Subscribe to Updates
Get the latest creative news from FooBar about art, design and business.
- ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ
- ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
- ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
- ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
- ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್ ಸಂಘ
- ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
- ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
- ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
Author: admin
ಖಾನಾಪೂರ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ. ಆರ್. ಡಬ್ಲ್ಯೂ.) ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ.9,000 ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಷರತ್ತುಗಳು : ಅರ್ಜಿದಾರರು ವಿಕಲಚೇತನರಿದ್ದು, ಕನಿಷ್ಟ 40% ಅಥವಾ 40% ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಅರ್ಜಿದಾರರು ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೊಳಪಟ್ಟಿರಬೇಕು. ಎಸ್.ಎಸ್.ಎಲ್.ಸಿ. ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಕಂಪ್ಯೂಟರ ಜ್ಞಾನ ಹೊಂದಿರಬೇಕು. ಅದೇ ರೀತಿಯಲ್ಲಿ ಅರ್ಜಿದಾರರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-01-2023 ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯಲ್ಲಿರಬೇಕು. ವಿಕಲಚೇತನ ಮಹಿಳಾ, ಪ.ಜಾತಿ ಮತ್ತು ಪ. ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು… ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೀದರ್: ಗಡಿ ವಿವಾದದ ನಡುವೆಯೇ ಮಹಾರಾಷ್ಟ್ರದ ಗ್ರಾಮವನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಲಾತುರ್ ಜಿಲ್ಲೆಯ ದೇವಣಿ ತಾಲೂಕಿನ ಬೊಂಬಳಿಯ ಜನರು ಆಗ್ರಹಿಸಿದ್ದಾರೆ. ಬೊಂಬಳಿ ಗ್ರಾಮದ ನಿವಾಸಿಗಳು ಗ್ರಾಮದಲ್ಲಿ ಸಭೆ ನಡೆಸಿ, ಮಹಾರಾಷ್ಟ್ರ ಸರ್ಕಾರ ಗ್ರಾಮಗಳ ಅಭಿವೃದ್ಧಿ ಮಾಡದೇ ತಾರತಮ್ಯ ಎಸಗುತ್ತಿದೆ. ಕರ್ನಾಟಕ ಸರ್ಕಾರ ಒಳ್ಳೆಯ ಸವಲತ್ತುಗಳನ್ನು ಮತ್ತು ಯೋಜನೆಗಳನ್ನು ತಂದಿದೆ. ಹಾಗಾಗಿ ನಮ್ಮ ಗ್ರಾಮ ಕರ್ನಾಟಕಕ್ಕೆ ಸೇರಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಗ್ರಾಮ ಪಂಚಾಯತಿ ಚುನಾವಣೆಯನ್ನೂ ಬಹಿಷ್ಕಾರ ಮಾಡಿರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಧಾರವಾಡ: ಜಿಲ್ಲೆಯ ನವಲಗುಂದದ ಅಶೋಕ ಲಾಡ್ಜ್ನಲ್ಲಿ ಪ್ರೇಮಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಕಳೆದ 3 ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ಜೋಡಿ ನಿನ್ನೆ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ. ಕುಮಾರ (22) ಮತ್ತು ದೀಪಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ ಹಾಗೂ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಕುಮಾರ ಇಬ್ಬರು ಪ್ರೀತಿಸುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಈ ಜೋಡಿ ಪರಿಚಯಸ್ಥರೊಬ್ಬರ ಮೂಲಕ ನವಲಗುಂದದ ಅಶೋಕ ಲಾಡ್ಜ್ನಲ್ಲಿ ರೂಮ್ ಪಡೆದಿತ್ತು ಎಂದು ತಿಳಿದುಬಂದಿದೆ. ಇನ್ನು ಈ ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಡಾ.ಜಿ.ಪರಮೇಶ್ವರನ್ನ ಕಾಂಗ್ರೆಸ್ ಪಕ್ಷದ ವೈರಿಗಳೇ ಸೋಲಿಸ್ತಾರೆ: ಸಿಎಂ ಬೊಮ್ಮಾಯಿ ಕೊರಟಗೆರೆ : ಡಾ.ಜಿ.ಪರಮೇಶ್ವರನ್ನ ಕಾಂಗ್ರೆಸ್ ಪಕ್ಷದವರೇ ವೈರಿಗಳಾಗಿ ಸೋಲಿಸ್ತಾರೇ.. ಅದು ಸ್ವತಃ ಶಾಸಕ ಡಾ.ಜಿ.ಪರಮೇಶ್ವರ್ ಅವರಿಗೂ ಕಟುಸತ್ಯ ಗೊತ್ತಾಗಿದೆ.. ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯೇ ಗೆಲ್ತಾರೇ.. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ 130ಸೀಟು ಬರುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಕೊರಟಗೆರೆ ಮಂಡಲದಿಂದ ಬುಧವಾರ ಏರ್ಪಡಿಸಲಾಗಿದ್ದ ಜನಸಂಕಲ್ಪ ಯಾತ್ರೆಯ ಸಾರ್ಥಕ ಸೇವೆ-ಯುವ ಸಬಲೀಕರಣ ವೇದಿಕೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದೇಶದ 20 ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಧಿಕಾರದಲ್ಲಿದೆ. ಕಾಂಗ್ರೆಸ್ ಪಕ್ಷವು ಕೇವಲ 2 ರಾಜ್ಯದಲ್ಲಿ ಅಧಿಕಾರದಲ್ಲಿದೆ. 2023ಕ್ಕೆ ಅದು ಕಳೆದುಕೊಂಡು ಕಾಂಗ್ರೆಸ್ ಮುಕ್ತ ರಾಷ್ಟ್ರ ಆಗಲಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸುನಾಮಿ ಎದ್ದು ನಿಂತಿದೆ. ಕಾಂಗ್ರೆಸ್ ಪಕ್ಷವು ಈಗಾಗಲೇ ಕೊಚ್ಚಿಹೋಗಿ ರಾಜಕೀಯ ಅಸ್ತಿತ್ವ ಕಳೆದುಕೊಂಡಿದೆ. 2023ಕ್ಕೆ…
ಬೆಂಗಳೂರಿನ ಹೆಬ್ಬಾಗಿಲು ಮೆಜೆಸ್ಟಿಕ್ ನಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಗಳವಾರ ಸಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಟರ್ಮಿನಲ್ ಪವರ್ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕೂಡಲೇ ಘಟನಾ ಸ್ಥಳದಿಂದ ಪ್ರಯಾಣಿಕರು ಹಾಗೂ ಅಂಗಡಿ ಮಾಲೀಕರನ್ನು ದೂರ ಕಳುಹಿಸಿ ಸಮಯಪ್ರಜ್ಞೆ ತೋರಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಒಗ್ಗರಣೆಗೆ ಬಳಸುವ ಕರಿಬೇವಿನ ಸೊಪ್ಪನ್ನು ಅಡುಗೆಗೆ ಹೊರತುಪಡಿಸಿ ಕೂದಲಿನ ಆರೋಗ್ಯಕ್ಕೂ ಬಳಸುವುದು ಸಾಮಾನ್ಯ. ವಿಶಿಷ್ಟವಾದ ವಾಸನೆ ಮತ್ತು ಕಟು ರುಚಿಯ ಹೊರತಾಗಿ ಕರಿಬೇವಿನ ಎಲೆಗಳು ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಬಿ 2, ಕ್ಯಾಲ್ಸಿಯಂ ಮತ್ತು ಕಬ್ಬಿಣದ ಸಮೃದ್ಧ ಮೂಲವಾಗಿದೆ ಎಂದು ತಜ್ಞರು ಹೇಳುತ್ತಾರೆ. ಕರಿಬೇವಿನ ಎಲೆಗಳು ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಪರಿಣಾಮಗಳನ್ನು ಹೊಂದಿದೆ. ಹೆಚ್ಚು ವಾಹನ ಚಾಲನೆ ಮಾಡುವವರು ಅಥವಾ ಡೆಸ್ಕ್ ಕೆಲಸ ಮಾಡುವವರು ಖಂಡಿತವಾಗಿ ಕರಿಬೇವಿನ ಸೊಪ್ಪನ್ನು ಸೇವಿಸಬೇಕು ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ. ಯಾಕೆಂದರೆ ಈ ಜನರು ಭುಜ ಮತ್ತು ಬೆನ್ನುನೋವಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುತ್ತಾರೆ. ಕರಿಬೇವಿನ ಎಲೆಗಳ ಸೇವನೆಯು ಸರ್ವಿಕಲ್ ಸ್ಪಾಂಡಿಲೋಸಿಸ್ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಕರಿಬೇವಿನ ಎಲೆಗಳು ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಕರಿಬೇವಿನ ಸಾರವು ಮೆದುಳನ್ನು ರಕ್ಷಿಸುವ ಉತ್ಕರ್ಷಣ ನಿರೋಧಕಗಳಾದ ಗ್ಲುಟಾಥಿಯೋನ್ ಪೆರಾಕ್ಸಿಡೇಸ್ , ಸೂಪರ್‌ಆಕ್ಸೈಡ್…
ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳುತ್ತಿದೆ. ಈ ಮಧ್ಯೆ ಆರಂಭದಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು. ಆದರೆ ಇದೀಗ ಎಎಪಿ ಮುನ್ನಡೆ ಸಾಧಿಸಿದೆ. ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಕಾಂಗ್ರೆಸ್ ಪಕ್ಷ 10 ಸ್ಥಾನಗಳಲ್ಲಿ ಇತರರು 4 ಸ್ಥಾನಗಳಲ್ಲಿ ಮುಂದೆ ಇದ್ದಾರೆ. 250 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಪಾಲಿಕೆ ಅಧಿಕಾರದ ಗದ್ದುಗೆಗೇರಲು 126 ಮ್ಯಾಜಿಕ್ ನಂಬರ್ ಆಗಿದೆ. ಮತದಾನೋತ್ತರ ಸಮೀಕ್ಷೆಯಲ್ಲಿ ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಕೇವಲ ಆರು ವಾರ್ಡ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ನನ್ನನ್ನು ಅನ್ನರಾಮಯ್ಯ, ರೈತ ರಾಮಯ್ಯ, ದಲಿತ ರಾಮಯ್ಯ ಎಂದೆಲ್ಲಾ ಜನರು ನನ್ನನ್ನು ಕರೆಯುತ್ತಾರೆ. ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಹೆಸರಿಗೆ ಸಿದ್ರಾಮುಲ್ಲಾ ಖಾನ್ ಸೇರಿಸಿದ್ದಕ್ಕೆ ಬೇಸರ ಇಲ್ಲ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ತೋರಿಸುತ್ತೆ. ಮುಸ್ಲಿಂ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯಾನಾದ ಶಿಶುನಾಳ ಷರೀಫರ ಪರಂಪರೆ ನಮ್ಮದು ಎಂದು ಹೇಳುವ ಮೂಲಕ ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಳಗಾವಿ: ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ಇದೀಗ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮಹಾರಾಷ್ಟ್ರಕ್ಕೆ ತೆರಳುವ ಕೆ ಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದಾರೆ. ನಿನ್ನೆ ರಾತ್ರಿ ಪುಣೆಯಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ನವನಿರ್ಮಾಣ ಸೇನೆ ಕಾರ್ಯಕರ್ತರು ಕೆಎಸ್ ಆರ್ ಸಿ ಬಸ್ ತಡೆದು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ ಬಂದ್ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲವು ತಿಂಗಳುಗಳಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಮಧ್ಯೆ ನಡೆಯುತ್ತಿರುವ ಜಗಳ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿಬಿಟ್ಟಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ ಬಂದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ವಿಷಯ ಗೊತ್ತಾದ ಕೂಡಲೇ ಕಾಲೇಜಿಗೆ ಧಾವಿಸಿದ ರೇಣುಕಾಚಾರ್ಯಯ, ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ರಿನು ತರಾಟೆಗೆ ತೆಗೆದುಕೊಂಡು ನಿಮ್ಮ ಜಗಳಗಳಿಗೆ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ ಅಂತ ತಾಕೀತು ಮಾಡಿ ಎಲ್ಲರನ್ನು ಒಳಗೆ ಕಳಿಸಿದ್ದಾರೆ. ನಿಮ್ಮ ಮಧ್ಯೆ ಏನೇ ಸಮಸ್ಯೆಗಳಿದ್ದರೂ ಕುಳಿತು ಮಾತನಾಡಿ ಪರಿಹರಿಸೋಣ, ವಿದ್ಯಾರ್ಥಿಗಳನ್ನು ತಿದ್ದಬೇಕಾದ ನೀವೆ ಈ ರೀತಿ ಮಾಡಿಕೊಂಡರೆ ಹೇಗೆ ಎಂದು ಶಾಸಕರು ಉಪನ್ಯಾಸಕರನ್ನು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy