Author: admin

ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ನಂತರ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಳಬಾಗಿಲಿನ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ರಾಮಸಮುದ್ರದ ನಿವಾಸಿ ಜ್ಯೋತಿ ಮಕ್ಕಳಾದ ಉದಯಶ್ರೀ (8) ಹಾಗೂ ಅಕ್ಷರ(6) ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಬೆಂಕಿ ಹಚ್ಚಿಕೊಂಡಿದ್ದ್ದಾದು, ಆರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಮತ್ತೊಂದು ಮಗು ಹಾಗೂ ತಾಯಿ ಸುಟ್ಟಗಾಯಗಳಿಂದ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಮುಳಬಾಗಿಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆತ್ತಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಪಿಎಸ್ ಐವೊಬ್ಬರು ಗಾಯಗೊಂಡಿದ್ದ ಮಗುವನ್ನು ಎತ್ತಿಕೊಂಡು ಓಡಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಮಗು ಜೀವನ್ಮರಣದ ನಡುವೆ ಹೋರಾಟ ನಡೆಸಿದೆ. ಗಂಡ ಬಿಟ್ಟು ಹೋಗಿರೋದಕ್ಕೆ ಮನನೊಂದು ಜ್ಯೋತಿ ಗಂಡನಿಲ್ಲದೇ ಜೀವನ ಸಾಗಿಸೋದಕ್ಕೆ ಕಷ್ಟವಾಗುತ್ತೆ ಎಂದು ನಿರ್ಧರಿಸಿ, ಮೊದಲು ಮಕ್ಕಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಇಬ್ಬರು ಮಕ್ಕಳೊಂದಿಗೆ…

Read More

ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ವಾಸು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಬರೆದಿಟ್ಟು ಕೆರೆಗೆ ಹಾರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗುಬ್ಬಿ ಪಟ್ಟಣದ ನಿವಾಸಿ ಜಯಪ್ರಕಾಶ್ (39) ಆತ್ಮಹತ್ಯೆ ಮಾಡಿಕೊಂಡವರು. ಗ್ರಾನೆಟ್ ಕೆಲಸ ನಿರ್ವಹಿಸುತ್ತಾ ಜೀವನ ಸಾಗಿಸುತ್ತಿದ್ದ ಜಯಪ್ರಕಾಶ್ ಸಣ್ಣ ಪುಟ್ಟ ಸಾಲ ಮಾಡಿಕೊಂಡಿದ್ದು, ಗೋಮಾಳದಲ್ಲಿ ಜಮೀನು ಸಾಗುವಳಿ ಮಾಡಿಕೊಂಡು ಬಂದಿದ್ದು, ಸಾಗುವಳಿ ಚೀಟಿ ಸಹ ನೀಡಲಾಗಿತ್ತು. ಆದರೆ ಅದರ ಪಹಣಿ ಆತನ ಹೆಸರಿಗೆ ಬಂದಿರಲಿಲ್ಲ. ಈ ಬಗ್ಗೆ ನೊಂದಿದ್ದ ಜಯಪ್ರಕಾಶ್ ವಿಸ್ತೃತವಾದ ಡೆತ್ ನೋಟ್ ಬರೆದಿಟ್ಟು ಮನೆದೇವರಾದ ದೇವರ ಹೊಸಹಳ್ಳಿಯ ವೀರಭದ್ರ ಸ್ವಾಮಿಯ ಗ್ರಾಮದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಡೆತ್‌ ನೋಟ್‌ನಲ್ಲಿ ನನ್ನ ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ವಾಸು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಬರೆದಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಡಾಬಸ್‌ ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ…

Read More

ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಕರ್ನಾಟಕ –ಮಹಾರಾಷ್ಟ್ರ ನಡುವೆ ಉದ್ಭವಿಸಿರುವ ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಟೀಕಿಸಿದ್ದಾರೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.…

Read More

ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಗಂಡನೊಬ್ಬ ಹೆಂಡತಿಯನ್ನೇ ಕೊಂದಿದ್ದು, ಇದಕ್ಕೆ ತಂದೆಯ ಮಗನೂ ಕೈಜೋಡಿಸಿರುವ ದುರಂತ ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವೇಶ್ವರ ಭಟ್(69) ಮತ್ತು ಮಗ ಮಧುಕರ ಭಟ್​(33) ಕುಡಿಯಲು ಹಣ ನೀಡಲಿಲ್ಲವೆಂದು ಗೀತಾ ಭಟ್ ಅವರನ್ನು (64) ಕೊಲೆ ಮಾಡಿದ್ದಾರೆ. ಆರೋಪಿ ಮಧುಕರ್ ಭಟ್​ನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್​ಗೆ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಅವರ ಮನೆಯಲ್ಲಿ ದಿನವೂ ಜಗಳ ನಡೆಯುತ್ತಲೇ ಇತ್ತು. ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್​ಅವರನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ. ಕುಮಟಾ ಪಿಎಸ್‌ಐ ನವೀನಕುಮಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಳೆದ ಕೆಲವು ವರ್ಷಗಳಿಂದ ಉತ್ತರ ಭಾರತದಲ್ಲಿ ಸಾವಿರಾರು ಜನರನ್ನು ಬಲಿ ಪಡೆದಿರುವ ಬಿಸಿಗಾಳಿ ಈ ಬಾರಿ ಮನುಷ್ಯರ ತಡೆಯುವ ಮಿತಿಗಿಂತ ಅಧಿಕ ಪ್ರಮಾಣದ ಬಿಸಿಗಾಳಿ ಬೀಸಲಿದೆ ಎಂದು ವಿಶ್ವಬ್ಯಾಂಕ್ ಭಾರತಕ್ಕೆ ಎಚ್ಚರಿಕೆ ನೀಡಿದೆ. ಮನುಷ್ಯರು ಬಿಸಿಲು ತಡೆದುಕೊಳ್ಳುವ ಮಿತಿಗಿಂತ ಹೆಚ್ಚಿನ ಪ್ರಮಾಣದ ಬಿಸಿಗಾಳಿ ಮೊದಲ ಬಾರಿ ಬೀಸಲಿದ್ದು, ಜಗತ್ತಿನ ಕೆಲವು ದೇಶಗಳ ಪೈಕಿ ಭಾರತವೂ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಕೂಲಿಂಗ್ ಕ್ಷೇತ್ರದಲ್ಲಿ ಹವಾಮಾನ ವೈಪರಿತ್ಯದ ಮೇಲೆ ಬಂಡವಾಳ ಹೂಡಿಕೆಯ ಅವಕಾಶಗಳು ಭಾರತದಲ್ಲಿ ಹೆಚ್ಚಾಗಲಿವೆ. ಏಕೆಂದರೆ ಭಾರತದಲ್ಲಿ ಸುಡುಬಿಸಿಲು ಹೆಚ್ಚಾಗಲಿದ್ದು, ಇದು ಅತ್ಯಂತ ಬೇಗ ಕಾಲಿಡಲಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ. 2022 ಏಪ್ರಿಲ್ ನಲ್ಲಿ ಭಾರತದಲ್ಲಿ ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಗಾಳಿಯ ಆರಂಭ ಆಗಲಿದೆ. ಆರಂಭದಲ್ಲೆ 46 ಡಿಗ್ರಿ ಸೆಲ್ಸಿಯಸ್ ಇರುವ ಈ ಬಿಸಿಗಾಳಿ ಇದು ನಂತರ ಹೆಚ್ಚಾಗಲಿದೆ. 2035-65ರ ವೇಳೆಗೆ ಶೇ.25ರಷ್ಟು ಹೆಚ್ಚಾಗಲಿದ್ದು, ಕಾರ್ಬನ್ ಪ್ರಮಾಣ ಅತ್ಯಧಿಕವಾಗಲಿದೆ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಳಗಾವಿ : ಗಡಿ ವಿವಾದ ದಿನೇ ದಿನೆ ತಾರಕಕ್ಕೇರುತ್ತಿದ್ದು, ಪ್ರತಿಭಟನೆಗಳು, ಆಕ್ರೋಶಗಳು ಹೆಚ್ಚತೊಡಗಿವೆ. ಅಲ್ಲದೆ, ಮಹಾರಾಷ್ಟ್ರದಲ್ಲಿ ಶಿವಸೇನೆಯ ಎರಡು ಬಣಗಳು ಸಹ ಅತಿರೇಕದಿಂದ ವರ್ತನೆ ಮಾಡುತ್ತಿವೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಿವಸೇನೆಯ ಕಾರ್ಯಕರ್ತರು ಮೀರಜ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕುವ ಮೂಲಕ ಉದ್ದಟತನವನ್ನು ಪ್ರದರ್ಶನ ಮಾಡಿವೆ. ಜತ್ತ ತಾಲೂಕಿನ ಹಳ್ಳಿಗರು ಕರ್ನಾಟಕಕ್ಕೆ ಸೇರ್ಪಡೆಯಾಗಬೇಕು ಎಂದು ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅವರಿಗೆ ಇಷ್ಟವಿದ್ದರೆ ಕರ್ನಾಟಕಕ್ಕೆ ಸೇರ್ಪಡೆಯಾಗಲಿ ಎಂದು ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಗಡಿ ವಿವಾದದಿಂದ ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಾಪುಂಡರು ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿಯುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿ ಮಹಾರಾಷ್ಟ್ರ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದೆ. ಈ ಕುರಿತು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಭಕ್ತರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ. ಎರಡೂ ಕಡೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಆರೋಗ್ಯ ಇಲಾಖೆಯ ವರ್ಗಾವಣೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದ ಸರ್ಕಾರ, ಇದೀಗ ಕಂದಾಯ ಇಲಾಖೆಯ ಎಲ್ಲಾ ವರ್ಗಾವಣೆಗಳಿಗೆ ತಡೆ ನೀಡಿದೆ. ಚುನಾವಣಾ ಆಯೋಗ ಮತದಾರರ ಪಟ್ಟಿಯ ನೋಂದಣಿ, ಪರಿಷ್ಕರಣಾ ಕಾರ್ಯ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸಿಬ್ಬಂದಿಗಳ ವರ್ಗಾವಣೆ ಮಾಡದಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಜನವರಿ-2023ರ ಎರಡನೇ ವಾರದವರೆಗೆ ವಿಲೇ ಇಡಲು ಸೂಚನೆ ನೀಡಿದ್ದಾರೆ. ಸರ್ಕಾರದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಕೆ. ಲತಾ ಆದೇಶದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಅದೇ ರೀತಿ 5 ರಾಜ್ಯಗಳಲ್ಲಿ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಕೂಡ ಇಂದು ಪ್ರಕಟವಾಗಲಿದೆ. ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ. ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಅಧಿಕಾರಕ್ಕೆ ಇರುವ ನಿರೀಕ್ಷೆಯಲ್ಲಿ ಬಿಜೆಪಿ ಇದ್ದು, ಕಾಂಗ್ರೆಸ್ ಮತ್ತು ಆಪ್ ಕೂಡ ಪೈಪೋಟಿ ನೀಡುವ ಸಾಧ್ಯತೆ ಇದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಾಗಿ ಹೇಳಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 1985ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಇಲ್ಲಿ ಸರ್ಕಾರ ಬದಲಾಗುತ್ತೆ. ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರುತ್ತಿವೆ. ಈ ಬಾರಿ ಆಡಳಿತಾರೂಢ ಬಿಜೆಪಿಯೇ ಅಧಿಕಾರಕ್ಕೆರಲಿದೆ ಎಂದು ಸಮೀಕ್ಷೆಗಳು ಹೇಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು : ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ 5 ರಂದು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಘೋಷಣೆ ಮಾಡಿದ್ದರು. ಇತ್ತೀಚೆಗೆ ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್‌ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ…

Read More