ರಾಹುಲ್ ಹಾಜರಿರಬೇಕು. 2019 ರ ಚುನಾವಣಾ ಭಾಷಣದಲ್ಲಿ ರಾಹುಲ್ ಗಾಂಧಿಯ ವಿವಾದಾತ್ಮಕ ಹೇಳಿಕೆಯು ಮೋದಿ ಸಮುದಾಯವನ್ನು ದೂಷಿಸಿತು. ‘ಎಲ್ಲಾ ಕಳ್ಳರಿಗೆ ಮೋದಿ ಎಂದು ಹೆಸರಿಟ್ಟರೆ ಹೇಗೆ’ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾರ್ಚ್ 24 ರಂದು, ಪ್ರಾಣೇಶ್ ಮೋದಿ ಹೇಳಿಕೆಯ ವಿರುದ್ಧ ಸಲ್ಲಿಸಿದ ಪ್ರಕರಣದಲ್ಲಿ ಸೂರತ್ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ನಂತರ ಮಾರ್ಚ್ 25 ರಂದು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ಆದೇಶ ಹೊರಬಿತ್ತು. ಈ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು. ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ತಗ್ಗಿಸದಿದ್ದರೆ ಅಥವಾ ವಿಚಾರಣೆಗೆ ತಡೆ ನೀಡದಿದ್ದರೆ ವಯನಾಡ್ ಉಪಚುನಾವಣೆ ಎದುರಿಸಬೇಕಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಚುನಾವಣೆ ಘೋಷಣೆಯಾಗುತ್ತಿದಂತೆ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ. ವರುಣ ಕ್ಷೇತ್ರದ ಬಿಳುಗುಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿದ್ದಾರೆ. ಬಳಿಕ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ಸಮಾರಂಭವು ನೇರವೇರಿದೆ. ಈ ಬೃಹತ್ ಸಮಾವೇಶದಲ್ಲಿ ಅತ್ಯಂತ ಉತ್ಸಾಹದಿಂದ ಬೃಹತ್ ಸಮಾವೇಶದಲ್ಲಿ ಭಾಗಿಯಾದ್ದರು ಸಿದ್ದರಾಮಯ್ಯ. ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ ಒಂದು ಸಾವಿರ ರೂಪಾಯಿ ಹಣ ಕೊಟ್ಟಿದ್ದಾರೆ. ಈ ಮೂಲಕವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಮೈಸೂರಿನ ವರುಣ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಶಾಸಕ ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಸುನೀಲ್ ಬೋಸ್ ಸೇರಿದಂತೆ ಹಲವು ಕೈ ನಾಯಕರು ಸಮಾವೇಶದಲ್ಲಿ ಭಾಗಿಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದರ ಜತೆಗೆ ಡಿ.ಕೆ. ಶಿವಕುಮಾರ್ ಮೇಲೆ ಗಂಭೀರ ಆರೋಪ ಮಾಡಿದ್ದು, ನಮ್ಮ ಪಕ್ಷದ ಶಾಸಕರಿಗೆ ಕರೆ ಮಾಡಿ ಪಕ್ಷ ಬಿಟ್ಟು ಬಂದರೆ ಟಿಕೆಟ್ ಕೊಡ್ತೇವೆ ಎಂದು ಆಮಿಷ ಒಡ್ಡಿರುವುದಾಗಿ ಹೇಳಿದ್ದಾರೆ. ಎರಡು ಮೂರು ದಿನದಿಂದ ನಮ್ಮ ಶಾಸಕರಿಗೆ ಕರೆ ಬರುತ್ತಿದೆ. ಕಾಂಗ್ರೆಸ್‌ಗೆ ಬನ್ನಿ ಟಿಕೆಟ್ ಕೊಡ್ತೇನೆ ಎಂದು ಹೇಳುತ್ತಿದ್ದಾರೆ. ಅವರ ಬಳಿ ಎಲೆಕ್ಷನ್ ಎದುರಿಸುವ ಸಮರ್ಥ ಅಭ್ಯರ್ಥಿಗಳಿಲ್ಲ. ಹಾಗಾಗಿ ಹತಾಶರಾದ ಡಿಕೆಶಿ ಬಿಜೆಪಿ ಸಂಪರ್ಕಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy